AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಬೆಂಗಳೂರು ವರದಿಗಾರ - TV9 Kannada

lakshminarasimhaswamy.lakshmipathi@tv9.com

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More
ಮತ್ತೆ ಮುನ್ನೆಲೆಗೆ ಬಂದ ಬೆಂಗಳೂರಿನ ಪಾರ್ಕ್ ಟೈಮಿಂಗ್ಸ್ ಜಟಾಪಟಿ, ಮಧ್ಯಾಹ್ನ ಓಪನ್ ಮಾಡುವಂತೆ ಒತ್ತಾಯ

ಮತ್ತೆ ಮುನ್ನೆಲೆಗೆ ಬಂದ ಬೆಂಗಳೂರಿನ ಪಾರ್ಕ್ ಟೈಮಿಂಗ್ಸ್ ಜಟಾಪಟಿ, ಮಧ್ಯಾಹ್ನ ಓಪನ್ ಮಾಡುವಂತೆ ಒತ್ತಾಯ

ಬೆಂಗಳೂರಿನಲ್ಲಿ ಸಾರ್ವಜನಿಕ ಉದ್ಯಾನವನಗಳ ಪ್ರವೇಶ ಸಮಯವನ್ನು ಕಡಿತಗೊಳಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗ್ಗೆ ಸಂಜೆ ಮಾತ್ರ ಪಾರ್ಕ್‌ಗಳನ್ನು ತೆರೆಯಲು ಸಮಯ ನಿಗದಿ ಮಾಡಿಲಾಗಿತ್ತು. ಇದೀಗ ಮತ್ತೆ ಈ ಪಾರ್ಕ್ ಟೈಮಿಂಗ್ ಜಟಾಪಟಿ ಮತ್ತೆ ಮುನ್ನೆಲೆಗೆ ಬಂದಿದ್ದು, ಮಧ್ಯಾಹ್ನ ಸಹ ಪಾರ್ಕ್ ತೆರೆಯುವಂತೆ ನಾಗರಿಕರು ಆಗ್ರಹಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಶೂ, ಸಾಕ್ಸ್ ವಿತರಣೆ ಅಧ್ವಾನ: ಕಳಪೆ ಗುಣಮಟ್ಟದ ಪೂರೈಕೆ; ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಬಯಲು​​​​

ಸರ್ಕಾರಿ ಶಾಲೆಗಳಲ್ಲಿ ಶೂ, ಸಾಕ್ಸ್ ವಿತರಣೆ ಅಧ್ವಾನ: ಕಳಪೆ ಗುಣಮಟ್ಟದ ಪೂರೈಕೆ; ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಬಯಲು​​​​

ರಾಜ್ಯದಲ್ಲಿ ಶಾಲೆಗಳು ಪ್ರಾರಂಭವಾಗಿ 4 ತಿಂಗಳು ಕಳೆದು, ಇದೀಗ ದಸರಾ ರಜೆ ಕೂಡ ನೀಡಲಾಗಿದೆ. ಹೀಗಿರುವಾಗ ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಿಗೆ ಇನ್ನೂ ಶೂ ವಿತರಣೆ ಆಗಿಲ್ಲ. ಕೆಲವೆಡೆ ವಿತರಣೆ ಆಗಿರುವ ಶೂ, ಸಾಕ್ಸ್​​ಗಳೆಲ್ಲ ಕೆಟ್ಟ ಕಳಪೆಯದ್ದಾಗಿದೆ. ಜಿಲ್ಲೆಗಳಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿ ನಡೆಸಿದ ರಿಯಾಲಿಟಿ ಚೆಕ್​ನಲ್ಲಿ ಶೂ ಭಾಗ್ಯ ಅಸಲಿಯತ್ತು ಅನಾವರಣವಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಮಳೆ ಅಬ್ಬರ: ಹಲವೆಡೆ ಅವಾಂತರ, ಸೆ. 24ರ ವರೆಗೆ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಮಳೆ ಅಬ್ಬರ: ಹಲವೆಡೆ ಅವಾಂತರ, ಸೆ. 24ರ ವರೆಗೆ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಸೋಮವಾರ ಸಂಜೆ ಸುರಿದ ಭಾರಿ ಮಳೆಗೆ ಹಲವು ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಮಂಜುನಾಥನಗರದಲ್ಲಿ ಬೃಹತ್ ಮರ ಬಿದ್ದು ಕೆಲವು ಅಂಗಡಿಗಳಿಗೆ ಹಾನಿಯಾಗಿದೆ. ದಾಬಸ್‌ಪೇಟೆ ಜಲಾವೃತಗೊಂಡಿದೆ. ಸೆಪ್ಟೆಂಬರ್ 24ರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಲಾಲ್​ಬಾಗ್ ಮಾದರಿಯಲ್ಲಿ ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ

ಲಾಲ್​ಬಾಗ್ ಮಾದರಿಯಲ್ಲಿ ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ

ಬೆಂಗಳೂರಿನ ಕಬ್ಬನ್ ಪಾರ್ಕ್‌ಗೆ ಪ್ರವೇಶ ಶುಲ್ಕ ವಿಧಿಸುವ ಬಗ್ಗೆ ತೋಟಗಾರಿಕೆ ಇಲಾಖೆ ಚಿಂತನೆ ನಡೆಸಿದೆ. ಲಾಲ್ ಬಾಗ್ ಮಾದರಿಯಲ್ಲಿ ಪಾರ್ಕ್ ನಿರ್ವಹಣೆ, ಹೆಚ್ಚುತ್ತಿರುವ ಜನಸಂಖ್ಯೆ, ಭದ್ರತೆ ಮತ್ತು ಸ್ವಚ್ಛತಾ ವೆಚ್ಚಗಳನ್ನು ನಿಭಾಯಿಸಲು ಈ ನಿರ್ಧಾರ ಪರಿಗಣಿಸಲಾಗಿದೆ. ಆದರೆ, ಈ ಪ್ರಸ್ತಾಪಕ್ಕೆ ಬಡ ಮತ್ತು ಮಧ್ಯಮ ವರ್ಗದ ಜನರ ಕಡೆಯಿಂದ ವಿರೋಧ ವ್ಯಕ್ತವಾಗುತ್ತಿದೆ.

ಬೆಂಗಳೂರಿನಲ್ಲಿ ಗಣೇಶ ವಿಸರ್ಜನೆ ಸಂಭ್ರಮ: ಒಂದು ವಾರದಲ್ಲಿ 4 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ನಿಮಜ್ಜನ

ಬೆಂಗಳೂರಿನಲ್ಲಿ ಗಣೇಶ ವಿಸರ್ಜನೆ ಸಂಭ್ರಮ: ಒಂದು ವಾರದಲ್ಲಿ 4 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ನಿಮಜ್ಜನ

ಬೆಂಗಳೂರಿನಲ್ಲಿ ಇಂದು ಗಣೇಶ ಮೂರ್ತಿ ವಿಸರ್ಜನೆ ನಡೆಯಿತು. ಗ್ರೇಟರ್ ಬೆಂಗಳೂರು ಪ್ರಾಧಿಕಾರ 40ಕ್ಕೂ ಹೆಚ್ಚು ಕೆರೆಗಳಲ್ಲಿ ವಿಶೇಷ ವ್ಯವಸ್ಥೆ ಮಾಡಿದೆ. ಕಳೆದ ಒಂದು ವಾರದಲ್ಲಿ 4 ಲಕ್ಷಕ್ಕೂ ಹೆಚ್ಚು ಮೂರ್ತಿಗಳನ್ನು ವಿಸರ್ಜಿಸಲಾಗಿದೆ. ಇಂದು ಕೂಡ ನಗರದಲ್ಲಿ ಜನರು ಗಣೇಶ ಮೂರ್ತಿ ವಿಸರ್ಜನೆ ಮಾಡಿದರು.

