ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ ‘ಬ್ರಾಹ್ಮಣ ಕುರುಬ’ ಮತ್ತು ‘ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್’ ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.
ಅಳಿವಿನಂಚಿನಲ್ಲಿ ದೇಶಿ ಅಕ್ಕಿ ತಳಿ ಮುಗದ ಸಿರಿ, ಸುಗಂಧ: ಔಷಧೀಯ ಗುಣ, ಪೌಷ್ಟಿಕಾಂಶಗಳ ಕಣಜವೇ ಇದರಲ್ಲಿದೆಯಂತೆ!
ಆ ಅಕ್ಕಿ ಒಲೆ ಮೇಲೆ ಕುದಿಯುತ್ತಿದ್ದರೆ ಓಣಿಯ ತುಂಬ ಘಮ ಪಸರಿಸುತ್ತಿತ್ತು. ಹೆಣ್ಣು ಮಕ್ಕಳಿಗೆ ಉಡಿಯಕ್ಕಿ ಹಾಕಿದರೆ ಒಡಲು ತುಂಬುತ್ತಿತ್ತು. ರೋಗ ರುಜಿನಕ್ಕೆ ಈ ಅಕ್ಕಿಯ ಪಾಯಸವೇ ಔಷಧಿ! ಈ ಭತ್ತದ ಹುಲ್ಲು ತಿಂದ ಗೂಳಿಗಳು ಕಾದಾಟಕ್ಕೆ ಕಾಲು ಕೆದರುತ್ತಿದ್ದವು. ಆದರೆ ಇದೀಗ ಈ ಭತ್ತವೇ ಕಣ್ಣರೆಯಾಗಿದೆ. ಧಾರವಾಡ ಮೂಲದ ಆ ಅಕ್ಕಿ ಇದೀಗ ಕಾಣುತ್ತಲೇ ಇಲ್ಲ.
- Narasimha Murti Pyati
- Updated on: Jan 12, 2026
- 7:38 am
ಪ್ರತ್ಯೇಕ ಘಟನೆ: ಭೂಸ್ವಾಧೀನ ಪರಿಹಾರ ನೀಡದಕ್ಕೆ NHAI ಕಚೇರಿ, ಡಿಸಿ ಕಾರು ಜಪ್ತಿ
ಭೂಸ್ವಾಧೀನ ಪರಿಹಾರ ಬಾಕಿ ಇರುವ ಹಿನ್ನೆಲೆಯಲ್ಲಿ ಧಾರವಾಡದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಮತ್ತು ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಲಾಗಿದೆ. ಇದೇ ರೀತಿ ಹಾಸನದಲ್ಲಿ ಯಗಚಿ ನಾಲೆಗಾಗಿ ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡದ ಕಾರಣ ಜಿಲ್ಲಾಧಿಕಾರಿಗಳ ಕಾರನ್ನು ಕೋರ್ಟ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
- Narasimha Murti Pyati
- Updated on: Jan 9, 2026
- 8:04 pm
ಧಾರವಾಡ ಕವಿವಿಯಲ್ಲಿ ಎಐ ಕ್ರಾಂತಿ: ಸಾಂಪ್ರದಾಯಿಕ ಕೋರ್ಸ್ಗಳಿಗೆ ಆಧುನಿಕ ಸ್ಪರ್ಶ
ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯವು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ತನ್ನ ಎಲ್ಲಾ ಕೋರ್ಸ್ಗಳಲ್ಲಿ ಅಳವಡಿಸಿಕೊಳ್ಳಲು ಮುಂದಾಗಿದೆ. ಆ ಮೂಲಕ ಬಿಎ, ಬಿಎಸ್ಸಿ, ಬಿಕಾಂ ನಂತಹ ಸಾಂಪ್ರದಾಯಿಕ ಪದವಿಗಳಿಗೆ ಎಐ ಸ್ಪರ್ಶ ನೀಡಲಾಗುತ್ತಿದೆ. ಹೊಸದೊಂದು ಹೆಜ್ಜೆಯಿಟ್ಟಿರುವ ಕುಲಪತಿಗಳ ಈ ನಿರ್ಧಾರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
- Narasimha Murti Pyati
- Updated on: Jan 8, 2026
- 6:38 pm
Dharwad: ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ; ಮೂರು ಅಂಗಡಿಗಳು ಅಗ್ನಿಗಾಹುತಿ
ಅಗ್ನಿ ಅವಘಡದಲ್ಲಿ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಕೂಡಲೇ ಕಾರ್ಯಪ್ರವರ್ತರಾದ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸುವ ಯತ್ನ ಮಾಡಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದ್ದು, ದೊಡ್ದ ಅನಾಹುತ ತಪ್ಪಿದೆ.
- Narasimha Murti Pyati
- Updated on: Jan 6, 2026
- 9:00 am
‘ನಮ್ಮ ಮೇಲೆ ಕೃಪೆ ತೋರಿ’: ಮಂತ್ರಾಲಯದ ರಾಯರಿಗೆ ವಿಚಿತ್ರ ಪತ್ರ ಬರೆದ ಉದ್ಯೋಗಾಕಾಂಕ್ಷಿಗಳು
ಕರ್ನಾಟಕ ರಾಜ್ಯ ನಿರುದ್ಯೋಗಿ ದೈಹಿಕ ಶಿಕ್ಷಕರ ಸಂಘದಿಂದ ಮಂತ್ರಾಲಯದ ರಾಘವೇಂದ್ರ ಸ್ವಾಮೀಜಿಗಳಿಗೆ ವಿಚಿತ್ರ ಪತ್ರ ಬರೆಯಲಾಗಿದೆ. ರಾಜ್ಯದಲ್ಲಿ ಹಲವು ವರ್ಷಗಳಿಂದ ಖಾಲಿ ಇರುವ ದೈಹಿಕ ಶಿಕ್ಷಕರ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡದಿರುವ ಹಿನ್ನೆಲೆಯಲ್ಲಿ, ಸ್ವಾಮೀಜಿಗಳು ತಮ್ಮ ಮೇಲೆ ಕೃಪೆ ತೋರಿ ನೇಮಕಾತಿ ಆಗುವಂತೆ ಮಾಡುವಂತೆ ಮನವಿ ಮಾಡಿದ್ದಾರೆ.
- Narasimha Murti Pyati
- Updated on: Jan 1, 2026
- 6:51 pm
ಧಾರಾವಾಡ: ಸೂರ್ಯರಶ್ಮಿ ಜತೆಗೆ ಕೆರೆ ನೀರಿನ ಚೆಲ್ಲಾಟ: 2025ರ ಕೊನೆಯಲ್ಲಿ ಕಂಡ ಅದ್ಭುತ ದೃಶ್ಯ
ಧಾರವಾಡವನ್ನು ಫಲವತ್ತಾದ ಬೆಳವಲನಾಡು ಅಥವಾ ಅರೆಮಲೆನಾಡು ಎಂದು ಕರೆಯುತ್ತಾರೆ. ಇಲ್ಲಿನ ಕೆರೆಗಳು, ವಿಶೇಷವಾಗಿ ಕೆಲಗೇರಿ ಕೆರೆ, ಈ ಪ್ರದೇಶದ ಜೀವನಾಡಿ. ಸಂಜೆಯ ಸೂರ್ಯಾಸ್ತದ ವೇಳೆ ಕೆರೆಯ ನೀರಿನಲ್ಲಿ ಮೂಡುವ ಬಣ್ಣ ಬಣ್ಣದ ದೃಶ್ಯ ಅವರ್ಣನೀಯ. ವರ್ಷದ ಕೊನೆಗೆ ಸೂರ್ಯನ ಸ್ಪಷ್ಟ ದರ್ಶನ ಸಿಗುವಾಗ ಈ ಕೆರೆಯ ಸೌಂದರ್ಯ ಮತ್ತಷ್ಟು ಹೆಚ್ಚುತ್ತದೆ. ಇದು ಧಾರವಾಡದ ಪ್ರಮುಖ ನೈಸರ್ಗಿಕ ಆಕರ್ಷಣೆಯಾಗಿದೆ.
