AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್​ ದೊಡ್ಡಮನಿ, ದಾವಣಗೆರೆ

Author - TV9 Kannada

basavaraj.doddamani@tv9.com

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

‘ಶ್ರೀರಾಮ ದಶರಥನ ಮಗ ಅಲ್ಲ’: ವಿವಾದಾತ್ಮಕ ಹೇಳಿಕೆ ಕೊಟ್ಟ ಪ್ರೊ. ಭಗವಾನ್

‘ಶ್ರೀರಾಮ ದಶರಥನ ಮಗ ಅಲ್ಲ’: ವಿವಾದಾತ್ಮಕ ಹೇಳಿಕೆ ಕೊಟ್ಟ ಪ್ರೊ. ಭಗವಾನ್

ಶ್ರೀರಾಮನ ಕುರಿತು ಹಿರಿಯ ಪ್ರೊ. ಕೆ.ಎಸ್. ಭಗವಾನ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶ್ರೀರಾಮ ದಶರಥನ ಮಗನಲ್ಲ ಎಂದು ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. ಶೂದ್ರರೆಲ್ಲರೂ ಬ್ರಾಹ್ಮಣರ ಗುಲಾಮರು ಎಂದು ಮನಸ್ಮೃತಿ ಹೇಳುತ್ತೆ. ಪಂಚಾಂಗವನ್ನು ಕೇಳೋದು ಮೊದಲು ಬಿಟ್ಟು ಬಿಡಿ, ಮೊದಲು ನಿಮ್ಮ ಮೇಲೆ‌ ನೀವು ನಂಬಿಕೆ ಬೆಳಸಿಕೊಳ್ಳುವುದನ್ನು ಅಭ್ಯಸಮಾಡಿ ಎಂದವರು ಕರೆ ನೀಡಿದ್ದಾರೆ.

ಜಗಳೂರಿನಲ್ಲಿ ಭುಗಿಲೆದ್ದ ಕುಡಿಯುವ ನೀರಿನ ಆಕ್ರೋಶ!: ಇಒ, ಪಿಡಿಒ ಅಧಿಕಾರಿಗಳನ್ನು ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿದ ಗ್ರಾಮಸ್ಥರು

ಜಗಳೂರಿನಲ್ಲಿ ಭುಗಿಲೆದ್ದ ಕುಡಿಯುವ ನೀರಿನ ಆಕ್ರೋಶ!: ಇಒ, ಪಿಡಿಒ ಅಧಿಕಾರಿಗಳನ್ನು ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿದ ಗ್ರಾಮಸ್ಥರು

ದಾವಣಗೆರೆ ಜಗಳೂರು ತಾಲೂಕಿನ ಮರೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದೆ. ಒಂದು ತಿಂಗಳಿನಿಂದ ನೀರಿಲ್ಲದೆ ಪರದಾಡುತ್ತಿರುವ ಗ್ರಾಮಸ್ಥರು, ಇದಕ್ಕೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡಿದ್ದಾರೆ. ಗ್ರಾಮಕ್ಕೆ ಭೇಟಿ ನೀಡಿದ್ದ ಜಗಳೂರು ತಾ.ಪಂ. ಇಒ ಮತ್ತು ಪಿಡಿಒ ಅವರನ್ನು ಕೂಡಿ ಹಾಕಿ ತೀವ್ರ ತರಾಟೆಗೆ ತೆಗೆದುಕೊಂಡರು. ಅಲ್ಲದೆ, ಬಿಲ್ ಕಲೆಕ್ಟರ್ ಮೇಲೆ ಹಲ್ಲೆ ನಡೆಸಿದ್ದಾರೆ. ನೀರಿನ ಅನುದಾನ ದುರ್ಬಳಕೆ ಆರೋಪವೂ ಕೇಳಿಬಂದಿದೆ.

