ಕರ್ನಾಟಕದಲ್ಲಿ ಇಂದು ಒಂದೇ ದಿನ 7,908 ಜನರಿಗೆ ಕೊರೊನಾ ಸೋಂಕು

ಬೆಂಗಳೂರು: ಕೊರೊನಾ ಹೆಮ್ಮಾರಿಯ ರುದ್ರ ನರ್ತನ ರಾಜ್ಯದಲ್ಲಿ ಮುಂದುವರಿದಿದ್ದು, ಇಂದು ಒಂದೇ ದಿನ ಕರ್ನಾಟಕದಲ್ಲಿ 7,908 ಜನರಿಗೆ ಸೋಂಕು ತಗುಲಿದೆ.

ಇಂದಿನ ಸೋಂಕಿತರ ಸಂಖ್ಯೆಯೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,11,108ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದೂ ಕೂಡಾ ಕೊರೊನಾ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಇಂದು 2,452 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ.

ಇನ್ನು ಇಂದು ಕೊರೊನಾದಿಂದ ರಾಜ್ಯದಲ್ಲಿ 104 ಜನರು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿರುವವರ ಸಂಖ್ಯೆ 3,717ಕ್ಕೆ ಏರಿಕೆಯಾಗಿದೆ.

Related Tags:

Related Posts :

Category: