AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೀನ್​ ಸಾಬ್​

ಅಮೀನ್​ ಸಾಬ್​

Author - TV9 Kannada

ameen.appu@gmail.com

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
ವನ್ಯಜೀವಿ ಬೇಟೆಗಾರರನ್ನು ಬಂಧಿಸಲು ಹೋದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ! ನಾಲ್ವರ ಬಂಧನ

ವನ್ಯಜೀವಿ ಬೇಟೆಗಾರರನ್ನು ಬಂಧಿಸಲು ಹೋದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ! ನಾಲ್ವರ ಬಂಧನ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರ ಅರಣ್ಯದಲ್ಲಿ ಕಾಡುಹಂದಿ ಬೇಟೆಯಾಡಿ ವಿಡಿಯೋ ಹರಿಬಿಟ್ಟಿದ್ದ ಆರೋಪಿಗಳನ್ನು ಬಂಧಿಸಲು ಹೋದ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಭೀಕರ ಹಲ್ಲೆ ನಡೆದಿದೆ. ಕಿಡಿಗೇಡಿಗಳು ಆರ್‌ಎಫ್‌ಒ ಭಾಗಪ್ಪಗೌಡ ಹಾಗೂ ಗಸ್ತುಪಾಲಕರನ್ನು ಜಾಲಿ ಗಿಡಕ್ಕೆ ಕಟ್ಟಿಹಾಕಿ ದೊಣ್ಣೆಗಳಿಂದ ಹೊಡೆದಿದ್ದಾರೆ. ಈ ಸಂಬಂಧ ಕೊಡೇಕಲ್ ಪೊಲೀಸರು 11 ಜನರ ವಿರುದ್ಧ ಪ್ರಕರಣ ದಾಖಲಿಸಿ, ನಾಲ್ವರನ್ನು ಈಗಾಗಲೇ ಜೈಲಿಗಟ್ಟಿದ್ದಾರೆ.

ಗಾಳಿಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ: ಬಾಣಂತಿ, ಮಗು ಅದೃಷ್ಟವಶಾತ್ ಪಾರು

ಗಾಳಿಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ: ಬಾಣಂತಿ, ಮಗು ಅದೃಷ್ಟವಶಾತ್ ಪಾರು

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಿಗರಿಹಾಳ ಗ್ರಾಮದಲ್ಲಿ ಗಾಳಿ ಸಹಿತ ಭಾರಿ ಮಳೆಗೆ ಮನೆಯ ಶೀಟ್‌ಗಳು ಹಾರಿಹೋಗಿವೆ. ರಾತ್ರಿ ಮಗುವನ್ನು ಮಡಿಲಲ್ಲಿ ಇಟ್ಟುಕೊಂಡು ಮಲಗಿದ್ದ ಬಾಣಂತಿ ಮತ್ತು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಟುಂಬವು ತಾತ್ಕಾಲಿಕವಾಗಿ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದು, ಈ ಘಟನೆಯು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ!

ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ!

ಬೇಸಿಗೆಯ ಪರಿಣಾಮವಾಗಿ ಉತ್ತರ ಕರ್ನಾಟಕದ ಹಲವೆಡೆ ನೀರಿನ ಅಭಾವ ಎದುರಾಗಿದ್ದು, ಜಿಲ್ಲೆಯಾದ್ಯಂತ ತೀವ್ರ ಕುಡಿಯುವ ನೀರಿನ ಬಿಕ್ಕಟ್ಟು ಎದುರಾಗಿದೆ. ಬಂಡಳ್ಳಿ ಗ್ರಾಮದ ನಿವಾಸಿಗಳು ತಮ್ಮ ಮೂಲಭೂತ ಸೌಕರ್ಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ಕುಡಿಯುವ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಪ್ರತಿಭಟನೆಗೆ ಇಳಿದಿದ್ದಾರೆ. ಯಾದಗಿರಿ ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ನೂರಾರು ಮಹಿಳೆಯರು ಖಾಲಿ ಬಿಂದಿಗೆಗಳನ್ನು ಹಿಡಿದುಕೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಟವಾಡುತ್ತಿದ್ದ ಮಕ್ಕಳ ಮೇಲೆ ಕುಸಿದ ಮನೆಯ ಗೋಡೆ: ಓರ್ವ ಬಾಲಕಿ ಸಾವು, ಮತ್ತಿಬ್ಬರಿಗೆ ಗಾಯ

