Horoscope ಮೇ 31, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಇಲಾಖೆಯ ಹೊಸ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಚಿವರ ಸಭೆ ನಡೆಸಲು ನಿರ್ಧರಿಸಿದ್ದಾರೆ ಎಂದರು. ಸದ್ಯಕ್ಕೆ ಜೂನ್ 7ರವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಾದ ಲಾಕ್ಡೌನ್ ಜಾರಿಯಲ್ಲಿ ಇರಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಕಳೆದ 1 ವಾರದಿಂದ ಉದ್ಧಮ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ನಿನ್ನೆ ತೀವ್ರ ಉಸಿರಾಟದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಮಗು ಮೃತಪಟ್ಟಿದೆ.
ಕೊರೊನಾ ಲಾಕ್ಡೌನ್ನಿಂದಾಗಿ ಮೇ ತಿಂಗಳಲ್ಲಿ ಅಬಕಾರಿ ಇಲಾಖೆ ಇತಿಹಾಸದಲ್ಲೇ ಕಂಡು ಕೇಳರಿಯದ ರೀತಿಯಲ್ಲಿ ಮದ್ಯ ಮಾರಾಟ ಕುಸಿತ ಕಂಡಿದೆ ಎಂಬ ಮಾಹಿತಿ ಸಿಕ್ಕಿದೆ. ಅದರಲ್ಲೂ ಬಿಯರ್ ಮಾರಾಟ ರಾಜ್ಯದಲ್ಲಿ ದಾಖಲೆ ಮಟ್ಟದಲ್ಲಿ ಕುಸಿತ ಕಂಡಿದೆ.
ಕೊರೊನಾ ಆಯ್ತು ಈಗ ಬ್ಲ್ಯಾಕ್ ಫಂಗಸ್ ಸೋಂಕು ಕೂಡ ಮಕ್ಕಳಿಗೆ ಹರಡಿದೆ. ನಗರದಲ್ಲಿ 14 ವರ್ಷದ ಬಾಲಕ ಮತ್ತು 11 ವರ್ಷದ ಬಾಲಕನಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಚಿತ್ರದುರ್ಗದ 11 ವರ್ಷದ ಬಾಲಕನಿಗೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ...
ಎನ್ಡಿಎ ಸರ್ಕಾರದ 7 ವರ್ಷಗಳ ಆಡಳಿತದ ಬಗ್ಗೆ ಮಾಡನಾಡಿದ ಮೋದಿ ಭಾರತ ಇತರೆ ರಾಷ್ಟ್ರಗಳ ಆಲೋಚನೆ ಮತ್ತು ಒತ್ತಡಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಬದಲಾಗಿ ತನ್ನ ಸಂಕಲ್ಪದ ಪ್ರಕಾರವೇ ಕೆಲಸ ಮಾಡುತ್ತಿದೆ. ಇದು ನಮಗೆ ಹೆಮ್ಮೆಯಾಗುತ್ತದೆ ಎಂದು ಹೇಳಿದರು.
ಕೊವಾಕ್ಸಿನ್ 2ನೇ ಡೋಸ್ ಈ ಕೆಳಗಿನ 27 ಆಯ್ದ ಆಸ್ಪತ್ರೆಗಳು/ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿದೆ. 2ನೇ ಡೋಸ್ ಗೆ ಕಾಯುತ್ತಿರುವವರು ನೇರವಾಗಿ ವಾಕ್ ಇನ್ ಮೂಲಕ ಬರಬಹುದು ಎಂದು ಬಿಬಿಎಂಪಿ ಕಮೀಷನರ್ ಫೇಸ್ಬುಕ್ ಮೂಲಕ ತಿಳಿಸಿದ್ದಾರೆ.
Mann Ki Baat in Kannada LIVE Updates ಮೋದಿ ಸರ್ಕಾರದ 7ನೇ ವರ್ಷದ ಶುಭ ಸಂದರ್ಭದಂದು 'ಮನ್ ಕಿ ಬಾತ್' ನ 77 ನೇ ಆವೃತ್ತಿಯ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ.
ಬೆಳಗಾವಿ ಮಹಾನಗರ ಪಾಲಿಕೆ ಕಿರಿಯ ಆರೋಗ್ಯ ನಿರೀಕ್ಷಕರ ದೂರಿನ ಮೇರೆಗೆ FIR ದಾಖಲಾಗಿದ್ದು ಶಹಾಪುರದ ಬಸವಣ ಗಲ್ಲಿಯ ಸುನಿಲ್ ಮುತಗೇಕರ್, ಕಲ್ಲಪ್ಪ ಶಹಾಪುರಕರ್, ಜಯಂತ ಜಾಧವ್, ಗಿರೀಶ್ ಧೋಂಗಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬಿಮ್ಸ್ನ ಕೊವಿಡ್ ವಾರ್ಡ್ ಸ್ಥಿತಿ ಕಂಡು ಡಿಸಿಎಂ ಲಕ್ಷ್ಮಣ ಸವದಿ ದಿಗ್ಬ್ರಾಂತರಾಗಿದ್ದಾರೆ. ಇದೇನು ಆಸ್ಪತ್ರೆಯೇ? ಎಂದು ಬಿಮ್ಸ್ ನಿರ್ದೇಶಕರಿಗೆ ಪ್ರಶ್ನಿಸಿದ್ದಾರೆ. ದನದ ಕೊಟ್ಟಿಗೆ ಇದಕ್ಕಿಂತಲೂ ಚೆನ್ನಾಗಿರುತ್ತೆ ಎಂದು ಗರಂ ಆಗಿದ್ದಾರೆ.