ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.
ಬೆಂಗಳೂರಿನಲ್ಲಿ ಅರ್ಧಕ್ಕರ್ಧ ಇಳಿದ ತ್ರಿಬಲ್ ರೈಡಿಂಗ್ ಕೇಸ್: ಆದ್ರೆ ಮಿಡ್‌ನೈಟ್ ಹೀರೋಗಿರಿಗೆ ಬೀದ್ದಿಲ್ಲ ಬ್ರೇಕ್
ಬೆಂಗಳೂರಿನಲ್ಲಿ AI ಕ್ಯಾಮೆರಾಗಳ ಅಳವಡಿಕೆ ಹಾಗೂ ವಿಶೇಷ ತಪಾಸಣೆಯಿಂದಾಗಿ 2024 ಕ್ಕೆ ಹೋಲಿಸಿದರೆ ತ್ರಿಬಲ್ ರೈಡಿಂಗ್ ಪ್ರಕರಣಗಳು ಗಣನೀಯವಾಗಿ ಕುಸಿದಿವೆ. ಆದಾಗ್ಯೂ, ಬಿಟಿಎಂ ಲೇಔಟ್, ಕೋರಮಂಗಲ ಸೇರಿದಂತೆ ಪ್ರಮುಖ ಹಾಟ್‌ಸ್ಪಾಟ್‌ಗಳಲ್ಲಿ ತಡರಾತ್ರಿ 10 ರಿಂದ ಮುಂಜಾನೆ 2 ಗಂಟೆಯ ಅವಧಿಯಲ್ಲಿ ಯುವಕರು ಹೀರೋಗಿರಿಗಾಗಿ ನಿಯಮ ಉಲ್ಲಂಘಿಸುತ್ತಿರುವುದು ಸಂಚಾರಿ ಪೊಲೀಸರಿಗೆ ಇಂದಿಗೂ ದೊಡ್ಡ ಸವಾಲಾಗಿ ಉಳಿದಿದೆ.
- Bhavana Hegde
- Updated on: Jun 10, 2026
- 2:55 pm
ಅಪ್ರಾಪ್ತನಿಗೆ ಸಿಗರೇಟ್ ಸೇದಿಸಿ, ಬ್ಲಾಕ್‌ಮೇಲ್ ಮಾಡಿ 120 ಗ್ರಾಂ ಬಂಗಾರ ದೋಚಿದ ಖದೀಮರ ಬಂಧನ!
ಅಪ್ರಾಪ್ತ ಬಾಲಕನಿಗೆ ಸಿಗರೇಟ್ ಸೇದುವ ದುಶ್ಚಟ ಹಿಡಿಸಿ ಬರೋಬ್ಬರಿ 120 ಗ್ರಾಂ ಬಂಗಾರ ದೋಚಿದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ. ಈ ಹಿನ್ನೆಲೆ ಬಸವರಾಜ್ ಅಂಗಡಿ ಮತ್ತು ನವೀನ್ ಎಂಬುವವರನ್ನು ಬಂಧಿಸಲಾಗಿದ್ದು, ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಮೊದಲು ಬಾಲಕನಿಗೆ ಸಿಗರೇಟ್ ಅಭ್ಯಾಸ ಮಾಡಿಸಿ, ಆ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದರು. ನಂತರ, ಈ ವೀಡಿಯೊವನ್ನು ನಿನ್ನ ತಂದೆಗೆ ತೋರಿಸುತ್ತೇವೆ ಎಂದು ಬೆದರಿಸಿ ಹಣಕ್ಕಾಗಿ ಪೀಡಿಸಿದ್ದರು.
- Bhavana Hegde
- Updated on: Jun 10, 2026
- 2:22 pm
Kottiyoor Temple Incident: ಕನ್ನಡಿಗರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕನ್ನಡದಲ್ಲೇ ಮನವಿ ಮಾಡಿದ ಕೇರಳಂ ಡಿಐಜಿ ಯತೀಶ್ ಚಂದ್ರ!
ಕೇರಳಂನ ಕೊಟ್ಟಿಯೂರು ದೇವಸ್ಥಾನದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ, ಕಣ್ಣೂರು ವಲಯದ ಡಿಐಜಿ ಯತೀಶ್ ಚಂದ್ರ ಅವರು ಕನ್ನಡದಲ್ಲೇ ವೀಡಿಯೊ ಸಂದೇಶ ಬಿಡುಗಡೆ ಮಾಡಿದ್ದಾರೆ. ದೇವಸ್ಥಾನದಲ್ಲಿ ಕನ್ನಡ ಬೋರ್ಡ್‌ಗಳು ಹಾಗೂ ಅನೌನ್ಸ್‌ಮೆಂಟ್ ವ್ಯವಸ್ಥೆ ಮಾಡಲಾಗಿದ್ದು, ಭಕ್ತರು ಆತಂಕವಿಲ್ಲದೆ ಬರಬಹುದು ಎಂದು ದಾವಣಗೆರೆ ಮೂಲದ ಈ ಖಡಕ್ ಐಪಿಎಸ್ ಅಧಿಕಾರಿ ಭರವಸೆ ನೀಡಿದ್ದಾರೆ. ಇವರ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
- Bhavana Hegde
- Updated on: Jun 10, 2026
- 12:26 pm
ಗ್ರಾಹಕರ ಗಮನಕ್ಕೆ: ಇಂದಿನಿಂದ 21 ದಿನಗಳ ಕಾಲ ಬೆಸ್ಕಾಂನ ಈ ಎಲ್ಲಾ ಸೇವೆಗಳಿಗೆ ಬ್ರೇಕ್!
ಗ್ರಾಹಕರ ಡೇಟಾವನ್ನು ಹೊಸ ಸಾಫ್ಟ್‌ವೇರ್‌ಗೆ ವರ್ಗಾಯಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಜೂನ್ 10 ರಿಂದ 30 ರವರೆಗೆ ಬೆಸ್ಕಾಂನ ಎಲ್ಲಾ ಆನ್‌ಲೈನ್ ಸೇವೆಗಳನ್ನು 21 ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ಹೊಸ ಸಂಪರ್ಕ, ಹೆಸರು ಬದಲಾವಣೆ ಸೇವೆಗಳು ಲಭ್ಯವಿರುವುದಿಲ್ಲ. ಆದರೆ ಗ್ರಾಹಕರು ಫೋನ್‌ಪೇ, ಗೂಗಲ್ ಪೇ ಮೂಲಕ ಎಂದಿನಂತೆ ವಿದ್ಯುತ್ ಬಿಲ್ ಪಾವತಿಸಬಹುದಾಗಿದೆ.
- Bhavana Hegde
- Updated on: Jun 10, 2026
- 10:28 am
Bengaluru Air Quality: ಮಳೆ ಬೆನ್ನಲ್ಲೇ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ
ಜೂನ್ 10 ರ ಇಂದಿನ ವರದಿಯ ಪ್ರಕಾರ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳ ವಾಯು ಗುಣಮಟ್ಟ ಸೂಚ್ಯಂಕ (AQI) ಗಣನೀಯವಾಗಿ ಸುಧಾರಿಸಿದೆ. ಇತ್ತೀಚಿನ ಮಳೆಯಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಮಾಲಿನ್ಯದ ಮಟ್ಟ ಕುಸಿದಿದ್ದು, ಗಾಳಿಯ ಗುಣಮಟ್ಟ 'ಉತ್ತಮ' ಶ್ರೇಣಿಯಲ್ಲಿದೆ. ಮೈಸೂರು, ಮಂಗಳೂರು, ಗದಗ ಹಾಗೂ ಇತರೆ ಜಿಲ್ಲೆಗಳ ಇಂದಿನ ನಿಖರವಾದ AQI ವಿವರಗಳು ಈ ವರದಿಯಲ್ಲಿವೆ.
- Bhavana Hegde
- Updated on: Jun 10, 2026
- 8:17 am
Karnataka Weather Forecast: ರಾಜ್ಯದ ಈ ಜಿಲ್ಲೆಗಳಲ್ಲಿ ಜೋರಾಗಲಿದೆ ಮಳೆಯ ಅಬ್ಬರ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ!
Monsoon 2026: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಹವಾಮಾನ ಇಲಾಖೆಯು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಇನ್ನು ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಮುನ್ನೆಚ್ಚರಿಕೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆಡೆ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ಬಲವಾದ ಗಾಳಿ ಬೀಸಲಿದೆ.
- Bhavana Hegde
- Updated on: Jun 10, 2026
- 7:54 am
Daily Devotional: ಹುಟ್ಟು ಹಬ್ಬವನ್ನು ಹೇಗೆ ಆಚರಿಸಬೇಕು ಗೊತ್ತಾ?
ಟಿವಿ9 ಕನ್ನಡ ಡಿಜಿಟಲ್ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಹುಟ್ಟು ಹಬ್ಬವನ್ನ ಹೇಗೆ ಆಚರಿಸಬೇಕು ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜನ್ಮದಿನಾಚರಣೆಯು ಕೇಕ್ ಕತ್ತರಿಸುವುದು, ಮೇಣದಬತ್ತಿ ಆರಿಸುವುದು, ಬಲೂನ್ ಸಿಡಿಸುವುದು ಮುಂತಾದ ಹೊಸ ಪದ್ಧತಿಗಳಿಂದ ಕೂಡಿದೆ. ಆದರೆ, ಹಿಂದೂ ಸಂಪ್ರದಾಯದಲ್ಲಿ ಈ ರೀತಿಯ ಆಚರಣೆಗಳಿಗೆ ಹೆಚ್ಚು ಪ್ರಾಮುಖ್ಯತೆ ಇಲ್ಲ. ಜನ್ಮದಿನವು ಕೇವಲ ಮೋಜಿನ ದಿನವಲ್ಲ, ಬದಲಿಗೆ ಆತ್ಮಾವಲೋಕನ ಮತ್ತು ಸಾರ್ಥಕತೆಯ ದಿನ ಎಂದು ಪರಿಗಣಿಸಲಾಗುತ್ತದೆ.
- Bhavana Hegde
- Updated on: Jun 10, 2026
- 7:05 am
Horoscope Today: ಇಂದು ಈ ರಾಶಿಯವರು ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಗಮನ ಕೊಡಿ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 10, ವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ದಶಮಿ, ಉತ್ತರಾಭಾದ್ರ ಮತ್ತು ರೇವತಿ ನಕ್ಷತ್ರಗಳೊಂದಿಗೆ ಸೌಭಾಗ್ಯ ಯೋಗ, ವಣಿಕ ಕರಣ ಇರತಕ್ಕಂತಹ ಈ ದಿನದ ಪಂಚಾಂಗ ವಿವರಗಳನ್ನು ಗುರೂಜಿ ನೀಡಿದ್ದಾರೆ.
- Bhavana Hegde
- Updated on: Jun 10, 2026
- 7:03 am
Bengaluru Air Quality: ಬೆಂಗಳೂರಿನಲ್ಲಿ ಗಣನೀಯವಾಗಿ ಸುಧಾರಿಸಿದ ಗಾಳಿಯ ಗುಣಮಟ್ಟ
ಮುಂಗಾರು ಮಳೆಯ ಪ್ರಭಾವದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ 'ಉತ್ತಮ' ಮಟ್ಟಕ್ಕೆ ಸುಧಾರಿಸಿದೆ. ಬೆಂಗಳೂರಿನಲ್ಲಿ ಸರಾಸರಿ AQI 37 ರಷ್ಟಿದ್ದು, ರಾಮನಗರ ಮತ್ತು ಚಿಕ್ಕಮಗಳೂರಿನಲ್ಲಿ ಅತ್ಯಂತ ಸ್ವಚ್ಛ ಗಾಳಿ ದಾಖಲಾಗಿದೆ. ಮಾಲಿನ್ಯ ಮುಕ್ತ ವಾತಾವರಣದ ಸಂಪೂರ್ಣ ರಿಯಲ್-ಟೈಮ್ ಅಪ್ಡೇಟ್ ಇಲ್ಲಿದೆ.
