ರಾಜ್ಯದಲ್ಲಿ ಹೊಸದಾಗಿ 5,532 ಜನರಿಗೆ ವಕ್ಕರಿಸಿದ ಕಿಲ್ಲರ್‌ ಕೊರೊನಾ

ಬೆಂಗಳೂರು: ಕಿಲ್ಲರ್‌ ಕೊರೊನಾ ರಾಜ್ಯದಲ್ಲಿಂದು ಹೊಸದಾಗಿ 5,532 ಜನರಿಗೆ ವಕ್ಕರಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,34,819ಕ್ಕೇರಿಕೆಯಾಗಿದೆ. ಕೊರೊನಾದಿಂದಾಗಿ ಇವತ್ತು ಕರ್ನಾಟಕದಲ್ಲಿ 84 ಜನರು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಇದುವರೆಗೆ ಬಲಿಯಾದವರ ಸಂಖ್ಯೆ 2,496ಕ್ಕೆ ಏರಿಕೆಯಾಗಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ ಇವತ್ತು 2,105 ಜನರಿಗೆ ಕೊರೊನಾ ಸೋಂಕು ತಗುಲಿದೆ.ಇಂದಿನ ಸೋಂಕಿತರೊಂದಿಗೆ ಬೆಂಗಳೂರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 59,501ಕ್ಕೇರಿಕೆಯಾಗಿದೆ. ಇನ್ನು ಸಿಲಿಕಾನ್‌ ಸಿಟಿಯಲ್ಲಿ ಇವತ್ತು ಕೊರೊನಾಗೆ 21 ಜನರ ಬಲಿಯಾಗಿದ್ದು, ಇದುವರೆಗೆ ಬೆಂಗಳೂರಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 1,077ಕ್ಕೇರಿಕೆಯಾಗಿದೆ.

ರಾಜ್ಯದ ಒಟ್ಟು ಕೊರೊನಾ ಸೋಂಕಿತರ ಪೈಕಿ 57,725 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನುಳಿದ 74,590 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಬೆಂಗಳೂರಲ್ಲಿ ಇವತ್ತು ಒಟ್ಟು 59,501 ಸೋಂಕಿತರ ಪೈಕಿ 20,910 ಜನರು ಗುಣಮುಖರಾಗಿ ಡಿಸ್‌ಚಾರ್ಜ್‌ ಆಗಿದ್ದಾರೆ. ಹಾಗೇನೆ 37,513 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Related Tags:

Related Posts :

Category: