ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ…