AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಪತಿ ಶರ್ಮಾ

ಗಣಪತಿ ಶರ್ಮಾ

Chief Sub Editor - TV9 Kannada

ganapathisharma.pallathadka@tv9.com

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow On:
ಸಿಎಂ ಡಿಕೆ ಶಿವಕುಮಾರ್​ಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ

ಸಿಎಂ ಡಿಕೆ ಶಿವಕುಮಾರ್​ಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಸದ್ಯಕ್ಕೆ ಯಾವುದೇ ಕಂಟಕವಿಲ್ಲ ಎಂದು ನೊಣವಿನಕೆರೆ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ತುಮಕೂರಿನಲ್ಲಿ ಹೇಳಿದ್ದಾರೆ. ಗುರುವಿನ ಆಶೀರ್ವಾದ ಸದಾ ಡಿಕೆ ಶಿವಕುಮಾರ್‌ ಅವರಿಗೆ ರಕ್ಷಾಕವಚವಾಗಿದೆ. ಡಿಕೆ ಶಿವಕುಮಾರ್ ಅವರ ಎಲ್ಲಾ ಸಂಕಷ್ಟಗಳು ನಿವಾರಣೆಯಾಗಲಿವೆ ಎಂದು ಸ್ವಾಮೀಜಿ ಅಭಯ ನೀಡಿದ್ದಾರೆ.

Bengaluru Traffic advisory: ವಾಹನ ಸವಾರರ ಗಮನಕ್ಕೆ, ಬೆಂಗಳೂರಿನ ಈ ರಸ್ತೆಗಳಲ್ಲಿಂದು ಸಂಚಾರ ಬದಲಾವಣೆ

Bengaluru Traffic advisory: ವಾಹನ ಸವಾರರ ಗಮನಕ್ಕೆ, ಬೆಂಗಳೂರಿನ ಈ ರಸ್ತೆಗಳಲ್ಲಿಂದು ಸಂಚಾರ ಬದಲಾವಣೆ

ಬೆಂಗಳೂರು ಸಂಚಾರ ಸಲಹೆ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಕರ್ನಾಟಕ ದಲಿತ ಸಂಘಟನೆಗಳ ಸಮಿತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದ ಮೆಜೆಸ್ಟಿಕ್, ಕೆ.ಜಿ. ರಸ್ತೆ ಹಾಗೂ ಸುತ್ತಮುತ್ತ ಸಂಚಾರ ಬದಲಾವಣೆ ಮಾಡಲಾಗಿದ್ದು, ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಟ್ರಾಫಿಕ್ ಪೊಲೀಸರು ನೀಡಿರುವ ಸಲಹೆ ಇಲ್ಲಿದೆ.

ಲಾಲ್‌ಬಾಗ್‌ನಲ್ಲಿ ಸಜ್ಜಾಯ್ತು ನೂತನ ಬೋನ್ಸಾಯ್ ಪಾರ್ಕ್: ತೋಟಗಾರಿಕೆಗೆ ಸಚಿವರೇ ಇಲ್ಲದೆ ಫಲಪುಷ್ಪ ಪ್ರದರ್ಶನ ಸಿದ್ಧತೆ ವಿಳಂಬ!

ಲಾಲ್‌ಬಾಗ್‌ನಲ್ಲಿ ಸಜ್ಜಾಯ್ತು ನೂತನ ಬೋನ್ಸಾಯ್ ಪಾರ್ಕ್: ತೋಟಗಾರಿಕೆಗೆ ಸಚಿವರೇ ಇಲ್ಲದೆ ಫಲಪುಷ್ಪ ಪ್ರದರ್ಶನ ಸಿದ್ಧತೆ ವಿಳಂಬ!

ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ನೂತನ ಬೋನ್ಸಾಯ್ ಪಾರ್ಕ್ ಪ್ರವಾಸಿಗರ ವೀಕ್ಷಣೆಗೆ ಸಜ್ಜಾಗಿದೆ. ಆದರೆ, ತೋಟಗಾರಿಕೆ ಇಲಾಖೆಗೆ ಸಚಿವರ ನೇಮಕಾತಿ ತಡವಾಗಿರುವುದರಿಂದ ಸ್ವಾತಂತ್ರ್ಯ ದಿನಾಚರಣೆಯ ಫಲಪುಷ್ಪ ಪ್ರದರ್ಶನದ ಥೀಮ್ ಆಯ್ಕೆ ಪ್ರಕ್ರಿಯೆ ವಿಳಂಬವಾಗಿದ್ದು, ಸಿದ್ಧತೆಗಳಿಗೆ ಭಾರಿ ಹಿನ್ನಡೆಯುಂಟಾಗಿದೆ. ಸಚಿವ ಸಂಪುಟ ವಿಸ್ತರಣೆ ಕಸರತ್ತು ಮುಗಿದು ಸಚಿವರ ಆಯ್ಕೆಯಾಗುವ ವರೆಗೂ ಥೀಮ್ ಆಯ್ಕೆಗೆ ಕಾಯಬೇಕಾಗಿದೆ.