- Bhavana Hegde
- Updated on: Jun 9, 2026
- 8:05 am
Karnataka Weather Forecast: ಚಿಕ್ಕಮಗಳೂರು ಸೇರಿದಂತೆ 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ! ರಾಜ್ಯಾದ್ಯಂತ ಮುಂದಿನ 3 ದಿನ ಭಾರಿ ಮಳೆ
Monsoon 2026: ಕರ್ನಾಟಕದ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿಯ 3 ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ರೆಡ್ ಅಲರ್ಟ್' ಘೋಷಿಸಿದೆ. ಮುಂದಿನ 3 ದಿನ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾಡಳಿತ 24 ಗಂಟೆಗಳ ತುರ್ತು ಸಹಾಯವಾಣಿ ಆರಂಭಿಸಿದೆ. ಸಾರ್ವಜನಿಕರು ನದಿ ತೀರ ಹಾಗೂ ತಗ್ಗು ಪ್ರದೇಶಗಳಿಗೆ ತೆರಳದಂತೆ ಡಿಸಿ ಭಂವರ್ ಸಿಂಗ್ ಮೀನಾ ಆದೇಶಿಸಿದ್ದಾರೆ.
- Bhavana Hegde
- Updated on: Jun 9, 2026
- 7:44 am
Daily Devotional: ಮೊಬೈಲ್ ನಂಬರ್ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಟಿವಿ9 ಕನ್ನಡ ಡಿಜಿಟಲ್ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮೊಬೈಲ್ ನಂಬರ್ನ ಕೊನೇ 2 ಸಂಖ್ಯೆ ಯಾವುದಿರಬೇಕು? ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಸಂಖ್ಯಾಶಾಸ್ತ್ರದ ಪ್ರಕಾರ, ನಿಮ್ಮ ಮೊಬೈಲ್ ಸಂಖ್ಯೆಯ ಕೊನೆಯ ಎರಡು ಅಂಕೆಗಳು ನಿಮ್ಮ ಅದೃಷ್ಟ ಮತ್ತು ವ್ಯಕ್ತಿತ್ವದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತವೆ. ಜಗತ್ತು ಗ್ರಹಗಳ ಅಧೀನದಲ್ಲಿದ್ದು, ಗ್ರಹಗಳು ಸಂಖ್ಯೆಗಳ ಅಧೀನದಲ್ಲಿವೆ. ಈ ಅಂಕೆಗಳು ನಮ್ಮ ಬದುಕಿನ ಅನೇಕ ನಿರ್ಣಾಯಕ ಅಂಶಗಳನ್ನು ಪ್ರಭಾವಿಸುತ್ತವೆ.
- Bhavana Hegde
- Updated on: Jun 9, 2026
- 7:04 am
Horoscope Today: ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 09, ಮಂಗಳವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸದಲ್ಲಿ ರವಿ ವೃಷಭ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚರಿಸಲಿದ್ದಾನೆ. ಇಂದು ಸುಬ್ರಹ್ಮಣ್ಯ ಮತ್ತು ನಾಗಗಳ ಆರಾಧನೆಗೆ ಪ್ರಾಶಸ್ತ್ಯವಿದೆ. ಜೂನ್ 9 ರಂದು ಜನ್ಮದಿನ ಅಥವಾ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವವರಿಗೆ ಶುಭವಾಗಲಿ ಎಂದು ಗುರೂಜಿ ಹಾರೈಸಿದ್ದಾರೆ.
- Bhavana Hegde
- Updated on: Jun 9, 2026
- 7:02 am