ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.
ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 1.37 ಕೋಟಿ ಮೌಲ್ಯದ ಬಂಗಾರ ವಶಕ್ಕೆ
ದುಬೈನಿಂದ ಬೆಂಗಳೂರು ಏರ್‌ಪೋರ್ಟ್‌ಗೆ ಬಂದಿದ್ದ ಪ್ರಯಾಣಿಕನಿಂದ 1.37 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕ್ಯಾಪ್ಸುಲ್‌ಗಳಲ್ಲಿ ಚಿನ್ನದ ಪೇಸ್ಟ್ ರೂಪದಲ್ಲಿ ಇದನ್ನು ಸಾಗಿಸಲಾಗುತ್ತಿತ್ತು. ಮತ್ತೊಂದೆಡೆ ಬೆಂಗಳೂರು ಉತ್ತರ ತಾಲೂಕಿನ ಕದಿರೇನಹಳ್ಳಿಯಲ್ಲಿ ಒಂಟಿ ಮನೆ ಟಾರ್ಗೆಟ್ ಮಾಡಿ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯ ಚಿನ್ನಾಭರಣ ಕಳ್ಳತನ ನಡೆಸಿರುವ ಘಟನೆ ನಡೆದಿದೆ.
- Naveen Kumar
- Updated on: Jun 10, 2026
- 3:09 pm
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ: ಬೆಂಗಳೂರಿಗೆ ಬರಬೇಕಿದ್ದ ‘ಕೈ’ ಶಾಸಕರ ಪ್ರವಾಸ ಕೊನೇ ಕ್ಷಣದಲ್ಲಿ ರದ್ದು
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಭೀತಿ ಹಿನ್ನೆಲೆ ಮಧ್ಯಪ್ರದೇಶ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ. ಬೆಂಗಳೂರು ಏರ್‌ಪೋರ್ಟ್‌ಗೆ ಆಗಮಿಸಲಿರುವ ಶಾಸಕರು, ಕೆಐಎಬಿಯಿಂದ ವಂಡರ್ ಲಾ ರೆಸಾರ್ಟ್ಗೆ ತೆರಳಲಿದ್ದಾರೆ. ಅವರನ್ನು ಕರೆದೊಯ್ಯಲು ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಜೂನ್ 17ರ ರಾತ್ರಿ ಅಥವಾ 18ರ ಬೆಳಗ್ಗೆ 63 ಶಾಸಕರು ಇಲ್ಲಿಂದ ಹಿಂದಿರುಗಲಿದ್ದಾರೆ ಎನ್ನಲಾಗಿದೆ.
- Naveen Kumar
- Updated on: Jun 9, 2026
- 7:42 pm
ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಭರ್ಜರಿ ಬೇಟೆ: ಬ್ಯಾಂಕಾಕ್‌ನಿಂದ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ!
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 2.33 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 6.66 ಕೆಜಿ ತೂಕದ ಈ ದುಬಾರಿ ಡ್ರಗ್ಸ್ ಸಮೇತ ಸಿಕ್ಕಿಬಿದ್ದಿರುವ ಪ್ರಯಾಣಿಕನನ್ನು ವಶಕ್ಕೆ ಪಡೆದು ಅಧಿಕಾರಿಗಳು ನಡೆಸುತ್ತಿರುವ ತೀವ್ರ ವಿಚಾರಣೆಯ ಸಂಪೂರ್ಣ ವಿವರ ಇಲ್ಲಿದೆ.
- Naveen Kumar
- Updated on: Jun 8, 2026
- 11:50 am
ಟ್ರಕ್ಗೆ ಡಿಕ್ಕಿಯಾಗಿ KSRTC ಬಸ್ ಮುಂಭಾಗ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಅತ್ತಿವಟ್ಟ ಬಳಿ ಟ್ರಕ್ ಚಾಲಕ ಏಕಾಏಕಿ ಯೂಟರ್ನ್ ಪಡೆದಿದ್ದರಿಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಮುಂಭಾಗ ಜಖಂಗೊಂಡಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅದೃಷ್ಟವಶಾತ್, ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಘಟನಾ ಸ್ಥಳದ ವಿಡಿಯೋ ಇಲ್ಲಿದೆ.
- Naveen Kumar
- Updated on: Jun 8, 2026
- 11:36 am
ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ
ಖಾತೆ ಹಂಚಿಕೆ ಅಸಮಾಧಾನ ಶಮನಕ್ಕೆ ಕಾಂಗ್ರೆಸ್ ಹೈಕಮಾಂಡ್ ದೇವನಹಳ್ಳಿಯಲ್ಲಿ ಮಹತ್ವದ ಸಭೆ ನಡೆಸಿದೆ. ರಾಮಲಿಂಗಾ ರೆಡ್ಡಿ, ಕೆ.ಹೆಚ್. ಮುನಿಯಪ್ಪರ ಬಂಡಾಯದಿಂದ ಉಂಟಾದ ಬಿಕ್ಕಟ್ಟು ಪರಿಹರಿಸಲು ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಸುರ್ಜೇವಾಲ ಭಾಗವಹಿಸಿದ್ದಾರೆ. ಮುನಿಯಪ್ಪ ಆಹಾರ ಖಾತೆಯನ್ನು ನಿರಾಕರಿಸಿ, ಕೃಷಿ/ಸಮಾಜ ಕಲ್ಯಾಣ ಇಲಾಖೆ ಬಯಸಿದ್ದಾರೆ. ಹೈಕಮಾಂಡ್ ಡ್ಯಾಮೇಜ್ ಕಂಟ್ರೋಲ್ ಸೂತ್ರ ಸಿದ್ಧಪಡಿಸುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಮುಂದಿನ ಚಿತ್ರಣ ಸ್ಪಷ್ಟವಾಗಲಿದೆ.
