ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ: ಮನೆಗೆ ತೆರಳಲು ವಿದ್ಯಾರ್ಥಿಗಳ ಪರದಾಟ
ಚಿಕ್ಕಬಳ್ಳಾಪುರದಲ್ಲಿ ಅನಿರೀಕ್ಷಿತ ಭಾರೀ ಮಳೆ ಸುರಿದಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಸ್ ನಿಲ್ದಾಣಕ್ಕೆ ತಲುಪಲು ಪರದಾಡಿದರು. ಮಳೆಯಲ್ಲಿ ತೋಯ್ದು ಓಡಿದರು. ಏಕಾಏಕಿ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡರೂ, ಈ ಮಳೆ ರೈತರ ಮೊಗದಲ್ಲಿ ಸಂತಸ ತಂದಿದೆ. ಇದು ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮುಂಗಾರಿನ ನಿರೀಕ್ಷೆ ಹುಟ್ಟಿಸಿದೆ.
- Bheemappa Patil
- Updated on: Sep 28, 2026
- 5:33 pm
ಚಿಕ್ಕಬಳ್ಳಾಪುರದಲ್ಲಿ ಪ್ರಕಾಶ್ ರಾಜ್ ಭಾಷಣಕ್ಕೆ ನಿರ್ಬಂಧ: ಮೆರವಣಿಗೆಗೆ ಚಾಲನೆ ನೀಡಿ ವಾಪಸ್ ಹೋದ ನಟ
ನಟ ಪ್ರಕಾಶ್ ರಾಜ್ ಭಾಷಣಕ್ಕೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿಯಲ್ಲಿ ನಿರ್ಬಂಧ ಹೇರಲಾಗಿದೆ. ಡಿವೈಎಫ್‌ಐ ಸಮಾವೇಶದಲ್ಲಿ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ನೆಪವೊಡ್ಡಿ ಭಾಷಣಕ್ಕೆ ತಡೆ ಒಡ್ಡಿದ್ದು, ಮುಚ್ಚಳಿಕೆ ಬರೆಸಿಕೊಂಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇದು ತಪ್ಪು, ಅಧಿಕಾರಿಗಳ ಸರ್ವಾಧಿಕಾರ ಎಂದು ಪ್ರಕಾಶ್ ರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Bheemappa Patil
- Updated on: Sep 26, 2026
- 5:48 pm
ಸಾಮಾಜಿಕ ಜಾಲತಾಣದಲ್ಲಿ ಭಯೋತ್ಪಾದನಾ ಚರ್ಚೆ: ಟೆಲಿಗ್ರಾಂ ಚಾಟಿಂಗ್‌ನಲ್ಲಿ ಸಿಕ್ಕಿಬಿತ್ತು ಶಂಕಿತರ ಅಸಲಿ ಟಾರ್ಗೆಟ್
ಕರ್ನಾಟಕ ರಾಜ್ಯ ಗುಪ್ತಚರ ಇಲಾಖೆಯು ಚಿಕ್ಕಬಳ್ಳಾಪುರದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಭಯೋತ್ಪಾದನಾ ಕೃತ್ಯಗಳಿಗೆ ಸಂಚು ರೂಪಿಸುತ್ತಿದ್ದ ಬೃಹತ್ ಜಾಲವನ್ನು ಯಶಸ್ವಿಯಾಗಿ ಭೇದಿಸಿದೆ. ಮುಖ್ಯ ಆರೋಪಿ ಶಬ್ಬೀರ್ ಮತ್ತು ಟೆಲಿಗ್ರಾಂ ಅಡ್ಮಿನ್ ಸಲಾಮಿನ್ ಅಲಿಯಾಸ್ ಸಲ್ಮಾನ್ ಬಂಧನಕ್ಕೊಳಗಾಗಿದ್ದಾರೆ. ಇವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS Section 113) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
- Bheemappa Patil
- Updated on: Sep 26, 2026
- 3:17 pm
ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ಆರೋಪ: ಚಿಕ್ಕಬಳ್ಳಾಪುರದಲ್ಲಿ ಇಬ್ಬರ ಬಂಧನ
ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಟೆಲಿಗ್ರಾಂ ಗ್ರೂಪ್ ಮೂಲಕ ಸಂಚು ರೂಪಿಸುತ್ತಿದ್ದ ಆರೋಪದಡಿ ಚಿಕ್ಕಬಳ್ಳಾಪುರದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ಇಬ್ಬರಿಗೂ ಸದ್ಯಕ್ಕೆ ಭಯೋತ್ಪಾದನೆ ಹಿನ್ನೆಲೆ ಇಲ್ಲ. ಹೀಗಿದ್ದರೂ ತನಿಖೆ ತೀವ್ರಗೋಳಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಎಸ್ಪಿ ಪದ್ಮಿನಿ ಸಾಹೂ ತಿಳಿಸಿದ್ದಾರೆ.