ದಾವಣಗೆರೆಯ ಅನಾಥ ಮಕ್ಕಳಿಗೆ ವಿದೇಶಕ್ಕೆ ಹೋಗುವ ಭಾಗ್ಯ: ಇಟಲಿ ದಂಪತಿ ಮಡಿಲು ಸೇರಿದ 1 ವರ್ಷದ ಕಂದಮ್ಮ; ಕಣ್ಣೀರಿಟ್ಟ ವಿದೇಶಿ ದಂಪತಿ

ದಾವಣಗೆರೆಯ ಅನಾಥ ಮಕ್ಕಳಿಗೆ ವಿದೇಶಕ್ಕೆ ಹೋಗುವ ಭಾಗ್ಯ: ಇಟಲಿ ದಂಪತಿ ಮಡಿಲು ಸೇರಿದ 1 ವರ್ಷದ ಕಂದಮ್ಮ; ಕಣ್ಣೀರಿಟ್ಟ ವಿದೇಶಿ ದಂಪತಿ

ದಾವಣಗೆರೆಯ ಅನಾಥ ಮಕ್ಕಳಿಗೆ ಅಂತರಾಷ್ಟ್ರೀಯ ದತ್ತು ಪ್ರಕ್ರಿಯೆ ಮೂಲಕ ಹೊಸ ಬದುಕು ಲಭಿಸಿದೆ. ಇಟಲಿಯ ದಂಪತಿಗಳು ಒಂದು ವರ್ಷದ ಅನಾಥ ಮಗುವನ್ನು ದತ್ತು ಪಡೆದಿದ್ದು, ಮುಂದಿನ ದಿನಗಳಲ್ಲಿ ಅಮೆರಿಕಾ, ಇಂಗ್ಲೆಂಡ್ ಸೇರಿದಂತೆ ವಿವಿಧ ದೇಶಗಳಿಗೆ ಇನ್ನೂ ಮೂವರು ಮಕ್ಕಳು ತೆರಳಲಿದ್ದಾರೆ. CARA ಸಂಸ್ಥೆಯ ನಿಯಮಗಳಡಿ ನಡೆದ ಈ ಪ್ರಕ್ರಿಯೆಯು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸಂಪನ್ನವಾಗಿದ್ದು, ಹಲವು ಪೋಷಕರ ಕನಸು ನನಸಾಗಿದೆ.

ಮತ್ತೊಂದು ಸ್ವರೂಪ ಪಡೆದ ಜಮೀರ್ ಅಹ್ಮದ್ ಖಾನ್​ರದ್ದು ಎನ್ನಲಾದ ಆಡಿಯೋ  ಪ್ರಕರಣ

ಮತ್ತೊಂದು ಸ್ವರೂಪ ಪಡೆದ ಜಮೀರ್ ಅಹ್ಮದ್ ಖಾನ್​ರದ್ದು ಎನ್ನಲಾದ ಆಡಿಯೋ ಪ್ರಕರಣ

ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಮಾತನಾಡಿದ್ದು ಎನ್ನಲಾದ ಆಡಿಯೋ ಕಾಂಗ್ರೆಸ್​​​ನಲ್ಲಿ ಕಂಪನ ಸೃಷ್ಟಿಸಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ವೇಳೆ ಪಕ್ಷ ವಿರೋಧಿಯಾಗಿ ಜಮೀರ್ ನಡೆದುಕೊಂಡಿದ್ದಾರೆ ಎಂಬ ಆರೋಪಕ್ಕೆ ಬಲ ಬಂದಿದೆ. ಹೀಗಾಗಿ ಇದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಆಡಿಯೋ ಸಂಬಂಧ ಕೊನೆಗೂ ಎಫ್​​ಐಆರ್ ದಾಖಲಾಗಿದ್ದು, ಪೊಲೀಸರು ಆಡಿಯೋ ಮೂಲ ಪತ್ತೆಗೆ ಮುಂದಾಗಿದೆ.

