ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್ . ಕಾಮ್ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.
‘ರಸ್ತೆ ಗುಂಡಿಗೆ ಬಿದ್ದು ಪ್ರಾಣ ಹೋದರೆ ಇಂಜಿನಿಯರ್‌ಗಳೇ ನೇರ ಹೊಣೆ’: ಸಚಿವ ಯು.ಟಿ.ಖಾದರ್ ಖಡಕ್ ವಾರ್ನಿಂಗ್
ಸಚಿವ ಯು.ಟಿ. ಖಾದರ್ ದಕ್ಷಿಣ ಕನ್ನಡದಲ್ಲಿ ಮಳೆಗಾಲದ ವಿಪತ್ತು ನಿರ್ವಹಣೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಸ್ತೆ ಹೊಂಡಗಳಿಂದ ಅಪಘಾತ ಸಂಭವಿಸಿದರೆ ಎಂಜಿನಿಯರ್‌ಗಳೇ ಹೊಣೆಗಾರರು ಎಂದು ಎಚ್ಚರಿಸಿದ್ದಾರೆ. ವಿದ್ಯುತ್ ಸಂಪರ್ಕ ಹಾಗೂ ರಸ್ತೆ ತೆರವು ಕಾರ್ಯಗಳನ್ನು ತ್ವರಿತವಾಗಿ ನಿರ್ವಹಿಸಲು ಆದೇಶಿಸಿದ್ದಾರೆ. ತಳಮಟ್ಟದಿಂದಲೇ ವಿಪತ್ತು ನಿರ್ವಹಣೆಯನ್ನು ಬಲಪಡಿಸಲು ಗ್ರಾಮ ಪಂಚಾಯಿತಿಗಳಿಗೆ ನೋಡಲ್ ಅಧಿಕಾರಿಗಳ ನೇಮಕಕ್ಕೂ ಸೂಚಿಸಿದ್ದಾರೆ.
- Ashok
- Updated on: Jun 8, 2026
- 9:13 pm
ಆಯುಷ್ಮಾನ್ ಹೆಸರಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದು: ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ
ಆರೋಗ್ಯ ಸಚಿವ ಯು.ಟಿ. ಖಾದರ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲಿಸಿ, ಖಾಸಗಿ ಆಸ್ಪತ್ರೆಗಳ ಅತಿಯಾದ ವಸೂಲಾತಿಗೆ ಕಡಿವಾಣ ಹಾಕಲು ಕಠಿಣ ನಿರ್ಧಾರ ಪ್ರಕಟಿಸಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಪರವಾನಗಿ ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸರ್ಕಾರಿ ವೈದ್ಯರ ಕೊರತೆ ನೀಗಿಸಲು ವೇತನ ಹೆಚ್ಚಳ ಹಾಗೂ ಗುತ್ತಿಗೆ ವೈದ್ಯರ ಖಾಯಂ ಕುರಿತು ಕ್ರಮಕ್ಕೆ ಮುಂದಾಗಿದ್ದಾರೆ.
- Ashok
- Updated on: Jun 8, 2026
- 2:46 pm
ಕಾಸರಗೋಡಿನಲ್ಲಿ ಭಾರೀ ಮಳೆಗೆ ದುರಂತ: ಆಟವಾಡುತ್ತಿದ್ದಾಗ ಮಣ್ಣು ಕುಸಿದು ಮಕ್ಕಳಿಬ್ಬರು ಸಾವು
ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಡೂರು ಗ್ರಾಮದಲ್ಲಿ ಅವಾಂತರವೊಂದು ಸಂಭವಿಸಿದೆ. ಮಳೆಗೆ ಮಣ್ಣು ಕುಸಿದು ಮಣ್ಣಿನಡಿ ಸಿಲುಕಿ ಮಕ್ಕಳಿಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಇನ್ನೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ. ಸದ್ಯ ಅಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- Ashok
- Updated on: Jun 6, 2026
- 9:33 pm
ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು: ಇನ್ನೆರಡು ದಿನಗಳಲ್ಲಿ ಕರಾವಳಿಗೆ ಮಾನ್ಸೂನ್ ಆಗಮನ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹೈ ಅಲರ್ಟ್
Monsoon Rain: ಕೊನೆಗೂ ಕೇರಳಕ್ಕೆ ಮುಂಗಾರು ಪ್ರವೇಶಿಸಿದೆ. ಈ ಬಗ್ಗೆ ಹವಾಮಾನ ಇಲಾಖೆ ಅಧಿಕೃತ ಮಾಹಿತಿ ನೀಡಿದ್ದು, ಇನ್ನೆರಡು ದಿನಗಳಲ್ಲಿ ದಕ್ಷಿಣ ಕನ್ನಡದಲ್ಲೂ ಮುಂಗಾರು ಮಳೆ ಬರಲಿದೆ. ಪ್ರವಾಹ ಹಾಗೂ ಭೂಕುಸಿತ ತಡೆಗೆ ಜಿಲ್ಲಾಡಳಿತ 3.25 ಕೋಟಿ ರೂ. ಮೀಸಲಿಟ್ಟು, 115 ಕಾಳಜಿ ಕೇಂದ್ರ ಹಾಗೂ 24*7 ಕಂಟ್ರೋಲ್ ರೂಂ ತೆರೆದಿದೆ.
- Ashok
- Updated on: Jun 4, 2026
- 5:10 pm
ಮಂಗಳೂರು: ಮಳೆಗಾಲದ ಮುಂಜಾಗ್ರತಾ ಕ್ರಮಗಳ ನಿರ್ಲಕ್ಷ್ಯ ಆರೋಪ, ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಕಿಡಿ!
ಮಂಗಳೂರು ನಗರದಲ್ಲಿ ಮುಂಗಾರು ಮಳೆ ಎದುರಿಸಲು ಪೂರ್ವಸಿದ್ಧತೆಗಳು ಸಮರ್ಪಕವಾಗಿ ನಡೆದಿಲ್ಲ ಎಂದು ಆರೋಪಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.
- Ashok
- Updated on: May 25, 2026
- 4:55 pm
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಮಂಗಳೂರಿನ ಕಾವೂರು ಪ್ರದೇಶದಲ್ಲಿರುವ ಮೂರು ಬಾವಿಗಳ ನೀರು ಡೀಸೆಲ್‌ನಿಂದ ಕಲುಷಿತಗೊಂಡಿದೆ. ಬಾವಿ ನೀರಿನಲ್ಲಿ ಶೇ 28ರಷ್ಟು ಡೀಸೆಲ್ ಅಂಶ ಪತ್ತೆಯಾಗಿದ್ದು, ಇದು ಕುಡಿಯಲು ಅನರ್ಹ ಎಂದು ಆರೋಗ್ಯ ಇಲಾಖೆ ವರದಿ ನೀಡಿದೆ. ಬಾವಿಯ ನೀರನ್ನು ಖಾಲಿ ಮಾಡಿದರೂ ಡೀಸೆಲ್ ಪದರ ಮತ್ತೆ ಬರುತ್ತಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.
- Ashok
- Updated on: May 19, 2026
- 8:27 am
ಮಂಗಳೂರಿನಲ್ಲಿ ಮಹಾ ಅಚ್ಚರಿ: ಬಾವಿಗಳಲ್ಲಿ ಉಕ್ಕಿ ಬಂತು ಡೀಸೆಲ್, ನೀರು ಕುಡಿಯಲಾಗದೆ ಕಾವೂರು ನಿವಾಸಿಗಳು ಕಂಗಾಲು!
ಮಂಗಳೂರಿನ ಕಾವೂರಿನ ಮೂರು ಮನೆಗಳ ಬಾವಿಗಳಲ್ಲಿ ನೀರಿನ ಜತೆ ಡೀಸೆಲ್ ಉಕ್ಕಿ ಬರುತ್ತಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ನೀರಿನಲ್ಲಿ 28% ಡೀಸೆಲ್ ಇರುವುದು ಪತ್ತೆಯಾಗಿದ್ದು, ಹತ್ತಿರದ ಪೆಟ್ರೋಲ್ ಬಂಕ್‌ನಿಂದ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಬಂಕ್ ಮಾಲೀಕರು ನಿರಾಕರಿಸಿದ್ದಾರೆ. ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.
- Ashok
- Updated on: May 19, 2026
- 8:33 am
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್ 1 ಶ್ರೀಮಂತ: ಬಂದ ಆದಾಯದಲ್ಲಿ 85.20 ಕೋಟಿ ರೂ.ವೆಚ್ಚ
ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಮತ್ತೆ ಹೊಸ ದಾಖಲೆ ಬರೆದಿದೆ. 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ 167 ಕೋಟಿ ರೂಪಾಯಿಗೂ ಅಧಿಕ ಆದಾಯ ಗಳಿಸಿದೆ. ಈ ಮೂಲಕ ಸತತ 15ನೇ ವರ್ಷವೂ ದೇವಸ್ಥಾನಗಳ ಗರಿಷ್ಟ ಆದಾಯದಲ್ಲಿ ರಾಜ್ಯದಲ್ಲೇ ಅಗ್ರಸ್ಥಾನ ಕಾಯ್ದುಕೊಂಡಿದೆ. ಈ ಕುರಿತು ಒಂದು ಡಿಟೇಲ್ಡ್ ರಿಪೋರ್ಟ್ ಇಲ್ಲಿದೆ ನೋಡಿ..
- Ashok
- Updated on: May 18, 2026
- 10:21 pm
ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್; ವಿಡಿಯೋ ನೋಡಿ
ನಟಿ ರಚಿತಾ ರಾಮ್ ಅವರು ಕೊರಗಜ್ಜ ದೈವದ ಕೋಲ ಸೇವೆಯಲ್ಲಿ ಭಾಗಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಯಲ್ಲಿ ರಚಿತಾ ರಾಮ್ ಕೋಲ ಸೇವೆ ನೀಡಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿ ಕೋಲ ಸೇವೆಯಲ್ಲಿ ಭಾಗಿಯಾದ ಅವರ ವಿಡಿಯೋ ಲಭ್ಯವಾಗಿದೆ.
- Ashok
- Updated on: May 17, 2026
- 12:12 pm
ಶೃಂಗೇರಿ ಮತ ಮರು ಎಣಿಕೆ ವಿವಾದ: ಪ್ರಮಾಣವಚನ ಸ್ವೀಕಾರಕ್ಕೆ ವಿಳಂಬ ಮಾಡಿಲ್ಲ, ಸ್ಪೀಕರ್ ಯುಟಿ ಖಾದರ್ ಸ್ಪಷ್ಟನೆ
ಶೃಂಗೇರಿ ಶಾಸಕ ಜೀವರಾಜ್ ಪ್ರಮಾಣವಚನ ಸ್ವೀಕಾರ ವಿಳಂಬದ ಬಗ್ಗೆ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಸ್ಪೀಕರ್ ಯು.ಟಿ. ಖಾದರ್ ತಳ್ಳಿಹಾಕಿದ್ದಾರೆ. ತಾಂತ್ರಿಕ ಕಾರಣಗಳಿಂದಾಗಿ ಕಾನೂನು ಅಭಿಪ್ರಾಯ ಪಡೆಯುವುದು ಅಗತ್ಯವಿದ್ದು, ಸಂವಿಧಾನದ ಚೌಕಟ್ಟಿನಲ್ಲೇ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೈಕೋರ್ಟ್ ನಿರ್ದೇಶನದಂತೆ ನಡೆದ ಮರು ಮತ ಎಣಿಕೆಯಲ್ಲಿ ಜೀವರಾಜ್ ಶಾಸಕರಾಗಿ ಆಯ್ಕೆಯಾಗಿದ್ದಾರೆ.
- Ashok
- Updated on: May 6, 2026
- 10:56 am
‘ಚುರುಮುರಿ ತಿಂದ ಮೋದಿ, ಗುಂಡಿಗೆ ಬಿದ್ದ ದೀದಿ’! ಮಂಗಳೂರಿನಲ್ಲಿ ಬಿಜೆಪಿಗರ ಘೋಷಣೆ, ಚುರುಮುರಿ ತಯಾರಿಸಿ ಹಂಚಿದ ಶಾಸಕ ಕಾಮತ್
ಮೂರು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿಯ ಭರ್ಜರಿ ಮುನ್ನಡೆಯನ್ನು ಮಂಗಳೂರಿನಲ್ಲಿ ಸಂಭ್ರಮಿಸಲಾಯಿತು. ಶಾಸಕ ವೇದವ್ಯಾಸ್ ಕಾಮತ್ ಸ್ವತಃ ಚುರುಮುರಿ ತಯಾರಿಸಿ ಹಂಚಿದರೆ, ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಅಂಗಡಿಯೊಂದರಲ್ಲಿ ಚುರುಮುರಿ ಸವಿದಿದ್ದು ಬಹಳಷ್ಟು ಸುದ್ದಿಯಾಗಿತ್ತು.
- Ashok
- Updated on: May 4, 2026
- 2:22 pm
ದೇಶದಲ್ಲೇ ಮೊದಲ ಬಾರಿಗೆ ‘ಧಾರ್ಮಿಕ ತ್ಯಾಜ್ಯ ವಿಲೇವಾರಿ’ ಅಭಿಯಾನಕ್ಕೆ ಸಾಕ್ಷಿಯಾದ ಮಂಗಳೂರು
ದೇಶದಲ್ಲೇ ಮೊದಲ ಭಾರಿಗೆ ಮಂಗಳೂರಿನಲ್ಲಿ ಧಾರ್ಮಿಕ ತ್ಯಾಜ್ಯ ವಿಲೇವಾರಿ ಅಭಿಯಾನ ಮಾಡಲಾಗಿದೆ. ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ಹತ್ತು ದಿನ ನಡೆದ ಈ ಅಭಿಯಾನದಲ್ಲಿ 12.5 ಟನ್ ಧಾರ್ಮಿಕ ತ್ಯಾಜ್ಯ ಸಂಗ್ರಹಿಸಲಾಗಿದ್ದು, ಗೌರವಯುತವಾಗಿ ವಿಲೇವಾರಿ ಕೂಡ ಮಾಡಲಾಗಿದೆ. ಸಾರ್ವಜನಿಕರ ಉತ್ತಮ ಸ್ಪಂದನೆಯಿಂದ ಈ ಮಹತ್ಕಾರ್ಯ ಮುಂದುವರಿಸಲು ಆಯೋಜಕರು ಯೋಜಿಸಿದ್ದಾರೆ.
- Ashok
- Updated on: May 1, 2026
- 5:06 pm