ಕೆಪಿಎಸ್ಸಿ ನೇಮಕಾತಿ ಹಗರಣ: ಸರ್ಕಾರಿ ಹುದ್ದೆಗಳ ಮಾರಾಟ ರಹಸ್ಯ ಹೊರ ಬೀಳಲು ಅದೊಂದೇ ಕಾರಣ ಸಾಕಾಯ್ತು!
ಕೆಪಿಎಸ್‌ಸಿ ನೇಮಕಾತಿ ಹಗರಣ ಬಯಲಾಗಿದ್ದರ ಹಿಂದೆ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಆಂತರಿಕ ಪೈಪೋಟಿ ಮುಖ್ಯ ಕಾರಣ ಎಂಬುದು ಈಗ ತಿಳಿದುಬಂದಿದೆ. ಶಿವಶಂಕರಪ್ಪ ಸಾಹುಕಾರ್ ಅಧಿಕಾರಾವಧಿ ಮುಕ್ತಾಯವಾಗುವುದು ಹತ್ತಿರವಾಗುತ್ತಿದ್ದಂತೆಯೇ ಮುಂದಿನ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಜೋರಾಗಿತ್ತು. ಇದೇ ಹೊತ್ತಲ್ಲಿ ಸಾಹುಕಾರ್ ಮಗಳ ಪ್ರಕರಣ ಮುನ್ನೆಲೆಗೆ ಬಂದಿರುವುದು ಕೆಪಿಎಸ್‌ಸಿಯ ಒಂದೊಂದೇ ಅಕ್ರಮಗಳನ್ನು ಹೊರಗೆಡವಲು ಕಾರಣವಾಯಿತು.
- Kiran HV
- Updated on: Oct 9, 2026
- 10:40 am
IAS ಬಾಯ್ಟಿಟ್ಟ ಸತ್ಯದಿಂದ KPSC ಮಾಜಿ ಅಧ್ಯಕ್ಷನಿಗೆ ಇಡಿ ಶಾಕ್, ಹಲವು ರಾಜಕಾರಣಿಗೂ ಢವಢವ
ಕೆಪಿಎಸ್ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದಲ್ಲಿ ಮೇಜರ್ ಡೆವಲೆಪ್ಮೆಂಟ್ ಆಗಿದೆ. KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ರನ್ನ ಇಡಿ ಖೆಡ್ಡಾಗೆ ಕೆಡವಿದೆ. ಕೆಪಿಎಸ್ಸಿ ಹಗರಣದ ಕುರಿತು ಟಿವಿ9 ಬಯಲು ಮಾಡಿದ ಬಳಿಕ ಇಡಿ ಅಧಿಕಾರಿಗಳು ಅತಿದೊಡ್ಡ ಬೇಟೆಯಾಡಿದ್ದಾರೆ. ಶಿವಶಂಕರಪ್ಪ ಬೇಟೆಯಿಂದಾಗಿ ಪ್ರಭಾವಿ ರಾಜಕೀಯ ನಾಯಕರಿಗೂ ಟೆನ್ಷನ್ ಶುರುವಾಗಿದೆ.
- Kiran HV
- Updated on: Oct 6, 2026
- 7:30 pm
ಕೆಪಿಎಸ್ಸಿ ನೇಮಕಾತಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ, ಸದಸ್ಯೆ ಗೀತಾ ಇಡಿ ವಶಕ್ಕೆ
ಕೆಪಿಎಸ್ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪನನ್ನು ಇಡಿ ವಶಕ್ಕೆ ಪಡೆದುಕೊಂಡಿದೆ. ಇಂದು (ಅಕ್ಟೋಬರ್ 06) ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ನಿವಾಸದ ಮೇಲೆ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಶಿವಶಂಕರಪ್ಪ ಸಹ ಮನೆಯಲ್ಲೇ ಇದ್ದಿದ್ದು, ವಿಚಾರಣೆ ನಡೆಸಿ ಬಳಿಕ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