- Naveen Kumar
- Updated on: Jun 5, 2026
- 1:05 pm
ಕಾಂಗ್ರೆಸ್‌ನಲ್ಲಿ ಆರದ ಖಾತೆ ಕಿಚ್ಚು: ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಕೆಎಚ್ ಮುನಿಯಪ್ಪ ಬಹಿರಂಗ ಅಸಮಾಧಾನ
ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಕೆಎಚ್ ಮುನಿಯಪ್ಪ ತಮಗೆ ನೀಡಿರುವ ಆಹಾರ ಖಾತೆ ಬಗ್ಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಹೈಕಮಾಂಡ್ ಹಿರಿತನವನ್ನು ಕಡೆಗಣಿಸಿದೆ ಎಂದು ಆರೋಪಿಸಿ ಕೃಷಿ ಅಥವಾ ಸಮಾಜ ಕಲ್ಯಾಣ ಖಾತೆಗಾಗಿ ಪಟ್ಟು ಹಿಡಿದಿದ್ದಾರೆ. ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ ಎಂದಿದ್ದಾರೆ. ಇದರೊಂದಿಗೆ, ಕಾಂಗ್ರೆಸ್ ಖಾತೆ ಹಂಚಿಕೆ ಬಿಕ್ಕಟ್ಟು ಮತ್ತಷ್ಟು ಜೋರಾಗುವ ಸುಳಿವು ಕಾಣಿಸಿದೆ.
- Naveen Kumar
- Updated on: Jun 5, 2026
- 12:05 pm
ಶಾಸಕ ವಿಶ್ವನಾಥ್ ಬಿಟ್ಟು ಸುದ್ದಿಗೋಷ್ಠಿ ನಡೆಸಲು ಬಂದ ಸಂಸದ ಸುಧಾಕರ್ಗೆ ಸ್ವಪಕ್ಷಿಗರಿಂದಲೇ ತರಾಟೆ
ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನು ಬಿಟ್ಟು ಸುದ್ದಿಗೋಷ್ಠಿ ನಡೆಸಲು ಬಂದ ಸಂಸದ ಡಾ. ಕೆ. ಸುಧಾಕರ್‌ರನ್ನು ಬಿಜೆಪಿ ಕಾರ್ಯಕರ್ತರೇ ತರಾಟೆಗೆ ತಗೆದುಕೊಂಡಿರುವ ಘಟನೆ ನಡೆದಿದೆ. ಯಲಹಂಕದಲ್ಲಿ ಮಾಧ್ಯಮ ಕೇಂದ್ರದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರ ಮಧ್ಯಪ್ರವೇಶದ ಬಳಿಕ ಪರಿಸ್ಥಿತಿ ತಿಳಿಗೊಂಡಿದೆ. ಕಳೆದ ಲೋಕಸಭಾ ಚುನಾವಣೆಯಿಂದಲೂ ಶಾಸಕರು ಮತ್ತು ಸಂಸದರ ನಡುವೆ ಮುನಿಸು ಮುಂದುವರಿದುಕೊಂಡು ಬಂದಿದ್ದು, ಅದೀಗ ಮತ್ತೊಂದು ಹಂತ ತಲುಪಿದೆ.
- Naveen Kumar
- Updated on: Jun 2, 2026
- 5:42 pm
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆಯ ಕಣ್ಣೂರಹಳ್ಳಿ ರಸ್ತೆಯಲ್ಲಿ ಒಂದೇ ಸ್ಥಳದಲ್ಲಿ ಪತ್ತೆಯಾದ 23 ನಾಗರಹಾವಿನ ಮರಿಗಳನ್ನು ಉರಗ ತಜ್ಞ ಸಿಎಸ್ ನಾಗಭೂಷಣ ಅವರು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಈ ನಾಗರ ಹಾವಿನ ಮರಿಗಳನ್ನು ಅರಣ್ಯಕ್ಕೆ ಬಿಡಲು ಸಿದ್ಧತೆ ನಡೆಸಲಾಗಿದೆ. ಒಂದೇ ಕಡೆ ಪತ್ತೆಯಾದ ನಾಗರ ಹಾವಿನ ಮರಿಗಳ ವಿಡಿಯೋ ಇಲ್ಲಿದೆ.
