Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟಿ ಭಾರ್ಗವಿ ನಾರಾಯಣ್ ನಿಧನ; ಕಂಬನಿ ಮಿಡಿದ ಸ್ಯಾಂಡಲ್​ವುಡ್​

ಭಾರ್ಗವಿ ಅವರದ್ದು ಕಲಾ ಕುಟುಂಬ. ಸಿನಿಮಾ, ಕಿರುತೆರೆ ಜೊತೆಗೆ ರಂಗಭೂಮಿಯಲ್ಲೂ ಅಪಾರ ಅನುಭವ ಹೊಂದಿದ್ದರು. ಯಾವುದೇ ಪಾತ್ರ ಕೊಟ್ಟರೂ ಅದನ್ನು ಅನಾಯಾಸವಾಗಿ ಮಾಡುತ್ತಿದ್ದರು.

ಹಿರಿಯ ನಟಿ ಭಾರ್ಗವಿ ನಾರಾಯಣ್ ನಿಧನ; ಕಂಬನಿ ಮಿಡಿದ ಸ್ಯಾಂಡಲ್​ವುಡ್​
Follow us
TV9 Web
| Updated By: ganapathi bhat

Updated on:Feb 14, 2022 | 10:55 PM

ಕನ್ನಡದ ಹಿರಿಯ ನಟಿ ಭಾರ್ಗವಿ ನಾರಾಯಣ್ (Bhargavi Narayan) ಅವರು ಇಂದು (ಫೆಬ್ರವರಿ 14) ನಿಧನ ಹೊಂದಿದ್ದಾರೆ. ರಂಗಭೂಮಿ, ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿದ ಅನುಭವ ಅವರಿಗಿದೆ. ಅವರನ್ನು ಕಳೆದುಕೊಂಡಿರುವುದು ಚಿತ್ರರಂಗಕ್ಕೆ ತೀವ್ರ ನೋವು ತಂದಿದೆ. ಅವರ ಸಾವಿಗೆ ಸ್ಯಾಂಡಲ್‌ವುಡ್‌ನ ಸಾಕಷ್ಟು ಮಂದಿ ಸಂತಾಪ ಸೂಚಿಸುತ್ತಿದ್ದಾರೆ. ಅನೇಕ ಧಾರಾವಾಹಿಗಳಲ್ಲಿ (Serial) ನಟಿಸಿದ ಅನುಭವ ಅವರಿಗೆ ಇದೆ. ಹಿರಿತೆರೆಯಲ್ಲೂ ಅವರು ತುಂಬಾನೇ ಹೆಸರು ಮಾಡಿದ್ದರು. ಭಾರ್ಗವಿ ಅವರು ವಯೋಸಹಜ ಕಾಯಿಲೆಯಿಂದ ಬಳುತ್ತಿದ್ದರು. ಅವರಿಗೆ 84 ವರ್ಷ ವಯಸ್ಸಾಗಿತ್ತು.

ಭಾರ್ಗವಿ ಅವರದ್ದು ಕಲಾ ಕುಟುಂಬ. ಸಿನಿಮಾ, ಕಿರುತೆರೆ ಜೊತೆಗೆ ರಂಗಭೂಮಿಯಲ್ಲೂ ಅಪಾರ ಅನುಭವ ಹೊಂದಿದ್ದರು. ಯಾವುದೇ ಪಾತ್ರ ಕೊಟ್ಟರೂ ಅದನ್ನು ಅನಾಯಾಸವಾಗಿ ಮಾಡುತ್ತಿದ್ದರು. ಅವರ ನಟನೆಯನ್ನು ಸಾಕಷ್ಟು ಮಂದಿ ಮೆಚ್ಚಿಕೊಂಡಿದ್ದರು. ಭಾರ್ಗವಿ ಅವರ ಪತಿ ನಾರಾಯಣ್ ಅವರು ಮೇಕಪ್​ ಆರ್ಟಿಸ್ಟ್ ಆಗಿದ್ದರು. ಅವರನ್ನು ಮೇಕಪ್ ನಾಣಿ ಎಂದೇ ಕರೆಯಲಾಗುತ್ತಿತ್ತು.