ಮೊದಲ ಮಗು ಹೆಣ್ಣಾದರೆ ಅದೃಷ್ಟಗಳ ಮಹಾಪೂರ!

ಮೊದಲ ಮಗು ಹೆಣ್ಣಾದರೆ ಅದೃಷ್ಟಗಳ ಮಹಾಪೂರ!

ಮೊದಲ ಮಗು ಹೆಣ್ಣು ಮಗುವಾದರೆ ಅದು ಅದೃಷ್ಟದ ಸಂಕೇತವೆಂದು ನಮ್ಮ ಧರ್ಮಗ್ರಂಥಗಳು ಹೇಳುತ್ತವೆ. ಇದು ಮಹಾಲಕ್ಷ್ಮಿ ಸ್ವರೂಪವಾಗಿದ್ದು, ಕುಟುಂಬಕ್ಕೆ ಅದರಲ್ಲೂ ತಂದೆಗೆ ಅಪಾರ ಅದೃಷ್ಟವನ್ನು ತರುತ್ತದೆ. ಹೆಣ್ಣು ಮಗು ಪೂರ್ವಿಕರ ಆಶೀರ್ವಾದದೊಂದಿಗೆ ಬಂದು, ಮನೆಯಲ್ಲಿ ಚಂದ್ರ ಮತ್ತು ಶುಕ್ರ ಗ್ರಹಗಳ ಬಲವನ್ನು ಹೆಚ್ಚಿಸುತ್ತದೆ ಎನ್ನುತ್ತಾರೆ ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ.

ದೀರ್ಘಾವಧಿ ಪ್ರಧಾನಿ ದಾಖಲೆ: ಕೈಯಲ್ಲಿ ‘ಮೋದಿ’ ಮೆಹಂದಿ ಹಾಕಿಕೊಂಡು ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ ಬರ್ತ್‌ಡೇ ಆಚರಣೆ

ದೀರ್ಘಾವಧಿ ಪ್ರಧಾನಿ ದಾಖಲೆ: ಕೈಯಲ್ಲಿ ‘ಮೋದಿ’ ಮೆಹಂದಿ ಹಾಕಿಕೊಂಡು ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ ಬರ್ತ್‌ಡೇ ಆಚರಣೆ

ಪ್ರಧಾನಿ ನರೇಂದ್ರ ಮೋದಿ ಭಾರತದ ಇತಿಹಾಸದಲ್ಲೇ ಅತ್ಯಂತ ಸುದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ದಾಖಲೆ ಬರೆದ ಹಿನ್ನೆಲೆಯಲ್ಲಿ, ಗಾಲಿ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ ತಮ್ಮ ಹುಟ್ಟುಹಬ್ಬದಂದು ಕೈಯಲ್ಲಿ ಮೋದಿಯವರ ಭಾವಚಿತ್ರದ ಮೆಹಂದಿ ಬಿಡಿಸಿಕೊಂಡು ಸಂಭ್ರಮಿಸಿದ್ದಾರೆ. ಶಾಸಕ ಜನಾರ್ದನ ರೆಡ್ಡಿ ಮೋದಿಯವರ ದೀರ್ಘಾಯುಷ್ಯಕ್ಕೆ ಶುಭ ಹಾರೈಸಿದ್ದಾರೆ.

ಅಧ್ಯಕ್ಷರಾಗಿ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಗೆ ಬಿಕೆ ಹರಿಪ್ರಸಾದ್ ಆಗಮನ: ಅದ್ದೂರಿ ಸ್ವಾಗತ, ಜಿಬಿಎ ಚುನಾವಣೆ ಕುರಿತು ಮಹತ್ವದ ಸಭೆ

ಅಧ್ಯಕ್ಷರಾಗಿ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಗೆ ಬಿಕೆ ಹರಿಪ್ರಸಾದ್ ಆಗಮನ: ಅದ್ದೂರಿ ಸ್ವಾಗತ, ಜಿಬಿಎ ಚುನಾವಣೆ ಕುರಿತು ಮಹತ್ವದ ಸಭೆ

ನೂತನ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಬಿಕೆ ಹರಿಪ್ರಸಾದ್ ಇಂದು (ಜೂನ್ 10) ಮೊದಲ ಬಾರಿಗೆ ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿಗೆ ಭೇಟಿ ನೀಡಿದರು. ಕಚೇರಿಯಲ್ಲಿ ಅದ್ದೂರಿ ಸ್ವಾಗತ ಪಡೆದ ಅವರು, ಬಳಿಕ ಜಮೀರ್ ಅಹ್ಮದ್ ಸೇರಿದಂತೆ ಪ್ರಮುಖ ನಾಯಕರ ಸಮ್ಮುಖದಲ್ಲಿ ಜಿಬಿಎ ಚುನಾವಣೆ ವೀಕ್ಷಕರೊಂದಿಗೆ ಮಹತ್ವದ ಮೊದಲ ಸಭೆ ನಡೆಸಿದರು.

