AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾಧರ​ ಬ. ಸಾಬೋಜಿ

ಗಂಗಾಧರ​ ಬ. ಸಾಬೋಜಿ

Sub Editor - TV9 Kannada

gangadhar.saboji@tv9.com

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಗೃಹ ಬಳಕೆಯ ಸಿಲಿಂಡರ್ ಬೆಲೆ ಏರಿಕೆ: ಗೃಹಿಣಿಯರು ಏನಂದ್ರು ನೋಡಿ

ಗೃಹ ಬಳಕೆಯ ಸಿಲಿಂಡರ್ ಬೆಲೆ ಏರಿಕೆ: ಗೃಹಿಣಿಯರು ಏನಂದ್ರು ನೋಡಿ

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 29 ಏರಿಕೆ ಆಗಿದೆ. ಕರ್ನಾಟಕದ ಗೃಹಿಣಿಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುದ್ಧದ ಪರಿಣಾಮ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಸಿಲಿಂಡರ್ ತಡವಾಗಿ ವಿತರಣೆಯಿಂದ ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನರ ನೆಮ್ಮದಿ ಕಸಿದ ಮಳೆರಾಯ: ಮನೆಗಳಿಗೆ ನುಗ್ಗಿದ ನೀರು, ಕುಸಿದ ಸೇತುವೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನರ ನೆಮ್ಮದಿ ಕಸಿದ ಮಳೆರಾಯ: ಮನೆಗಳಿಗೆ ನುಗ್ಗಿದ ನೀರು, ಕುಸಿದ ಸೇತುವೆ

ಕೇರಳಕ್ಕೆ ಮುಂಗಾರು ಪ್ರವೇಶದೊಂದಿಗೆ ಕರ್ನಾಟಕದಲ್ಲಿ ಮಳೆ ಚುರುಕುಗೊಂಡಿದೆ. ಬೆಂಗಳೂರು, ಬಳ್ಳಾರಿ, ಕಲಬುರಗಿ, ಗದಗ, ಹಾವೇರಿ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದಿದೆ. ಪರಿಣಾಮ ಹಲವೆಡೆ ಅವಾಂತರಗಳು ಸಂಭವಿಸಿವೆ. ಮನೆಗಳಿಗೆ ನೀರು ನುಗ್ಗಿವೆ. ಸೇತುವೆ ಕುಸಿದು, ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಇಲ್ಲಿವೆ ನೋಡಿ ಫೋಟೋಸ್​.

ಕಾಂಗ್ರೆಸ್​​ ಪಾಳಯದಲ್ಲಿ ತೀವ್ರಗೊಂಡ ಸಚಿವಾಕಾಂಕ್ಷಿಗಳ ಲಾಬಿ: ಜಿಲ್ಲೆ ಜಿಲ್ಲೆಯಲ್ಲೂ ಭುಗಿಲೆದ್ದ ಬೆಂಬಲಿಗರ ಆಕ್ರೋಶದ ಜ್ವಾಲೆ

ಕಾಂಗ್ರೆಸ್​​ ಪಾಳಯದಲ್ಲಿ ತೀವ್ರಗೊಂಡ ಸಚಿವಾಕಾಂಕ್ಷಿಗಳ ಲಾಬಿ: ಜಿಲ್ಲೆ ಜಿಲ್ಲೆಯಲ್ಲೂ ಭುಗಿಲೆದ್ದ ಬೆಂಬಲಿಗರ ಆಕ್ರೋಶದ ಜ್ವಾಲೆ

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇದೀಗ ಸಚಿವ ಸ್ಥಾನದ ಆಕಾಂಕ್ಷಿಗಳ ಲಾಬಿ ತೀವ್ರಗೊಂಡಿದೆ. ಜಮೀರ್ ಅಹ್ಮದ್ ಖಾನ್​​ ಸೇರಿದಂತೆ ಇತರೆ ನಾಯಕರ ಬೆಂಬಲಿಗರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಖಾತೆ ಹಂಚಿಕೆ ಕಗ್ಗಂಟು ಕ್ಲಿಯರ್ ಆದ ಬೆನ್ನಲ್ಲೇ ಇದೀಗ ಸಂಪುಟ ಕಿಚ್ಚು ಮತ್ತಷ್ಟು ಹೊತ್ತಿ ಉರಿರುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ.

ನೂತನ ಸಿಎಂ ಡಿಕೆ ಶಿವಕುಮಾರ್​​ಗೆ ಶುಭ ಹಾರೈಸಿದ ಲಿಂಗಾಯತ ಸ್ವಾಮೀಜಿಗಳು

ನೂತನ ಸಿಎಂ ಡಿಕೆ ಶಿವಕುಮಾರ್​​ಗೆ ಶುಭ ಹಾರೈಸಿದ ಲಿಂಗಾಯತ ಸ್ವಾಮೀಜಿಗಳು

ಲಿಂಗಾಯತ ಸ್ವಾಮೀಜಿಗಳು ಇಂದು ಸಿಎಂ ಡಿ.ಕೆ. ಶಿವಕುಮಾರ್ ಅವರ ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಮಾಡಿದರು. ಧಾರವಾಡ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಹಲವಾರು ಸ್ವಾಮೀಜಿಗಳು ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಚಿವ ಈಶ್ವರ್ ಖಂಡ್ರೆ ಮತ್ತು ಶಾಸಕ ವಿಜಯಾನಂದ ಕಾಶಪ್ಪನವರ್ ಉಪಸ್ಥಿತರಿದ್ದರು.

