ಶಿಸ್ತಿನ ಸಿಪಾಯಿಗಳಿಗೆ ಒಲಿದ ಅದೃಷ್ಟ: ಲಿಂಗರಾಜ್ ಪಾಟೀಲ್, ರಘು ಕೌಟಿಲ್ಯಗೆ ಪರಿಷತ್ ಟಿಕೆಟ್ ನೀಡಲು ಕಾರಣಗಳೇನು?
ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಹುಬ್ಬಳ್ಳಿಯ ಹಿರಿಯ ಪಂಚಮಸಾಲಿ ಮುಖಂಡ ಲಿಂಗರಾಜ್ ಪಾಟೀಲ್ ಹಾಗೂ ಮೈಸೂರಿನ ಒಬಿಸಿ ನಾಯಕ ರಘು ಕೌಟಿಲ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್‌ನ ಒಬಿಸಿ ತಂತ್ರಕ್ಕೆ ಪ್ರತಿತಂತ್ರ ಹೂಡಲು ಹಾಗೂ ಪ್ರಮುಖ ಸಮುದಾಯಗಳನ್ನು ಮುನ್ನೆಲೆಗೆ ತರಲು ಬಿಜೆಪಿ ನಡೆಸಿರುವ ಈ ಮಹತ್ವದ ಲೆಕ್ಕಾಚಾರದ ಸಂಪೂರ್ಣ ವಿವರ ಇಲ್ಲಿದೆ.
- Kiran Haniyadka
- Updated on: Jun 8, 2026
- 2:24 pm
ಎಐಸಿಸಿ ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ
ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ (50) ಅವರು ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಮಾಜಿ ಸಿಎಂ ದಿ. ಡಿ. ದೇವರಾಜ ಅರಸು ಅವರ ಮೊಮ್ಮಗನಾಗಿದ್ದ ಸೂರಜ್ ಹೆಗ್ಡೆ ಅವರ ಅಕಾಲಿಕ ನಿಧನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
- Kiran Haniyadka
- Updated on: Jun 8, 2026
- 7:36 am
ರಾಜ್ಯಸಭೆ ಚುನಾವಣೆ ನಾಮಪತ್ರಕ್ಕೆ ನಾಳೆ ಕೊನೆ ದಿನ: ಅಭ್ಯರ್ಥಿಯನ್ನ ಅಂತಿಮಗೊಳಿಸದ ಬಿಜೆಪಿ, ಜೆಡಿಎಸ್; ಇಂದು ಘೋಷಣೆ ಸಾಧ್ಯತೆ
ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಹೆಚ್.ಡಿ. ದೇವೇಗೌಡ ಸ್ಪರ್ಧೆ ಮೇಲೆ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿ ನಿಲ್ಲಿಸಬೇಕೇ ಎಂಬುದು ನಿರ್ಧಾರವಾಗಲಿದೆ. ಸದ್ಯ ಸದಾನಂದ ಗೌಡ, ಸುಮಲತಾ, ಶ್ರುತಿ, ಮಂಜುಳಾ ಸೇರಿದಂತೆ ಹಲವು ನಾಯಕರ ಹೆಸರು ರೇಸ್‌ನಲ್ಲಿವೆ. ಇಂದು ಮಧ್ಯಾಹ್ನದ ಬಳಿಕ ಬಿಜೆಪಿಯಿಂದ ಅಭ್ಯರ್ಥಿ ಘೋಷಣೆ ಸಾಧ್ಯತೆ ಇದೆ.
- Kiran Haniyadka
- Updated on: Jun 7, 2026
- 11:21 am
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಸಿದ್ದರಾಮಯ್ಯ ಅವಧಿಯ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಅವರನ್ನು ತಮ್ಮ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿದ್ದಾರೆ. 55-60 ಸಾವಿರ ಕೋಟಿ ರೂಪಾಯಿ ಗ್ಯಾರಂಟಿ ಯೋಜನೆಗಳ ಜಾರಿಯ ಸವಾಲು ಎದುರಿಸುತ್ತಿರುವ ಸಿ.ಎಂ.ಗೆ ಅತೀಕ್ ನೇಮಕ ಮಹತ್ವ ಪಡೆದಿದೆ. ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ಹಾಗೂ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
- Kiran Haniyadka
- Updated on: Jun 3, 2026
- 8:13 pm
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಅವರ ಸಂಪುಟದಲ್ಲಿ ಸಚಿವರಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ಸಚಿವರಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದು, ಪದಗ್ರಹಣದ ಬೆನ್ನಲ್ಲೇ ಯತೀಂದ್ರ ಅವರು ವೇದಿಕೆಯಲ್ಲೇ ತಮ್ಮ ತಂದೆಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಪುತ್ರನ ಭುಜ ಮುಟ್ಟಿ ಸಿದ್ದರಾಮಯ್ಯ ಹಾರೈಸಿದ್ದಾರೆ.
