ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಪ್ರತಿಭಟನೆಗೆ ಕುಳಿತೇಬಿಟ್ರು ಅಂಗನವಾಡಿ ಕಾರ್ಯಕರ್ತೆಯರು!

, ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಪ್ರತಿಭಟನೆಗೆ ಕುಳಿತೇಬಿಟ್ರು ಅಂಗನವಾಡಿ ಕಾರ್ಯಕರ್ತೆಯರು!

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಂದ ಅಹೋರಾತ್ರಿ ಪ್ರತಿಭಟನೆ ಶುರುವಾಗಿದೆ. ಕೇಂದ್ರ ಮತ್ತು ರಾಜ್ಯ ಬಜೆಟ್‌ ಹಿನ್ನೆಲೆ ಗಮನ ಸೆಳೆಯಲು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಇಂದಿನಿಂದ 2 ದಿನ ಧರಣಿಗೆ ಮುಂದಾಗಿದ್ದಾರೆ. ಬಜೆಟ್ ವೇಳೆ ತಮ್ಮ ವೇತನವನ್ನು ಹೆಚ್ಚಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಹಾಗೂ ಎಐಟಿಯುಸಿ ಸಂಘಟನೆಯಿಂದ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಇಗಾಗಲೇ ಅನೇಕ ಜಿಲ್ಲೆಗಳಿಂದ ಅಂಗನವಾಡಿ ಕಾರ್ಯಕರ್ತೆಯರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಜಮಾಯಿಸಿದ್ದಾರೆ. ಸುಮಾರು 11ಗಂಟೆಗೆ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‌ವರೆಗೆ ಱಲಿ ಮೂಲಕ ತೆರಳಿ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯದಲ್ಲಿ ಒಟ್ಟು 1 ಲಕ್ಷದ 30 ಸಾವಿರ ಕಾರ್ಯಕರ್ತೆಯರು, ಸಹಾಯಕಿಯರಿದ್ದಾರೆ.

ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳು:
1.ಸೇವಾ ಹಿರಿತನದ ಆಧಾರದಲ್ಲಿ ಸಂಬಳ ನೀಡಬೇಕು
2.ಎಲ್.ಕೆ.ಜಿ ಮತ್ತು ಯು.ಕೆ.ಜಿ ಗಳನ್ನು ಅಂಗನವಾಡಿಯಲ್ಲೇ ಆರಂಭಿಸಬೇಕು
3. ವೇತನ ಆಯೋಗದ ಪ್ರಕಾರ ಕನಿಷ್ಠ ವೇತನ 17 ಸಾವಿರ ನೀಡಬೇಕು
4. ನಿವೃತ್ತಿ ನಂತರ ತಿಂಗಳ ಮೂರು ಸಾವಿರ ರೂಪಾಯಿ ಪಿಂಚಣಿ ನೀಡಬೇಕು
5. ನಿವೃತ್ತಿಯಾದವರಿಗೆ 50 ಸಾವಿರ ರೂಪಾಯಿ ನೀಡಲಾಗ್ತಿತ್ತು ಕಳೆದ ಎರಡು ವರ್ಷಗಳಿಂದ ಅದನ್ನು ನಿಲ್ಲಿಸಲಾಗಿದೆ ಅದನ್ನು ಪ್ರಾರಂಭಿಸಬೇಕು
, ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಪ್ರತಿಭಟನೆಗೆ ಕುಳಿತೇಬಿಟ್ರು ಅಂಗನವಾಡಿ ಕಾರ್ಯಕರ್ತೆಯರು!

, ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಪ್ರತಿಭಟನೆಗೆ ಕುಳಿತೇಬಿಟ್ರು ಅಂಗನವಾಡಿ ಕಾರ್ಯಕರ್ತೆಯರು!

, ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಪ್ರತಿಭಟನೆಗೆ ಕುಳಿತೇಬಿಟ್ರು ಅಂಗನವಾಡಿ ಕಾರ್ಯಕರ್ತೆಯರು!

Related Posts :

Leave a Reply

Your email address will not be published. Required fields are marked *

ತಾಜಾ ಸುದ್ದಿ

error: Content is protected !!