AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ

Senior Sub Editor - TV9 Kannada

prasannamanjunath.hegde@tv9.com

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Follow On:
ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಎಕ್ಸ್​​ ಪೋಸ್ಟ್​ ಮೂಲಕ ಕಾಂಗ್ರೆಸ್​​ಗೆ ಕುಟುಕಿದ ಜೆಡಿಎಸ್​​

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಎಕ್ಸ್​​ ಪೋಸ್ಟ್​ ಮೂಲಕ ಕಾಂಗ್ರೆಸ್​​ಗೆ ಕುಟುಕಿದ ಜೆಡಿಎಸ್​​

ಇಲ್ಲಸಲ್ಲದ ನೆಪ ಹೇಳಿ ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯ ಸರ್ಕಾರ ತಾಯಂದಿರ ಹೆಸರನ್ನು ಕೈಬಿಡುತ್ತಿರುವುದಾಗಿ ಎಕ್ಸ್​​ ಪೋಸ್ಟ್​ ಮೂಲಕ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಇದನ್ನು 'ವೋಟ್ ಬ್ಯಾಂಕ್ ವಂಚನೆ' ಎಂದು ಕರೆದಿರುವ ಜೆಡಿಎಸ್​​, 5,000 ಕೋಟಿ ರೂ. ಗೃಹಲಕ್ಷ್ಮಿ ಹಣವನ್ನು ತಿಂದು ತೇಗಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಮತಕ್ಕಾಗಿ ಮಹಿಳೆಯರನ್ನು ಯಾಮಾರಿಸಿದೆ ಎಂದು ಕಿಡಿ ಕಾರಿದೆ.

TV9 Kannada Live: ಹಣ ಕೊಟ್ರೆ ಪಾಸ್​​; ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿವಿಯ ಮತ್ತೊಂದು ಕಳ್ಳಾಟ ಬಯಲು

TV9 Kannada Live: ಹಣ ಕೊಟ್ರೆ ಪಾಸ್​​; ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿವಿಯ ಮತ್ತೊಂದು ಕಳ್ಳಾಟ ಬಯಲು

Karnataka News Today Live Updates: ಕರ್ನಾಟಕ ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿದ್ದು, ಎರಡನೇ ಹಂತದಲ್ಲಿ ಹೊರಬೀಳಲಿರುವ ಮಂತ್ರಿಗಳ ಹೆಸರಿನ ಬಗ್ಗೆ ಕುತೂಹಲ ಹೆಚ್ಚಿದೆ. ಮತ್ತೊಂದೆಡೆ ಕೇಂದ್ರದಲ್ಲಿ NDA ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಮ್ಯಾರಥಾನ್​​ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಎಲ್ಲ ಪ್ರಮುಖ ವಿದ್ಯಮಾನಗಳ ಕ್ಷಣ ಕ್ಷಣದ ಅಪ್ಡೇಟ್ಸ್​​ ಇಲ್ಲಿವೆ.

ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​: ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ಸಾಧ್ಯತೆ

ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​: ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ಸಾಧ್ಯತೆ

ಬೆಂಗಳೂರಿನ ನಮ್ಮ ಮೆಟ್ರೋ 3ನೇ ಹಂತದ ಡಬಲ್ ಡೆಕ್ಕರ್‌ ಯೋಜನೆಗೆ RITES ಸಕಾರಾತ್ಮಕ ವರದಿ ನೀಡಿದ್ದು, ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ಅಂತಿಮ ಅನುಮೋದನೆ ದೊರೆಯುವ ಸಾಧ್ಯತೆ ದಟ್ಟವಾಗಿದೆ. ಮೆಟ್ರೋ ಮಾರ್ಗದ ಮೇಲೆಯೇ ಫ್ಲೈಓವರ್ ನಿರ್ಮಾಣವಾದರೆ ಪ್ರಯಾಣಿಕರು ಮೆಟ್ರೋ ಬಳಕೆ ಕಡಿಮೆ ಮಾಡಬಹುದು ಎಂಬ ಕಾರಣ ನೀಡಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಯೋಜನೆಯ ಸಾಮಾಜಿಕ-ಆರ್ಥಿಕ ಕಾರ್ಯಸಾಧ್ಯತೆ ಬಗ್ಗೆ ಈ ಹಿಂದೆ ಪ್ರಶ್ನೆ ಎತ್ತಿತ್ತು.