- Kiran Haniyadka
- Updated on: Jun 3, 2026
- 6:19 pm
ನೂತನ ಸರ್ಕಾರದಲ್ಲಿ ಸಚಿವ ಸ್ಥಾನ: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ
ನೂತನ ಡಿ.ಕೆ. ಶಿವಕುಮಾರ್ ಸರ್ಕಾರದ ಭಾಗವಾಗುತ್ತಿರುವ ಹಿನ್ನೆಲೆ, ವಿಧಾನಸಭೆ ಸ್ಪೀಕರ್ ಹುದ್ದೆಗೆ ಯು.ಟಿ. ಖಾದರ್ ರಾಜೀನಾಮೆ ನೀಡಿದ್ದಾರೆ. ಡೆಪ್ಯುಟಿ ಸ್ಪೀಕರ್‌ಗೆ ರಾಜೀನಾಮೆ ಪತ್ರ ಸಲ್ಲಿಸಿದ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇನ್ನು ಸಚಿವ ಸ್ಥಾನದ ವಿಚಾರವಾಗಿ ಪ್ರತಿಕ್ರಿಯಿಸಿರುವ ಯು.ಟಿ. ಖಾದರ್, ನಾನು ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ. ಆದರೆ ಆರೋಗ್ಯ ಖಾತೆ ಅಥವಾ ವಸತಿ ಖಾತೆ ಸಿಕ್ಕರೆ ಒಳಿತೆಂಬ ಬಯಕೆ ಇದೆ ಎಂದಿದ್ದಾರೆ.
- Kiran Haniyadka
- Updated on: Jun 3, 2026
- 12:18 pm
ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್: ರಾಜ್ಯಪಾಲರ ಮೊರೆ ಹೋದ ಬಿಜೆಪಿ ನಿಯೋಗ
ಕಲಬುರಗಿ ಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸಂಬಂಧ ಮುಸ್ಲಿಮರ ವಿರುದ್ಧ ದಾಖಲಾದ 13 ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಕೈಗೊಂಡ ತೀರ್ಮಾನವನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿದೆ. ಅಲ್ಲದೇ ಕಾಂಗ್ರೆಸ್ ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯ ಬಿಜೆಪಿ ಆಯೋಗವು ರಾಜ್ಯಪಾಲರ ಮೊರೆ ಹೋಗಿದ್ದು, ಕೇಸ್ ವಾಪಸ್ ಪಡೆದ ನಿರ್ಣಯ ರದ್ದುಪಡಿಸಲು ಸೂಚಿಸಬೇಕೆಂದು ಮನವಿ ಮಾಡಿದೆ.
- Kiran Haniyadka
- Updated on: Jun 2, 2026
- 4:45 pm
ಡಿಕೆಶಿ ಪ್ರಮಾಣವಚನಕ್ಕೆ ಅಧಿಕೃತ ಮುಹೂರ್ತ ಫಿಕ್ಸ್: ಆಡಂಬರವಿಲ್ಲದೇ ಸರಳ ಸಮಾರಂಭಕ್ಕೆ ತೀರ್ಮಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಖಚಿತವಾಗಿದ್ದು, ಇಂದಿನ ಶಾಸಕಾಂಗ ಸಭೆ ಬಳಿಕ ಅಧಿಕೃತ ಘೋಷಣೆಯಾಗಲಿದೆ. ಇನ್ನೊಂದೆಡೆ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನಕ್ಕೆ ಅಧಿಕೃತ ಮುಹೂರ್ತ ಫಿಕ್ಸ್ ಆಗಿದ್ದು, ಯಾವುದೇ ಆಡಂಬರವಿಲ್ಲದೇ ಸರಳ ಸಮಾರಂಭಕ್ಕೆ ತೀರ್ಮಾನಿಸಲಾಗಿದೆ. ಹಾಗಾದ್ರೆ, ಯಾವಾಗ ಪ್ರಮಾಣವಚನ? ಮೊದಲ ಬಾರಿಗೆ ಡಿಕೆಶಿ ಸಿಎಂ ಆಗುತ್ತಿದ್ದರೂ ಸರಳವಾಗಿ ಅಧಿಕಾರ ಸ್ವೀಕಾರ ಮಾಡಲು ತೀರ್ಮಾನಿಸಿದ್ಯಾಕೆ ಎನ್ನುವ ವಿವರ ಇಲ್ಲಿದೆ.
