ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.
ಮಧ್ಯರಾತ್ರಿ ಹುಡುಗಿಯರ ಹಾಸ್ಟೆಲ್‌ಗೆ ನುಗ್ಗಿದ ಯುವಕ: ಕಳ್ಳತನಕ್ಕೆಂದು ಹೋದವನೀಗ ಖಾಕಿ ಅತಿಥಿ!
ಚಿಕ್ಕಮಗಳೂರಿನ ಸರ್ಕಾರಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ಮಧ್ಯರಾತ್ರಿ ನುಗ್ಗಿದ ಉತ್ತರ ಪ್ರದೇಶದ ಕಾರ್ಮಿಕನನ್ನು ಯುವತಿಯರೇ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಕಳ್ಳತನದ ಉದ್ದೇಶದಿಂದ ನುಗ್ಗಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದು, ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಈ ಹಿಂದೆಯೂ ಇದೇ ಮಾದರಿಯ ಘಟನೆಗಳು ಹಾಸ್ಟೆಲ್ನಲ್ಲಿ ನಡೆದಿದ್ದವು ಎನ್ನಲಾಗಿದೆ.
- Ashwith Mavinaguni
- Updated on: Jun 10, 2026
- 11:36 am
ಎಸ್ಟೇಟ್ನಲ್ಲಿ ಬೀಡುಬಿಟ್ಟ ಕಾಡಾನೆಗಳ ಹಿಂಡು: ಗಜಪಡೆ ಕಂಡು ಸಾರ್ವಜನಿಕರು ಕಂಗಾಲು
ಚಿಕ್ಕಮಗಳೂರು ಜಿಲ್ಲೆಯ ಕಡವಂತಿ ಸುತ್ತಮುತ್ತಲ ಗ್ರಾಮಗಳಲ್ಲಿ ಗಜಪಡೆ ಪ್ರತ್ಯಕ್ಷವಾಗುತ್ತಿರುವ ಹಿನ್ನೆಲೆ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಈ ನಡುವೆ ಕಡವಂತಿಯ ವಡ್ಡಿಗುಡ್ಡ ಎಸ್ಟೇಟ್ನಲ್ಲಿ ಆನೆಗಳ ಹಿಂಡು ಕಾಣಿಸಿಕೊಂಡಿರೋದು ಜನರ ಭೀತಿ ಹೆಚ್ಚಿಸಿದೆ. ಹೀಗಾಗಿ ಕಾಡಾನೆಗಳ ಹಾವಳಿ ತಡೆಗಟ್ಟುವಂತೆ ಸ್ಥಳೀಯ ನಿವಾಸಿಗಳು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
- Ashwith Mavinaguni
- Updated on: May 29, 2026
- 2:50 pm
ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳು ಅಂದು ಆಡಿದ್ದ ಮಾತು: ಡಿಕೆಶಿಗೆ ಸಿಎಂ ಪಟ್ಟದ ಸುದ್ದಿ ಬೆನ್ನಲ್ಲೇ ಸ್ವಾಮೀಜಿ ಭೇಟಿಯಾದ ತಮ್ಮಯ್ಯ
ರಾಜ್ಯ ಕಾಂಗ್ರೆಸ್ನಲ್ಲಿ ಪಟ್ಟದ ಫೈಟ್ಗೆ ಕೊನೆಗೂ ತೆರೆ ಬೀಳುವ ಸಾಧ್ಯತೆ ಗೋಚರಿಸಿದ್ದು, ಡಿಸಿಎಂ ಡಿಕೆಶಿ ಮುಖ್ಯಮಂತ್ರಿಯಾಗುವ ಕಾಲ ಸಮೀಪಿಸಿದೆ ಎನ್ನಲಾಗಿದೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡಲಿದ್ದು, ಆ ಮೂಲಕ ಈ ಹಿಂದೆ ರಂಭಾಪುರಿ ಶ್ರೀಗಳು ನುಡಿದಿದ್ದ ಹೇಳಿಕೆ ಸತ್ಯವಾಗುವ ಕಾಲ ಬಂದಿದೆ. ಈ ಬೆನ್ನಲ್ಲೇ ಶಾಸಕ ತಮ್ಮಯ್ಯ ಶ್ರೀಗಳನ್ನು ಭೇಟಿಯಾಗಿದ್ದು, ನಿಮ್ಮ ಮಾತು ಸತ್ಯವಾಗುತ್ತಿದೆ. ನಿಮ್ಮ ಆಶೀರ್ವಾದದಿಂದ ಡಿಕೆಶಿ ಸಿಎಂ ಆಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.
- Ashwith Mavinaguni
- Updated on: May 27, 2026
- 12:46 pm
ಚಿಕ್ಕಮಗಳೂರಲ್ಲಿ ವರುಣಾರ್ಭಟ: ಮನೆಗಳಿಗೆ ನುಗ್ಗಿದ ಚರಂಡಿ ನೀರು, ಮರ ಬಿದ್ದು ರಸ್ತೆ ಬಂದ್
ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಸುರಿದ ಭಾರಿ ಮಳೆಗೆ ಜನ ಜೀವನ್ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ನಗರದ ಹಳೆ ಉಪ್ಪಳ್ಳಿ, ಗೌರಿ ಕಾಲುವೆ ಬಡಾವಣೆಯ ಹತ್ತಾರು ಮನೆಗಳಿಗೆ ಚರಂಡಿ ನೀರು ನುಗ್ಗಿದ ಪರಿಣಾಮ ನಿವಾಸಿಗಳು ಪರದಾಟ ನಡೆಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಬಳಿ ಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದ ಪರಿಣಾಮ ಚಿಕ್ಕಮಗಳೂರು-ಶಾಂತವೇರಿ, ಲಿಂಗದಹಳ್ಳಿ ರಸ್ತೆ ಸಂಚಾರ ಬಂದ್ ಆಗಿದೆ.
- Ashwith Mavinaguni
- Updated on: May 26, 2026
- 6:42 pm
ಬೀನ್ಸ್ ಖರೀದಿಯಲ್ಲಿ ಮೋಸ ಆರೋಪ: ಚಿಕ್ಕಮಗಳೂರು APMC ಗೇಟ್ ಲಾಕ್ ಮಾಡಿ ತಡರಾತ್ರಿ ರೈತರ ಪ್ರೊಟೆಸ್ಟ್
ಚಿಕ್ಕಮಗಳೂರು ಎಪಿಎಂಸಿಯಲ್ಲಿ ಬೀನ್ಸ್ ಖರೀದಿಯಲ್ಲಿ ವ್ಯಾಪಾರಿಗಳು ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ರೈತರು ತಡರಾತ್ರಿ ಪ್ರತಿಭಟನೆ ನಡೆಸಿದ ಪ್ರಸಂಗ ನಡೆದಿದೆ. ಎಪಿಎಂಸಿ ಗೇಟ್ ಬಂದ್ ಮಾಡಿ ಅನ್ನದಾತರು ಆಕ್ರೋಶ ಹೊರಹಾಕಿದ್ದು, ಉಳಿದ ಮಾರುಕಟ್ಟೆಗಳಲ್ಲಿನ ಅರ್ಧ ದರಕ್ಕೂ ಇಲ್ಲಿನ ವ್ಯಾಪಾರಿಗಳು ಬೀನ್ಸ್ ಖರೀದಿದುತ್ತಿಲ್ಲ ಎಂದು ದೂರಿದ್ದಾರೆ. ಅಂತಿಮವಾಗಿ ಅಧಿಕಾರಿಗಳ ಭರವಸೆಯ ಬಳಿಕ ರೈತರು ಪ್ರತಿಭಟನೆ ಹಿಂಪಡೆದಿದ್ದಾರೆ.
- Ashwith Mavinaguni
- Updated on: May 24, 2026
- 7:08 am
ಬಿಜೆಪಿ ಯುವ ಜಿಲ್ಲಾಧ್ಯಕ್ಷನಿಂದ ಅಶ್ಲೀಲ ಪದಬಳಕೆ: ಸಿಡಿದೆದ್ದ ಮುಸ್ಲಿಂ ಸಮುದಾಯ; ಬಂಧನಕ್ಕೆ ಡೆಡ್ಲೈನ್
ಚಿಕ್ಕಮಗಳೂರಿನಲ್ಲಿ ನಿನ್ನೆ ನಡೆದ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವಿನ ಗಲಾಟೆಯಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅಶ್ಲೀಲ ಪದಬಳಕೆ ಆರೋಪ ಹಿನ್ನೆಲೆ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ವಿರುದ್ಧ ನಗರ ಪೊಲೀಸ್ ಠಾಣೆಗೆ ಮುಸ್ಲಿಂ ಸಮುದಾಯದ ಮುಖಂಡರು ದೂರು ನೀಡಿದ್ದು, ತಕ್ಷಣ ಬಂಧನಕ್ಕೆ ಆಗ್ರಹಿಸಿದ್ದಾರೆ.
- Ashwith Mavinaguni
- Updated on: May 22, 2026
- 6:56 pm
ಕಾಮಗಾರಿ ವಿಚಾರವಾಗಿ ಹೈಡ್ರಾಮ: ಆಣೆ ಪ್ರಮಾಣ ಹಂತಕ್ಕೆ ತಲುಪಿದ ಸಿ.ಟಿ ರವಿ, ತಮ್ಮಯ್ಯ ಫೈಟ್!
ಚಿಕ್ಕಮಗಳೂರಿನ ರಾಂಪುರದಲ್ಲಿ ಕಾಮಗಾರಿ ವೀಕ್ಷಣೆ ವೇಳೆ ಎಂಎಲ್‌ಸಿ ಸಿ.ಟಿ.ರವಿ ವಿರುದ್ಧ 'ಗೋ ಬ್ಯಾಕ್' ಘೋಷಣೆ ಮೊಳಗಿದ್ದು, ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಭಾರಿ ಕಿತ್ತಾಟ ನಡೆದಿದೆ. ಶಾಸಕ ತಮ್ಮಯ್ಯ ವಿರುದ್ಧ ಆಕ್ರೋಶ ಹೊರಹಾಕಿರುವ ಸಿ.ಟಿ.ರವಿ, ರಸ್ತೆ ಕಾಮಗಾರಿ ಕ್ರೆಡಿಟ್ ವಿಚಾರವಾಗಿ ಯಾವ ದೇವಸ್ಥಾನದಲ್ಲಾದರೂ ಮುಖಾಮುಖಿ ಆಣೆ-ಪ್ರಮಾಣ ಮಾಡಲು ಸಿದ್ಧ ಎಂದು ನೇರ ಸವಾಲು ಎಸೆದಿದ್ದಾರೆ.
- Ashwith Mavinaguni
- Updated on: May 22, 2026
- 11:25 am
ನಿಪ್ಪಾಣಿ ಬೆನ್ನಲ್ಲೇ ಚಿಕ್ಕಮಗಳೂರಲ್ಲೂ ಕೈ, ಕಮಲ ಸಮರ: ಕಾಮಗಾರಿ ವಿಚಾರವಾಗಿ ಸಿ.ಟಿ.ರವಿ ಎದುರೇ ಹೈಡ್ರಾಮಾ
ಚಿಕ್ಕಮಗಳೂರಿನ ರಾಂಪುರದಲ್ಲಿ ಕಾಮಗಾರಿ ವೀಕ್ಷಣೆ ವೇಳೆ ಎಂಎಲ್‌ಸಿ ಸಿ.ಟಿ.ರವಿ ಎದುರೇ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದು, ಹೈಡ್ರಾಮಾ ಸೃಷ್ಟಿಯಾಗಿದೆ. ವಿಧಾನ ಪರಿಷತ್ ಸದಸ್ಯರನ್ನು ಅಡ್ಡಗಟ್ಟಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದ ಹಿನ್ನೆಲೆ ಆರಂಭವಾದ ಗಲಾಟೆ ವಿಕೋಪಕ್ಕೆ ಹೋಗಿದೆ. ಆ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದು, ಇಂತಹ ಗೂಂಡಾಗಳನ್ನು ಎದರಿಸಿಯೇ ನಾವು ಇಲ್ಲಿಯವರೆಗೆ ಬಂದಿದ್ದೇವೆ. ನನ್ನ ಮೇಲೆ ಹಲ್ಲೆಯ ಪ್ರಯತ್ನವೂ ನಡೆದಿದ್ದು, ಹೆದರಿ ಓಡಿಹೋಗುವ ಜಾಯಮಾನ ನನ್ನದಲ್ಲ ಎಂದವರು ಕಿಡಿ ಕಾರಿದ್ದಾರೆ.
- Ashwith Mavinaguni
- Updated on: May 22, 2026
- 10:15 am
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಮುಳುಗಿದ ರೈಲ್ವೇ ಅಂಡರ್ ಪಾಸ್, ಹೊಳೆಯಂತಾದ ರಸ್ತೆಗಳು
ಚಿಕ್ಕಮಗಳೂರು ಜಿಲ್ಲೆಯ ಕಡೂರು ಮತ್ತು ಬೀರೂರಿನಲ್ಲಿ ಭಾರೀ ಮಳೆಗೆ ರಸ್ತೆಗಳು ಜಲಾವೃತಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ 173ರ ರೈಲ್ವೇ ಅಂಡರ್‌ಪಾಸ್ ಸಂಪೂರ್ಣ ಮುಳುಗಡೆಯಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದ್ದಾರೆ. ಕಡೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ರಸ್ತೆ ಕೂಡ ಸಂಪೂರ್ಣ ಮುಳುಗಿದ್ದು, ಅದೇ ರಸ್ತೆಯಲ್ಲಿ ಕೆಲ ಸವಾರರು ವಾಹನಗಳ ಚಾಲನೆ ಮಾಡಿದ್ದಾರೆ.
- Ashwith Mavinaguni
- Updated on: May 20, 2026
- 7:38 pm
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆ. ತಲಗೂರು ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದೆ. ಗ್ರಾಮದ ಮಂಜುನಾಥ್ ಆಚಾರ್ ಎಂಬುವವರ ಮನೆ ಬಾಗಿಲಿಗೆ ತಂಪಾದ ನೆರಳು ಹುಡುಕಿಕೊಂಡು ಬಂದ ಈ ಹಾವು, ಹೊಸ್ತಿಲಲ್ಲೇ ತಣ್ಣಗೆ ಮಲಗಿತ್ತು. ಮುಂಜಾನೆ ಇದನ್ನು ಕಂಡ ಮನೆಯವರು ಭಯಭೀತರಾಗಿದ್ದಾರೆ.
- Ashwith Mavinaguni
- Updated on: May 19, 2026
- 1:24 pm
ಮಲೆನಾಡಲ್ಲಿ ಹೆಚ್ಚಿದ ಕಾಡುಪ್ರಾಣಿಗಳ ಉಪಟಳ: ಹಿಂಡು ಹಿಂಡಾಗಿ ಕಾಣಿಸಿಕೊಂಡ ಕಾಡುಕೋಣಗಳು
ಮಲೆನಾಡಿನಲ್ಲಿ ಕಾಡುಕೋಣಗಳ ಉಪಟಳ ಹೆಚ್ಚಾಗಿದ್ದು, ಕಳಸ ತಾಲೂಕಿನ ಹೊರನಾಡು ಸಮೀಪದ ಎಳಕುಂಬ್ರಿಯಲ್ಲಿ 20ಕ್ಕೂ ಹೆಚ್ಚು ಕಾಡುಕೋಣಗಳ ಹಿಂಡು ರಸ್ತೆಯಲ್ಲಿ ಕಾಣಿಸಿಕೊಂಡಿದೆ. ಇದರಿಂದಾಗಿ ಸ್ಥಳೀಯ ಗ್ರಾಮಸ್ಥರು ಕಂಗಾಲಾಗಿದ್ದು, ರೈತರ ಬೆಳೆಗಳು ನಾಶವಾಗುತ್ತಿವೆ. ಕಾಡುಕೋಣಗಳ ಓಡಾಟದ ದೃಶ್ಯ ಸ್ಥಳೀಯ ನಿವಾಸಿಗಳ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
- Ashwith Mavinaguni
- Updated on: May 18, 2026
- 11:38 am
ಮಲೆನಾಡಲ್ಲಿ ವರುಣನ ಆರ್ಭಟ: ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ; ಮಂಜಿನ ನಗರಿಯಾದ ಕಾಫಿನಾಡು!
ಚಿಕ್ಕಮಗಳೂರು ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಮೂಡಿಗೆರೆ, ಕಳಸದಲ್ಲಿ ಭಾರೀ ಮಳೆಯಾಗಿದೆ. ಚಾರ್ಮಾಡಿ ಘಾಟ್‌ನಲ್ಲಿ ದಟ್ಟ ಮಂಜು ಕವಿದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಕೊಟ್ಟಿಗೆಹಾರ, ಬಣಕಲ್‌ನಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ಮಳೆಯಿಂದ ಕಾಫಿ-ಅಡಿಕೆ ಬೆಳೆಗಾರರಿಗೆ ಸಂತಸವಾಗಿದ್ದು, ಘಾಟ್ ಪ್ರದೇಶಗಳಲ್ಲಿ ಸಂಚರಿಸುವವರು ಜಾಗರೂಕತೆ ವಹಿಸಲು ಸೂಚಿಸಲಾಗಿದೆ.
- Ashwith Mavinaguni
- Updated on: May 12, 2026
- 5:55 pm