- Narasimha Murti Pyati
- Updated on: Dec 31, 2025
- 6:11 pm
ಚಕ್ರವರ್ತಿ ಸೂಲಿಬೆಲೆ ಭಾಗಿಗೆ ವಿರೋಧ: ಕೃಷಿ ವಿಶ್ವ ವಿದ್ಯಾಲಯ ವಿದ್ಯಾರ್ಥಿ ಸಂಘದ ಪದಗ್ರಹಣ ರದ್ದು
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದು ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಗಿಗೆ ದಲಿತ ಸಂಘಟನೆಗಳು ಮತ್ತು ವಿವಿ ಬೋರ್ಡ್ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಕಾರ್ಯಕ್ರಮ ರದ್ದಾಗಿದೆ. ಸೂಲಿಬೆಲೆ ಕೋಮು ಗಲಭೆಗೆ ಕಾರಣವಾಗುವ ವ್ಯಕ್ತಿ ಎಂದು ಆರೋಪಿಸಿದ ಪ್ರತಿಭಟನಕಾರರು, ಕುಲಪತಿಗಳ ನಡೆ ಬಗ್ಗೆಯೂ ಆಕ್ರೋಶ ಹೊರಹಾಕಿದ್ದಾರೆ.. ಘಟನೆ ಸಂಬಂಧ ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದ ಪ್ರಸಂಗವೂ ನಡೆದಿದೆ.
- Narasimha Murti Pyati
- Updated on: Dec 30, 2025
- 5:07 pm
ರೈತರ ಬದುಕಿನಲ್ಲಿ ಚೆಲ್ಲಾಟ: ಮೆಕ್ಕೆಜೋಳ ಬೆಳೆಗಾರರ ಪಾಲಿಗೆ ವಿಲನ್ ಆದ ಸರ್ಕಾರ
ಧಾರವಾಡ ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆದ ರೈತರು ದರ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಪ್ರತಿ ರೈತರಿಂದ 50 ಕ್ವಿಂಟಾಲ್ ಮೆಕ್ಕೆಜೋಳ ಬೆಂಬಲ ಬೆಲೆಯಲ್ಲಿ ಖರೀದಿಸಲು ಆದೇಶಿಸಿದ್ದರೂ, ಜಿಲ್ಲೆಯಲ್ಲಿ ಅನುಷ್ಠಾನ ವಿಳಂಬವಾಗಿದೆ. ಇದರಿಂದ ಮುಕ್ತ ಮಾರುಕಟ್ಟೆಯಲ್ಲಿ ನಷ್ಟ ಅನುಭವಿಸುತ್ತಿರುವ ರೈತರು ಆಕ್ರೋಶಗೊಂಡಿದ್ದಾರೆ.
- Narasimha Murti Pyati
- Updated on: Dec 23, 2025
- 9:18 pm
ನೂರಾರು ಎಕರೆಯ ಧಾರವಾಡ ಕರ್ನಾಟಕ ವಿವಿ ಜಮೀನು ರಕ್ಷಣೆಗೆ ದಿಟ್ಟ ಹೆಜ್ಜೆ: ಕುಲಪತಿ ನಡೆಗೆ ಮೆಚ್ಚುಗೆ
ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ನೂರಾರು ಎಕರೆ ಜಮೀನು ಅತಿಕ್ರಮಣಕ್ಕೊಳಗಾಗಿದೆ. ಹಿಂದಿನ ಪ್ರಯತ್ನಗಳು ವಿಫಲವಾಗಿದ್ದವು. ಈಗ ನೂತನ ಕುಲಪತಿ ಈ ಸಮಸ್ಯೆಯನ್ನು ಬಗೆಹರಿಸಲು ದೃಢ ನಿರ್ಧಾರ ಕೈಗೊಂಡಿದ್ದಾರೆ. ಡ್ರೋನ್ ತಂತ್ರಜ್ಞಾನ ಬಳಸಿ ವೈಜ್ಞಾನಿಕ ಸರ್ವೆ ನಡೆಸಿ, ಅತಿಕ್ರಮಣಗೊಂಡ ಭೂಮಿಯನ್ನು ಮರಳಿ ಪಡೆಯಲು ಮತ್ತು ಬೇಲಿ ಹಾಕಿ ರಕ್ಷಿಸಲು ಮುಂದಾಗಿದ್ದಾರೆ. ಇದು ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ.