ಬೆಂಗಳೂರು: 4 ಕಿ.ಮೀ ಸಂಚಾರಕ್ಕೆ ಎರಡೂವರೆ ಗಂಟೆ! ವರ್ತೂರು ಟ್ರಾಫಿಕ್‌ನಿಂದ ವಿದ್ಯಾರ್ಥಿಗಳಿಗೆ ಸಂಕಷ್ಟ

ಬೆಂಗಳೂರು: 4 ಕಿ.ಮೀ ಸಂಚಾರಕ್ಕೆ ಎರಡೂವರೆ ಗಂಟೆ! ವರ್ತೂರು ಟ್ರಾಫಿಕ್‌ನಿಂದ ವಿದ್ಯಾರ್ಥಿಗಳಿಗೆ ಸಂಕಷ್ಟ

ಬೆಂಗಳೂರು ಪೂರ್ವ ಭಾಗದ ವರ್ತೂರು-ಗುಂಜೂರು ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ತೀವ್ರಗೊಂಡಿದ್ದು, ನಾಲ್ಕು ಕಿಲೋಮೀಟರ್ ಸಂಚಾರಕ್ಕೆ ಎರಡೂವರೆ ಗಂಟೆ ಬೇಕಾಗುತ್ತಿದೆ. ಶಾಲಾ ಬಸ್‌ಗಳು ಟ್ರಾಫಿಕ್‌ನಲ್ಲಿ ಸಿಲುಕಿದ್ದರಿಂದ ವಿದ್ಯಾರ್ಥಿಗಳ ಪರೀಕ್ಷಾ ಸಂಚಾರಕ್ಕೂ ತೊಂದರೆಯಾಗಿದೆ. ರಸ್ತೆ ಗುಂಡಿ, ಅಗಲೀಕರಣ ಕಾಮಗಾರಿ ಹಾಗೂ ಧೂಳಿನಿಂದ ಸವಾರರ ಸಂಕಷ್ಟ ಹೆಚ್ಚಿದೆ.

ಸಚಿವ ಕೃಷ್ಣಬೈರೇಗೌಡ ಕ್ಷಮೆಯಾಚನೆಗೆ ಪೌರಕಾರ್ಮಿಕರ ಆಗ್ರಹ: ಜಿಬಿಎ ಕಚೇರಿ ಎದುರು ಪ್ರತಿಭಟನೆ

ಸಚಿವ ಕೃಷ್ಣಬೈರೇಗೌಡ ಕ್ಷಮೆಯಾಚನೆಗೆ ಪೌರಕಾರ್ಮಿಕರ ಆಗ್ರಹ: ಜಿಬಿಎ ಕಚೇರಿ ಎದುರು ಪ್ರತಿಭಟನೆ

ಕೃಷ್ಣಬೈರೇಗೌಡ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗುತ್ತಿದ್ದಂತೆಯೇ ನಗರದಲ್ಲಿ ಕೆಲ ಮಹತ್ವದ ಬದಲಾವಣೆ ತರಲು ಮುಂದಾಗಿದ್ದಾರೆ. ಒತ್ತುವರಿ ಫುಟ್​​ಪಾತ್ ತೆರವು, ರಸ್ತೆ ಪಕ್ಕ ನಿಲ್ಲಿಸುವ ವಾಹನಗಳ ತೆರವು ಸೇರಿದಂತೆ ಕೆಲ ಮಹತ್ತರ ಕಾರ್ಯಕ್ರಮಗಳನ್ನ ಕೈಗೆತ್ತುಕೊಂಡಿದ್ದು, ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಸಭೆಯಲ್ಲಿ ಅಧಿಕಾರಗಳ ಬೆವರಿಳಿಸುತ್ತಿದ್ದಾರೆ. ಆದರೆ ಇದೀಗ ಪೌರ ಕಾರ್ಮಿಕರ ವಿಚಾರದಲ್ಲಿ ಅವರು ಆಡಿದ ಮಾತುಗಳು ಆಕ್ರೋಶಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗೂ ಕಾರಣವಾಗಿದೆ.