ನರೇಂದ್ರ ಮೋದಿ ಪ್ರಧಾನಿಯಾಗಿ 12 ವರ್ಷ ಪೂರ್ಣ; ಬೆಂಗಳೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ವಿಶೇಷ ಪೂಜೆ

ನರೇಂದ್ರ ಮೋದಿ ಪ್ರಧಾನಿಯಾಗಿ 12 ವರ್ಷ ಪೂರ್ಣ; ಬೆಂಗಳೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ವಿಶೇಷ ಪೂಜೆ

ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಆರ್‌ಪಿಸಿ ಲೇಔಟ್ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಕೇಂದ್ರ ಸಂಪುಟ ಪುನರ್‌ರಚನೆ ಮತ್ತು ತಮಗೆ ರಾಜ್ಯದ ಜವಾಬ್ದಾರಿ ಸಿಗುವ ವದಂತಿಗಳ ಕುರಿತು ಮಾತನಾಡಿದ ಅವರು, ವ್ಯಕ್ತಿಗಿಂತ ದೇಶ ದೊಡ್ಡದು, ಹೈಕಮಾಂಡ್ ಆದೇಶಕ್ಕೆ ತಲೆಬಾಗುವುದಾಗಿ ತಿಳಿಸಿದರು.

TV9 Kannada Live: ಇಂದಿನ ಇಡೀ ದಿನದ ಪ್ರಮುಖ ಸುದ್ದಿಗಳ ಮುಖ್ಯಾಂಶಗಳು

TV9 Kannada Live: ಇಂದಿನ ಇಡೀ ದಿನದ ಪ್ರಮುಖ ಸುದ್ದಿಗಳ ಮುಖ್ಯಾಂಶಗಳು

Karnataka News Live Updates: ಕರ್ನಾಟಕದಲ್ಲಿ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ನೂತನ ಸರ್ಕಾರದ ಸಚಿವ ಸಂಪುಟದಲ್ಲಿನ ಖಾತೆ ಹಂಚಿಕೆ ಅಸಮಾಧಾನ, ಸಂಪುಟ ವಿಸ್ತರಣೆ ಕಸರತ್ತು, ಸುದೀರ್ಘ ಅವಧಿಗೆ ಪ್ರಧಾನಿಯಾದ ದಾಖಲೆ ನಿರ್ಮಿಸಿದ ನರೇಂದ್ರ ಮೋದಿ, ರಾಜ್ಯಸಭೆ ಚುನಾವಣೆ, ಇರಾನ್ ಯುದ್ಧ ಸೇರಿದಂತೆ ಪ್ರಮುಖ ವಿದ್ಯಮಾನಗಳ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.

ತುಮಕೂರು – ಚಿತ್ರದುರ್ಗ – ದಾವಣಗೆರೆ ನೇರ ರೈಲು ಮಾರ್ಗದ ಬಗ್ಗೆ ಸಚಿವ ಸೋಮಣ್ಣ ಬಿಗ್ ಅಪ್​ಡೇಟ್

ತುಮಕೂರು – ಚಿತ್ರದುರ್ಗ – ದಾವಣಗೆರೆ ನೇರ ರೈಲು ಮಾರ್ಗದ ಬಗ್ಗೆ ಸಚಿವ ಸೋಮಣ್ಣ ಬಿಗ್ ಅಪ್​ಡೇಟ್

ತುಮಕೂರು-ಚಿತ್ರದುರ್ಗ-ದಾವಣಗೆರೆ ನಡುವಿನ 191 ಕಿ.ಮೀ ನೂತನ ನೇರ ರೈಲು ಮಾರ್ಗದ ಬಗ್ಗೆ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಮಹತ್ವದ ಅಪ್​ಡೇಟ್ ಕೊಟ್ಟಿದ್ದಾರೆ. ಯೋಜನೆ ಸಂಬಂಧ ಹಿರಿಯ ಅಧಿಕಾರಿಗಳ ಜತೆ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಅವರು ಮಾಹಿತಿ ನೀಡಿದ್ದಾರೆ. ಈಗಾಗಲೇ ಶೇ 92 ರಷ್ಟು ಭೂಸ್ವಾಧೀನ ಮುಗಿದಿದೆ ಎಂದು ಸಚಿವರು ಹೇಳಿದ್ದು, ರೈಲು ಸಂಚಾರ ಯಾವಾಗ ಶುರುವಾಗಲಿದೆ ಎಂಬುದನ್ನೂ ತಿಳಿಸಿದ್ದಾರೆ.