ಆಟವಾಡುತ್ತಿದ್ದ ಮಕ್ಕಳ ಮೇಲೆ ಕುಸಿದ ಮನೆಯ ಗೋಡೆ: ಓರ್ವ ಬಾಲಕಿ ಸಾವು, ಮತ್ತಿಬ್ಬರಿಗೆ ಗಾಯ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಭಾರೀ ಮಳೆಯಿಂದ ದುರಂತ ಸಂಭವಿಸಿದೆ. ಮಳೆ ಮತ್ತು ಬಿರುಗಾಳಿಗೆ ದುರ್ಬಲಗೊಂಡಿದ್ದ ಮನೆಯ ಗೋಡೆ ಕುಸಿದು 8 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಯಾದಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಂಚ ಪಡೆಯುತ್ತಿದ್ದಾಗ ರೆಡ್​ ಹ್ಯಾಂಡೆಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್​ಪೆಕ್ಟರ್!

ಲಂಚ ಪಡೆಯುತ್ತಿದ್ದಾಗ ರೆಡ್​ ಹ್ಯಾಂಡೆಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್​ಪೆಕ್ಟರ್!

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಜಾತಿ ನಿಂದನೆ ಪ್ರಕರಣದಿಂದ ಆರೋಪಿಯನ್ನು ಕೈಬಿಡಲು ಈ ಹಣಕ್ಕೆ ಬೇಡಿಕೆಯಿಟ್ಟಿದ್ದು, ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಡಿವೈಎಸ್‌ಪಿ ಜಾಕೀರ್ ಇನಾಂದಾರ್ ನೇತೃತ್ವದ ತಂಡ ದಾಳಿ ನಡೆಸಿ, ಅಧಿಕಾರಿಯನ್ನು ವಶಕ್ಕೆ ಪಡೆದಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

5 ಲಕ್ಷ ರೂ. ಹಣ ಪಡೆದು ಅಬಾರ್ಷನ್ ಮಾಡಿಸಿದ್ದಾಳೆ ಲೇಡಿ ಕಾನ್ಸ್‌ಟೇಬಲ್; ಪಿಎಸ್‌ಐ ವಿರೇಶ್‌ಗೆ ವಂಚಿಸಿ ಬೇರೆ ಯುವಕನ ಜೊತೆ ಹಸೆಮಣೆ ಏರಲು ಸಿದ್ಧ!

5 ಲಕ್ಷ ರೂ. ಹಣ ಪಡೆದು ಅಬಾರ್ಷನ್ ಮಾಡಿಸಿದ್ದಾಳೆ ಲೇಡಿ ಕಾನ್ಸ್‌ಟೇಬಲ್; ಪಿಎಸ್‌ಐ ವಿರೇಶ್‌ಗೆ ವಂಚಿಸಿ ಬೇರೆ ಯುವಕನ ಜೊತೆ ಹಸೆಮಣೆ ಏರಲು ಸಿದ್ಧ!

ಯಾದಗಿರಿ ಪಿಎಸ್‌ಐ ವೀರೇಶ್ ಮತ್ತು ಕಾನ್ಸ್‌ಟೇಬಲ್ ವಿಜಯಶ್ರೀ 8 ವರ್ಷಗಳ ಲಿವ್-ಇನ್ ಸಂಬಂಧದ ನಂತರ ಈಗ ಬೀದಿಪಾಲಾಗಿದೆ. ವಿಜಯಶ್ರೀ ತನ್ನಿಂದ ₹35 ಲಕ್ಷ ಪಡೆದು, ಎರಡು ಬಾರಿ ಗರ್ಭಪಾತ ಮಾಡಿಸಿ, ಈಗ ಬೇರೆ ಮದುವೆಗೆ ಸಜ್ಜಾಗಿದ್ದಾರೆಂದು ವೀರೇಶ್ ಆರೋಪಿಸಿದ್ದಾರೆ. ತನಗೆ ನ್ಯಾಯ ದೊರಕಿಸಿಕೊಡಲು ವೀರೇಶ್ ರಾಯಚೂರು ಎಸ್‌ಪಿ ಅವರಿಗೆ ದೂರು ನೀಡಿದ್ದು, ಇಲಾಖೆಗೆ ಮುಜುಗರ ತಂದಿದೆ.

ಸರ್ಕಾರಿ ಹಾಸ್ಟೆಲ್​ನಲ್ಲಿ ಖಾಸಗಿ ಕೋಚಿಂಗ್ ಸೆಂಟರ್ ಓಪನ್! ಲಂಚದ ಆಸೆಗೆ ಬಿದ್ದು ಸರ್ಕಾರಿ ಕಟ್ಟಡ ಬಾಡಿಗೆ ನೀಡಿದ್ರಾ ಅಧಿಕಾರಿಗಳು?

ಸರ್ಕಾರಿ ಹಾಸ್ಟೆಲ್​ನಲ್ಲಿ ಖಾಸಗಿ ಕೋಚಿಂಗ್ ಸೆಂಟರ್ ಓಪನ್! ಲಂಚದ ಆಸೆಗೆ ಬಿದ್ದು ಸರ್ಕಾರಿ ಕಟ್ಟಡ ಬಾಡಿಗೆ ನೀಡಿದ್ರಾ ಅಧಿಕಾರಿಗಳು?

ಯಾದಗಿರಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ ಖಾಸಗಿ ವ್ಯಕ್ತಿಯೊಬ್ಬ ಅಕ್ರಮವಾಗಿ ಕೋಚಿಂಗ್ ಸೆಂಟರ್ ನಡೆಸಿರುವುದು ಬೆಳಕಿಗೆ ಬಂದಿದೆ. ಅಧಿಕಾರಿಗಳಿಗೆ ಹಣ ನೀಡಿ ಹಾಸ್ಟೆಲ್ ಕಟ್ಟಡವನ್ನು ದುರುಪಯೋಗಪಡಿಸಿಕೊಳ್ಳಲಾಗಿದ್ದು, ಬೇಸಿಗೆ ಶಿಬಿರದ ಹೆಸರಿನಲ್ಲಿ ಹೊರಗಿನ ಮಕ್ಕಳಿಂದಲೂ ಪ್ರತಿ ತಿಂಗಳು 5 ಸಾವಿರ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಭ್ರಷ್ಟಾಚಾರದ ವಿರುದ್ಧ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಯಾದಗಿರಿ: ಒಂದೇ ಕುಟುಂಬ 6 ಜನ ಸಜೀವದಹನ; ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಎಸ್​​ಪಿ

ಯಾದಗಿರಿ: ಒಂದೇ ಕುಟುಂಬ 6 ಜನ ಸಜೀವದಹನ; ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಎಸ್​​ಪಿ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತ್‌ಪುರ್ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ಸಜೀವ ದಹನವಾಗಿದ್ದಾರೆ. ಕಿಯಾ ಸೋನೆಟ್ ಕಾರು ಮತ್ತು ವಿಆರ್‌ಎಲ್ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರ್‌ಗೆ ಬೆಂಕಿ ಹೊತ್ತಿಕೊಂಡಿದೆ. ಘಟನಾ ಸ್ಥಳಕ್ಕೆ ಯಾದಗಿರಿ ಎಸ್‌ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

6 ಮಂದಿ ಸಜೀವ ದಹನ: ಅಪಘಾತ ಅದೆಷ್ಟು ಭಯಾನಕವಾಗಿದೆ ನೋಡಿ

6 ಮಂದಿ ಸಜೀವ ದಹನ: ಅಪಘಾತ ಅದೆಷ್ಟು ಭಯಾನಕವಾಗಿದೆ ನೋಡಿ

ಯಾದಗಿರಿ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ತಿಂಥಣಿ ಮೌನೇಶ್ವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ರಾಯಚೂರು ಜಿಲ್ಲೆಯ ಸಿರವಾರದ ಕುಟುಂಬ ಈ ದುರಂತಕ್ಕೆ ಬಲಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರಂತವು ಬೆಚ್ಚಿಬೀಳಿಸುವಂತಿದೆ. ಇನ್ನು ಅಪಘಾತ ಅದೆಷ್ಟು ಭಯಾನಕವಾಗಿತ್ತು ಎನ್ನುವುದನ್ನ ವಿಡಿಯೋನಲ್ಲಿ ನೋಡಿ.

ಕಾರು, ಖಾಸಗಿ ಬಸ್​​ ಮುಖಾಮುಖಿ ಢಿಕ್ಕಿ: ಸ್ಥಳದಲ್ಲೇ ಪ್ರಾಣಬಿಟ್ಟ 6 ಮಂದಿ; ಧಗಧಗಿಸಿದ ವಾಹನಗಳು

ಕಾರು, ಖಾಸಗಿ ಬಸ್​​ ಮುಖಾಮುಖಿ ಢಿಕ್ಕಿ: ಸ್ಥಳದಲ್ಲೇ ಪ್ರಾಣಬಿಟ್ಟ 6 ಮಂದಿ; ಧಗಧಗಿಸಿದ ವಾಹನಗಳು

ಮಂತ್ರಾಲಯಕ್ಕೆ ರಾಯರ ದರ್ಶನಕ್ಕೆ ಹೊರಟಿದ್ದ ಚಿಕ್ಕಮಗಳೂರಿನ ಭಕ್ತರ ಬೊಲೆರೊ ವಾಹನಕ್ಕೆ ಟ್ಯಾಂಕರ್ ಡಿಕ್ಕಿಯಾಗಿ ಎಂಟು ಮಂದಿ ಸಾವನ್ನಪ್ಪಿದ್ದ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ನಡೆದಿದೆ. ಕಾರು ಮತ್ತು ಖಾಸಗಿ ಬಸ್​​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಾಪುರ ಬಳಿ 6 ಜನ ದಾರುಣವಾಗಿ ಮೃತಪಟ್ಟಿದ್ದಾರೆ.

ತುಂಡು ಭೂಮಿಗಾಗಿ ದಾಯಾದಿಗಳ ಕಲಹ: ಅಣ್ಣನ ಕೊಲೆಗೆ ಪ್ರತೀಕಾರವಾಗಿ ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ ತಮ್ಮ!

ತುಂಡು ಭೂಮಿಗಾಗಿ ದಾಯಾದಿಗಳ ಕಲಹ: ಅಣ್ಣನ ಕೊಲೆಗೆ ಪ್ರತೀಕಾರವಾಗಿ ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ ತಮ್ಮ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಕೇವಲ ಎರಡು ಎಕರೆ ಜಮೀನು ವಿವಾದಕ್ಕೆ ಯುವಕನೊಬ್ಬನ ಭೀಕರ ಕೊಲೆಯಾಗಿದೆ. ಇದಕ್ಕೆ ಪ್ರತೀಕಾರವಾಗಿ ಕೊಲೆಯಾದವನ ಸಹೋದರ ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ್ದಾನೆ. ಈ ಘಟನೆಗಳಿಂದ ಕುಟುಂಬಗಳು ಬೀದಿಪಾಲಾಗಿವೆ. ಪೊಲೀಸರು ಕೊಲೆ ಹಾಗೂ ಅಗ್ನಿಕಾಂಡದ ಆರೋಪಿಗಳನ್ನು ಬಂಧಿಸಿದ್ದು, ಕಾನೂನು ಕ್ರಮ ಜರುಗಿಸಿದ್ದಾರೆ.

ಲೋಕಾಯುಕ್ತ ಭರ್ಜರಿ ಕಾರ್ಯಚರಣೆ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಹಲವು ಅಧಿಕಾರಿಗಳು

ಲೋಕಾಯುಕ್ತ ಭರ್ಜರಿ ಕಾರ್ಯಚರಣೆ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಹಲವು ಅಧಿಕಾರಿಗಳು

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆ ಆಡಿದ್ದಾರೆ. ಸಾವಿರಾರು ರೂ ಲಂಚಕ್ಕೆ ಕೈಯೊಡ್ಡಿದ ಅಧಿಕಾರಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಯಾದಗಿರಿಯ ಎಇಇ ಮತ್ತು ಜೆಇ, ಬೆಂಗಳೂರಿನ ಜಿಬಿಎ ಅಧಿಕಾರಿಗಳಿಬ್ಬರು ಮತ್ತು ಹಳಿಯಾಳ ಉಪಕಾರಾಗೃಹದಲ್ಲಿ ಕೈದಿಯ ಕೂಲಿ ಹಣಕ್ಕೆ ಲಂಚ ಕೇಳಿದ ಜೈಲರ್​ ಲೋಕಾ ಬಲೆಗೆ ಬಿದ್ದವರು.