ರಾಜ್ಯಪಾಲರ ಫೋನ್ ಕದ್ದಾಲಿಕೆ: ಬಿಜೆಪಿ ಸದಸ್ಯರಿಂದ ಗಂಭೀರ ಆರೋಪ, ಸದನದಲ್ಲಿ ಚರ್ಚೆ ಜೋರು
ರಾಜ್ಯಪಾಲರಿಗೆ ಕೇಶವ ಕೃಪಾದಿಂದ ಫೋನ್ ಬರುತ್ತೆ ಎಂಬ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹೇಳಿಕೆ ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿಂದು ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಈ ಬಗ್ಗೆ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಆಡಳಿತರೂಢ ಹಾಗೂ ವಿಪಕ್ಷ ಸದಸ್ಯರ ನಡುವೆ ಪರ ವಿರೋಧದ ಚರ್ಚೆಗೆ ಗ್ರಾಸವಾಗಿದ್ದು, ಈ ವೇಳೆ ಹೆಚ್ಕೆ ಪಾಟೀಲ್ ಕೂಡಲೇ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು. ಇದಕ್ಕೆ ಸ್ವತಃ ಹೆಚ್ಕೆ ಪಾಟೀಲ್ ಹಾಗೂ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದು ಈ ಕೆಳಗಿನಂತಿದೆ.
- Harish GR
- Updated on: Jan 28, 2026
- 5:55 pm
ಸರ್ಕಾರದ ವಿರುದ್ಧ ಮತ್ತೆ ತೊಡೆತಟ್ಟಿದ ರಾಜ್ಯಪಾಲರು: ಅಧಿವೇಶನ ಬಳಿಕ ಗಣರಾಜ್ಯೋತ್ಸವ ಭಾಷಣ ಓದಲೂ ಹಿಂದೇಟು!
Karnataka Governor vs Government: ಕರ್ನಾಟಕದಲ್ಲಿ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಗಣರಾಜ್ಯೋತ್ಸವ ಭಾಷಣದ ಕುರಿತು ಮತ್ತೊಂದು ಬಿಕ್ಕಟ್ಟು ತಲೆದೋರುವ ಸಾಧ್ಯತೆ ದಟ್ಟವಾಗಿದೆ. ಕೇಂದ್ರ ಸರ್ಕಾರದ ನೀತಿಗಳು, ತೆರಿಗೆ ಅನ್ಯಾಯ ಮತ್ತು ಅನುದಾನ ಹಂಚಿಕೆಯ ತಾರತಮ್ಯ ಕುರಿತ ಟೀಕೆಗಳನ್ನು ಒಳಗೊಂಡಿರುವ ಭಾಷಣವನ್ನು ಓದಲು ರಾಜ್ಯಪಾಲರು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
- Harish GR
- Updated on: Jan 24, 2026
- 2:42 pm
ಬಿ.ಕೆ. ಹರಿಪ್ರಸಾದ್ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್
ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರ ಕೊಟ್ಟ ಭಾಷಣ ಮಾಡದೆ ರಾಜ್ಯಪಾಲರು ಸದನದಿಂದ ಹೊರ ಹೋಗುವ ವೇಳೆ ನಡೆದ ಹೈಡ್ರಾಮಾ ವಿಚಾರ ವಿಧಾನ ಪರಿಷತ್ನಲ್ಲಿ ಆಡಳಿತ ಮತ್ತು ವಿಪಕ್ಷದ ನಡುವೆ ಗಲಾಟೆಗೆ ಕಾರಣವಾಗಿದೆ. ಸದಸ್ಯ ಹರಿಪ್ರಸಾದ್ರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಬಿಜೆಪಿ ಆಗ್ರಹಿಸಿದ ಪರಿಣಾಮ ಪರಿಷತ್ ರಣಾಂಗಣವಾಗಿ ಮಾರ್ಪಟ್ಟಿದೆ. ಹೀಗಾಗಿ ಕಲಾಪವನ್ನು ಸಭಾಪತಿ ಬಸವರಾಜ ಹೊರಟ್ಟಿ ಕೆಲಕಾಲ ಮೂಂದೂಡಬೇಕಾಯಿತು.
- Harish GR
- Updated on: Jan 23, 2026
- 2:28 pm
ಮಠಗಳಿಗೆ ಜಾಗ, ಉದ್ಯೋಗಾಕಾಂಕ್ಷಿಗಳಿಗೂ ಸುಯೋಗ: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಗೆ ಒಪ್ಪಿಗೆ ನೀಡಲಾಗಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗಲಿದೆ. ಅಲೆಮಾರಿ/ಅರೆ ಅಲೆಮಾರಿ ಸಮುದಾಯಕ್ಕೆ 100 ಕೋಟಿ ವೆಚ್ಚದಲ್ಲಿ ಮನೆ ನಿರ್ಮಾಣಕ್ಕೂ ಸಮ್ಮತಿ ದೊರೆತಿದೆ. ಜೊತೆಗೆ, 22 ಹಿಂದುಳಿದ ಮಠಗಳಿಗೆ ಜಮೀನು ಮಂಜೂರು ಮಾಡುವ ನಿರ್ಧಾರವೂ ಅಂಗೀಕರಿಸಲ್ಪಟ್ಟಿದೆ.
- Harish GR
- Updated on: Jan 22, 2026
- 7:04 pm
ಈ ಬಾರಿ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೆಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ, ಯಾವುದು ಗೊತ್ತಾ?
2026ರ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ 'ಮಿಲೆಟ್ಸ್ ಟು ಮೈಕ್ರೋಚಿಪ್' ಪರಿಕಲ್ಪನೆಯೊಂದಿಗೆ ಮಿಂಚಲಿದೆ. ರಾಜ್ಯದ ಕೃಷಿ ವೈವಿಧ್ಯತೆ (ಸಿರಿಧಾನ್ಯಗಳು) ಮತ್ತು ಮಾಹಿತಿ ತಂತ್ರಜ್ಞಾನದ ಪ್ರಗತಿಯನ್ನು ಇದು ಪ್ರದರ್ಶಿಸುತ್ತದೆ. ಆತ್ಮನಿರ್ಭರ ಭಾರತಕ್ಕೆ ಕರ್ನಾಟಕದ ಕೊಡುಗೆಯನ್ನು ಎತ್ತಿಹಿಡಿಯುವ ಈ ಟ್ಯಾಬ್ಲೋ, ಯಕ್ಷಗಾನ ಮತ್ತು ಕಂಸಾಳೆ ಕಲೆಯ ಅಂಶಗಳನ್ನು ಒಳಗೊಂಡಿದೆ. ಇದು ರಾಜ್ಯದ ಹೆಮ್ಮೆಯ ಪ್ರತೀಕವಾಗಿದೆ.
- Harish GR
- Updated on: Jan 23, 2026
- 3:38 pm
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ಜನಾರ್ದನ ರೆಡ್ಡಿ
ಬಳ್ಳಾರಿಯಲ್ಲಿ ಬ್ಯಾನರ್ ವಿಚಾರಕ್ಕೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಹೇಳಿಕೆ ನೀಡಿದ್ದು, ಜನವರಿ 17ರಂದು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ. ಪಾದಯಾತ್ರೆ ಜೊತೆಗೆ ಸಮಾವೇಶ ಮಾಡುವ ಚಿಂತನೆ ಇದೆ. ಈ ಕುರಿತು ಪಕ್ಷದ ಅಧ್ಯಕ್ಷರ ಜೊತೆ ಚರ್ಚಿಸಿದ್ದೇನೆ ಎಂದು ಹೇಳಿದ್ದಾರೆ.
- Harish GR
- Updated on: Jan 10, 2026
- 6:49 pm
ಸಿಎಂ ಸಿದ್ದರಾಮಯ್ಯ ಪತ್ರದ ಬೆನ್ನಲ್ಲೇ ವರಸೆ ಬದಲಿಸಿದ ಕೇರಳ ಸರ್ಕಾರ: ಕನ್ನಡಿಗರಿಗೆ ಮಲಯಾಳಂ ಕಡ್ಡಾಯ ಅಲ್ಲ
ಕೇರಳದ ಮಲಯಾಳಂ ಭಾಷಾ ಮಸೂದೆ 2025 ಕುರಿತು ಕರ್ನಾಟಕ ಸಿಎಂ ಸಿದ್ದರಾಮಯ್ಯರ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ಪ್ರತಿಕ್ರಿಯಿಸಿದ್ದಾರೆ. ಹೊರರಾಜ್ಯದ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯವಲ್ಲ, ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲಾಗಿದೆ. ಕನ್ನಡ ಮಾತನಾಡುವವರಿಗೆ ತಮ್ಮ ಭಾಷೆಯಲ್ಲೇ ಪತ್ರ ವ್ಯವಹಾರಕ್ಕೆ ಅವಕಾಶವಿದೆ ಎಂದಿದ್ದಾರೆ. ಮಸೂದೆಯು ಭಾಷಾ ವೈವಿಧ್ಯತೆಯನ್ನು ಗೌರವಿಸುತ್ತದೆ.
- Harish GR
- Updated on: Jan 10, 2026
- 5:05 pm
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಸರ್ಕಾರದ ವಿರುದ್ಧ ಜೋಶಿ ಕಿಡಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರವು ಕಾನೂನು ಸುವ್ಯವಸ್ಥೆ ಕಾಪಾಡುವುದನ್ನು ಬಿಟ್ಟು, ತನ್ನ ಶಾಸಕರನ್ನು ರಕ್ಷಿಸುವಲ್ಲಿ ನಿರತವಾಗಿದೆ ಎಂದು ಆರೋಪಿಸಿದ್ದಾರೆ. ಈ ಗಲಭೆಯ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
- Harish GR
- Updated on: Jan 3, 2026
- 8:31 pm
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ರಾಜ್ಯ ರಾಜಕೀಯದಲ್ಲಿ ಕುರ್ಚಿ ಕಿತ್ತಾಟದ ನಡುವೆ ಸಿಎಂ ಸಿದ್ದರಾಮಯ್ಯ 2026-27ರ ಬಜೆಟ್ ಮಂಡನೆಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಜೆಟ್ ಸಿದ್ಧತೆಗಳು ಈ ತಿಂಗಳಿನಿಂದಲೇ ಆರಂಭವಾಗಲಿವೆ ಎಂದು ಅವರು ತಿಳಿಸಿದ್ದಾರೆ. ಜೊತೆಗೆ 2026 ಎಲ್ಲರ ಬಾಳಲ್ಲಿ ಸುಖ ಸಂತಸ ತರಲಿ ಎಂದು ಹಾರೈಸಿದ್ದಾರೆ. ವಿಡಿಯೋ ನೋಡಿ.
- Harish GR
- Updated on: Jan 1, 2026
- 9:36 pm
ಕೋಗಿಲು ಮನೆಗಳ ತೆರವು: ಕೇರಳ ಸಿಎಂ, ಎಂಪಿ ಎಂಟ್ರಿ ಬೆನ್ನಲ್ಲೇ ಹೊಸ ಮನೆ ನೀಡಲು ತೀರ್ಮಾನ
ಬೆಂಗಳೂರಿನ ಕೋಗಿಲು ಲೇಔಟ್ನಲ್ಲಿ ಅನಧಿಕೃತ ಮನೆ ತೆರವು ಕಾರ್ಯಾಚರಣೆ ಬಳಿಕ ಸಂತ್ರಸ್ತರಿಗೆ ಬೈಯಪ್ಪನಹಳ್ಳಿ ಬಳಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ 180 ಮನೆಗಳನ್ನು ನೀಡಲು ಸರ್ಕಾರ ಭರವಸೆ ನೀಡಿದೆ. ಕೇರಳ ಸಿಎಂ ಮತ್ತು ಎಂಪಿ ಎಂಟ್ರಿ ಬೆನ್ನಲ್ಲೇ ಹೊಸ ಮನೆ ನೀಡಲು ತೀರ್ಮಾನಿಸಲಾಗಿದೆ.
