AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್​ ಪಲ್ಲಮಜಲು​​

ಅಕ್ಷಯ್​ ಪಲ್ಲಮಜಲು​​

Sub-Editor - TV9 Kannada

Akshay.kumar@tv9.com

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow On:
PM Modi Speech Live: ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ; ಲೈವ್​​ ವಿಡಿಯೋ ಇಲ್ಲಿದೆ ನೋಡಿ

PM Modi Speech Live: ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ; ಲೈವ್​​ ವಿಡಿಯೋ ಇಲ್ಲಿದೆ ನೋಡಿ

ಧಾನಿ ಮೋದಿ ಅವರು ದೇಶವನ್ನು ಉದ್ದೇಶಿ ಮಾತನಾಡುತ್ತಿದ್ದಾರೆ. ದೆಹಲಿಯಲ್ಲಿ ಭಾರತ್ ಮಂಟಪಂನಲ್ಲಿ ಎನ್​​ಡಿಎ ಸಭೆಯ ನಂತರ ಈ ಭಾಷಣ ಮಾಡುತ್ತಿದ್ದಾರೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ. ಮೂರನೇ ಬಾರಿಗೆ ಅಧಿಕಾರ ಹಿಡಿದಿರುವ ಎನ್‌ಡಿಎ ಮೈತ್ರಿಕೂಟದ ಮುಂದಿನ ಆಡಳಿತಾತ್ಮಕ ಕಾರ್ಯತಂತ್ರಗಳು, ಅಭಿವೃದ್ಧಿ ಯೋಜನೆಗಳು ಹಾಗೂ ದೇಶದ ಸರ್ವತೋಮುಖ ಪ್ರಗತಿಯ ದೃಷ್ಟಿಯಿಂದ ಇಂದಿನ ಸಭೆ ಅತ್ಯಂತ ಮಹತ್ವದ್ದಾಗಿತ್ತು.

ಮನೆಯಲ್ಲೇ ಪ್ಯಾಕಿಂಗ್ ಕೆಲಸ ಅಂತ ನಂಬಿಸಿ 10 ಕೋಟಿ ರೂ. ಎಗರಿಸಿದ್ರು: ಹಾವೇರಿಯ ‘SLV ಮಹಿಳಾ ಮಾರ್ಟ್’ ಮಾಲೀಕರ ಮಹಾಮೋಸ

ಮನೆಯಲ್ಲೇ ಪ್ಯಾಕಿಂಗ್ ಕೆಲಸ ಅಂತ ನಂಬಿಸಿ 10 ಕೋಟಿ ರೂ. ಎಗರಿಸಿದ್ರು: ಹಾವೇರಿಯ ‘SLV ಮಹಿಳಾ ಮಾರ್ಟ್’ ಮಾಲೀಕರ ಮಹಾಮೋಸ

ಹಾವೇರಿಯಲ್ಲಿ 'SLV ಮಹಿಳಾ ಮಾರ್ಟ್' ಕಂಪನಿ, ಮನೆಯಿಂದಲೇ ಕೆಲಸ (ಗೃಹ ಕೈಗಾರಿಕೆ) ನೀಡುವ ಆಮಿಷವೊಡ್ಡಿ ನೂರಾರು ಮಹಿಳೆಯರಿಗೆ 5-10 ಕೋಟಿ ರೂ. ವಂಚಿಸಿದೆ. ಅಗರಬತ್ತಿ, ಕಸಬರಗಿ ಪ್ಯಾಕಿಂಗ್ ಕೆಲಸದ ನೆಪದಲ್ಲಿ ಹೂಡಿಕೆ ಮಾಡಿಸಿಕೊಂಡು, ಮಾಲೀಕರು ರಾತ್ರೋರಾತ್ರಿ ಪರಾರಿಯಾಗಿದ್ದಾರೆ. ಹಣ ಕಳೆದುಕೊಂಡ ಮಹಿಳೆಯರು ನ್ಯಾಯಕ್ಕಾಗಿ ಪೊಲೀಸ್ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ಅವೈಜ್ಞಾನಿಕ ಕಾಮಗಾರಿ: ರಸ್ತೆ ಮಧ್ಯೆ ಇರೋ ಕಂಬ ತೆಗೆಯದೇ ವೈಟ್‌ಟ್ಯಾಪಿಂಗ್; ಸಾರ್ವಜನಿಕರ ಆಕ್ರೋಶ

ಬೆಂಗಳೂರಿನಲ್ಲಿ ಮತ್ತೊಂದು ಅವೈಜ್ಞಾನಿಕ ಕಾಮಗಾರಿ: ರಸ್ತೆ ಮಧ್ಯೆ ಇರೋ ಕಂಬ ತೆಗೆಯದೇ ವೈಟ್‌ಟ್ಯಾಪಿಂಗ್; ಸಾರ್ವಜನಿಕರ ಆಕ್ರೋಶ

ಬೆಂಗಳೂರಿನ ದೊಮ್ಮಲೂರು ವಾರ್ಡ್‌ನಲ್ಲಿ ಕೈಗೊಳ್ಳಲಾದ ವೈಟ್‌ ಟ್ಯಾಪಿಂಗ್ ರಸ್ತೆ ಕಾಮಗಾರಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರಸ್ತೆ ಮಧ್ಯೆಯೇ ಬೃಹತ್ ವಿದ್ಯುತ್ ಕಂಬವನ್ನು ಹಾಗೆಯೇ ಬಿಟ್ಟು ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ಇದು ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯ, ಸಮನ್ವಯದ ಕೊರತೆ ಹಾಗೂ ಅವೈಜ್ಞಾನಿಕ ಕಾಮಗಾರಿಗೆ ಹಿಡಿದ ಕನ್ನಡಿಯಾಗಿದ್ದು, ಸಾರ್ವಜನಿಕರ ಜೀವಕ್ಕೆ ಅಪಾಯ ಮತ್ತು ತೆರಿಗೆ ಹಣದ ದುರುಪಯೋಗಕ್ಕೆ ಕಾರಣವಾಗಿದೆ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಡಿಕೆ ಶಿವಕುಮಾರ್

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಡಿಕೆ ಶಿವಕುಮಾರ್

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನಿವಾಸಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದರು. ಡಿಕೆ ಶಿವಕುಮಾರ್ ಅವರು ಯಾವುದೇ ಪಕ್ಷ ಎನ್ನುವುದನ್ನು ನೋಡದೇ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆ. ಸಿಎಂ ಆಗಿ ಪ್ರಮಾಣವಚನಕ್ಕೂ ಮುನ್ನವೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಎಚ್​​ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಸಲಹೆಗಳನ್ನು ಪಡೆದುಕೊಂಡಿದ್ದರು.

ಕರ್ನಾಟಕದಲ್ಲಿ ಹೆಚ್ಚುತ್ತಿದೆ ಎಚ್‌ಐವಿ ಭೀತಿ!: ಇದು ಯುವಕರಲ್ಲಿ ಹೆಚ್ಚಿದ ‘ಸಲಿಂಗ’ ಸಂಪರ್ಕದ ಎಫೆಕ್ಟ್

ಕರ್ನಾಟಕದಲ್ಲಿ ಹೆಚ್ಚುತ್ತಿದೆ ಎಚ್‌ಐವಿ ಭೀತಿ!: ಇದು ಯುವಕರಲ್ಲಿ ಹೆಚ್ಚಿದ ‘ಸಲಿಂಗ’ ಸಂಪರ್ಕದ ಎಫೆಕ್ಟ್

ಕರ್ನಾಟಕದಲ್ಲಿ ಎಚ್‌ಐವಿ/ಏಡ್ಸ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಪುರುಷರ ನಡುವಿನ ಲೈಂಗಿಕ ಸಂಪರ್ಕ ಹಾಗೂ ಯುವಕರಲ್ಲಿ (18-35) ಸೋಂಕು ಹೆಚ್ಚಳಕ್ಕೆ ಪ್ರಮುಖ ಕಾರಣ. ಡೇಟಿಂಗ್ ಅಪ್ಲಿಕೇಶನ್‌ಗಳ ಬಳಕೆ ಮತ್ತು ಅಸುರಕ್ಷಿತ ಲೈಂಗಿಕ ಕ್ರಿಯೆಗಳು ಇದಕ್ಕೆ ಪೂರಕವಾಗಿವೆ. KSAPS ಅಂಕಿ-ಅಂಶಗಳ ಪ್ರಕಾರ, ಸಕ್ರಿಯ ಪ್ರಕರಣಗಳು ಗಣನೀಯವಾಗಿ ಜಿಗಿದಿವೆ. ಸರ್ಕಾರವು ಜಾಗೃತಿ ಕಾರ್ಯಕ್ರಮಗಳು, 'ಬ್ರೇಕ್‌ಫ್ರೀ' ಆಪ್ ಮತ್ತು ಸಹಾಯವಾಣಿ ಮೂಲಕ ನಿಯಂತ್ರಣಕ್ಕೆ ಪ್ರಯತ್ನಿಸುತ್ತಿದೆ.

ಪೇಂಟ್ ಹೊಡೆಯುವ ನೆಪದಲ್ಲಿ ಬಂದವರು ಕೇವಲ 5 ನಿಮಿಷದ ಗ್ಯಾಪ್‌ನಲ್ಲಿ 25 ಲಕ್ಷ ರೂ. ಮೌಲ್ಯದ ಚಿನ್ನಾಭರಣದೊಂದಿಗೆ ಎಸ್ಕೇಪ್

ಪೇಂಟ್ ಹೊಡೆಯುವ ನೆಪದಲ್ಲಿ ಬಂದವರು ಕೇವಲ 5 ನಿಮಿಷದ ಗ್ಯಾಪ್‌ನಲ್ಲಿ 25 ಲಕ್ಷ ರೂ. ಮೌಲ್ಯದ ಚಿನ್ನಾಭರಣದೊಂದಿಗೆ ಎಸ್ಕೇಪ್

ಬೆಂಗಳೂರಿನಲ್ಲಿ 25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದ ಪೇಂಟರ್ಸ್ ಘಟನೆ ಮನೆ ಮಾಲೀಕರಿಗೆ ಪಾಠವಾಗಿದೆ. ಮನೆಗೆ ಕೆಲಸಗಾರರನ್ನು, ಅದರಲ್ಲೂ ಪರಿಚಯವಿಲ್ಲದವರನ್ನು ನೇಮಿಸುವಾಗ ತೀವ್ರ ಎಚ್ಚರಿಕೆ ವಹಿಸಬೇಕು. ದಾಸನಪುರದಲ್ಲಿ ದಂಪತಿಗಳ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಪರಾರಿಯಾಗಿದ್ದು, ಇಂತಹ ದರೋಡೆಗಳನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ.

ಬಿಜೆಪಿ ಶಾಸಕ ಶರಣು ಸಲಗರ್​​ಗೆ ಬಂಧನದ ಭೀತಿ: 2023ರ ಬಕ್ರೀದ್ ಗಲಾಟೆ ಕೇಸ್‌ನಲ್ಲಿ ಶಾಸಕನಿಗೆ ಬಿಗ್ ಶಾಕ್

ಬಿಜೆಪಿ ಶಾಸಕ ಶರಣು ಸಲಗರ್​​ಗೆ ಬಂಧನದ ಭೀತಿ: 2023ರ ಬಕ್ರೀದ್ ಗಲಾಟೆ ಕೇಸ್‌ನಲ್ಲಿ ಶಾಸಕನಿಗೆ ಬಿಗ್ ಶಾಕ್

2023ರ ಬಕ್ರೀದ್ ಹಬ್ಬದ ವೇಳೆ ನಡೆದ ಗೋಹತ್ಯೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿದೆ. ವಿಚಾರಣೆಗೆ ಹಾಜರಾಗದ ಕಾರಣ ನ್ಯಾಯಾಲಯ ಈ ಆದೇಶ ನೀಡಿದ್ದು, ಶಾಸಕರ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಕಾಂಗ್ರೆಸ್ ಸರ್ಕಾರ ವರ್ಷದೊಳಗೆ ಪತನಗೊಳ್ಳಲಿದೆ, ಇದು ದೆಹಲಿ ಮಟ್ಟದಿಂದ ಬಂದಿರುವ ಪಕ್ಕಾ ಮಾಹಿತಿ ಎಂದ ಶಾಸಕ ಸಮೃದ್ಧಿ ಮಂಜುನಾಥ್

ಕಾಂಗ್ರೆಸ್ ಸರ್ಕಾರ ವರ್ಷದೊಳಗೆ ಪತನಗೊಳ್ಳಲಿದೆ, ಇದು ದೆಹಲಿ ಮಟ್ಟದಿಂದ ಬಂದಿರುವ ಪಕ್ಕಾ ಮಾಹಿತಿ ಎಂದ ಶಾಸಕ ಸಮೃದ್ಧಿ ಮಂಜುನಾಥ್

ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್, ದೆಹಲಿಯ ಮಾಹಿತಿ ಆಧರಿಸಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಪತನಗೊಳ್ಳಲಿದೆ ಎಂದು ಹೇಳಿದ್ದಾರೆ. ಸರ್ಕಾರದ ಆಡಳಿತದಲ್ಲಿ "ವಿಕೆಟ್ ಮೇಲೆ ವಿಕೆಟ್" ಬೀಳುತ್ತಿದ್ದು, ಕೆ.ಎಚ್. ಮುನಿಯಪ್ಪ ಮತ್ತು ರಾಮಲಿಂಗಾರೆಡ್ಡಿ ಸೇರಿದಂತೆ ಹಿರಿಯ ನಾಯಕರಲ್ಲಿ ಅಸಮಾಧಾನ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ. ಕೋಲಾರ ಜಿಲ್ಲೆಗೆ ಸ್ಥಳೀಯ ಸಚಿವರ ಅಗತ್ಯವನ್ನೂ ಒತ್ತಿಹೇಳಿದ್ದಾರೆ.

ಸಿಎಂ ಡಿಕೆ ಶಿವಕುಮಾರ್​​​ ಹೇಳಿದ ಆ ಒಂದು ಮಾತು ನನ್ನ ನಿರ್ಧಾರ ಬದಲಿಸಿದೆ ಎಂದ ರಾಮಲಿಂಗಾರೆಡ್ಡಿ

ಸಿಎಂ ಡಿಕೆ ಶಿವಕುಮಾರ್​​​ ಹೇಳಿದ ಆ ಒಂದು ಮಾತು ನನ್ನ ನಿರ್ಧಾರ ಬದಲಿಸಿದೆ ಎಂದ ರಾಮಲಿಂಗಾರೆಡ್ಡಿ

ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ವಿಚಾರ ಅಂತಿಮವಾಗಿ ಇತ್ಯರ್ಥಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಹೈಕಮಾಂಡ್ ನಾಯಕರು ಕೂಡ ರಾಮಲಿಂಗಾರೆಡ್ಡಿ ಅವರ ನಿರ್ಧಾರವನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ. ಹೀಗಾಗಿ, ರಾಜೀನಾಮೆ ತಿರಸ್ಕೃತಗೊಂಡಿದ್ದು, ಸಚಿವರು ಪಕ್ಷದ ಶಿಸ್ತಿಗೆ ಬದ್ಧರಾಗಿ ಮುಂದುವರಿಯಲಿದ್ದಾರೆ.

ಮೊದಲ ಮಳೆಗೆ ಕೊಚ್ಚಿಹೋಯ್ತು ರಾಷ್ಟ್ರೀಯ ಹೆದ್ದಾರಿ!: ಮೂಡುಬಿದಿರೆ ಮಿಜಾರಿನಲ್ಲಿ NH-169 ರಸ್ತೆ ಕುಸಿತ

ಮೊದಲ ಮಳೆಗೆ ಕೊಚ್ಚಿಹೋಯ್ತು ರಾಷ್ಟ್ರೀಯ ಹೆದ್ದಾರಿ!: ಮೂಡುಬಿದಿರೆ ಮಿಜಾರಿನಲ್ಲಿ NH-169 ರಸ್ತೆ ಕುಸಿತ

