ರಾಜ್ಯದಲ್ಲಿಂದು 119 ಕೊವಿಡ್-19 ಸಾವುಗಳು, 8,244 ಹೊಸ ಸೋಂಕಿತರು

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಇಂದು ಸಾಯಂಕಾಲ ಲಭ್ಯವಾದ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಸೋಂಕಿನಿಂದ 119 ಜನ ರಾಜ್ಯದಲ್ಲಿ ಸಾವನ್ನಪ್ಪಿದ್ದು, ಹೊಸದಾಗಿ 8,244 ಜನರಲ್ಲಿ ಸೋಂಕು ದೃಢಪಟ್ಟಿದೆ.

ಕರ್ನಾಟಕದಲ್ಲಿ ಇದುವರೆಗೆ ಕೊರೊನಾದಿಂದ 7,384 ಕೊವಿಡ್-19 ಸೋಂಕಿಗೆ ಬಲಿಯಾಗಿದ್ದಾರೆ ಮತ್ತು ಸೋಂಕಿತರ ಸಂಖ್ಯೆ 4,67,689ಕ್ಕೇರಿದೆ. ಸೋಂಕಿತರ ಪೈಕಿ 3,61,823 ಜನ ಗುಣಮುಖರಾಗಿ ಮನೆಗಳಿಗೆ ಹಿಂದಿರುಗಿದ್ದರೆ ಮಿಕ್ಕಿದ98,463 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಾಗೆಯೇ, ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 37 ಜನ ಸಾವನ್ನಪ್ಪಿದ್ದಾರೆ ಮತ್ತು ಹೊಸದಾಗಗಿ 2,966 ಜನ ಸೋಂಕು ತಗುಲಿಸಿಕೊಂಡಿದ್ದಾರೆ.

ರಾಜಧಾನಿಯಲ್ಲಿ ಇದುವರೆಗೆ ಕೊವಿಡ್-19ಗೆ ತುತ್ತಾದವರ ಸಂಖ್ಯೆ 2,473 ಹಾಗೂ ಒಟ್ಟು ಸೋಂಕಿತರ ಸಂಖ್ಯೆ 1,73,628 ತಲುಪಿದೆ. ಸೋಂಕಿತರ ಪೈಕಿ 1,30,627 ಜನರು ಗುಣಮುಖರಾಗಿದ್ದಾರೆ, ಉಳಿದ 40,527 ಸೋಂಕಿತರು ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related Tags:

Related Posts :

Category: