AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jagadisha B

Jagadisha B

Author - TV9 Kannada

Jagadisha.basavaraju@tv9.com

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Follow On:
ಹಾವೇರಿ ಬಳಿಕ ತುಮಕೂರಿನಲ್ಲೂ SLV ಮಹಿಳಾ ಮಾರ್ಟ್ ಭಾರೀ ವಂಚನೆ: ಮಹಿಳೆಯರಿಗೆ ಲಕ್ಷ ಲಕ್ಷ ವಂಚನೆ

ಹಾವೇರಿ ಬಳಿಕ ತುಮಕೂರಿನಲ್ಲೂ SLV ಮಹಿಳಾ ಮಾರ್ಟ್ ಭಾರೀ ವಂಚನೆ: ಮಹಿಳೆಯರಿಗೆ ಲಕ್ಷ ಲಕ್ಷ ವಂಚನೆ

ಹಾವೇರಿ ಬೆನ್ನಲ್ಲೇ ತುಮಕೂರಿನ ಜಯನಗರದಲ್ಲೂ ‘ಎಸ್‌ಎಲ್‌ವಿ ಮಹಿಳಾ ಮಾರ್ಟ್’ ಗೃಹ ಉದ್ಯೋಗದ ನೆಪದಲ್ಲಿ ನೂರಾರು ಮಹಿಳೆಯರಿಗೆ 5 ಲಕ್ಷದಿಂದ ಕೋಟಿ ರೂ.ವರೆಗೂ ವಂಚಿಸಿದೆ. ಮನೆಯ ಪತ್ರ ಅಡವಿಟ್ಟು ಹಣ ಹೂಡಿದ್ದ ಮಹಿಳೆಯರು ಈಗ ಬೀದಿಗೆ ಬಿದ್ದಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮತ್ತೆ ಮುನ್ನೆಲೆಗೆ ಬಂದ ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ: ಪರ, ವಿರೋಧ ಚರ್ಚೆ ಶುರು

ಮತ್ತೆ ಮುನ್ನೆಲೆಗೆ ಬಂದ ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ: ಪರ, ವಿರೋಧ ಚರ್ಚೆ ಶುರು

ತುಮಕೂರು ಜಿಲ್ಲೆಯ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ಸರ್ಕಾರ ಮರುಜೀವ ನೀಡಲು ಮುಂದಾಗಿದ್ದು, ಜಿಲ್ಲೆಯ ಶಾಸಕರು ಹಾಗೂ ರೈತರ ನಡುವೆ ಮತ್ತೆ ಪರ-ವಿರೋಧದ ಹೋರಾಟದ ಕಿಡಿ ಹೊತ್ತಿಕೊಂಡಿದೆ. ಈ ಯೋಜನೆ ಆರಂಭದಿಂದಲೇ ವಿವಾದಕ್ಕೆ ಕಾರಣವಾಗಿತ್ತು. ಬೃಹತ್ ಪ್ರತಿಭಟನೆಗಳು ನಡೆದಿದ್ದವು. ಇದೀಗ ಸರ್ಕಾರ ಮತ್ತೆ ಕಾಮಗಾರಿ ಆರಂಭಿಸಲು ಮುಂದಾಗಿರುವುದರಿಂದ, ಜಿಲ್ಲೆಯಲ್ಲಿ ಹೇಮಾವತಿ ಹೋರಾಟದ ಕಾವು ಮತ್ತೊಮ್ಮೆ ಜೋರಾಗುವ ಲಕ್ಷಣ ಗೋಚರಿಸಿದೆ.

‘2013ರ ಚುನಾವಣೆಯಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ’: ಜಿ. ಪರಮೇಶ್ವರ್

‘2013ರ ಚುನಾವಣೆಯಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ’: ಜಿ. ಪರಮೇಶ್ವರ್

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ತುಮಕೂರಿನಲ್ಲಿ ತಮಗೆ ಮೂರು ಬಾರಿ ಮುಖ್ಯಮಂತ್ರಿ ಹುದ್ದೆ ಕೈತಪ್ಪಿರುವ ಕುರಿತು ಅತ್ಯಂತ ಭಾವುಕರಾಗಿ ತಮ್ಮ ಮನದ ನೋವನ್ನು ತೋಡಿಕೊಂಡಿದ್ದಾರೆ. 2013ರಲ್ಲಿ ತಾವು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ ಎಂದು ಡಿಸಿಎಂ ಹೇಳಿದ್ದಾರೆ. 2018ರ ಮೈತ್ರಿ ಸರ್ಕಾರ ಹಾಗೂ ಪ್ರಸ್ತುತ 2026ರ ರಾಜಕೀಯ ವಿದ್ಯಮಾನಗಳಲ್ಲೂ ತಮಗೆ ಸಿಎಂ ಹುದ್ದೆಯ ಅವಕಾಶ ಸಿಗದೆ ವಂಚಿತರಾದ ಕುರಿತು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಪಾಕ್ ಉಗ್ರನ ಜೊತೆ ರಾಜ್ಯದ ಇಬ್ಬರ ಲಿಂಕ್: ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು!

ಪಾಕ್ ಉಗ್ರನ ಜೊತೆ ರಾಜ್ಯದ ಇಬ್ಬರ ಲಿಂಕ್: ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು!

ಪಾಕಿಸ್ತಾನದ ಶಂಕಿತ ಉಗ್ರನೊಂದಿಗೆ ಇನ್‌ಸ್ಟಾಗ್ರಾಮ್ ಮೂಲಕ ನಂಟು ಹೊಂದಿದ್ದ ಇಬ್ಬರು ಆರೋಪಿಗಳನ್ನು ತುಮಕೂರು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲಾಗಿದೆ. ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಲು 50 ರಿಂದ 60 ಯುವಕರನ್ನು ಸಿದ್ಧಪಡಿಸುವಂತೆ ಪಾಕ್ ಮೂಲದ ರಾಣಾ ಎಂಬಾತ ನೀಡಿದ್ದ ಧರ್ಮದ ಹೆಸರಿನ ಪ್ರಚೋದನೆ ಹಾಗೂ ಆರೋಪಿಗಳ ನಡುವೆ ನಡೆದ ಚಾಟಿಂಗ್‌ನ ಸಂಪೂರ್ಣ ಮಾಹಿತಿ ವಿಚಾರಣೆ ವೇಳೆ ಹೊರಬಿದ್ದಿದೆ.

ಸಿಎಂ ಆದ ಮೊದಲ ಬಾರಿಗೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್​

ಸಿಎಂ ಆದ ಮೊದಲ ಬಾರಿಗೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್​

ಡಿಕೆ ಶಿವಕುಮಾರ್​​ ತಾವು ನಂಬುವ ಆರಾಧ್ಯ ಸನ್ನಿಧಿ ಅಜ್ಜಯ್ಯನ ಮಠಕ್ಕೆ ಇಂದು ಭೇಟಿ ನೀಡಿದರು. ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ನೊಣವಿಕೆರೆಯಲ್ಲಿರುವ ಕಾಡಸಿದ್ದೇಶ್ವರ ಮಠಕ್ಕೆ ಸಿಎಂ ಆದ ಬಳಿಕ ಭೇಟಿ ನೀಡಿ ಅಜ್ಜಯ್ಯನ ಆಶೀರ್ವಾದ ಪಡೆದರು. ಈ ವೇಳೆ ಕೆಲಕಾಲ ಮಠದ ಆವರಣದಲ್ಲಿ ಓಡಾಡಿದರು.

ಪಾಕ್ ಉಗ್ರನ ಜತೆ ಸಂಪರ್ಕ ಹೊಂದಿದ್ದ ಇಬ್ಬರ ಬಂಧನ: ಕರ್ನಾಟಕದಲ್ಲಿ ಬೇರೂರುತ್ತಿವೆ ಉಗ್ರರ ಸ್ಲೀಪರ್ ಸೆಲ್!

ಪಾಕ್ ಉಗ್ರನ ಜತೆ ಸಂಪರ್ಕ ಹೊಂದಿದ್ದ ಇಬ್ಬರ ಬಂಧನ: ಕರ್ನಾಟಕದಲ್ಲಿ ಬೇರೂರುತ್ತಿವೆ ಉಗ್ರರ ಸ್ಲೀಪರ್ ಸೆಲ್!

ಪಾಕಿಸ್ತಾನದ ಶಂಕಿತ ಉಗ್ರ ರಾಣಾ ಜೊತೆ ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕದಲ್ಲಿದ್ದು, ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ತುಮಕೂರು ಮತ್ತು ದಾವಣಗೆರೆಯ ಇಬ್ಬರು ಯುವಕರನ್ನು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ, ಕರ್ನಾಟಕದಲ್ಲಿ ಉಗ್ರರ ಸ್ಲೀಪರ್ ಸೆಲ್​ಗಳು ಬೇರೂರುತ್ತಿರುವುದು ಮತ್ತೆ ದೃಢವಾಗಿದೆ.

ಪಾಕ್ ಉಗ್ರನ ಜತೆ ಯುವಕರಿಬ್ಬರ ನಂಟು ಬೆಸಿದಿದ್ಹೇಗೆ? ಇಲ್ಲಿದೆ ಕರ್ನಾಟಕ-ಪಾಕ್ ಜಾಲದ ರಹಸ್ಯ

ಪಾಕ್ ಉಗ್ರನ ಜತೆ ಯುವಕರಿಬ್ಬರ ನಂಟು ಬೆಸಿದಿದ್ಹೇಗೆ? ಇಲ್ಲಿದೆ ಕರ್ನಾಟಕ-ಪಾಕ್ ಜಾಲದ ರಹಸ್ಯ

ಪಾಕ್​​ನ ಅದೊಬ್ಬನ ವ್ಯವಸ್ಥಿತ ಸಂಚಿಗೆ ಭಾರತೀಯ ಅದರಲ್ಲೂ ಕರ್ನಾಟಕದ ಯುವಕರು ಟಾರ್ಗೆಟ್ ಆಗಿದ್ದಾರಾ ಎನ್ನುವ ಅನುಮಾನಗಳು ಸದ್ಯ ಶುರುವಾಗಿವೆ. ಏಕೆಂದರೆ ಗುಪ್ತಚರ ದಳದ ಮಾಹಿತಿ ಆಧರಿಸಿ ತುಮಕೂರು ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಅಷ್ಟಕ್ಕೂ ಈ ಇಬ್ಬರು ಯುವಕರು ಸಿಕ್ಕಿಬಿದ್ದಿದ್ದೇಗೆ, ಪಾಕ್​ನ ಆ ವ್ಯಕ್ತಿಗೆ ಹಾಗೂ ಇವರಿಗೆ ಸಂಪರ್ಕವಾಗಿದ್ದು ಹೇಗೆ ಎಂಬ ಸ್ಫೋಟಕ ಮಾಹಿತಿ ಇಲ್ಲಿದೆ.

ತುಮಕೂರು: ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

ತುಮಕೂರು: ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

ದೇಶದ ಭದ್ರತೆಗೆ ಧಕ್ಕೆ ತರುವ ಪ್ರಚೋದನಾತ್ಮಕ ಸಂದೇಶ ರವಾನಿಸುತ್ತಿದ್ದ ತುಮಕೂರಿನ ಶ್ರೀರಾಮನಗರದ ಅಲ್ಲಾಬಕ್ಷು ಎಂಬಾ ಯುವಕನನ್ನು ಕೇಂದ್ರ ತನಿಖಾ ಸಂಸ್ಥೆಗಳ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ವಿದೇಶಿ ಉಗ್ರ ಸಂಘಟನೆ, ಉಗ್ರನೊಂದಿಗೆ ಎಕ್ಸ್ ಖಾತೆ ಮೂಲಕ ನಿರಂತರ ಸಂಪರ್ಕದಲ್ಲಿದ್ದ ಎಂಬುದು ತಿಳಿದುಬಂದಿದೆ.

ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ರಸ್ತೆ ಅಪಘಾತ ಸಂಭವಿಸಿದೆ. ಎರಡು ಕಾರುಗಳ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು ವಿವಿ ಘಟಿಕೋತ್ಸವದಲ್ಲಿ ದೊಡ್ಡ ಎಡವಟ್ಟು: ರ್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕದ ಬದಲು ನಗದು ಚೆಕ್; ಧರಣಿ ಕುಳಿತ ವಿದ್ಯಾರ್ಥಿಗಳು

ತುಮಕೂರು ವಿವಿ ಘಟಿಕೋತ್ಸವದಲ್ಲಿ ದೊಡ್ಡ ಎಡವಟ್ಟು: ರ್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕದ ಬದಲು ನಗದು ಚೆಕ್; ಧರಣಿ ಕುಳಿತ ವಿದ್ಯಾರ್ಥಿಗಳು

ತುಮಕೂರು ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವದಲ್ಲಿ ಭಾರಿ ಎಡವಟ್ಟು ಸಂಭವಿಸಿದೆ. ಚಿನ್ನದ ಪದಕ ನಿರೀಕ್ಷಿಸಿದ್ದ ರ್ಯಾಂಕ್ ವಿದ್ಯಾರ್ಥಿಗಳಿಗೆ ಕೇವಲ ಪ್ರಮಾಣಪತ್ರ ಮತ್ತು ನಗದು ಚೆಕ್ ನೀಡಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪದವಿ ಪ್ರಮಾಣಪತ್ರ ವಿತರಣೆಯಲ್ಲೂ ಗೊಂದಲವಿದ್ದು, ಕುಲಪತಿಗಳು ಶೀಘ್ರದಲ್ಲೇ ಪದಕ ನೀಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ಪರಮೇಶ್ವರ್, ರಾಜಣ್ಣಗೆ ಗೌರವ ಡಾಕ್ಟರೇಟ್ ನೀಡದಿರಲು ತುಮಕೂರು ವಿವಿ ನಿರ್ಧಾರ

ಪರಮೇಶ್ವರ್, ರಾಜಣ್ಣಗೆ ಗೌರವ ಡಾಕ್ಟರೇಟ್ ನೀಡದಿರಲು ತುಮಕೂರು ವಿವಿ ನಿರ್ಧಾರ

ತುಮಕೂರು ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವ ಜೂನ್ 3ರಂದು ನಡೆಯಲಿದೆ. ಈ ಬಾರಿ ಸಕ್ರಿಯ ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್ ನೀಡದಿರಲು ನಿರ್ಧರಿಸಲಾಗಿದೆ ಎಂದು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಮಾಹಿತಿ ನೀಡಿದ್ದಾರೆ. ರಾಜಕಾರಣಿಗಳನ್ನು ಹೊರತು ಪಡಿಸಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ನಿರ್ಧರಿಸಲಾಗಿದೆ.

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ

ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, ಡಿಕೆ ಶಿವಕುಮಾರ್ ಮುಂದಿನ ಸಿಎಂ ಎನ್ನುವುದು ಖಚಿತವಾಗಿದೆ. ಇದಕ್ಕೂ ದೆಹಲಿಯಲ್ಲಿ ಆದ ಬೆಳವಣಿಗೆಗಳ ಬಗ್ಗೆ ನೊಣವಿನಕೆರೆ ಮಠದ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಪ್ರತಿಕ್ರಿಯಿಸಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಅದರಂತೆ ಇದೀಗ ಸ್ವಾಮೀಜಿಯ ಭವಿಷ್ಯ ನಿಜವಾಗಿದೆ. ಇನ್ನು ಇತ್ತ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಸ್ವಾಮೀಜಿ, ಡಿಕೆ ಶಿವಕುಮಾರ್ ಬಗ್ಗೆ ಕೆಲ ಮಾತುಗಳನ್ನಾಡಿದ್ದು, ಶ್ರೀಮಠದ ಆಶೀರ್ವಾದ ಡಿಕೆ ಶಿವಕುಮಾರ ಅವರಿಗೆ ಇರುತ್ತದೆ. ರಾಜಾ‌ ಪ್ರತ್ಯಾಕ್ಷ ದೇವತಾ. ರಾಜ್ಯವನ್ನು ಆಳುವಂತಾ ದೊರೆ ನಾಯಕ. ರೈತರ ಪರ ,ಬಡವರ ಪರ ಇರುವ ನಾಯಕನಾಗಿ ಹೊರಹೊಮ್ಮುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.