- Narasimha Murti Pyati
- Updated on: Dec 18, 2025
- 8:08 pm
Dharwad: ರೈಲಿಗೆ ತಲೆಕೊಟ್ಟು ಪ್ರಾಣಬಿಟ್ಟ ಯುವತಿ; ಸಿಕ್ಕಿದ್ದು ಎರಡೆರಡು ಡೆತ್ನೋಟ್!
ಬಳ್ಳಾರಿ ಮೂಲದ ಯುವತಿಯೊಬ್ಬಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಗಾಗಿ ನಗರಕ್ಕೆ ಆಗಮಿಸಿದ್ದ ಯುವತಿ ನೇಮಕಾತಿ ಪ್ರಕ್ರಿಯೆ ಆಗದಿರೋದಕ್ಕೆ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಆರಂಭದಲ್ಲಿ ಅಪಪ್ರಚಾರ ನಡೆದಿತ್ತು. ಆದರೆ ಪೊಲೀಸ್ ತನಿಖೆ ವೇಳೆ ವೈಯಕ್ತಿಕ ಕಾರಣಗಳಿಂದ ಆಕೆ ಸೂಸೈಡ್ ಮಾಡಿಕೊಂಡಿರೋದು ಗೊತ್ತಾಗಿದೆ. ಡೆತ್ನೋಟ್ ಕೂಡ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
- Narasimha Murti Pyati
- Updated on: Dec 17, 2025
- 2:27 pm
ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್: ಪೊಲೀಸ್ ಇಲಾಖೆಯಿಂದಲೇ ವಿಶೇಷ ತರಬೇತಿ ಕಾರ್ಯಾಗಾರ
ಉದ್ಯೋಗಾಕಾಂಕ್ಷಿಗಳಿಗಾಗಿ ಪೊಲೀಸ್ ಇಲಾಖೆಯಿಂದಲೇ ವಿಶೇಷ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ. ಅಧಿವೇಶನ ಹಿನ್ನಲೆ ಹಲವಾರು ಕಡೆಗಳಿಂದ ಪಿಎಸ್ಐ ಪ್ರಶಿಕ್ಷಣಾರ್ಥಿಗಳು ಬಂದಿದ್ಧಾರೆ. ಟಾಪ್ 10 ಪ್ರಶಿಕ್ಷಣಾರ್ಥಿಗಳ ಮೂಲಕ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
- Narasimha Murti Pyati
- Updated on: Dec 15, 2025
- 4:55 pm
ಧಾರವಾಡ ಸರ್ಕಾರಿ ಹುದ್ದೆಗಳ ಭರ್ತಿ: ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಭೇಟಿಗೆ ಅವಕಾಶ ನೀಡಿ ಹೈಕೋರ್ಟ್ ಆದೇಶ
ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪರಿಗಣಿಸಿದೆ. ಸಿಎಂ ಭೇಟಿಯಾಗಿ ಮನವಿ ಸಲ್ಲಿಸಲು ಹೈಕೋರ್ಟ್ ನಿರ್ದೇಶಿಸಿದ್ದು, ಸಾವಿರಾರು ನಿರುದ್ಯೋಗಿ ಯುವಕರಿಗೆ ಇದರಿಂದ ಹೊಸ ಭರವಸೆ ಮೂಡಿದೆ.
- Narasimha Murti Pyati
- Updated on: Dec 15, 2025
- 3:34 pm