AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಸನ್ನ ಗಾಂವ್ಕರ್​

ಪ್ರಸನ್ನ ಗಾಂವ್ಕರ್​

ಹಿರಿಯ ವರದಿಗಾರ - TV9 Kannada

prasanna.gaonkar@tv9.com

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow On:
ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಬಯೋಮೆಟ್ರಿಕ್ ದೃಢೀಕರಣದ ಜೊತೆ ಈ ಎಲ್ಲ ದಾಖಲೆ ಕಡ್ಡಾಯ

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಬಯೋಮೆಟ್ರಿಕ್ ದೃಢೀಕರಣದ ಜೊತೆ ಈ ಎಲ್ಲ ದಾಖಲೆ ಕಡ್ಡಾಯ

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮಗಳು ಜಾರಿಯಾಗಿದ್ದು, ಫಲಾನುಭವಿಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ. ಒಂದು ತಿಂಗಳೊಳಗೆ ಬಯೋಮೆಟ್ರಿಕ್ ಮಾಡಿಸುವುದು ಕಡ್ಡಾಯವಾಗಿದ್ದು, ತಪ್ಪಿದರೆ ಖಾತೆಗೆ 2,000 ರೂಪಾಯಿ ಹಣ ಬರುವುದು ನಿಲ್ಲಲಿದೆ. ಮೃತಪಟ್ಟವರು ಹಾಗೂ ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಲು ಈ ಕ್ರಮ ಕೈಗೊಳ್ಳಲಾಗಿದೆ.

ಕೇರಳ, ತಮಿಳುನಾಡು ಮಾದರಿ: ಡಿಕೆಶಿ ಸಂಪುಟದಲ್ಲಿ 3-4 ಯುವ ಮುಖಗಳಿಗೆ ಮಣೆ ಸಾಧ್ಯತೆ

ಕೇರಳ, ತಮಿಳುನಾಡು ಮಾದರಿ: ಡಿಕೆಶಿ ಸಂಪುಟದಲ್ಲಿ 3-4 ಯುವ ಮುಖಗಳಿಗೆ ಮಣೆ ಸಾಧ್ಯತೆ

ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಬದಲಾವಣೆಯ ಕಸರತ್ತು ಜೋರಾಗಿದ್ದು, ಸಿಎಂ ಡಿಕೆ ಶಿವಕುಮಾರ್ ಹಾಗೂ ಡಿಸಿಎಂ ಡಾ. ಜಿ ಪರಮೇಶ್ವರ್ ದೆಹಲಿ ತಲುಪಿದ್ದಾರೆ. ಭರತ್ ರೆಡ್ಡಿ, ಪ್ರದೀಪ್ ಈಶ್ವರ್ ಸೇರಿದಂತೆ ಯುವ ಮುಖಗಳಿಗೆ ಮಣೆ ಹಾಕುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಕೇರಳ, ತಮಿಳುನಾಡು ರೀತಿ ಹೊಸ ಹಾಗೂ ಯುವ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ.

ಕೆಐಎಡಿಬಿಯಲ್ಲಿ ಇನ್ಮುಂದೆ ಬ್ರೋಕರ್ಸ್‌ಗೆ ನೋ ಎಂಟ್ರಿ: 100 ದಿನಗಳಲ್ಲಿ ಇಡೀ ಸಿಸ್ಟಮ್ ಡಿಜಿಟಲ್ ಮಾಡಲು ಸಚಿವ ಎಂ.ಬಿ.ಪಾಟೀಲ್ ಆದೇಶ

ಕೆಐಎಡಿಬಿಯಲ್ಲಿ ಇನ್ಮುಂದೆ ಬ್ರೋಕರ್ಸ್‌ಗೆ ನೋ ಎಂಟ್ರಿ: 100 ದಿನಗಳಲ್ಲಿ ಇಡೀ ಸಿಸ್ಟಮ್ ಡಿಜಿಟಲ್ ಮಾಡಲು ಸಚಿವ ಎಂ.ಬಿ.ಪಾಟೀಲ್ ಆದೇಶ

ಕರ್ನಾಟಕದ KIADB ಸಂಸ್ಥೆಯು ಭೂಸ್ವಾಧೀನ ಮತ್ತು ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು ಮುಂದಿನ 100 ದಿನಗಳಲ್ಲಿ ಸಂಪೂರ್ಣ ಡಿಜಿಟಲೀಕರಣಗೊಳಿಸಲಿದೆ. ಸಚಿವ ಎಂ.ಬಿ. ಪಾಟೀಲ್ ಈ ಮಹತ್ವದ ಆದೇಶ ನೀಡಿದ್ದಾರೆ. ಇ-ಆಡಳಿತ ವ್ಯವಸ್ಥೆ ಅಡಿಯಲ್ಲಿ ಪ್ರತಿ ನಿವೇಶನದ 77 ಮಾಹಿತಿಗಳನ್ನು ಸಂಗ್ರಹಿಸಿ ಪಾರದರ್ಶಕತೆ ತರಲಾಗುತ್ತದೆ. ಇದು ಅವ್ಯವಹಾರ ತಡೆದು, ಹೂಡಿಕೆದಾರರಿಗೆ ಸುಲಭ ಮಾಹಿತಿ ನೀಡಿ, ಕೈಗಾರಿಕೆಗಳಿಗೆ ಇ-ಖಾತಾ ಪಡೆಯಲು ಸಹಕಾರಿ.

1.48 ಲಕ್ಷ ಮೃತ ಮಹಿಳೆಯರ ಖಾತೆಗೆ ಹೋಗಿತ್ತು 128 ಕೋಟಿ ರೂ. ಹಣ! ಗೃಹಲಕ್ಷ್ಮಿ ಯೋಜನೆ ಮಹಾ ಪರಿಷ್ಕರಣೆಗೆ ಸಿದ್ಧತೆ

1.48 ಲಕ್ಷ ಮೃತ ಮಹಿಳೆಯರ ಖಾತೆಗೆ ಹೋಗಿತ್ತು 128 ಕೋಟಿ ರೂ. ಹಣ! ಗೃಹಲಕ್ಷ್ಮಿ ಯೋಜನೆ ಮಹಾ ಪರಿಷ್ಕರಣೆಗೆ ಸಿದ್ಧತೆ

ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟಿರುವ 1.48 ಲಕ್ಷ ಮಹಿಳೆಯರ ಖಾತೆಗಳಿಗೆ 128 ಕೋಟಿ ರೂಪಾಯಿಗೂ ಅಧಿಕ ಹಣ ಜಮೆಯಾಗಿರುವುದು ಪತ್ತೆಯಾಗಿದೆ. ಈ ಭಾರಿ ತಾಂತ್ರಿಕ ಲೋಪ ಹಾಗೂ ಮೊಬೈಲ್ ಸಂಖ್ಯೆಗಳ ಗೊಂದಲ ನಿವಾರಿಸಲು ಮುಖ್ಯಮಂತ್ರಿ ಡಿಕೆಶಿವಕುಮಾರ್ ನೇತೃತ್ವದ ಸರ್ಕಾರ ಇದೀಗ ಫಲಾನುಭವಿಗಳಿಂದ ಹೊಸದಾಗಿ ಮರು ಅರ್ಜಿ ಸ್ವೀಕರಿಸಲು ಸಿದ್ಧತೆ ನಡೆಸಿದೆ.

ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ

ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ

ರಾಹುಲ್ ಗಾಂಧಿ ಅವರು ದಿವಂಗತ ಸೂರಜ್ ಹೆಗ್ಡೆ ಅವರ ಅಂತಿಮ ದರ್ಶನ ಪಡೆದು, ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸೂರಜ್ ಅವರ ನಿವಾಸಕ್ಕೆ ಅವರು ಭೇಟಿ ನೀಡಿದ್ದು, ಈ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಸೇರಿದಂತೆ ಕರ್ನಾಟಕದ ಹಲವು ಹಿರಿಯ ನಾಯಕರು ರಾಹುಲ್ ಗಾಂಧಿ ಅವರೊಂದಿಗೆ ಇದ್ದರು.

ಡಿ.ಕೆ. ಶಿವಕುಮಾರ್​​ ಸಂಪುಟದಲ್ಲಿ ಮುಗಿಯದ ಖಾತೆ ಕ್ಯಾತೆ: ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ

ಡಿ.ಕೆ. ಶಿವಕುಮಾರ್​​ ಸಂಪುಟದಲ್ಲಿ ಮುಗಿಯದ ಖಾತೆ ಕ್ಯಾತೆ: ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ

ಸಚಿವ ಕೃಷ್ಣ ಭೈರೇಗೌಡ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಸಮ್ಮತಿ ಸೂಚಿಸಿಲ್ಲ. ಬಿಡಿಎ ಮತ್ತು ಬಿಎಂಆರ್‌ಡಿಎ ಪ್ರಾಧಿಕಾರಗಳು ತಮ್ಮ ಖಾತೆಗೆ ಸೇರ್ಪಡೆಯಾಗಬೇಕೆಂದು ಅವರು ಪಟ್ಟು ಹಿಡಿದಿದ್ದಾರೆ. ಅಪೂರ್ಣ ಖಾತೆ ಸ್ವೀಕರಿಸಲು ಭೈರೇಗೌಡರು ನಿರಾಕರಿಸಿದ್ದು, ಈ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಜೊತೆಗಿನ ಮಾತುಕತೆ ಕೂಡ ಫಲಪ್ರದವಾಗಿಲ್ಲ ಎನ್ನಲಾಗಿದೆ. ಹೀಗಾಗಿ ಹೈಕಮಾಂಡ್‌ ಜೊತೆ ಚರ್ಚಿಸಲು ದೆಹಲಿಗೆ ತೆರಳಿದ್ದಾರೆ.

ಡಿಕೆ ಶಿವಕುಮಾರ್ ಸಂಪುಟದ 13 ಸಚಿವರಿಗೆ ಕೊಠಡಿ ಹಂಚಿಕೆ, ರಾಮಲಿಂಗಾರೆಡ್ಡಿಗೆ ಬಂಪರ್

ಡಿಕೆ ಶಿವಕುಮಾರ್ ಸಂಪುಟದ 13 ಸಚಿವರಿಗೆ ಕೊಠಡಿ ಹಂಚಿಕೆ, ರಾಮಲಿಂಗಾರೆಡ್ಡಿಗೆ ಬಂಪರ್

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ತಮ್ಮ ಸಂಪುಟದ ಎಲ್ಲಾ 13 ಸಚಿವರಿಗೆ ಈಗಾಗಲೇ ಖಾತೆಗಳನ್ನು ಹಂಚಿಕೆಯಾಗಿದೆ. ಈ ಪೈಕಿ ಕೆಲವು ಸಚಿವರು ಸಿದ್ದರಾಮಯ್ಯ ಸರ್ಕಾರದಲ್ಲಿ ನಿಭಾಯಿಸಿದ್ದ ಖಾತೆಗಳನ್ನೇ ಮರಳಿ ಪಡೆದುಕೊಂಡಿದ್ದರೆ, ಮತ್ತೆ ಕೆಲವು ಸಚಿವರು ಹೊಸ ಖಾತೆಗಳನ್ನು ನೀಡಲಾಗಿದೆ. ಆದ್ರೆ, ಕೆಲವರಿಗೆ ಖಾತೆಗಳ ಬಗ್ಗೆ ಅಸಮಾಧಾನ ಇದೆ. ಇದರ ಮಧ್ಯೆ ಇದೀಗ ನೂತನ ಸಚಿವರಿಗೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಕೊಠಡಿ ಹಂಚಿಕೆ ಮಾಡಲಾಗಿದೆ. ಹಾಗಾದ್ರೆ, ಯಾವ ಸಚಿವರಿಗೆ ಯಾವ ಕೊಠಡಿ ನೀಡಲಾಗಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ಇನ್ನೂ ಮುಗಿದಿಲ್ಲ ಖಾತೆ ಕ್ಯಾತೆ: ಹೈಕಮಾಂಡ್​ನಿಂದ ಸ್ಪಷ್ಟತೆ ಸಿಗುವ ವರೆಗೆ ಅಧಿಕಾರ ಸ್ವೀಕರಿಸಲ್ಲವೆಂದ ಕೃಷ್ಣಭೈರೇಗೌಡ!