- Kiran HV
- Updated on: Oct 6, 2026
- 5:36 pm
ಕೆಪಿಎಸ್ಸಿ ಹಗರಣ: ಎರಡು ಟೀಂಗಳಿಂದ ನಡೆಯುತ್ತಿತ್ತು ಡೀಲ್!; ಜ್ಞಾನೇಂದ್ರ ವಿಚಾರಣೆ ವೇಳೆ ಹಲವು ಪ್ರಮುಖ ವಿಚಾರ ಬಯಲು
ಕೆಪಿಎಸ್‌ಸಿ ನೇಮಕಾತಿ ಅಕ್ರಮದಲ್ಲಿ ಎರಡು ಪ್ರತ್ಯೇಕ ತಂಡಗಳು ಮಧ್ಯವರ್ತಿಗಳ ಮೂಲಕ ಡೀಲ್ ನಡೆಸುತ್ತಿದ್ದವು. ಕಳೆದ 3-4 ವರ್ಷಗಳಲ್ಲಿ 13ಕ್ಕೂ ಹೆಚ್ಚು ನೇಮಕಾತಿಗಳಲ್ಲಿ ಅಕ್ರಮ ನಡೆದಿದೆ ಎಂದು ತನಿಖೆಯಲ್ಲಿ ಜ್ಞಾನೇಂದ್ರ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಹಗರಣದಲ್ಲಿ ಕೆಪಿಎಸ್ಸಿ ಮಾಜಿ ಅಧ್ಯಕ್ಷರ ಹಾಗೂ ಸದಸ್ಯರ ಟೀಮ್ ಬಗ್ಗೆ ಈಗ ಸಾಕ್ಷಿಗಳು ಸಿಕ್ಕಿದ್ದು, ಅವರ ವಿರುದ್ಧ ಕ್ರಮಕ್ಕೆ ಸರ್ಕಾರದ ಅನುಮತಿಗೆ CID ಕಾಯುತ್ತಿದೆಯಂತೆ. ಆದರೆ ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಗಳ ಹೆಸರೂ ಉಲ್ಲೇಖವಾಗುವ ಸಾಧ್ಯತೆ ಇರುವ ಕಾರಣ ಒತ್ತಡಕ್ಕೆ ಸಿಲುಕಿರುವ ಸರ್ಕಾರ ಅನುಮತಿಗೆ ಮೀನಾಮೇಷ ಎಣಿಸುತ್ತಿದೆ ಎನ್ನಲಾಗಿದೆ.
- Kiran HV
- Updated on: Oct 5, 2026
- 9:30 am
ಕೆಪಿಎಸ್ಸಿ ಆರ್ಟಿಒ ಇನ್ಸ್‌ಪೆಕ್ಟರ್ ನೇಮಕಾತಿಯಲ್ಲೂ ಅಕ್ರಮದ ವಾಸನೆ: ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ, ಹಣದ ಲೆಕ್ಕ!
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯಲ್ಲಿ ಆರ್ಟಿಒ ಇನ್ಸ್‌ಪೆಕ್ಟರ್ ನೇಮಕಾತಿಗೂ ಸಂಬಂಧಿಸಿದ ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಬಸವರಾಜ್ ಕನ್ನಾಳೆ ಡೈರಿಯಲ್ಲಿ ಎಂಟು ಅಭ್ಯರ್ಥಿಗಳ ಹೆಸರು ಹಾಗೂ ಬಾಕಿ ಹಣದ ಲೆಕ್ಕ ಪತ್ತೆಯಾಗಿದೆ. ಆರ್ಟಿಒ ಇನ್ಸ್‌ಪೆಕ್ಟರ್ ಹುದ್ದೆಗಾಗಿ ಹಣ ನೀಡಿರುವ ಆರೋಪಗಳ ಕುರಿತು ಸದ್ಯ ಸಿಐಡಿ ತನಿಖೆ ಮುಂದುವರಿಸಿದೆ.
- Kiran HV
- Updated on: Sep 30, 2026
- 10:49 am
ಕೆಪಿಎಸ್ಸಿ ಪ್ರಕರಣ: ತನಿಖೆಗೆ ಎಸ್‌ಐಟಿ ರಚನೆ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಸರ್ಕಾರದಿಂದ ಅರ್ಜಿ; ಕಾರಣಗಳು ಇಲ್ಲಿವೆ
ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ಹೈಕೋರ್ಟ್ ಆದೇಶಿಸಿದ್ದ ಎಸ್‌ಐಟಿ ರಚನೆಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸಿಐಡಿ ತನಿಖೆ ಸರಿಯಾಗಿ ನಡೆಯುತ್ತಿದ್ದು ಎಸ್‌ಐಟಿ ಅಗತ್ಯವಿಲ್ಲ ಎಂದು ಸರ್ಕಾರ ಹೇಳಿದ್ದರೆ, ಭ್ರಷ್ಟಾಚಾರ ಮುಚ್ಚಿಹಾಕಲು ಸರ್ಕಾರ ಎಸ್‌ಐಟಿ ವಿರೋಧಿಸುತ್ತಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
- Kiran HV
- Updated on: Sep 26, 2026
- 2:24 pm
ಅಟ್ಟಿಕಾ ಗೋಲ್ಡ್ ಕಂಪನಿ ಮೇಲೆ ದಾಳಿ: ಸ್ಫೋಟಕ ಮಾಹಿತಿ ಬಯಲಿಗೆಳೆದ ಇಡಿ
ಅಟ್ಟಿಕಾ ಗೋಲ್ಡ್ ಕಂಪನಿ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ದಾಳಿ ಮಾಡಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿದಂತೆ ಅಟ್ಟಿಕಾ ಗೋಲ್ಡ್ ಸಂಸ್ಥೆಗೆ ಸೇರಿದ ಒಟ್ಟು 16 ಕಡೆ ಇಡಿ ದಾಳಿ ಮಾಡಿದ್ದು ಮಹತ್ವ ದಾಖಲೆಗಳ್ನು ವಶಕ್ಕೆ ಪಡೆದುಕೊಂಡಿದೆ. ಶೋಧ ಕಾರ್ಯಾಚರಣೆಯಲ್ಲಿ ಏನೆಲ್ಲಾ ಪತ್ತೆಯಾಗಿದೆ. ಏನೇನು ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನುವ ಬಗ್ಗೆ ಸ್ವತಃ ಇಡಿ ಮಾಧ್ಯಮ ಪ್ರಕಟಣೆ ಮೂಲಕ ಬಹಿರಂಗ ಪಡಿಸಿದ್ದು, ಅದು ಈ ಕೆಳಗಿನಂತಿದೆ.
- Kiran HV
- Updated on: Sep 25, 2026
- 7:52 pm
ಸತೀಶ್ ಜಾರಕಿಹೊಳಿಗೆ ಮತ್ತಷ್ಟು ಬಿಗಿಯಾಗಲಿದೆ ಇಡಿ ಕುಣಿಕೆ: ದೆಹಲಿ ಅಧಿಕಾರಿಗಳಿಂದ ನಡೆಯಲಿದ್ಯಂತೆ ತನಿಖೆ
ಸಚಿವ ಸತೀಶ್ ಜಾರಕಿಹೊಳಿ ವಿರುದ್ಧದ ಇಡಿ ತನಿಖೆಯನ್ನು ದೆಹಲಿ ಘಟಕಕ್ಕೆ ವರ್ಗಾಯಿಸಲು ಸಿದ್ಧತೆ ನಡೆದಿದ್ದು, ಲೋಕೋಪಯೋಗಿ ಕಾಮಗಾರಿಗಳ ಅಕ್ರಮ ಹಾಗೂ ವಿದೇಶಿ ಬಂಡವಾಳ ಹೂಡಿಕೆ ಆರೋಪದಡಿ ತನಿಖೆ ಮತ್ತಷ್ಟು ಬಿಗಿಯಾಗುವ ಲಕ್ಷಣಗಳು ಗೋಚರಿಸಿವೆ. ಮತ್ತೊಂದೆಡೆ ದಾಳಿ ವೇಳೆ ಇಡಿ ಅಧಿಕಾರಿಗಳಿಗೆ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಬಲವಾದ ಸಾಕ್ಷ್ಯಗಳು ಸಿಕ್ಕಿವೆ ಎನ್ನಲಾಗಿರುವ ಕಾರಣ ಪ್ರಕರಣ ಮಹತ್ವ ಪಡೆದುಕೊಂಡಿದೆ.
- Kiran HV
- Updated on: Sep 25, 2026
- 9:48 am
ಕೆಪಿಎಸ್ಸಿ ನೇಮಕಾತಿ ಅಕ್ರಮ: ಎಸ್‌ಐಟಿ ರಚನೆಯ ಹೈಕೋರ್ಟ್ ಆದೇಶಕ್ಕೆ ಸರ್ಕಾರ ಠಕ್ಕರ್, ಸುಪ್ರೀಂನಲ್ಲಿ ಪ್ರಶ್ನಿಸಲು ತೀರ್ಮಾನ
ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆಗೆ ಹೈಕೋರ್ಟ್ ಆದೇಶಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಯನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ನಿರ್ಧರಿಸಿದೆ. ಅಲೋಕ್ ಕುಮಾರ್ ನೇತೃತ್ವದಲ್ಲಿ ಎಸ್‌ಐಟಿ ರಚನೆ, ಹಾಗೂ ಸಿಐಡಿ ತನಿಖೆಯಲ್ಲಿನ ಪ್ರಗತಿಯನ್ನು ರಾಜ್ಯ ಸರ್ಕಾರವು ಆಕ್ಷೇಪಿಸಿದೆ. ಈ ಬಗ್ಗೆ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ನಿರ್ಧಾರಕ್ಕೆ ಬಂದಿದೆ.
