ಜಾನುವಾರುಗಳಿಗೆ ಮೈ ತೊಳೆಯಲು ಹೋಗಿ ಯಮನ ದರ್ಶನ ಮಾಡಿದ ಬಾಲಕರು

ದಾವಣಗೆರೆ: ಜಾನುವಾರುಗಳಿಗೆ ಮೈ ತೊಳೆಯಲು ಹೋಗಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹೆಚ್.ಗೋಪಗೊಂಡನಹಳ್ಳಿಯಲ್ಲಿ ನಡೆದಿದೆ. ಮನೋಜ್ (14) ಮಹೇಶ (13) ಮೃತ ಬಾಲಕರು.

ಇವರಿಬ್ಬರು ಏಳು ಹಾಗೂ ಎಂಟನೇ ತರಗತಿಯಲ್ಲಿ ಓದುತ್ತಿದ್ದರು. ಜಾನುವಾರುಗಳಿಗೆ ಮೈ ತೊಳೆಯಲು ಹೋಗಿ ಹೆಚ್.ಗೋಪಗೊಂಡನಹಳ್ಳಿ ಗ್ರಾಮದ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹೊನ್ನಾಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿಯಿಂದ ಶವ ಶೋಧ ಕಾರ್ಯ ನಡೆಯುತ್ತಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Related Posts :

Category:

error: Content is protected !!

This website uses cookies to ensure you get the best experience on our website. Learn more