- Bheemappa Patil
- Updated on: Sep 25, 2026
- 11:09 am
ನ್ಯಾಯ ಕೇಳಲು ಬಂದ ಜನರಿಗೆ ದೊಡ್ಡಬಳ್ಳಾಪುರ ಇನ್ಸ್‌ಪೆಕ್ಟರ್ ಆವಾಜ್: ‘ಮಾಧ್ಯಮಗಳ ಮುಂದೆ ಪೋಸ್ ನೀಡಿದರೆ ಗ್ರಹಚಾರ ಬಿಡಿಸ್ತೇನೆ’ ಎಂದು ಬೆದರಿಕೆ
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ನವೀನ್ ಕುಮಾರ್ ಅವರು ರಸ್ತೆ ಒತ್ತುವರಿ ಕುರಿತು ದೂರು ನೀಡಲು ಬಂದ ಸಾರ್ವಜನಿಕರ ಮೇಲೆ ಆವಾಜ್ ಹಾಕಿದ ಘಟನೆ ನಡೆದಿದೆ. ಸಮಸ್ಯೆ ಬಗ್ಗೆ ಮಾತನಾಡಿದ ಜನರನ್ನು ಬೆದರಿಸಿ, "ಇಡಿಯಟ್ಸ್" ಎಂದು ಜರಿದಿದ್ದು, ಸಾರ್ವಜನಿಕರ ಧ್ವನಿಯನ್ನು ಅಡಗಿಸಿದ್ದಾರೆ ಎಂದು ಆರೋಪಿಸಲಾಗಿದೆ.
- Bheemappa Patil
- Updated on: Sep 24, 2026
- 1:24 pm
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ: ಚಿಕ್ಕಬಳ್ಳಾಪುರದಲ್ಲಿ ಜೆಸಿಬಿ ಗರ್ಜನೆ
ಚಿಕ್ಕಬಳ್ಳಾಪುರ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ 69 ರ ಎರಡು ಬದಿಗಳಲ್ಲಿನ ವಾಣಿಜ್ಯ ಕಟ್ಟಡಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು NHAI ಕೈಗೊಂಡಿದೆ. ಎಇಇ ರಾಜಾರೆಡ್ಡಿ ನೇತೃತ್ವದಲ್ಲಿ, ಭಾರೀ ಪೊಲೀಸ್ ಬಂದೋಬಸ್ತ್‌ನೊಂದಿಗೆ ಜೆಸಿಬಿಗಳು ಕಾರ್ಯನಿರ್ವಹಿಸುತ್ತಿವೆ. ಮಾಲೀಕರು ಕಾಲಾವಕಾಶ ಕೇಳುತ್ತಿದ್ದರೂ, NHAI ಈಗಾಗಲೇ ಸಾಕಷ್ಟು ನೋಟಿಸ್‌ಗಳನ್ನು ನೀಡಿರುವುದಾಗಿ ಸ್ಪಷ್ಟಪಡಿಸಿದೆ.