ಹರಿಹರ ಪಂಚಮಸಾಲಿ ಮಠಕ್ಕೆ ಭಕ್ತರು ನೀಡಿದ್ದ 1 ಕೆ.ಜಿ ಚಿನ್ನ ನಾಪತ್ತೆ: ಟ್ರಸ್ಟಿಗಳ ಮೇಲೆ ಸೋಮಣ್ಣ ಬೇವಿನಮರ ಗಂಭೀರ ಆರೋಪ

ಹರಿಹರ ಪಂಚಮಸಾಲಿ ಮಠಕ್ಕೆ ಭಕ್ತರು ನೀಡಿದ್ದ 1 ಕೆ.ಜಿ ಚಿನ್ನ ನಾಪತ್ತೆ: ಟ್ರಸ್ಟಿಗಳ ಮೇಲೆ ಸೋಮಣ್ಣ ಬೇವಿನಮರ ಗಂಭೀರ ಆರೋಪ

ದಾವಣಗೆರೆಯ ಹರಿಹರ ಪಂಚಮಸಾಲಿ ಮಠದ ಆಡಳಿತ ಮಂಡಳಿ ವಿರುದ್ಧ ರಾಜ್ಯ ಗಡಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸೋಮಣ್ಣ ಬೇವಿನಮರದ ಗಂಭೀರ ಆರೋಪ ಮಾಡಿದ್ದಾರೆ. ಮಠಕ್ಕೆ ಸೇರಿದ ಸುಮಾರು 1.5 ಕೆಜಿ ಚಿನ್ನಾಭರಣಗಳ ಲೆಕ್ಕ ನಾಪತ್ತೆಯಾಗಿದ್ದು, ಟ್ರಸ್ಟಿಗಳು ಸತ್ಯ ಮುಚ್ಚಿಟ್ಟಿದ್ದಾರೆ ಎಂದಿದ್ದಾರೆ. 2008ರಲ್ಲಿ ಭಕ್ತರು ದಾನ ನೀಡಿದ ಚಿನ್ನದ ಆಭರಣಗಳನ್ನು ಟ್ರಸ್ಟಿಗಳು ಮರೆಮಾಚಿದ್ದು, ಕೇವಲ ನಗದು ಲೆಕ್ಕ ನೀಡಿದ್ದಾರೆ. ಮಠದ ಎಲ್ಲಾ ಆಸ್ತಿ ವಿವರಗಳನ್ನು ಬಹಿರಂಗಪಡಿಸಲು ಆಗ್ರಹಿಸಿದ್ದಾರೆ.

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೆನೆದು ಡಾ. ಎಂ.ಸಿ. ಸುಧಾಕರ್​ ಕಣ್ಣೀರು

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೆನೆದು ಡಾ. ಎಂ.ಸಿ. ಸುಧಾಕರ್​ ಕಣ್ಣೀರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ನೆನೆದು ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಸಿದ್ದರಾಮಯ್ಯ ಎಲ್ಲಾ ವರ್ಗಗಳನ್ನು ಸಮಾನವಾಗಿ ಕಂಡ, ಬಡವರ ಬಗ್ಗೆ ಕಾಳಜಿ ಹೊಂದಿದ್ದ ನಾಯಕ ಎಂದು ಅವರು ಶ್ಲಾಘಿಸಿದ್ದಾರೆ. ಸಿದ್ದರಾಮಯ್ಯ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಉಳಿದು, ಡಿ.ಕೆ. ಶಿವಕುಮಾರ್ ಅವರಿಗೆ ಬೆಂಬಲ ನೀಡುವ ಮೂಲಕ 2028ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಅವರು ತಿಳಿಸಿದ್ದಾರೆ.

ದಿನಕ್ಕೆ 400 ರೂ. ಆಸೆ ತೋರಿಸಿ 13 ಸಾವಿರ ಜನರನ್ನು ಲೂಟಿ ಮಾಡಿದ ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

ದಿನಕ್ಕೆ 400 ರೂ. ಆಸೆ ತೋರಿಸಿ 13 ಸಾವಿರ ಜನರನ್ನು ಲೂಟಿ ಮಾಡಿದ ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