- Naveen Kumar
- Updated on: Jun 2, 2026
- 10:29 am
ಸಿದ್ದರಾಮಯ್ಯ ಬೆನ್ನಲ್ಲೇ ದೆಹಲಿಗೆ ಹೊರಟ ಡಿಸಿಎಂ ಡಿ.ಕೆ. ಶಿವಕುಮಾರ್: ಕಾರಣ ಇಲ್ಲಿದೆ
ಸಿದ್ದರಾಮಯ್ಯ ಅವರ ಬೆನ್ನಲ್ಲೇ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ದೆಹಲಿಗೆ ತೆರಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ, ಅಧಿಕಾರ ಹಂಚಿಕೆ ಹಾಗೂ ಸಂಪುಟ ಪುನರ್ರಚನೆ ಕುರಿತಂತೆ ಪಕ್ಷದ ನಾಯಕರೊಂದಿಗೆ ಪ್ರಮುಖ ಚರ್ಚೆ ನಡೆಸ ಬೇಕಿರುವ ಕಾರಣ ಅವರು ಈ ಪ್ರವಾಸ ಕೈಗೊಂಡಿದ್ದಾರೆ. ಈ ಭೇಟಿಯು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
- Naveen Kumar
- Updated on: May 28, 2026
- 8:50 pm
ಸಿಎಂ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ಕರ್ನಾಟಕ ಕಾಂಗ್ರೆಸ್ನಲ್ಲಿನ (Karnataka Congress) ನಾಯಕತ್ವ ಬದಲಾವಣೆಯ ರಾಜಕೀಯ ಪ್ರಹಸನ ಅಂತಿಮ ಘಟ್ಟ ತಲುಪಿದ್ದು, ಸಿಎಂ ಸಿದ್ದರಾಮಯ್ಯನವರು (Siddaramaiah) ನಾಳೆ (ಮೇ 28) ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದ್ದು, ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಹೇಳಲಾಗುತ್ತಿದೆ. ಇನ್ನು ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗಿನ ಸರಣಿ ಸಭೆ ನಡೆಸಿ ಇಂದು (ಮೇ 27) ರಾತ್ರಿ ಡಿಕೆ ಶಿವಕುಮಾರ್ (DK Shivakumar) ಬೆಂಗಳೂರಿಗೆ ವಾಪಸ್ ಆಗಿದ್ದು, ಮುಂದಿನ ಸಿಎಂ ಎಂದೇ ಬಿಂಬಿತವಾಗಿರುವುದರಿಂದ ಏರ್‌ಪೋರ್ಟ್‌ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಇನ್ನು ವಿಶೇಷ ಅಂದ್ರೆ, ಡಿಕೆ ಶಿವಕುಮಾರ್ಅ ವರನ್ನ ಕರೆದೊಯ್ಯಲು ಸರ್ಕಾರಿ ಬದಲು ಖಾಸಗಿ ಕಾರು ಬಂದಿರುವುದು ವಿಶೇಷ. ಇನ್ನು ಮರ್ಸಿಡಿಸ್ ಬೆಂಜ್ ಬೆಂಜ್ ಜಿ63 ಕಾರು ಹೇಗಿದೆ ನೋಡಿ.
- Naveen Kumar
- Updated on: May 27, 2026
- 10:05 pm
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಚರ್ಚೆಯಲ್ಲೇ ಸರ್ಕಾರ ಮುಳುಗಿದೆ ಎಂದು ಟೀಕಿಸಿದ ಅವರು, ಬರಗಾಲ, ನೆರೆ, ಬೆಂಗಳೂರು ಸಮಸ್ಯೆಗಳತ್ತ ಗಮನ ಹರಿಸುವ ಬದಲು ಕುರ್ಚಿಗಾಗಿ ಹೋರಾಟ ನಡೆಸುತ್ತಿದೆ ಎಂದಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡುವ ಬಗ್ಗೆ ಯಾವುದೇ ಗ್ಯಾರಂಟಿ ಇಲ್ಲ ಎಂದೂ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
- Naveen Kumar
- Updated on: May 27, 2026
- 2:03 pm
ಸೋರುತಿಹುದು ಏರ್ಪೋರ್ಟ್ ಮಾಳಿಗಿ! ಭಾರಿ ಮಳೆಗೆ ಮತ್ತೆ ಸೋರಿದ ಟರ್ಮಿನಲ್ 1ರ ಮೇಲ್ಛಾವಣಿ, ವಿಡಿಯೋ ವೈರಲ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಟರ್ಮಿನಲ್-1ರ ಮೇಲ್ಛಾವಣಿ ಮತ್ತೆ ಸೋರಿದ್ದು, ಒಳಗೆಲ್ಲ ನೀರು ತುಂಬಿ ಪ್ರಯಾಣಿಕರು ಪರದಾಡುವಂತಾಯಿತು. ಭಾರಿ ಮಳೆ ಹಾಗೂ ಟರ್ಮಿನಲ್ ಒಳಗೆ ನೀರು ಸೋರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.
- Naveen Kumar
- Updated on: May 27, 2026
- 7:45 am