- Kiran Haniyadka
- Updated on: May 30, 2026
- 3:14 pm
ವಿಪಕ್ಷ ಬಿಜೆಪಿಯ ಸಮೀಕರಣ ಬದಲಿಸಲಿದ್ಯಾ ಸಿದ್ದರಾಮಯ್ಯ ರಾಜೀನಾಮೆ?: ಹೀಗೊಂದು ಲೆಕ್ಕಾಚಾರ
ಸಿದ್ದರಾಮಯ್ಯ ರಾಜೀನಾಮೆ ಹಾಗೂ ಡಿ.ಕೆ. ಶಿವಕುಮಾರ್ ರಾಜ್ಯದ ನೂತನ ಸಿಎಂ ಆಗಲಿರುವುದು ಬಹುತೇಕ ನಿಶ್ಚಿತವಾಗಿರುವ ಬೆನ್ನಲ್ಲೇ ವಿಪಕ್ಷ ಬಿಜೆಪಿ ಕೂಡ ತನ್ನ ರಾಜಕೀಯ ಲೆಕ್ಕಾಚಾರಗನ್ನು ಬದಲಾಯಿಸಲು ಮುಂದಾಗಿದೆ. ಜಾತಿ ಸಮೀಕರಣ ಸರಿದೂಗಿಸಲು ಕಮಲ ಪಾಳಯ ಹೊಸ ತಂತ್ರ ಹೂಡಲಿರುವ ಮುನ್ಸೂಚನೆ ಸಿಕ್ಕಿದ್ದು, ಕಮಲ ಪಡೆಯ ಆ ತೀರ್ಮಾನ ಏನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
- Kiran Haniyadka
- Updated on: May 29, 2026
- 3:20 pm
ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್
ಕರ್ನಾಟಕದ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಿಎಂ ಸ್ಥಾನದ ಬದಲಾವಣೆಯ ಪ್ರಕ್ರಿಯೆ ಅಂತಿಮ ಘಟ್ಟ ತಲುಪಿದೆ. ನಿನ್ನೆ (ಮೇ 28) ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇದೀಗ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ.
- Kiran Haniyadka
- Updated on: May 29, 2026
- 8:15 am
ರಾಜೀನಾಮೆಗೂ ಮುನ್ನವೇ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಸಿದ್ದರಾಮ್ಯನವರು ಮಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ. ಆದ್ರೆ, ರಾಜೀನಾಮೆಗೂ ಮುನ್ನವೇ ಸಿದ್ದರಾಮಯ್ಯನವರ ಆಪ್ತ ಅಧಿಕಾರಿಗಳ ವರ್ಗಾವಣೆ ನಡೆದಿದೆ. ಯಾವೆಲ್ಲಾ ಅಧಿಕಾರಿಗೆ ಯಾವ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.
- Kiran Haniyadka
- Updated on: May 28, 2026
- 2:37 pm
ರಾಜ್ಯಪಾಲರ ಅನುಪಸ್ಥಿತಿಯಲ್ಲೂ ಸಿದ್ದರಾಮಯ್ಯ ರಾಜೀನಾಮೆ ನೀಡಬಹುದೇ? ಸಿಎಂ ಮುಂದೆ ಇದೆ ಈ ಒಂದು ಆಯ್ಕೆ!
ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ವಿಚಾರ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಸಿಎಂ ಸಿದ್ದರಾಮಯ್ಯ ಇಂದು ಮಧ್ಯಾಹ್ನ ರಾಜ್ಯಪಾಲರ ಭೇಟಿಗೆ ಈಗಾಗಲೇ ಸಮಯ ಕೋರಿದ್ದಾರೆ. ಆದರೆ, ರಾಜ್ಯಪಾಲರು ದಿಢೀರಾಗಿ ಇಂದೋರ್ಗೆ ತೆರಳಿದ್ದಾರೆ. ರಾಜ್ಯಪಾಲರ ಅನುಪಸ್ಥಿತಿಯ ನಡುವೆಯೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಲು ಅವಕಾಶ ಇದೆಯೇ? ಇದ್ದರೆ ಹೇಗೆ? ಇಲ್ಲಿದೆ ಮಾಹಿತಿ.
- Kiran Haniyadka
- Updated on: May 28, 2026
- 9:27 am