- Bheemappa Patil
- Updated on: Sep 23, 2026
- 4:27 pm
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್ಗೆ ಡಿಸಿ ಕ್ಲಾಸ್: ಕಾರಣ ಇಲ್ಲಿದೆ
ಚಿಕ್ಕಬಳ್ಳಾಪುರ ಡಿಸಿ ಪ್ರಭು ಅವರು ಶಿಡ್ಲಘಟ್ಟ ತಹಶೀಲ್ದಾರ್ ಕುಮಾರಿ ಗಗನ ಸಿಂಧು ಅವರನ್ನು ಸಾರ್ವಜನಿಕರ ಸಮ್ಮುಖದಲ್ಲಿ ತರಾಟೆಗೆ ತೆಗೆದುಕೊಂಡರು. ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡದಿರುವುದು, ಅರ್ಜಿಗಳಿಗೆ ಹಿಂಬರಹ ನೀಡದಿರುವುದು, ಕಡತಗಳ ವಿಲೇವಾರಿ ಮಾಡದಿರುವುದು ಮತ್ತು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕೆ ಡಿಸಿ ಅಸಮಾಧಾನ ವ್ಯಕ್ತಪಡಿಸಿದರು. ಇಂತಹ ನಿರ್ಲಕ್ಷ್ಯದಿಂದ ಜಿಲ್ಲಾಡಳಿತಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಎಚ್ಚರಿಕೆ ನೀಡಿದರು.
- Bheemappa Patil
- Updated on: Sep 20, 2026
- 9:32 pm
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಚಿಕ್ಕಬಳ್ಳಾಪುರದ 182 ಶಿಕ್ಷಕರಿಗೆ ನೊಟೀಸ್
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚಿಕ್ಕಬಳ್ಳಾಪುರ ತಾಲೂಕಿನ 71 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ 357 ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ಹಾಗೂ ಗಣಿತದ ಕನಿಷ್ಠ ಜ್ಞಾನ ಇಲ್ಲದಿರುವುದು ಕಂಡು ಬಂದಿದ್ದು, 71 ಶಾಲೆಗಳ 182 ಜನ ಶಿಕ್ಷಕರಿಗೆ ನೊಟೀಸ್ ಜಾರಿ ಮಾಡಲಾಗಿದೆ. ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಸೂಚನೆ ಮೇರೆಗೆ ಶಿಕ್ಷಣ ಇಲಾಖೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 1208 ವಿದ್ಯಾರ್ಥಿಗಳಿಗೆ 8/9/2026 ರಂದು ಪರೀಕ್ಷೆ ನಡೆಸಲಾಗಿತ್ತು. ಆದ್ರೆ, ಪರೀಕ್ಷೆಯಲ್ಲಿ 357 ವಿದ್ಯಾರ್ಥಿಗಳಿಗೆ ಕನಿಷ್ಠ ಕಲಿಕೆ ಇಲ್ಲದ ವಿಚಾರ ಬಯಲಾಗಿದೆ. ಇದಕ್ಕೆ ಶಾಸಕ ಪ್ರದೀಪ್ ಈಶ್ವರ್ ಬೇಸರಗೊಂಡಿದ್ದು, ಕರ್ನಾಟಕ ಕಡ್ಡಾಯ ಶಿಕ್ಷಣ ಕಾಯ್ದೆ ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷ್ಯದಡಿ ಶಿಕ್ಷಕರಿಗೆ ನೊಟೀಸ್ ಜಾರಿ ಮಾಡಲಾಗಿದೆ.
- Bheemappa Patil
- Updated on: Sep 19, 2026
- 10:12 pm
ಗೂಗಲ್, ಯೂಟ್ಯೂಬ್ ನೋಡಿ ಕೊಲೆಗೆ ಪ್ಲಾನ್: ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಸೆಪ್ಟೆಂಬರ್ 5ರಂದು ನಡೆದ ನಾಗರಾಜು ಕೊಲೆ ಪ್ರಕರಣದಲ್ಲಿ ಆರೋಪಿ ಆದಿನಾರಾಯಣನನ್ನು ಪತ್ತೆಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಕೊಲೆಗೆ ಎರಡು ವರ್ಷಗಳಿಂದ ಸಿದ್ಧತೆ ನಡೆಸಿ, ಗೂಗಲ್, ಯೂಟ್ಯೂಬ್ ಬಳಸಿ ತಂತ್ರಜ್ಞಾನದ ಬಗ್ಗೆ ಅಧ್ಯಯನ ಮಾಡಿದ್ದ ಆರೋಪಿ 12 ಸಿಮ್‌ಗಳನ್ನು ಬಳಸಿ ಪೊಲೀಸರಿಗೆ ಸವಾಲಾಗಿದ್ದಾನೆ.
