9ನೇ ತರಗತಿ ವಿದ್ಯಾರ್ಥಿನಿ ನಿಗೂಢ ಆತ್ಮಹತ್ಯೆ, ತನಿಖೆ ಕೈಗೆತ್ತಿಕೊಂಡ ಪೊಲೀಸರು

ಶಿವಮೊಗ್ಗ: ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯೊಬ್ಬಳು ನೇಣು ಹಾಕಿಕೊಂಡು ಸಾವನ್ನಪ್ಪಿದ ಘಟನೆ ಶಿವಮೊಗದ್ದಲ್ಲಿ ಸಂಭವಿಸಿದೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ತುಡುಕಿ ಗ್ರಾಮದ 13 ವರ್ಷದ ಬಾಲಕಿ ಅರ್ಪಿತಾ ಒಂಬತ್ತನೆ ತರಗತಿಯಲ್ಲಿ ಓದುತ್ತಿದ್ದಳು. ಆದ್ರೆ ಶುಕ್ರವಾರ ಮನೆಯಲ್ಲಿ ಯಾರೂ ಪೋಷಕರು ಇಲ್ಲದಿರುವಾಗ ಬಾಲಕಿ ನೇಣು ಬಿಗಿದುಕೊಂಡು ನಿಗೂಢವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆನ್ನಲಾಗಿದೆ.

ಆತ್ಮಹತ್ಯೆಗೆ ಯಾವುದೇ ಸ್ಪಷ್ಟ ಕಾರಣಗಳು ಇನ್ನು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ತೀರ್ಥಹಳ್ಳಿ ಪೊಲೀಸ್‌ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Tags:

Related Posts :

Category:

error: Content is protected !!