Karnataka Weather Forecast: ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಅಬ್ಬರ; ತೀವ್ರ ಗಾಳಿಯ ಎಚ್ಚರಿಕೆ

Karnataka Weather Forecast: ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಅಬ್ಬರ; ತೀವ್ರ ಗಾಳಿಯ ಎಚ್ಚರಿಕೆ

Monsoon 2026: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರೀ ಮಳೆ ಹಾಗೂ ಬಲವಾದ ಬಿರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ವರುಣಾರ್ಭಟದ ಸಾಧ್ಯತೆ ಇದ್ದು, ಯಾವ್ಯಾವ ಪ್ರದೇಶಗಳಲ್ಲಿ ತೀವ್ರ ಮಳೆಯಾಗಬಹುದೆಂಬ ಮಾಹಿತಿ ಇಲ್ಲಿದೆ.

ಇಂದು ಈ ರಾಶಿಯವರಿಗೆ ಲಾಭ-ನಷ್ಟದ ಮಿಶ್ರಫಲವಿದ್ದು, ಕೋಪ-ತಾಪಗಳ ಬಗ್ಗೆ ಎಚ್ಚರಿಕೆ ಅಗತ್ಯ

ಇಂದು ಈ ರಾಶಿಯವರಿಗೆ ಲಾಭ-ನಷ್ಟದ ಮಿಶ್ರಫಲವಿದ್ದು, ಕೋಪ-ತಾಪಗಳ ಬಗ್ಗೆ ಎಚ್ಚರಿಕೆ ಅಗತ್ಯ

ಡಾ. ಬಸವರಾಜ ಗುರೂಜಿ ಅವರು 11-06-2026ರ ದ್ವಾದಶ ರಾಶಿಗಳ ದಿನಭವಿಷ್ಯವನ್ನು ನೀಡಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಅಧಿಕ ಜ್ಯೇಷ್ಠ ಮಾಸದಲ್ಲಿ ಸರ್ವತ್ರ ಏಕಾದಶಿಯ ವಿಶೇಷತೆಗಳನ್ನು ವಿವರಿಸಿದ್ದಾರೆ. ಅಲ್ಲದೆ, ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಉದ್ಯೋಗ, ಸಂಬಂಧಗಳು, ಆರೋಗ್ಯ, ಅದೃಷ್ಟದ ಸಂಖ್ಯೆ, ಬಣ್ಣ ಮತ್ತು ಮಂತ್ರಗಳ ಕುರಿತು ಸಮಗ್ರ ಮಾಹಿತಿ ನೀಡಿದ್ದಾರೆ.

ಮದುವೆ ಹೆಸರಲ್ಲಿ ಯುವತಿಗೆ ವಂಚನೆ ಕೇಸ್​​: ಆರೋಪಿ ಕೃಷ್ಣ ಜೆ. ರಾವ್​​ಗೆ ಹೈಕೋರ್ಟ್​​ ತೀವ್ರ ತರಾಟೆ

ಮದುವೆ ಹೆಸರಲ್ಲಿ ಯುವತಿಗೆ ವಂಚನೆ ಕೇಸ್​​: ಆರೋಪಿ ಕೃಷ್ಣ ಜೆ. ರಾವ್​​ಗೆ ಹೈಕೋರ್ಟ್​​ ತೀವ್ರ ತರಾಟೆ

ಮದುವೆ ಭರವಸೆ ನೀಡಿ ವಂಚಿಸಿದ ಪ್ರಕರಣದ ಆರೋಪಿ ಕೃಷ್ಣ ಜೆ. ರಾವ್ ಹಾಗೂ ಆತನ ಪೋಷಕರಿಗೆ ಹೈಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದ್ದು, ಮಗು ಕೆಳ ವರ್ಗದ ಕುಟುಂಬದಲ್ಲಿ ಜನಿಸಿದೆ ಎಂಬ ಕಾರಣಕ್ಕೆ ಅದನ್ನು ಕೈಬಿಡುತ್ತಿದ್ದೀರಾ? ಅದನ್ನು ನಾವು ಒಪ್ಪುವುದಿಲ್ಲ. ಪರಸ್ಪರ ಸಮ್ಮತಿಯ ಸಂಬಂಧವಾಗಿದ್ದರೆ ಸಮಸ್ಯೆ ಇರಲಿಲ್ಲ. ಆದರೆ ಆ ಸಂಬಂಧದಿಂದ ಒಂದು ನಿರಪರಾಧಿ ಮಗು ಜನಿಸಿದೆ. ಈಗ ಆ ಮಗುವನ್ನು ಬದುಕಲು ಯಾವುದೇ ಆಧಾರವಿಲ್ಲದ ಸ್ಥಿತಿಯಲ್ಲಿ ಬಿಟ್ಟಿದ್ದೀರಿ ಎಂದು ಗರಂ ಆಗಿದೆ.

ಚರ್ಚೆಗೆ ಗ್ರಾಸವಾದ ಬಿಎಂಟಿಸಿ ನಿರ್ವಾಹಕನ ನಡೆ: ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ; ಅಷ್ಟಕ್ಕೂ ಆಗಿದ್ದೇನು?

ಚರ್ಚೆಗೆ ಗ್ರಾಸವಾದ ಬಿಎಂಟಿಸಿ ನಿರ್ವಾಹಕನ ನಡೆ: ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ; ಅಷ್ಟಕ್ಕೂ ಆಗಿದ್ದೇನು?

ಬಿಎಂಟಿಸಿ ನಿರ್ವಾಹಕರೊಬ್ಬರು ಪ್ರಯಾಣಿಕರಿಲ್ಲದಿದ್ದರೂ ಮೇಲಿಂದ ಮೇಲೆ ಟಿಕೆಟ್ ಮುದ್ರಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಶಕ್ತಿ ಯೋಜನೆ ದುರ್ಬಳಕೆ ಶಂಕೆ ವ್ಯಕ್ತವಾಗಿದೆ. ಈ ನಡೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು ಸಿವಿಕ್​​ ಎಂಬ ಹೆಸರಿನ ಬಳಕೆದಾರರು ಎಕ್​ಸ್​​ನಲ್ಲಿ ವಿಡಿಯೋ ಹಂಚಿಕೊಂಡಿದ್ದು, ಈ ವಿಚಾರವನ್ನು ಬಿಎಂಟಿಸಿ ಗಂಭೀರವಾಗಿ ಪರಿಶೀಲಿಸಬೇಕು ಎಂದು ಬರೆದುಕೊಂಡಿದ್ದಾರೆ.

ಐಶಾರಾಮಿ ಜೀವನಕ್ಕಾಗಿ ಉಂಡ ಮನೆಗೇ ಕನ್ನ: 25 ಲಕ್ಷ ಹಣ ಕದ್ದು ಜೈಲುಪಾಲಾದ ನೇಪಾಳಿ ದಂಪತಿ

ಐಶಾರಾಮಿ ಜೀವನಕ್ಕಾಗಿ ಉಂಡ ಮನೆಗೇ ಕನ್ನ: 25 ಲಕ್ಷ ಹಣ ಕದ್ದು ಜೈಲುಪಾಲಾದ ನೇಪಾಳಿ ದಂಪತಿ

ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ 25 ಲಕ್ಷ ರೂ. ನಗದು ಕದ್ದು ಪರಾರಿಯಾಗಿದ್ದ ನೇಪಾಳಿ ದಂಪತಿಯನ್ನು ಅಮೃತಹಳ್ಳಿ ಪೊಲೀಸರು ಕೇವಲ ಒಂದೇ ದಿನದಲ್ಲಿ ಬಂಧಿಸಿ, ಸಂಪೂರ್ಣ ಹಣವನ್ನು ವಶಪಡಿಸಿಕೊಂಡಿದ್ದಾರೆ. ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಕಳ್ಳತನ ಎಸಗಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿದ್ದು, ದಂಪತಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಂಡ ಮನೆಗೇ ಕನ್ನ ಹಾಕಿದವರೀಗ ಜೈಲು ಪಾಲಾಗಿದ್ದಾರೆ.

ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಶ್ರೇಷ್ಠ ಮಾನದಂಡ: ಪ್ರಧಾನಿ ನರೇಂದ್ರ ಮೋದಿ

ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಶ್ರೇಷ್ಠ ಮಾನದಂಡ: ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 12 ವರ್ಷಗಳ ಪ್ರಧಾನಿ ಅವಧಿಯ ಮೈಲಿಗಲ್ಲಿನ ಸಂದರ್ಭದಲ್ಲಿ ಉತ್ತಮ ಆಡಳಿತ ಮತ್ತು ಜನಸೇವೆ ಕುರಿತು ಸಂದೇಶ ನೀಡಿದ್ದಾರೆ. ವಿನಮ್ರತೆ, ಸಮರ್ಪಣಾ ಭಾವನೆ ಹಾಗೂ ಕರ್ತವ್ಯ ಪ್ರಜ್ಞೆಯಿಂದ ಕೆಲಸ ಮಾಡುವವರು ಮಾತ್ರ ಜನರ ವಿಶ್ವಾಸ ಗಳಿಸುತ್ತಾರೆ ಎಂದು ಅವರು ಪ್ರತಿಪಾದಿಸಿದ್ದಾರೆ. ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಶ್ರೇಷ್ಠ ಮಾನದಂಡ ಎಂದು ಮೋದಿ ಒತ್ತಿಹೇಳಿದ್ದಾರೆ.