ಕರ್ನಾಟಕದಲ್ಲಿ ಶುರುವಾಯ್ತು ಡಿಕೆ ಶಿವಕುಮಾರ್​​ ರಾಜ್ಯಭಾರ: ಡಿಕೆ ಸೈನ್ಯ ಹೀಗಿದೆ

ಕರ್ನಾಟಕದಲ್ಲಿ ಶುರುವಾಯ್ತು ಡಿಕೆ ಶಿವಕುಮಾರ್​​ ರಾಜ್ಯಭಾರ: ಡಿಕೆ ಸೈನ್ಯ ಹೀಗಿದೆ

ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಡಿಕೆ ಶಿವಕುಮಾರ್​ ರಾಜ್ಯದ 25ನೇ ಸಿಎಂ ಆಗಿದ್ದಾರೆ. ಆ ಮೂಲಕ ಡಿಕೆ ಶಿವಕುಮಾರ್ ಯುಗಾರಂಭವಾಗಿದೆ. ಬೆಂಗಳೂರಿನ ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಆಗಿ ಡಿಕೆ ಶಿವಕುಮಾರ್​ ಮತ್ತು ಡಿಸಿಎಂ ಆಗಿ ಡಾ. ಪರಮೇಶ್ವರ್ ಹಾಗೂ 13 ನಾಯಕರು ಸಚಿವ ಸ್ಥಾನದ ಗದ್ದುಗೆ ಏರಿದ್ದಾರೆ. ಹಾಗಾದರೆ ಅವರು ಯಾರು ಎಂಬ ಮಾಹಿತಿ ಇಲ್ಲಿದೆ.

DK Shivakumar Oath Taking Ceremony Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

DK Shivakumar Oath Taking Ceremony Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಪ್ರಮಾಣ ವಚನ ನೇರಪ್ರಸಾರ: ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರ ಪಟ್ಟಾಭಿಷೇಕ ಲೋಕಭವನದಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾಗಿದ್ದಾರೆ. ಜ್ಯೋತಿಷಿಗಳ ಸಲಹೆಯಂತೆ ವೇದಿಕೆಯನ್ನು ವಾಸ್ತು ನಿಯಮಗಳ ಪ್ರಕಾರ ಪೂರ್ವಾಭಿಮುಖವಾಗಿ ಸಿದ್ಧಪಡಿಸಲಾಗಿದೆ. ಬೆಂಗಳೂರಿನಾದ್ಯಂತ ಸಂಭ್ರಮ ಮನೆಮಾಡಿದ್ದು, ಈ ಭವ್ಯ ಸಮಾರಂಭದ ನೇರ ಪ್ರಸಾರ ವೀಕ್ಷಿಸಿ.

Weather Forecast: ಕರ್ನಾಟಕದಲ್ಲಿ ಮುಂದಿನ ಕೆಲ ದಿನ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

Weather Forecast: ಕರ್ನಾಟಕದಲ್ಲಿ ಮುಂದಿನ ಕೆಲ ದಿನ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

Monsoon 2026: ಕರ್ನಾಟಕದ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಜೂನ್ 1 ರಿಂದ 5 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ ಎಂದು KSNDMC ತಿಳಿಸಿದೆ.

ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರ ಸಾವು

ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರ ಸಾವು

ಇತ್ತೀಚೆಗೆ ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಜನ ಸಾವನ್ನಪ್ಪಿದ್ದರು. ಬಳಿಕ ಮೇ 29ರಂದು ವಿಜಯನಗರದಲ್ಲಿ ಕ್ಲಬ್ ಕಾಂಪೌಂಡ್ ಗೋಡೆ ಕುಸಿದು ಓರ್ವ ಆಟೋ ಚಾಲಕ ಮೃತಪಟ್ಟಿದ್ದರು. ಇದೀಗ ಮಳೆಗೆ ಮತ್ತೊಂದು ದುರಂತ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ.

ಸಂಪುಟ ಸೇರಲು ಕಸರತ್ತು: ಡಿಕೆ ಶಿವಕುಮಾರ್​ ನಿವಾಸಕ್ಕೆ ಮಾಜಿ ಸಚಿವರು, ಶಾಸಕರ ಪರೇಡ್‌!

ಸಂಪುಟ ಸೇರಲು ಕಸರತ್ತು: ಡಿಕೆ ಶಿವಕುಮಾರ್​ ನಿವಾಸಕ್ಕೆ ಮಾಜಿ ಸಚಿವರು, ಶಾಸಕರ ಪರೇಡ್‌!

ಕರ್ನಾಟಕದ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಅಧಿಕಾರ ವಹಿಸಿಕೊಳ್ಳಲು ಸಿದ್ಧರಾಗಿದ್ದು, ಅವರ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ. ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ಅವರನ್ನು ಭೇಟಿ ಮಾಡುತ್ತಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮ ಸೇರಿದಂತೆ ಸಂಪುಟ ರಚನೆ, ಸಚಿವರ ಪಟ್ಟಿ ಅಂತಿಮಗೊಳಿಸಲು ಡಿಕೆ ಶಿವಕುಮಾರ್ ದೆಹಲಿಗೆ ನಾಳೆ ಪ್ರಯಾಣಿಸಲಿದ್ದಾರೆ.

RCB ಫೈನಲ್ ಮ್ಯಾಚ್: ಇಂದು ರಾತ್ರಿಯಿಂದಲೇ ಬೆಂಗಳೂರಿನ ಈ ಪ್ರಮುಖ ಫ್ಲೈಓವರ್‌ಗಳು ಬಂದ್!

RCB ಫೈನಲ್ ಮ್ಯಾಚ್: ಇಂದು ರಾತ್ರಿಯಿಂದಲೇ ಬೆಂಗಳೂರಿನ ಈ ಪ್ರಮುಖ ಫ್ಲೈಓವರ್‌ಗಳು ಬಂದ್!

ಬೆಂಗಳೂರು ಸಂಚಾರ ಪೊಲೀಸರು ಐಪಿಎಲ್ ಫೈನಲ್ ಹಿನ್ನೆಲೆ ಮೇ 31 ರಾತ್ರಿ 11 ಗಂಟೆಯಿಂದ ಜೂನ್ 1 ಬೆಳಿಗ್ಗೆ 5 ಗಂಟೆಯವರೆಗೆ ನಗರದ ಕೆಲ ಫ್ಲೈಓವರ್‌ಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಹಾಗಾದರೆ ಯಾವೆಲ್ಲಾ ಫ್ಲೈಓವರ್‌ಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಪ್ರಮಾಣವಚನಕ್ಕೂ ಮುನ್ನವೇ ಡಿಕೆ ಶಿವಕುಮಾರ್​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ

ಪ್ರಮಾಣವಚನಕ್ಕೂ ಮುನ್ನವೇ ಡಿಕೆ ಶಿವಕುಮಾರ್​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ

ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆಯಾದ ನಂತರ, ಭದ್ರತಾ ಕ್ರಮಗಳ ಭಾಗವಾಗಿ ಮೆಟಲ್ ಡಿಟೆಕ್ಟರ್‌ಗಳನ್ನು ಅಳವಡಿಸಲಾಗಿದೆ. ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಂಚಿಕೆ ಕುರಿತ ಚರ್ಚೆಗಳು ನಡೆಯುತ್ತಿರುವಾಗ ಈ ಭದ್ರತಾ ಏರ್ಪಾಡುಗಳನ್ನು ಮಾಡಲಾಗಿದೆ.

ಗೃಹಲಕ್ಷ್ಮಿ- ವಿಧವಾ ವೇತನದ ಹಣ ಸಾಲದ ಖಾತೆಗೆ ಜಮೆ: ಬಡ ಮಹಿಳೆಯ ಹೊಟ್ಟೆ ಮೇಲೆ ಹೊಡೆದ ಬ್ಯಾಂಕ್

ಗೃಹಲಕ್ಷ್ಮಿ- ವಿಧವಾ ವೇತನದ ಹಣ ಸಾಲದ ಖಾತೆಗೆ ಜಮೆ: ಬಡ ಮಹಿಳೆಯ ಹೊಟ್ಟೆ ಮೇಲೆ ಹೊಡೆದ ಬ್ಯಾಂಕ್

ಹಾವೇರಿಯ ಬ್ಯಾಂಕ್​ವೊಂದು ಫಲಾನುಭವಿಯ ಗೃಹಲಕ್ಷ್ಮಿ ಮತ್ತು ವಿಧವಾ ವೇತನ ಹಣವನ್ನು ಅನಧಿಕೃತವಾಗಿ ಸಾಲದ ಖಾತೆಗೆ ಕಡಿತಗೊಳಿಸಿದೆ. ಮಗ ಶೂರಿಟಿ ಸಾಲ ಮತ್ತು ಗ್ರೂಪ್ ಲೋನ್ ಬಾಕಿ ಹೆಸರಿನಲ್ಲಿ ಎರಡೆರಡು ತಿಂಗಳ ಹಣವನ್ನು ಖಾತೆಯಿಂದ ಕಟ್​ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಬ್ಯಾಂಕ್ ಮ್ಯಾನೇಜರ್‌ ದರ್ಪ ಪ್ರದರ್ಶಿಸಿದ್ದಾರೆ. ಸದ್ಯ ಆಕ್ರೋಶ ವ್ಯಕ್ತವಾಗಿದೆ.