- Kiran HV
- Updated on: Sep 23, 2026
- 10:57 am
ಕೆಪಿಎಸ್ಸಿ ಅಕ್ರಮ ನೇಮಕಾತಿ ಕೇಸ್ ತನಿಖೆ ಎಸ್‌ಐಟಿ ಹೆಗಲಿಗೆ! ಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ತಂಡ ರಚನೆ
ಕೆಪಿಎಸ್ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ಹೈಕೋರ್ಟ್ ಐವರು ಸದಸ್ಯರ ಎಸ್‌ಐಟಿ ರಚಿಸಿದೆ. ಡಿಜಿಪಿ ಅಲೋಕ್ ಕುಮಾರ್ ನೇತೃತ್ವದ ತಂಡಕ್ಕೆ ನೂರು ದಿನದಲ್ಲಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಸಿಐಡಿ ತನಿಖೆಯಲ್ಲಿ ಅಭ್ಯರ್ಥಿಗಳಿಂದ ಕೋಟಿಗಟ್ಟಲೆ ಹಣ ವರ್ಗಾವಣೆ, ಓಎಂಆರ್ ತಿದ್ದುಪಡಿ ಹಾಗೂ ಪ್ರಶ್ನೆಪತ್ರಿಕೆ ಲೀಕ್ ಆಗಿರುವ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿದೆ. ನಕಲಿ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಪರೀಕ್ಷೆ ಬರೆಸಲಾಗಿದೆ.
- Kiran HV
- Updated on: Sep 22, 2026
- 12:01 pm
ಕೆಪಿಎಸ್ಸಿ ಹಗರಣ: ಕೊನೆಗೂ ಸಿಐಡಿ ಮುಂದೆ ವಿಚಾರಣೆಗೆ ಹಾಜರಾದ ನಾಪತ್ತೆಯಾಗಿದ್ದ ಶಾಂತಾ ಹೊಸಮನಿ
ಕೆಪಿಎಸ್‍ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ಪ್ರಮುಖ ಆರೋಪಿ, ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ನಿರೀಕ್ಷಣಾ ಜಾಮೀನು ವಜಾಗೊಂಡ ಬೆನ್ನಲ್ಲೇ ಕೊನೆಗೂ ಬೆಂಗಳೂರಿನ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ನೇಮಕಾತಿ ಸಂಬಂಧ ಮಮಿತಾ ಎಂಬ ಅಭ್ಯರ್ಥಿಯ ಜೊತೆ ಮೂರು ಬಾರಿ ಫೋನ್ ಮೂಲಕ KPSC ಸದಸ್ಯೆ ಶಾಂತಾ ಹೊಸಮನಿ ಮಾತುಕತೆ ನಡೆಸಿದ್ದರು. ಸಂದರ್ಶನಕ್ಕೂ ಮೊದಲೇ ಅಭ್ಯರ್ಥಿಯ ಜೊತೆ ಸಂಭಾಷಣೆ ನಡೆಸುವ ಆರೋಪ ಅವರ ಮೇಲಿದೆ.
- Kiran HV
- Updated on: Sep 17, 2026
- 11:49 am
ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಸಂಕಷ್ಟ ಹೆಚ್ಚಾಗುವ ಸಾಧ್ಯತೆ: ಪಿಎಂಎಲ್ಎ ಅಡಿ ಕೇಸ್ ದಾಖಲಿಸಲು ಸಿದ್ಧತೆ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಇಡಿ ತನಿಖೆ ಮತ್ತಷ್ಟು ಬಿಗಿಯಾಗುವ ಸಾಧ್ಯತೆ ಇದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿ ಮುಂದಿನ ಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ ಎಂಬುದು ಮೂಲಗಳಿಂದ ತಿಳಿದುಬಂದಿದ್ದು, ಹವಾಲಾ ಹಣದ ವಹಿವಾಟಿನ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ ಎಂದು ವರದಿಯಾಗಿದೆ.
- Kiran HV
- Updated on: Sep 16, 2026
- 9:51 am