Karnataka Weather Forecast: ರಾಜ್ಯದ ಎರಡು ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್​​; ಎಲ್ಲೆಲ್ಲಿ ವರುಣಾರ್ಭಟ?

Karnataka Weather Forecast: ರಾಜ್ಯದ ಎರಡು ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್​​; ಎಲ್ಲೆಲ್ಲಿ ವರುಣಾರ್ಭಟ?

Monsoon 2026: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಜೂನ್ 10 ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಲಾಗಿದ್ದು, ಉಳಿದ ಹಲವೆಡೆ ಸಾಧಾರಣ ಮಳೆಯ ನಿರೀಕ್ಷೆ ಇದೆ.

ಕೇಂದ್ರ, ರಾಜ್ಯ ಸರ್ಕಾರಗಳ ಉದ್ಯೋಗ ಭರವಸೆ: 40ಕ್ಕೂ ಹೆಚ್ಚು ಮಂದಿಗೆ ವಂಚಿಸಿದ್ದ ತಂದೆ, ಮಗಳು ಅಂದರ್​

ಕೇಂದ್ರ, ರಾಜ್ಯ ಸರ್ಕಾರಗಳ ಉದ್ಯೋಗ ಭರವಸೆ: 40ಕ್ಕೂ ಹೆಚ್ಚು ಮಂದಿಗೆ ವಂಚಿಸಿದ್ದ ತಂದೆ, ಮಗಳು ಅಂದರ್​

ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ 40ಕ್ಕೂ ಹೆಚ್ಚು ಜನರಿಗೆ 5.30 ಕೋಟಿ ರೂ. ವಂಚಿಸಿದ್ದ ತಂದೆ-ಮಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಕಲಿ ತರಬೇತಿ ಕೇಂದ್ರ ತೆರೆದು ವಂಚಿಸುತ್ತಿದ್ದ ಆರೋಪಿಗಳು, ಸಂಶಯ ಮೂಡದಂತೆ ಹಾಗೂ ನಂಬಿಕೆ ಉಳಿಸಿಕೊಳ್ಳುವ ಉದ್ದೇಶದಿಂದ ಕೆಲ ಅಭ್ಯರ್ಥಿಗಳಿಗೆ ನಾಲ್ಕು ತಿಂಗಳವರೆಗೆ ಸಂಬಳವನ್ನೂ ನೀಡಿದ್ದರು. ತನಿಖೆಯಲ್ಲಿ ಸರ್ಕಾರಿ ಇಲಾಖೆಗಳ ಹೆಸರಿನಲ್ಲಿ ಇವರು ನಕಲಿ ನೇಮಕಾತಿ ಆದೇಶಗಳನ್ನು ನೀಡಿರುವುದು ದೃಢಪಟ್ಟಿದ್ದು, ಆರೋಪಿಗಳೀಗ ಖಾಕಿ ಅತಿಥಿಗಳಾಗಿದ್ದಾರೆ.

RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ: ಏಕಾಏಕಿ ಖಡಕ್​​ ಎಚ್ಚರಿಕೆ ಕೊಟ್ಟಿದ್ದೇಕೆ ಗೃಹ ಸಚಿವ?

RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ: ಏಕಾಏಕಿ ಖಡಕ್​​ ಎಚ್ಚರಿಕೆ ಕೊಟ್ಟಿದ್ದೇಕೆ ಗೃಹ ಸಚಿವ?

ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ (RSS) ನೋಂದಣಿ ದಾಖಲೆ ಸಿದ್ಧವಿಟ್ಟುಕೊಳ್ಳುವಂತೆ ಎಚ್ಚರಿಸಿದ್ದಾರೆ. ಇದಕ್ಕೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಜಟಾಪಟಿ ಆರಂಭವಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿಯೂ ಗ್ರಾಮೀಣಾಭಿವೃದ್ಧಿ ಮತ್ತು ಐಟಿಬಿಟಿ ಸಚಿವರಾಗಿದ್ದ ಪ್ರಿಯಾಂಕ್​​, ಆರ್​​ಎಸ್​ಎಸ್​​ ವಿರುದ್ಧ ಸಮರ ಸಾರಿದ್ದರು ಎನ್ನುವುದಿಲ್ಲಿ ಗಮನಾರ್ಹ.