ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.
ಮದ್ವೆಯಾಗಿದ್ರೂ ಅತ್ತೆ ಮಗಳ ಮೇಲಾಸೆ: ಆಕೆ ದೂರವಾದ ಸಿಟ್ಟಿಗೆ ಮಾವ ಮಾಡಿದ್ದೇನು ಗೊತ್ತಾ?
ಚಿಕ್ಕಮಗಳೂರು ತಾಲೂಕಿನ ಅರೇನೂರು ಗ್ರಾಮದಲ್ಲಿ ಗೃಹಿಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನದ ಬಳಿಕ ಹಂತಕ ಪೊಲೀಸರಿಗೆ ಸಿಕ್ಕಿಬಿದ್ದಾನೆ. ತನ್ನಿಂದ ದೂರವಾದ ಸಿಟ್ಟಿಗೆ ಅತ್ತೆ ಮಗಳನ್ನೇ ಆರೋಪಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ. ಸದ್ಯ ಆಲ್ದೂರು ಪೊಲೀಸರು ಆತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
- Ashwith Mavinaguni
- Updated on: Dec 4, 2025
- 10:02 pm
ಮೂವರು ಮಕ್ಕಳ ತಾಯಿಯ ಡೆಡ್ಲಿ ಮರ್ಡರ್: ಪ್ರಾಣಕ್ಕೆ ಸಂಚು ತಂತಾ ಲವ್ವಿಡವ್ವಿ?
ಆಕೆ ಮೂರು ಮಕ್ಕಳ ತಾಯಿ. ಅದ್ಯಾವುದೋ ಕಾರಣಕ್ಕೆ ಕಳೆದ ಮೂರು ವರ್ಷಗಳ ಹಿಂದೆ ಗಂಡನನ್ನು ಬಿಟ್ಟು ತವರು ಮನೆ ಸೇರಿದ್ದಳು. ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಈಕೆ ಕಳೆದ ಕೆಲದಿನಗಳ ಹಿಂದೆ ದಿಢೀರ್ ನಾಪತ್ತೆಯಾಗಿದ್ದಾಳೆ. ಎಷ್ಟು ಹುಡುಕಿದರೂ ಮಗಳು ಸಿಗದ ಹಿನ್ನಲೆ ತಂದೆ ಪೊಲೀಸರಿಗೆ ದೂರನ್ನೂ ನೀಡಿದ್ದಾರೆ. ಆದ್ರೆ ಆ ಬೆನ್ನಲ್ಲೇ ಮನೆಗೆ ಹಿಂದಿರುಗಿ ಬಂದಿದ್ದ ಮಹಿಳೆ, ಮರುದಿನ ಭೀಕರವಾಗಿ ಕೊಲೆಯಾಗಿದ್ದಾಳೆ. ಆಕೆಯನ್ನು ಕೊಂದಿದ್ದು ಯಾರು? ಘಟನೆ ಏನು ಎನ್ನುವ ಮಾಹಿತಿ ಇಲ್ಲಿದೆ.
- Ashwith Mavinaguni
- Updated on: Dec 3, 2025
- 2:56 pm
ದತ್ತ ಜಯಂತಿ ಶೋಭಾಯಾತ್ರೆ: ಚಿಕ್ಕಮಗಳೂರಿನಲ್ಲಿ ಪೊಲೀಸರು ಹೈ ಅಲರ್ಟ್, ಬಿಗಿ ಬಂದೋಬಸ್ತ್
ದತ್ತಜಯಂತಿ ಆಚರಣೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ ಕಲ್ಪಿಸಿರುವುದಾಗಿ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮ್ಟೆ ತಿಳಿಸಿದ್ದಾರೆ. ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಇಂದು ಶೋಭಾಯಾತ್ರೆ ನಡೆಯಲಿದ್ದು, ಪ್ರಚೋದನಕಾರಿ ಘೋಷಣೆ ಕೂಗಿದರೆ ಸುಮೋಟೋ ಕೇಸ್ ದಾಖಲಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಶಾಂತಿ–ಸೌಹಾರ್ದ ಕಾಪಾಡುವಂತೆ ಮನವಿ ಮಾಡಿದ್ದಾರೆ.