ಇನ್ನೂ ಮುಗಿದಿಲ್ಲ ಖಾತೆ ಕ್ಯಾತೆ: ಹೈಕಮಾಂಡ್​ನಿಂದ ಸ್ಪಷ್ಟತೆ ಸಿಗುವ ವರೆಗೆ ಅಧಿಕಾರ ಸ್ವೀಕರಿಸಲ್ಲವೆಂದ ಕೃಷ್ಣಭೈರೇಗೌಡ!

ಸಚಿವ ಕೃಷ್ಣಭೈರೇಗೌಡರು ಬೆಂಗಳೂರು ನಗರಾಭಿವೃದ್ಧಿ ಖಾತೆ ಸ್ವೀಕರಿಸಲು ನಿರಾಕರಿಸಿದ್ದಾರೆ. ಬಿಡಿಎ ಮತ್ತು ಬಿಎಂಆರ್‌ಡಿಎ ಇಲಾಖೆಗಳನ್ನು ತಮ್ಮ ಖಾತೆಗೆ ಸೇರಿಸಬೇಕೆಂದು ಅವರು ಹೈಕಮಾಂಡ್‌ ಜತೆ ಪಟ್ಟು ಹಿಡಿದಿದ್ದಾರೆ. ಈ ಎರಡು ಪ್ರಾಧಿಕಾರಗಳಿಲ್ಲದೆ ಖಾತೆಯು ಪರಿಣಾಮಕಾರಿ ಆಗುವುದಿಲ್ಲ ಎಂಬುದು ಅವರ ವಾದವಾಗಿದೆ. ಹೈಕಮಾಂಡ್‌ನ ಸ್ಪಷ್ಟ ಸಂದೇಶ ಬರುವವರೆಗೂ ಅಧಿಕಾರ ವಹಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿ ಜೋರಾಯ್ತು ಸಚಿವ ಸ್ಥಾನಕ್ಕಾಗಿ ಸರ್ಕಸ್: 20 ಸ್ಥಾನಗಳಿಗಾಗಿ 60ಕ್ಕೂ ಹೆಚ್ಚು ಶಾಸಕರಿಂದ ಮಹಾ ಲಾಬಿ

ಕಾಂಗ್ರೆಸ್‌ನಲ್ಲಿ ಜೋರಾಯ್ತು ಸಚಿವ ಸ್ಥಾನಕ್ಕಾಗಿ ಸರ್ಕಸ್: 20 ಸ್ಥಾನಗಳಿಗಾಗಿ 60ಕ್ಕೂ ಹೆಚ್ಚು ಶಾಸಕರಿಂದ ಮಹಾ ಲಾಬಿ

ಕರ್ನಾಟಕ ಕಾಂಗ್ರೆಸ್‌ನಲ್ಲಿ 20 ಸಚಿವ ಸ್ಥಾನಗಳ ಭರ್ತಿಗಾಗಿ 60ಕ್ಕೂ ಹೆಚ್ಚು ಶಾಸಕರು ಲಾಬಿ ನಡೆಸುತ್ತಿದ್ದಾರೆ. ಮಾಜಿ ಸಚಿವರು ತೀವ್ರ ಲಾಬಿ ಮಾಡುತ್ತಿದ್ದಾರೆ. ಮತ್ತೊಂದೆಡೆ, ಆಕಾಂಕ್ಷಿಗಳ ಸಂಖ್ಯೆ ನೋಡಿ ಬೆಚ್ಚಿಬಿದ್ದಿರುವ ಹೈಕಮಾಂಡ್, ವಿಧಾನ ಪರಿಷತ್ ಚುನಾವಣೆ ಮುಗಿದ ನಂತರವೇ ಸಂಪುಟ ವಿಸ್ತರಣೆಗೆ ಮುಂದಾಗುವ ಲಕ್ಷಣಗಳಿವೆ.

ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ: ರಾಜೀನಾಮೆ ಸಾಧ್ಯತೆ

ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ: ರಾಜೀನಾಮೆ ಸಾಧ್ಯತೆ

ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಈ ಬೆಳವಣಿಗೆ ಕಾಂಗ್ರೆಸ್‌ನಲ್ಲಿ ಮತ್ತೆ ಆಂತರಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಅಲ್ಲದೆ, ಎಲ್ಲವನ್ನೂ ಹೈಕಮಾಂಡೇ ನಿರ್ಧರಿಸುತ್ತಿದೆಯೇ ಎಂಬ ಪ್ರಶ್ನೆಯೂ ಕಾಡಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್​​ ಕೈತಪ್ಪಿದ್ಯಾಕೆ? ಜಾರಕಿಹೊಳಿ ಲೆಕ್ಕಾಚಾರ ತಪ್ಪಿದ್ದೇಗೆ?: ಇಲ್ಲಿದೆ ಮಾಹಿತಿ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್​​ ಕೈತಪ್ಪಿದ್ಯಾಕೆ? ಜಾರಕಿಹೊಳಿ ಲೆಕ್ಕಾಚಾರ ತಪ್ಪಿದ್ದೇಗೆ?: ಇಲ್ಲಿದೆ ಮಾಹಿತಿ

ಕೆಪಿಸಿಸಿಯ ನೂತನ ಅಧ್ಯಕ್ಷರನ್ನಾಗಿ ವಿಧಾನ ಪರಿಷತ್​​ ಸದಸ್ಯ ಮತ್ತು ಕಾಂಗ್ರೆಸ್​​ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್​​ ಅವರನ್ನು ಎಐಸಿಸಿ ನೇಮಕ ಮಾಡಿದೆ. ಅಷ್ಟಕ್ಕೂ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿದ್ದ ಸತೀಶ್ ಜಾರಕಿಹೊಳಿ ಅವರಿಗೆ ಕೊನೆಕ್ಷಣದಲ್ಲಿ ಹಿನ್ನಡೆಯಾಗಲು ಕಾರಣಗಳೇನು? ಹೈಕಮಾಂಡ್ ಲೆಕ್ಕಾಚಾರ ಏನಾಗಿತ್ತು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

“ಅಧಿಕಾರ ಬೇಕಾದವರು ಡಿಕೆಶಿ ಜತೆ ಹೋಗಿ, ಪಕ್ಷ ಕಟ್ಟುವವರು ನನ್ನೊಂದಿಗೆ ಬನ್ನಿ”: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಖಡಕ್ ಮಾತು

“ಅಧಿಕಾರ ಬೇಕಾದವರು ಡಿಕೆಶಿ ಜತೆ ಹೋಗಿ, ಪಕ್ಷ ಕಟ್ಟುವವರು ನನ್ನೊಂದಿಗೆ ಬನ್ನಿ”: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಖಡಕ್ ಮಾತು

ಹೊಸ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅಧಿಕಾರ ವಹಿಸಿಕೊಂಡಿದ್ದು, ಅಧಿಕಾರಾಕಾಂಕ್ಷಿಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಮನವಿ ಮಾಡಿರುವ ಹರಿಪ್ರಸಾದ್, ರಾಹುಲ್ ಗಾಂಧಿ ಹೋರಾಟಕ್ಕೆ ಬೆಂಬಲ ನೀಡುವಂತೆ ಕರೆ ನೀಡಿದ್ದಾರೆ. ಇದು ಕೇವಲ ಹುದ್ದೆಯಲ್ಲ, ಸಾಮಾಜಿಕ ನ್ಯಾಯ, ಜಾತ್ಯತೀತತೆ ಮತ್ತು ದುರ್ಬಲ ವರ್ಗಗಳ ಸಬಲೀಕರಣದ ಜಯ ಎಂದು ಬಣ್ಣಿಸಿದ್ದಾರೆ. ಸಿದ್ಧಾಂತಕ್ಕೆ, ಜನರ ಹಿತಕ್ಕೆ ಆದ್ಯತೆ ನೀಡುವ ಮೂಲಕ ಪಕ್ಷವನ್ನು ಬಲಪಡಿಸಲು ಶ್ರಮಿಸುವುದಾಗಿ ತಿಳಿಸಿದ್ದಾರೆ.