- Harish GR
- Updated on: Dec 28, 2025
- 5:14 pm
ರಾಜ್ಯದಲ್ಲಿ 88 ಜನ ಪೊಲೀಸರೇ ಕ್ರಿಮಿನಲ್ಸ್: ವಿಧಾನ ಪರಿಷತ್ನಲ್ಲಿ ಗೃಹ ಸಚಿವ ಪರಮೇಶ್ವರ್ ಮಾಹಿತಿ
ಕರ್ನಾಟಕದಲ್ಲಿ ಕಳೆದ 3 ವರ್ಷಗಳಲ್ಲಿ 88 ಪೊಲೀಸರು ದರೋಡೆ, ಅಪಹರಣ ಸೇರಿ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದು ಬಹಿರಂಗವಾಗಿದೆ. ವಿಧಾನ ಪರಿಷತ್ನಲ್ಲಿ ಜೆಡಿಎಸ್ ಸದಸ್ಯರ ಪ್ರಶ್ನೆಗೆ ಉತ್ತರಿಸುವ ವೇಳೆ ಗೃಹ ಸಚಿವರೇ ಈ ಮಾಹಿತಿಯನ್ನು ದೃಢಪಡಿಸಿದ್ದು, ಕೆಲ ಪೊಲೀಸರ ನಡೆ ಸಾರ್ವಜನಿಕರು ಅವರ ಮೇಲಿಟ್ಟಿದ್ದ ವಿಶ್ವಾಸಕ್ಕೆ ಧಕ್ಕೆ ತಂದಿರುವ ಆರೋಪ ಕೇಳಿಬಂದಿದೆ. ರಕ್ಷಕರೇ ಭಕ್ಷಕರಾದರೆ ಹೇಗೆ ಎಂಬ ಪ್ರಶ್ನೆಯೂ ಉದ್ಭವಿಸಿದೆ.
- Harish GR
- Updated on: Dec 18, 2025
- 12:29 pm
ಬೆಳಗಾವಿ ಅಧಿವೇಶನ: ಪರಿಷತ್ನಲ್ಲಿ ಪ್ರಶ್ನೆ ಕೇಳಿದ್ದ BJP ಎಂಎಲ್ಸಿಗೆ ಕೊಟ್ಟಿದ್ದು ಖಾಲಿ ಪೆನ್ಡ್ರೈವ್!
ಗೃಹಲಕ್ಷ್ಮೀ ಯೋಜನೆ ವಿಚಾರವಾಗಿ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಿಪಕ್ಷಗಳು ಆಕ್ರೋಶ ವಕ್ತಪಡಿಸುತ್ತಿರುವ ನಡುವೆ ರಾಜ್ಯ ಸರ್ಕಾರ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಪರಿಷತ್ ಬಿಜೆಪಿ ಸದಸ್ಯರ ಪ್ರಶ್ನೆಗೆ ಉತ್ತರಿಸುವ ವೇಳೆ ಅಧಿಕಾರಿಗಳು ಬೇಜವಾಬ್ದಾರಿ ತೋರಿರೋದು ಆಡಳಿತ ಪಕ್ಷಕ್ಕೆ ಇರುಸುಮುರುಸು ಉಂಟುಮಾಡಿದೆ.
- Harish GR
- Updated on: Dec 17, 2025
- 4:00 pm