ಕೆಂಪೇಗೌಡ ಜಯಂತಿಯಂದು ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಡಲು ಸಿದ್ಧತೆ! ಗಿನ್ನಿಸ್ ದಾಖಲೆ ಬರೆಯಲು ಬಿಡಿಎ ಪ್ಲಾನ್

ಕೆಂಪೇಗೌಡ ಜಯಂತಿಯಂದು ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಡಲು ಸಿದ್ಧತೆ! ಗಿನ್ನಿಸ್ ದಾಖಲೆ ಬರೆಯಲು ಬಿಡಿಎ ಪ್ಲಾನ್

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ಜೂನ್ 27ರ ಕೆಂಪೇಗೌಡ ಜಯಂತಿಯಂದು ನಾಡಪ್ರಭು ಕೆಂಪೇಗೌಡ ಲೇಔಟ್ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ 15 ಲಕ್ಷ ಸಸಿಗಳನ್ನು ನೆಡಲು ಮುಂದಾಗಿದೆ. ಬೆಂಗಳೂರಿನಲ್ಲಿ ಹಸಿರು ನೆಲೆಸುವಂತೆ ಮಾಡುವ ಉದ್ದೇಶದೊಂದಿಗೆ ಹಮ್ಮಿಕೊಳ್ಳಲಾಗಿರುವ ಈ ಕಾರ್ಯ, ಗಿನ್ನಿಸ್ ದಾಖಲೆಗೆ ಭಾಜನವಾಗುವ ನಿರೀಕ್ಷೆ ಇದೆ.

ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ, ಸಚಿವ ಸ್ಥಾನದ ರೇಸ್​ನಲ್ಲೂ ಇಲ್ಲ: ರಾಜಣ್ಣ ಖಡಕ್ ಮಾತು

ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ, ಸಚಿವ ಸ್ಥಾನದ ರೇಸ್​ನಲ್ಲೂ ಇಲ್ಲ: ರಾಜಣ್ಣ ಖಡಕ್ ಮಾತು

ಶಾಸಕ ಕೆಎನ್ ರಾಜಣ್ಣ ಅವರು ಸಿಎಂ ಡಿಕೆ ಶಿವಕುಮಾರ್‌ ಸಂಪುಟದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಮುದಾಯವಾರು ಡಿಸಿಎಂ ಸ್ಥಾನಗಳ ಬೇಡಿಕೆಯನ್ನು ಬೆಂಬಲಿಸಿದ ಅವರು, ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ವಿಳಂಬ ಮಾಡಬಾರದು, ಇದು ರಾಜ್ಯಕ್ಕೆ ಅನ್ಯಾಯ ಎಂದು ಒತ್ತಿ ಹೇಳಿದ್ದಾರೆ.

ಬಿಟ್‌ಕಾಯಿನ್ ಹಗರಣ: ಮೊಹಮ್ಮದ್ ನಲಪಾಡ್‌ ಹಣ ಪಡೆದ ಬಗ್ಗೆ SIT ಚಾರ್ಜ್​ಶೀಟ್​ನಲ್ಲಿ ಉಲ್ಲೇಖ

ಬಿಟ್‌ಕಾಯಿನ್ ಹಗರಣ: ಮೊಹಮ್ಮದ್ ನಲಪಾಡ್‌ ಹಣ ಪಡೆದ ಬಗ್ಗೆ SIT ಚಾರ್ಜ್​ಶೀಟ್​ನಲ್ಲಿ ಉಲ್ಲೇಖ

ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ, ಮೊಹಮ್ಮದ್ ನಲಪಾಡ್ ಹವಾಲಾ ದಂಧೆ ಮೂಲಕ ಬಿಟ್‌ಕಾಯಿನ್ ನಗದೀಕರಿಸಿ ಕಮಿಷನ್ ಪಡೆದಿರುವುದು ಉಲ್ಲೇಖವಾಗಿದೆ. ಮತ್ತೊಂದೆಡೆ, ಇದೇ ಪ್ರಕರಣದಲ್ಲಿ ಎರಡು ಬಾರಿ ಇಡಿ ನೋಟಿಸ್ ಪಡೆದಿರುವ ನಲಪಾಡ್‌ಗೆ ಈಗ 3ನೇ ನೋಟಿಸ್ ನೀಡಲು ಜಾರಿ ನಿರ್ದೇಶನಾಲಯ ಸಿದ್ಧತೆ ನಡೆಸಿದೆ.