ದಾವಣಗೆರೆಯಲ್ಲಿ ‘ನಾವಾಬಿಟ್‌’ ಎಂಬ ನಕಲಿ ಆ್ಯಪ್ ಮೂಲಕ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ 13,000 ಅಮಾಯಕ ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ತಮಿಳುನಾಡು ಮೂಲದ ಪ್ರಮುಖ ಆರೋಪಿಯನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ. 10,000 ರೂ. ಹೂಡಿಕೆಗೆ ನಿತ್ಯ 400 ರೂ. ಲಾಭದ ಆಮಿಷ ಒಡ್ಡಿ, ಸ್ಥಳೀಯ ಶಾಲಾ ಮುಖ್ಯೋಪಾಧ್ಯಾಪಕಿಯನ್ನು ಬಳಸಿಕೊಂಡು ಬಡ ಜನರನ್ನು ಲೂಟಿ ಮಾಡಿರುವ ಜಾಲ ಬಯಲಾಗಿದೆ.

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರ್ಟ್‌ಗೆ ಹರಿಹರ ಪೊಲೀಸರ ಅರ್ಜಿ!

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರ್ಟ್‌ಗೆ ಹರಿಹರ ಪೊಲೀಸರ ಅರ್ಜಿ!

ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಹರಿಹರದ ವಚನಾನಂದ ಸ್ವಾಮೀಜಿ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ತನಿಖಾಧಿಕಾರಿ ಸುರೇಶ್ ಸಗರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮಕ್ಕಳ ಮೇಲಿನ ದೌರ್ಜನ್ಯದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಕೆ ಮಾಡಲಾಗಿದ್ದು, ಮೇ 29 ರಂದು ದಾವಣಗೆರೆ ವಿಶೇಷ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಜಾಮೀನು ರದ್ದಾದರೆ ಸ್ವಾಮೀಜಿ ಬಂಧನ ಸಾಧ್ಯತೆ ಇದೆ.

ವಚನಾನಂದಶ್ರೀ ವಿರುದ್ಧದ ಪೋಕ್ಸೋ ಪ್ರಕರಣದ ತನಿಖಾಧಿಕಾರಿ ವರ್ಗಾವಣೆ, ಕಾರಣವೇನು?

ವಚನಾನಂದಶ್ರೀ ವಿರುದ್ಧದ ಪೋಕ್ಸೋ ಪ್ರಕರಣದ ತನಿಖಾಧಿಕಾರಿ ವರ್ಗಾವಣೆ, ಕಾರಣವೇನು?

ದಾವಣಗೆರೆಯ ಹರಿಹರ (Harihara) ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ (Vachananand Shri) ಸುತ್ತ ಈಗ ಪೋಕ್ಸೋ ಉರುಳು ಬಿಗಿಗೊಂಡಿದ್ದು, ಪ್ರಕರಣದ ತನಿಖೆ ಸಹ ಚುರುಕುಗೊಂಡಿದೆ. ಈಗಾಗಲೇ ವಚನಾನಂದಶ್ರೀಗಳನ್ನು ಠಾಣೆಗೆ ಕರೆಯಿಸಿ ಎರಡು ಬಾರಿ ವಿಚಾರಣೆಗೊಳಪಡಿಸಿದ್ದಾರೆ. ಇದರ ಮಧ್ಯೆ ಇದೀಗ ವಚನಾನಂದಶ್ರೀ ವಿರುದ್ಧದ ಪೋಕ್ಸೋ ಕೇಸ್‌ನ ತನಿಖಾಧಿಕಾರಿ ಏಕಾಏಕಿ ವರ್ಗಾವಣೆಗೊಂಡಿದ್ದಾರೆ. ತನಿಖೆ ನಡೆಯುವ ಮಧ್ಯೆದಲ್ಲೇ ವರ್ಗಾವಣೆ ಮಾಡಿರುವುದು ನಾನಾ ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ.