ಭಾರ್ಗವಿ ಅವರ ಪುತ್ರ ಪ್ರಕಾಶ್ ಬೆಳವಾಡಿ ಚಿತ್ರರಂಗದಲ್ಲಿ ಹಾಗೂ ರಂಗಭೂಮಿಯಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಅಕ್ಷಯ್​ ಕುಮಾರ್ ನಟನೆಯ ‘ಏರ್​ಲಿಫ್ಟ್​’ ಸೇರಿ ಹಲವು ಪರಭಾಷೆ ಚಿತ್ರಗಳಲ್ಲಿ ನಟಿಸಿದ್ದಾರೆ. ಭಾರ್ಗವಿ ಪುತ್ರಿ ಸುಧಾ ಬೆಳವಾಡಿ ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಸುಧಾ ಮಗಳು ಸಂಯುಕ್ತಾ ಹೊರನಾಡು ಅವರು ಸ್ಯಾಂಡಲ್​ವುಡ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕೆಲವೇ ವಾರಗಳ ಹಿಂದೆ ಅವರ ನಟನೆಯ ‘ಒನ್​ ಕಟ್​ ಟೂ ಕಟ್​’ ಚಿತ್ರ ತೆರೆಗೆ ಬಂದಿತ್ತು.

ಭಾರ್ಗವಿ ನಿಧನ ಹೊಂದಿರುವುದು ಸ್ಯಾಂಡಲ್​ವುಡ್​ಗೆ ತುಂಬಲಾರದ ನಷ್ಟವಾಗಿದೆ. ಅವರನ್ನು ಕಳೆದುಕೊಂಡ ಸ್ಯಾಂಡಲ್​ವುಡ್​ ಬಡವಾಗಿದೆ. ಅವರ ನಿಧನಕ್ಕೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ.

Koo App

ಹಿರಿಯ ನಟಿ, ರಂಗಭೂಮಿ ಕಲಾವಿದೆ ಶ್ರೀಮತಿ ಭಾರ್ಗವಿ ನಾರಾಯಣ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಹಾಗೂ ಕಿರುತರೆಗೆ ತುಂಬಲಾರದ ನಷ್ಟವಾಗಿದೆ. ತಮ್ಮ ಸಹಜ ಅಭಿನಯದಿಂದ ಕನ್ನಡಿಗರ ಪಾಲಿನ ಪ್ರೀತಿಯ ಅಜ್ಜಿಯಾಗಿದ್ದ ಶ್ರೀಮತಿ ಭಾರ್ಗವಿ ನಾರಾಯಣ್ ಅವರು ಟಿ.ಎನ್.ಸೀತಾರಾಮ್ ಅವರ ಮುಕ್ತ ಧಾರಾವಾಹಿಯಲ್ಲಿ ಅಜ್ಜಿ ಪಾತ್ರದ ಮೂಲಕ ಮನೆ ಮಾತಾಗಿದ್ದರು. (1/2)

Dr. Sudhakar K (@drsudhakark.official) 14 Feb 2022

ಭಾರ್ಗವಿ ಅವರು 1960ರ ಸಮಯದಲ್ಲೇ ಚಿತ್ರರಂಗಕ್ಕೆ ಕಾಲಿಟ್ಟವರು. ‘ಪ್ರೊ. ಹುಚ್ಚುರಾಯ’ ಚಿತ್ರದಲ್ಲಿ ಅವರು ಪೋಷಕ ಪಾತ್ರ ಮಾಡಿದ್ದರು. ಈ ಚಿತ್ರಕ್ಕೆ ಅವರಿಗೆ ಅತ್ಯುತ್ತಮ ಪೋಷಕ ನಟಿ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಇದಲ್ಲದೆ, ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿವೆ. 2012ರಲ್ಲಿ ‘ನಾನು, ಭಾರ್ಗವಿ’ ಎಂಬ ಅವರ ಆತ್ಮಕಥನ ಬಿಡುಗಡೆ ಆಗಿತ್ತು. ಇದಕ್ಕೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿರೋದು ವಿಶೇಷ.

ಇದನ್ನೂ ಓದಿ: Bhargavi Narayan Birthday : ರಾತ್ರಿ ನಮ್ಮನೇಲಿದ್ದು ಬೆಳಗ್ಗೆ ರೈಲಿಗೆ ಹೋಗಿ ಎಂದರು ಆ ಪುಣ್ಯಾತ್ಮ 

Bhargavi Narayan Birthday : ಕಬ್ಬಕ್ಕಿಗಳಂತೆ ಘಮಘಮಿಸುವ ಬಿಸಿಬಿಸಿ ಬಾದಾಮಿ ಹಾಲನ್ನು ಆನಂದದಿಂದ ಕುಡಿದೆವು!

Published On - 8:38 pm, Mon, 14 February 22

ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