ಮಂಗಳೂರು-ಸೋಲಾಪುರ NH-169ರಲ್ಲಿ ಮಿಜಾರು ಬಳಿ ಕಳಪೆ ಕಾಮಗಾರಿ ಬಯಲಾಗಿದೆ. ಮುಂಗಾರು ಮಳೆಯ ಮೊದಲ ಅಲೆಗೆ ರಸ್ತೆಯ ಒಂದು ಭಾಗ ಕೊಚ್ಚಿ ಹೋಗಿದ್ದು, ಅವೈಜ್ಞಾನಿಕ ಕಲ್ವರ್ಟ್ ನಿರ್ಮಾಣವೇ ಇದಕ್ಕೆ ಕಾರಣ. ವಾಹನ ಸವಾರರು ಮತ್ತು ಸ್ಥಳೀಯರು ತೀವ್ರ ಆತಂಕದಲ್ಲಿದ್ದು, ಹೆದ್ದಾರಿ ಪ್ರಾಧಿಕಾರ ತುರ್ತು ದುರಸ್ತಿ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇದು ಗಂಭೀರ ದುರಂತಕ್ಕೆ ಆಹ್ವಾನ ನೀಡುತ್ತಿದೆ.

ಡಿಕೆಶಿ-ಸಿದ್ದು ಕೈಲಾಗದ ಸಂಧಾನ ಸುರ್ಜೇವಾಲ ಸಮ್ಮುಖದಲ್ಲಿ ಸಕ್ಸಸ್ ಆಗಿದ್ದೇಗೆ?: ರಾಮಲಿಂಗಾರೆಡ್ಡಿ ಮನವೊಲಿಕೆಗೆ ನೀಡಿದ ಆಫರ್ ಏನು?

ಡಿಕೆಶಿ-ಸಿದ್ದು ಕೈಲಾಗದ ಸಂಧಾನ ಸುರ್ಜೇವಾಲ ಸಮ್ಮುಖದಲ್ಲಿ ಸಕ್ಸಸ್ ಆಗಿದ್ದೇಗೆ?: ರಾಮಲಿಂಗಾರೆಡ್ಡಿ ಮನವೊಲಿಕೆಗೆ ನೀಡಿದ ಆಫರ್ ಏನು?

ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ಗೊಂದಲಕ್ಕೆ ಸುರ್ಜೇವಾಲ ಮಧ್ಯಸ್ಥಿಕೆಯಿಂದ ತೆರೆ ಬಿದ್ದಿದೆ. ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ರೆಡ್ಡಿ ಅವರಿಗೆ ಹೈಕಮಾಂಡ್ ಜಲಸಂಪನ್ಮೂಲ ಅಥವಾ ಸಣ್ಣ ನೀರಾವರಿ ಹೆಚ್ಚುವರಿ ಖಾತೆ ಭರವಸೆ ನೀಡಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿ ಡಿಕೆಶಿ ಮನವೊಲಿಕೆ ವಿಫಲವಾದ ನಂತರ, ರಣದೀಪ್ ಸುರ್ಜೇವಾಲ ಅವರ ಸುದೀರ್ಘ ಮಾತುಕತೆ ಸಂಧಾನಕ್ಕೆ ಕಾರಣವಾಯಿತು.

‘ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ’; ಹಾನಗಲ್‌ನಲ್ಲಿ ಮುಸ್ಲಿಂ ಸಮುದಾಯದಿಂದ ಸರ್ಕಾರಕ್ಕೆ ಮನವಿ

‘ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ’; ಹಾನಗಲ್‌ನಲ್ಲಿ ಮುಸ್ಲಿಂ ಸಮುದಾಯದಿಂದ ಸರ್ಕಾರಕ್ಕೆ ಮನವಿ

ಹಾವೇರಿ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯ ಗೋರಕ್ಷಣೆ ಹೆಸರಿನಲ್ಲಿ ನಡೆಯುವ ನೈತಿಕ ಪೊಲೀಸ್‌ಗಿರಿ ತಡೆದು, ಗೋಸಂರಕ್ಷಣೆಗೆ ಕಾನೂನಾತ್ಮಕ ಬಲ ನೀಡಲು 'ಹಸುವನ್ನು ರಾಷ್ಟ್ರೀಯ ಪ್ರಾಣಿ' ಎಂದು ಘೋಷಿಸುವಂತೆ ಆಗ್ರಹಿಸಿ ಪ್ರತಿಭಟಿಸಿದೆ. ಹಾನಗಲ್‌ನಲ್ಲಿ ನಡೆದ ಈ ವಿಶಿಷ್ಟ ಪ್ರತಿಭಟನೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಲಾಯಿತು. ಇದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.