ವರುಣನ ಅಬ್ಬರಕ್ಕೆ ದಾವಣಗೆರೆಯಲ್ಲಿ ಅಲ್ಲೋಲ ಕಲ್ಲೋಲ: ಅಡಿಕೆ ತೋಟ ಸರ್ವನಾಶ

ವರುಣನ ಅಬ್ಬರಕ್ಕೆ ದಾವಣಗೆರೆಯಲ್ಲಿ ಅಲ್ಲೋಲ ಕಲ್ಲೋಲ: ಅಡಿಕೆ ತೋಟ ಸರ್ವನಾಶ

ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ವ್ಯಾಪಕ ಅವಾಂತರ ಸೃಷ್ಟಿಸಿದೆ. ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಗ್ರಾಮದಲ್ಲಿ ಶಾಂತಗೌಡರ ಅಡಿಕೆ ತೋಟ ಸೇರಿ ನೂರಾರು ಅಡಿಕೆ ಮರಗಳು ನೆಲಕ್ಕುರುಳಿವೆ. ಮಳೆಗಾಳಿಗೆ ದೇವಸ್ಥಾನದ ತಗಡಿನ ಶೀಟ್‌ಗಳು ಸಹ ಹಾರಿಹೋಗಿದ್ದು, ಅಪಾರ ನಷ್ಟ ಸಂಭವಿಸಿದೆ.

ದಾವಣಗೆರೆ: ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

ದಾವಣಗೆರೆ: ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

ದಾವಣಗೆರೆಯಲ್ಲಿ ಶ್ರೀಮಂತ ಯುವಕರನ್ನು ಬಲೆಗೆ ಬೀಳಿಸಿ ಸುಲಿಗೆ ಮಾಡುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್‌ನ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ ಚನ್ನಗಿರಿಯಲ್ಲಿ ಸಾಲ ಹಾಗೂ ಕೌಟುಂಬಿಕ ದ್ವೇಷದ ಹಿನ್ನೆಲೆ ಗ್ರಾ.ಪಂ. ಸದಸ್ಯನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಗ್ರಾ.ಪಂ. ಸದಸ್ಯನ ಸೋದರತ್ತೆಯೇ ಆತನನ್ನು ಕೊಲೆ ಮಾಡಿಸಿರುವ ಆರೋಪ ಕೇಳಿಬಂದಿದೆ.

ಶಾಸಕರಾದ ಬಳಿಕ ಮೊದಲ ಸಭೆಗೆ ಲ್ಯಾಪ್​​ಟಾಪ್ ಹಿಡಿದು ಬಂದ ಸಮರ್ಥ್, ಕುಡಿಯುವ ನೀರಿಗೆ ಒತ್ತು

ಶಾಸಕರಾದ ಬಳಿಕ ಮೊದಲ ಸಭೆಗೆ ಲ್ಯಾಪ್​​ಟಾಪ್ ಹಿಡಿದು ಬಂದ ಸಮರ್ಥ್, ಕುಡಿಯುವ ನೀರಿಗೆ ಒತ್ತು

ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಮರ್ಥ್ ಶಾಮನೂರು (Samarth Shamanur) ಮೊದಲ ಬಾರಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ದಾವಣಗೆರೆ (Davanagere) ನಗರದ ಅರುಣಾ ಸರ್ಕಲ್ ಬಳಿ ಇರುವ ಪಶುಸಂಗೋಪನೆ ಇಲಾಖೆ ಸಭಾಂಗಣದಲ್ಲಿ ಸಭೆ ನಡೆದಿದ್ದು, ಅಧಿಕಾರಿಗಳು ನೀಡಿದ ಮಾಹಿತಿಯನ್ನು ಲ್ಯಾಪ್​ಟಾಪ್​​ನಲ್ಲಿ ದಾಖಲು ಮಾಡಿಕೊಂಡರು. ಇನ್ನು ಸಭೆಯಲ್ಲಿ ಪ್ರಮುಖವಾಗಿ ಯಾವ ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎನ್ನುವ ಬಗ್ಗೆ ಚರ್ಚಿಸಿದ್ದು,‌ ತಕ್ಷಣಕ್ಕೆ ನಾಲ್ಕು ಕಡೆ ಬೋರ್ ವೆಲ್ ಕೊರೆಯಿಸಲು ನಿರ್ಧರಿಸಲಾಗಿದೆ.