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್:  ಝೀರೋ ಬಿಲ್ ಬರುತ್ತಿದ್ದ ಮನೆಗಳಿಗೆ ಸಾವಿರಾರು ರೂ. ಬಿಲ್

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್: ಝೀರೋ ಬಿಲ್ ಬರುತ್ತಿದ್ದ ಮನೆಗಳಿಗೆ ಸಾವಿರಾರು ರೂ. ಬಿಲ್

ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಗೃಹ ಜ್ಯೋತಿ ಪ್ರಮುಖವಾದುದು. ಪ್ರತಿ ಅರ್ಹ ಮನೆಗೆ 200 ಯೂನಿಟ್​ಗಳವರೆಗೆ ಉಚಿತ ವಿದ್ಯುತ್ ಕೊಡುವ ಉದ್ದೇಶವಿದು. ಆದರೆ ಕೆಲವು ಕಡೆಗಳಲ್ಲಿ ಯೋಜನೆ ದಾರಿತಪ್ಪುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು, ಕೆಲ ಗೃಹ ಜ್ಯೋತಿ ಫಲಾನುಭವಿಗಳ ಮನೆಗಳಿಗೆ ಝೀರೋ ಬಿಲ್ ಬದಲಾಗಿ ಸಾವಿರಾರು ರೂ. ಬಿಲ್ ಬರುತ್ತಿದೆ.

ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಮಾರ್ಗಸೂಚಿ ಹೊರಡಿಸಿದ ಬೆಸ್ಕಾಂ

ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಮಾರ್ಗಸೂಚಿ ಹೊರಡಿಸಿದ ಬೆಸ್ಕಾಂ

ಗಣೇಶೋತ್ಸವಕ್ಕೆ ಬೆಸ್ಕಾಂ ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟಿಸಿದೆ. ಎನ್​ಒಸಿ, ವೈರಿಂಗ್ ಸುರಕ್ಷತೆ, ಇಎಲ್​​ಸಿಬಿ ಕಡ್ಡಾಯ ಮಾಡಲಾಗಿದೆ. ವಿದ್ಯುತ್ ಮೂಲಸೌಕರ್ಯಗಳಿಗೆ ಬ್ಯಾನರ್, ಪೋಸ್ಟರ್ ಕಟ್ಟುವುದು ನಿಷೇಧಿಸಲಾಗಿದೆ. ಇನ್ನು ಗೌರಿ-ಗಣೇಶ ಮೂರ್ತಿ ವಿಸರ್ಜನೆಗಾಗಿ ಜಿಬಿಎ ಬೆಂಗಳೂರಿನ ಸುಮಾರು 42 ಕೆರೆ ಅಂಗಳದಲ್ಲಿ ತಾತ್ಕಾಲಿಕ ಕಲ್ಯಾಣಿ ವ್ಯವಸ್ಥೆ ಮಾಡಿದೆ.

ಗಣೇಶ ಚತುರ್ಥಿ ಆಚರಣೆ: ಮಾರ್ಗಸೂಚಿ ಸಡಿಲಿಕೆಗೆ ಆಗ್ರಹಿಸಿ ಗೃಹ ಸಚಿವರಿಗೆ ಶಾಸಕ ಸಿ.ಕೆ. ರಾಮಮೂರ್ತಿ ಪತ್ರ!

ಗಣೇಶ ಚತುರ್ಥಿ ಆಚರಣೆ: ಮಾರ್ಗಸೂಚಿ ಸಡಿಲಿಕೆಗೆ ಆಗ್ರಹಿಸಿ ಗೃಹ ಸಚಿವರಿಗೆ ಶಾಸಕ ಸಿ.ಕೆ. ರಾಮಮೂರ್ತಿ ಪತ್ರ!

ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ಆಚರಣೆಗೆ ಬಿಬಿಎಂಪಿ ಹಾಗೂ ಪೊಲೀಸರು ವಿಧಿಸಿರುವ ಕಠಿಣ ಮಾರ್ಗಸೂಚಿಗಳಿಂದ ಆಯೋಜಕರಿಗೆ ಕಿರುಕುಳವಾಗುತ್ತಿದೆ ಎಂದು ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ನಿಯಮಗಳನ್ನು ಸರಳಗೊಳಿಸಿ ಜನಸ್ನೇಹಿ ಕ್ರಮಗಳನ್ನು ಕೈಗೊಳ್ಳದಿದ್ದಲ್ಲಿ ಸಾರ್ವಜನಿಕರ ಪರವಾಗಿ ಹೋರಾಟ ನಡೆಸುವುದಾಗಿ ಶಾಸಕರು ಎಚ್ಚರಿಸಿದ್ದಾರೆ.

ಗಣೇಶ ಹಬ್ಬ ಹಿನ್ನೆಲೆ ಸಾಲು ಸಾಲು ರಜೆ: ಖಾಸಗಿ ಸೇರಿದಂತೆ ಸರ್ಕಾರಿ ಬಸ್​ಗಳಿಗೂ ಫುಲ್ ಡಿಮ್ಯಾಂಡ್!

ಗಣೇಶ ಹಬ್ಬ ಹಿನ್ನೆಲೆ ಸಾಲು ಸಾಲು ರಜೆ: ಖಾಸಗಿ ಸೇರಿದಂತೆ ಸರ್ಕಾರಿ ಬಸ್​ಗಳಿಗೂ ಫುಲ್ ಡಿಮ್ಯಾಂಡ್!

ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ ತಯಾರಿ ಜೋರಾಗಿದೆ. ಹಬ್ಬದ ಪ್ರಯುಕ್ತ ಸಾಲು ಸಾಲು ರಜೆ ಇರುವುದರಿಂದ ಜನರು ತಮ್ಮ ತಮ್ಮ ಸ್ವಂತ ಊರುಗಳಿಗೆ ತೆರಳುತ್ತಿದ್ದಾರೆ. ಹೀಗಾಗಿ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ಪ್ರಯಾಣಿಕರಿಂದ ಬಸ್​ಗಳಿಗೆ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಖಾಸಗಿ ಬಸ್​ಗಳು ಮಾತ್ರವಲ್ಲದೇ, ಸರ್ಕಾರಿ ಬಸ್​ಗಳಿಗೂ ಫುಲ್ ಡಿಮ್ಯಾಂಡ್ ಹೆಚ್ಚಾಗಿದೆ.

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಬಂದ ಜೆಟ್ ಪ್ಯಾಚರ್ ಮೆಷಿನ್ ಬಗ್ಗೆ ವಿವರಿಸಿದ ಕೃಷ್ಣಭೈರೇಗೌಡ

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಬಂದ ಜೆಟ್ ಪ್ಯಾಚರ್ ಮೆಷಿನ್ ಬಗ್ಗೆ ವಿವರಿಸಿದ ಕೃಷ್ಣಭೈರೇಗೌಡ

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದಾಗಿ ಪ್ರಯಾಣಿಕರು, ವಾಹನ ಚಾಲಕರು ಹೈರಾಣಾಗಿದ್ದಾರೆ. ಇದೇ ಹಿನ್ನೆಲೆಯಲ್ಲಿ ಜಿಬಿಎ ಹಾಗೂ ಸಚಿವ ಕೃಷ್ಣಭೈರೇಗೌಡ ಕೂಡ ನಾನಾ ರೀತಿಯ ಕಸರತ್ತು ಮಾಡಿ ಗುಂಡಿ ಮುಚ್ಚಲು ಹರಸಾಹಸಪಡುತ್ತಿದ್ದಾರೆ. ಇದೀಗ ಜೆಟ್ ಪ್ಯಾಚರ್ ಮೆಷಿನ್ ತಂದಿದ್ದಾರೆ. ಹಾಗಾದ್ರೆ, ಈ ಜೆಟ್ ಪ್ಯಾಚರ್ ಮೆಷಿನ್ ಹೇಗೆ ಕೆಲಸ ಮಾಡುತ್ತೆ ಎನ್ನುವುದನ್ನು ಕೃಷ್ಣಭೈರೇಗೌಡ ವಿವರಿಸಿದ್ದಾರೆ.