- Ashwith Mavinaguni
- Updated on: Dec 3, 2025
- 10:46 am
ಕಾರ್ಕಳ – ಶೃಂಗೇರಿ ಹೆದ್ದಾರಿ ಬದಿಯಲ್ಲೇ ಕಾಡಾನೆ ಸಂಚಾರ: ವಾಹನ ಸವಾರರಲ್ಲಿ ಅತಂಕ
ಕಾರ್ಕಳ - ಶೃಂಗೇರಿ ಮಧ್ಯೆ ಸಂಚರಿಸುವ ವಾಹನ ಸವಾರರಲ್ಲಿ ಒಂಟಿ ಸಲಗವೊಂದು ಆತಂಕ ಸೃಷ್ಟಿಸಿದೆ. ಕಾಡಾನೆಯು ಕಳೆದ ಕೆಲವು ದಿನಗಳಿಂದ ಕುದುರೆಮುಖ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಓಡಾಡುತ್ತಿದೆ. ಸದ್ಯ ಗಂಗಾಮೂಲ ಪ್ರದೇಶದ ಕುರಿಂಜಾಲು ಮತ್ತು ಗಂಗಡಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ. ವಿಡಿಯೋ ಇಲ್ಲಿದೆ.
- Ashwith Mavinaguni
- Updated on: Dec 2, 2025
- 9:51 am
ಅಯ್ಯಪ್ಪ ಮಾಲೆ ಧರಿಸಿಬಂದ ವಿದ್ಯಾರ್ಥಿಗಳನ್ನ ಕಾಲೇಜಿನಿಂದ ಹೊರಹಾಕಿದ ಪ್ರಿನ್ಸಿಪಾಲ್: ಭುಗಿಲೆದ್ದ ಆಕ್ರೋಶ
ಡಿಸೆಂಬರ್ 2 ರಿಂದ ಪ್ರಾರಂಭವಾಗುವ ಮೂರು ದಿನಗಳ ದತ್ತ ಜಯಂತಿ ಉತ್ಸವಕ್ಕೆ ಚಿಕ್ಕಮಗಳೂರು ಸಜ್ಜಾಗಿದೆ. ಹೀಗಾಗಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇದರ ಮಧ್ಯೆ ಶಬರಿಮಲೆ ಅಯ್ಯಪ್ಪ ಮಾಲೆ ವಿಚಾರವಾಗಿ ವಿವಾದವೊಂದು ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿಬಂದಿದ್ದರಿಂದ ಕಾಲೇಜಿನಿಂದ ಹೊರಹಾಕಿರುವ ಘಟನೆ ನಡೆದಿದೆ.
- Ashwith Mavinaguni
- Updated on: Dec 1, 2025
- 3:00 pm
ಪ್ರವಾಸಿಗರೇ ಗಮನಿಸಿ: ದತ್ತ ಜಯಂತಿ ಹಿನ್ನಲೆ ಚಿಕ್ಕಮಗಳೂರಿನ ಈ ಸ್ಥಳಗಳಿಗೆ ನಿರ್ಬಂಧ
ರಾಜ್ಯದಲ್ಲಿ ಚಳಿಯ ವಾತಾವರಣ ಮನೆ ಮಾಡಿರುವ ಹಿನ್ನಲೆ ಚಿಕ್ಕಮಗಳೂರು ಕಡೆ ಪ್ರವಾಸಕ್ಕೆ ಹೋಗೋಣ, ವೆದರ್ ಚೆನ್ನಾಗಿರುತ್ತೆ ಎಂದು ನೀವೇನಾದ್ರೂ ಪ್ಲ್ಯಾನ್ ಮಾಡಿಕೊಂಡಿದ್ರೆ ಅದನ್ನ ಕೂಡಲೇ ಕೈಬಿಡಿ. ದತ್ತ ಜಯಂತಿ ಆಚರಣೆ ಹಿನ್ನಲೆ ಅಗತ್ಯ ಮುಂಜಾಗೃತಾ ಕ್ರಮಕ್ಕೆ ಮುಂದಾಗಿರುವ ಚಿಕ್ಕಮಗಳೂರು ಜಿಲ್ಲಾಡಳಿತ, ಸಾಲು ಸಾಲು ನಿರ್ಬಂಧಗಳನ್ನ ವಿಧಿಸಿ ಆದೇಶಿಸಿದೆ. ಆ ಕುರಿತ ಮಾಹಿತಿ ಇಲ್ಲಿದೆ.
- Ashwith Mavinaguni
- Updated on: Dec 1, 2025
- 12:54 pm
ಚಿಕ್ಕಮಗಳೂರು: ಮಕ್ಕಳ ಮೇಲೆ ದಾಳಿ ಮಾಡಿದ್ದ ಚಿರತೆ ಅರಣ್ಯ ಸಿಬ್ಬಂದಿ ಗುಂಡೇಟಿಗೆ ಬಲಿ
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಮಕ್ಕಳ ಮೇಲೆ ದಾಳಿ ನಡೆಸಿ ಆತಂಕ ಸೃಷ್ಟಿಸಿದ್ದ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದೆ. ಇತ್ತೀಚೆಗೆ ಓರ್ವ ಬಾಲಕಿಯನ್ನ ಬಲಿ ಪಡೆದಿತ್ತು. ಅರಣ್ಯ ಸಿಬ್ಬಂದಿ ಗುಂಡೇಟಿಗೆ ಚಿರತೆ ಸಾವನ್ನಪ್ಪಿದೆ. ಚಿರತೆ ಸಾವಿನಿಂದಾಗಿ ತರೀಕೆರೆ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
- Ashwith Mavinaguni
- Updated on: Nov 30, 2025
- 8:27 am
ಚಿಕ್ಕಮಗಳೂರಲ್ಲಿ ನಿಲ್ಲದ ಚಿರತೆ ಹಾವಳಿ: ಬಾಲಕನ ಮೇಲೆ ಭೀಕರ ದಾಳಿ; ಗಾಯಾಳು ಆಸ್ಪತ್ರೆಗೆ ದಾಖಲು
ಚಿಕ್ಕಮಗಳೂರಲ್ಲಿ ಚಿರತೆ ಹಾವಳಿ ನಿಂತಿಲ್ಲ. ಕೆಲ ದಿನಗಳ ಹಿಂದೆಯಷ್ಟೇ 5 ವರ್ಷದ ಬಾಲಕಿ ಚಿರತೆ ದಾಳಿಗೆ ಬಲಿಯಾಗಿದ್ದಳು. ಆ ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ನಡೆದಿದೆ. ಚಿರತೆಗಳ ಸತತ ದಾಳಿಗಳಿಂದ ಸಾರ್ವಜನಿಕರು ಆತಂಕಗೊಂಡಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಆರೋಪಿಸಿದ್ದಾರೆ.
- Ashwith Mavinaguni
- Updated on: Nov 28, 2025
- 7:42 pm
ದಾಳಿಗೆ ಮುಂದಾದ ಕಾಡಾನೆ: ಪ್ರವಾಸಿಗರು ಜಸ್ಟ್ ಮಿಸ್!
ಚಿಕ್ಕಮಗಳೂರು ಜಿಲ್ಲೆಯ ಲಕ್ಕವಳ್ಳಿ ಸಮೀಪದ ಭದ್ರಾ ಅಭಯಾರಣ್ಯದಲ್ಲಿ ಪ್ರವಾಸಿಗರ ಜೀಪ್ ಮೇಲೆ ಕಾಡಾನೆ ದಾಳಿಗೆ ಮುಂದಾದ ಘಟನೆ ನಡೆದಿದೆ. ಪ್ರವಾಸಿಗರು ಜೀಪ್ನಲ್ಲಿ ಸಫಾರಿ ಹೊರಟಿದ್ದ ವೇಳೆ ಒಂಟಿ ಸಲಗದ ಬೆನ್ನಟ್ಟಿದೆ. ಜೀಪ್ ಚಾಲಕನ ಸಮಯಪ್ರಜ್ಞೆಯಿಂದ ಪ್ರವಾಸಿಗರ ಜೀವ ಉಳಿದಿದೆ. ವಿಡಿಯೋ ನೋಡಿ.
- Ashwith Mavinaguni
- Updated on: Nov 28, 2025
- 7:21 pm
ಶೃಂಗೇರಿ ವ್ಯಕ್ತಿಗೆ ಕೋಟ್ಯಂತರ ರೂ ವಂಚನೆ: ಷೇರು ಮಾರ್ಕೆಟ್ ಬಗ್ಗೆ ಇರಲಿ ಎಚ್ಚರಿಕೆ
ಚಿಕ್ಕಮಗಳೂರಿನಲ್ಲಿ ಆನ್ಲೈನ್ ಷೇರು ಮಾರ್ಕೆಟ್ ವಂಚನೆ ಬೆಳಕಿಗೆ ಬಂದಿದೆ. ರಿಲಯನ್ಸ್ ಸೆಕ್ಯುರಿಟೀಸ್ ಹೆಸರಿನಲ್ಲಿ ವಾಟ್ಸಾಪ್ ಲೋಗೋ ಬಳಸಿ 72 ವರ್ಷದ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 3.27 ಕೋಟಿ ರೂ. ವಂಚಿಸಿರುವಂತಹ ಘಟನೆ ನಡೆದಿದೆ. ಸದ್ಯ ಚಿಕ್ಕಮಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
- Ashwith Mavinaguni
- Updated on: Nov 28, 2025
- 4:38 pm
ಚಿಕ್ಕಮಗಳೂರು ಮೆಡಿಕಲ್ ಕಾಲೇಜು ಲೈಂಗಿಕ ದೌರ್ಜನ್ಯ ಕೇಸ್ಗೆ ಟ್ವಿಸ್ಟ್: ಪ್ರೊಫೆಸರ್ ವಿರುದ್ಧ ವಿದ್ಯಾರ್ಥಿನಿ ದೂರು
ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಪ್ರೊ. ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಅಶ್ಲೀಲ ಸಂದೇಶಗಳ ಮೂಲಕ ಕಿರುಕುಳ ನೀಡಿದ ಬಗ್ಗೆ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಆ ಮೂಲಕ 2023ರಲ್ಲಿ ನಡೆದಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದ ಆರೋಪವು ಕೇಳಿಬಂದಿದೆ.
- Ashwith Mavinaguni
- Updated on: Nov 25, 2025
- 6:39 pm
ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಲೈಂಗಿಕ ಕಿರುಕುಳ: ಚಿಕ್ಕಮಗಳೂರು ಮೆಡಿಕಲ್ ಕಾಲೇಜು ಪ್ರೊಫೆಸರ್ ವಿರುದ್ಧ ಗಂಭೀರ ಆರೋಪ
ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನ ಪ್ರೊಫೆಸರ್ ಗಂಗಾಧರ್ ಎಂಬವರ ವಿರುದ್ಧ ಬೆಂಗಳೂರಿನ ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ಹಾಗೂ ಅಶ್ಲೀಲ ಸಂದೇಶಗಳನ್ನು ಕಳುಹಿಸಿರುವ ಆರೋಪ ಮಾಡಿದ್ದಾರೆ. ಸದ್ಯ ಈ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಕಾಲೇಜು ಆಡಳಿತವು ಪ್ರೊಫೆಸರ್ಗೆ ಶೋಕಾಸ್ ನೋಟಿಸ್ ನೀಡಿ ವಿವರ ನೀಡುವಂತೆ ಸೂಚಿಸಿದೆ.
- Ashwith Mavinaguni
- Updated on: Nov 25, 2025
- 1:40 pm