- Bheemappa Patil
- Updated on: Sep 12, 2026
- 9:44 pm
ಇನ್ಸ್ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಚಿಕ್ಕಬಳ್ಳಾಪುರದಲ್ಲಿ 28 ವರ್ಷದ ಚೈತ್ರಾ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಗಂಡನ ಕಿರುಕುಳದಿಂದ ಬೇಸತ್ತು ಇಬ್ಬರು ಮಕ್ಕಳೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಚೈತ್ರಾ, ಪ್ರಿಯಕರ ಶಬ್ಬೀರ್ ಜೊತೆ ಬದುಕುತ್ತಿದ್ದರು. ಆಕೆ ಸಾವಿಗೀಡಾದ ಬಳಿಕ ಪ್ರಿಯಕರ ನಾಪತ್ತೆಯಾಗಿದ್ದು, ಹತ್ಯೆ ಶಂಕೆ ವ್ಯಕ್ತವಾಗಿದೆ. ನಂದಿಗಿರಿಧಾಮ ಪೊಲೀಸರು ತನಿಖೆ ನಡೆಸುತ್ತಿದ್ದು, ಚೈತ್ರಾ ಮಕ್ಕಳು ತಬ್ಬಲಿಗಳಾಗಿದ್ದಾರೆ.
- Bheemappa Patil
- Updated on: Sep 11, 2026
- 1:10 pm
ಚಿಕ್ಕಬಳ್ಳಾಪುರದಲ್ಲಿ 100 ಕೋಟಿ ರೂ. ಮೌಲ್ಯದ ಕೆರೆ ಜಮೀನು ಹಗರಣ ಬಯಲು!
ಚಿಕ್ಕಬಳ್ಳಾಪುರದ ಅಣಕನೂರು ಗ್ರಾಮದ 100 ಕೋಟಿ ರೂ. ಮೌಲ್ಯದ 24 ಎಕರೆ ಸರ್ಕಾರಿ ಕೆರೆ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಖಾಸಗಿ ವ್ಯಕ್ತಿಗೆ ಇ-ಖಾತೆ ಮಾಡಿಕೊಟ್ಟಿದ್ದ ನಗರಸಭೆ ಅಧಿಕಾರಿಗಳ ಅಕ್ರಮ ತನಿಖೆಯಲ್ಲಿ ಸಾಬೀತಾಗಿದೆ. ಹಗರಣದಲ್ಲಿ ಭಾಗಿಯಾದ ಪೌರಾಯುಕ್ತ ಮನ್ಸೂರ್ ಅಲಿ ಸೇರಿದಂತೆ ಇತರ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪ್ರಭು ಜಿ. ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ.
- Bheemappa Patil
- Updated on: Sep 11, 2026
- 8:31 am
ಹೆಲ್ಮೆಟ್ ಹಾಕಿಕೊಂಡು ಬಂದು ಬರ್ಬರ ಹತ್ಯೆ: ಬಾರ್ ಬಳಿ ನಾಗರಾಜ್ ಎಂಬ ವ್ಯಕ್ತಿಗೆ ಡ್ರ್ಯಾಗರ್‌ನಿಂದ ಇರಿದು ಕೊಲೆ
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಘಂಟಂವಾರಪಲ್ಲಿ ಗ್ರಾಮದಲ್ಲಿ ನಾಗರಾಜ್ ಎಂಬ ವ್ಯಕ್ತಿಯನ್ನು ಮದ್ಯಪಾನ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಡ್ರ್ಯಾಗರ್‌ನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಘಟನೆಯ ನಂತರ ಆರೋಪಿ ಸ್ಕೂಟರ್‌ನಲ್ಲಿ ಪರಾರಿಯಾಗಿದ್ದು, ಹಳೆ ದ್ವೇಷ, ಆರ್ಥಿಕ ಅಥವಾ ಇತರೆ ಕಾರಣಗಳಿಗಾಗಿ ಕೊಲೆ ನಡೆದಿರಬಹುದೆಂದು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
- Bheemappa Patil
- Updated on: Sep 5, 2026
- 9:56 pm