ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ
ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ
ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ
ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್
ಆಡೊ ಹವ್ಯಾಸ ಇದೆ.
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇ ಹೊಸ ಎಂಟ್ರಿ, ಎಕ್ಸಿಟ್ಗೆ ಕೇಂದ್ರದಿಂದ 712 ಕೋಟಿ ರೂ. ಬಿಡುಗಡೆ
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಹೊಸ ಎಂಟ್ರಿ ಹಾಗೂ ಎಕ್ಸಿಟ್ ಸ್ಥಾಪಿಸಿ ಹೆದ್ದಾರಿಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವುದಕ್ಕಾಗಿ ಕೇಂದ್ರ ಸರ್ಕಾರ 712 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿದೆ. ಆರಂಭದಲ್ಲಿ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇದೀಗ ಹೆದ್ದಾರಿಯನ್ನು ಮತ್ತಷ್ಟು ಸುರಕ್ಷಿತವಾಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
- Prashantha B
- Updated on: Jul 31, 2025
- 8:06 am
ಮಾಕಳಿ ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ಪರಸಂಘಕ್ಕಾಗಿ ಗಂಡನ ಕೊಲೆ ಮಾಡಿಸಿದ ಮಹಿಳೆ
ಆತ ಗ್ರಾಮ ಪಂಚಾಯತಿ ಮಾಜಿ ಸದಸ್ಯ. ವ್ಯವಸಾಯ, ರಾಜಕೀಯದ ಜೊತೆಗೆ ಬೆಂಗಳೂರಿನಲ್ಲಿ ಕೋಳಿ ಅಂಗಡಿ ಇಟ್ಟುಕೊಂಡು ಬದುಕು ಸಾಗಿಸುತ್ತಿದ್ದ. ಸ್ವಗ್ರಾಮಕ್ಕೆ ಎಂದು ಬೆಂಗಳೂರಿನಿಂದ ಹೊರಟಿದ್ದ. ಆದರೆ ಆತ ಮಾರ್ಗಮಧ್ಯೆ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದ. ಒಂದು ತಿಂಗಳ ನಂತರ ಗ್ರಾಪಂ ಮಾಜಿ ಸದಸ್ಯನ ಸಾವಿನ ಸತ್ಯ ಬಯಲಾಗಿದ್ದು, ಪರಸಂಘದ ಆಟಕ್ಕಾಗಿ ಪತ್ನಿಯೇ ಸುಪಾರಿ ನೀಡಿ ಭೀಕರವಾಗಿ ಹತ್ಯೆ ಮಾಡಿಸಿರುವ ಸತ್ಯ ಬಯಲಾಗಿದೆ.
- Prashantha B
- Updated on: Jul 25, 2025
- 2:41 pm
ಕನಕಪುರ, ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಏಕಾಏಕಿ ಅಡ್ಡಬಂದ ಕಾಡಾನೆ: ವಿಡಿಯೋ ವೈರಲ್
ಇತ್ತೀಚೆಗೆ ರಾಮನಗರದಲ್ಲಿ ರೈತರ ಜಮೀನುಗಳಿಗೆ ಕಾಡಾನಗೆಳು ಲಗ್ಗೆ ಇಡುತ್ತಿರು ಪ್ರಕರಣಗಳು ಹೆಚ್ಚಾಗಿವೆ. ಕಾಡಾನೆ ಹಾವಳಿಗೆ ಕಡಿವಾಣ ಹಾಕುವಂತೆ ರೈತರು ಆಗ್ರಹಿಸಿದ್ದಾರೆ. ಇದೇ ಸಂದರ್ಭದಲ್ಲಿ, ಕಾಡಾನೆಯೊಂದು ರಸ್ತೆ ದಾಟುತ್ತಾ ಏಕಾಏಕಿ ಕಾರಿಗೆ ಅಡ್ಡಬಂದು ಎದುರುಬದುರಾದ ಘಟನೆ ನಡೆದಿದೆ. ವೈರಲ್ ವಿಡಿಯೋ ಇಲ್ಲಿದೆ ನೋಡಿ.
- Prashantha B
- Updated on: Jul 22, 2025
- 8:55 am
ತಾನು ಓದಿದ ಸರ್ಕಾರಿ ಶಾಲೆ ಕಂಡು ಮರುಕ: 14 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಕಟ್ಟಡ ನಿರ್ಮಿಸಿಕೊಟ್ಟ ವೈದ್ಯ
ತಾನು ಓದಿದ ಸರ್ಕಾರಿ ಶಾಲೆಯ ಶಿಥಿಲಾವಸ್ಥೆ ಕಂಡು ಮರುಗಿದ ರಾಮನಗರದ ಓರ್ವ ವೈದ್ಯ, ಸ್ವಂತ ಹಣದಲ್ಲಿ ಹೈಟೆಕ್ ಕಟ್ಟಡ ನಿರ್ಮಿಸಿ ಕೊಟ್ಟಿದ್ದಾರೆ. ಹುಟ್ಟೂರಿನ ಶಾಲೆಯ ಋಣ ತೀರಿಸಲು ಈ ಮಹತ್ಕಾರ್ಯ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ನೂತನ ಕಟ್ಟಡ ಸರ್ಕಾರಕ್ಕೆ ಹಸ್ತಾಂತರವಾಯಿತು. ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.
- Prashantha B
- Updated on: Jul 18, 2025
- 10:25 pm
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಬಿ. ಸರೋಜಾದೇವಿ ಅವರ ಹುಟ್ಟೂರಾದ ದಶವಾರ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅದಕ್ಕೆ ಸಕಲ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಚನ್ನಪಟ್ಟಣದ ದಶವಾರದಲ್ಲಿ ಇರುವ ತೋಟದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬದವರು ತೀರ್ಮಾನಿಸಿದ್ದಾರೆ. ಇದೇ ಜಾಗದಲ್ಲಿ ಬಿ. ಸರೋಜಾದೇವಿ ಅವರ ತಾಯಿ ರುದ್ರಮ್ಮ ಸಮಾಧಿ ಕೂಡ ಇದೆ.
- Prashantha B
- Updated on: Jul 14, 2025
- 10:24 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ: ತಂದೆ, ಮಗ ಸೇರಿ ಮೂವರು ಸಾವು
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ರಾಮನಗರದ ಜಯಪುರಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
- Prashantha B
- Updated on: Jul 13, 2025
- 7:54 am
ಗಾಂಜಾ ನಶೆಯಲ್ಲೇ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ಬೆಂಗಳೂರು ಹೊರವಲಯದಲ್ಲಿ ಭೀಕರ ಕೃತ್ಯ
ಬೆಂಗಳೂರು ಹೊರವಲಯದ ತಾವರೆಕೆರೆಯಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನೊಬ್ಬ ಆಕೆಯನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾದ ಘಟನೆ ಬುಧವಾರ ನಡೆದಿದೆ. ತಂದೆ, ತಾಯಿ ಹಾಗೂ ಸಹೋದರ ಕೂಲಿ ಕೆಲಸಕ್ಕೆ ಹೋಗಿದ್ದಾಗ ಮಟಮಟ ಮಧ್ಯಾಹ್ನವೇ ಮನೆಗೆ ನುಗ್ಗಿದ್ದ ಆರೋಪಿ ಕೃತ್ಯ ಎಸಗಿ ಪರಾರಿಯಾಗಿದ್ದಾನೆ.
- Prashantha B
- Updated on: Jul 10, 2025
- 7:23 am
ಭಾಷೆ ವಿವಾದ: ನಟ ಕಮಲ್ ಹಾಸನ್ ವಿರುದ್ಧ ಕನಕಪುರ ಕೋರ್ಟ್ಗೆ ಪಿಸಿಆರ್ ಸಲ್ಲಿಕೆ
ಕನ್ನಡ ಭಾಷೆಯ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿ ಕಮಲ್ ಹಾಸನ್ ಸೃಷ್ಟಿಸಿದ ವಿವಾದ ಇನ್ನೂ ತಣ್ಣಗಾಗಿಲ್ಲ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಸೂಚಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಕಮಲ್ ವಿರುದ್ಧ ಕನಕಪುರದ 2ನೇ ಅಪರ ಸಿವಿಲ್, ಜೆಎಂಎಫ್ಸಿ ಕೋರ್ಟ್ಗೆ ಪಿಸಿಆರ್ ಸಲ್ಲಿಕೆ ಆಗಿದೆ.
- Prashantha B
- Updated on: Jun 30, 2025
- 10:42 pm
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್ ಭವಿಷ್ಯ
ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಮುಂದಿನ ಮೂರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದಾಗಿ ಭವಿಷ್ಯ ನುಡಿದಿದ್ದಾರೆ. ರಾಜಕಾರಣದಲ್ಲಿ ಬದಲಾವಣೆ ಸಹಜ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಪವರ್ ಸೆಂಟರ್ ಇಲ್ಲ ಎಂದೂ, ಹೈಕಮಾಂಡ್ನ ನಿರ್ಧಾರವೇ ಅಂತಿಮ ಎಂದೂ ಅವರು ಹೇಳಿದ್ದಾರೆ. ವಿಡಿಯೋ ನೋಡಿ.
- Prashantha B
- Updated on: Jun 29, 2025
- 9:54 am
ಅಡುಗೆ ವಿಚಾರಕ್ಕೆ ಗಲಾಟೆ: ತುರಿಮಣೆಯಿಂದ ಹೊಡೆದು ಪತ್ನಿ ಕೊಲೆ ಮಾಡಿದ ಪತಿ
ರಾಮನಗರದ ಮತ್ತಿಕೆರೆ ಗ್ರಾಮದಲ್ಲಿ ಅಡುಗೆ ಮಾಡುವ ವಿಚಾರದಲ್ಲಿ ಉಂಟಾದ ಜಗಳದಲ್ಲಿ ಪತ್ನಿಯನ್ನು ತುರಿಮಣೆಯಿಂದ ಹೊಡೆದು ಪತಿ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಮಾಗಡಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹತ್ಯೆ ನಂತರ ತಿರುಪತಿಗೆ ಎಸ್ಕೇಪ್ ಆಗಲು ಮುಂದಾಗಿದ್ದ ಆರೋಪಿಯನ್ನ ವಶಕ್ಕೆ ಪಡೆಯಲಾಗಿದೆ.
- Prashantha B
- Updated on: Jun 26, 2025
- 12:50 pm
ರಾಮನಗರ: ಗ್ರಾಮ ಪಂಚಾಯಿತಿ ಸದಸ್ಯ ಅನುಮಾನಾಸ್ಪದವಾಗಿ ಸಾವು
ಚನ್ನಪಟ್ಟಣ ತಾಲ್ಲೂಕಿನ ಮಾಕಳಿ ಗ್ರಾಮ ಪಂಚಾಯಿತಿ ಸದಸ್ಯ ಲೋಕೇಶ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಅವರ ಶವ ಅವರ ಕಾರದ ಬಳಿ ಪತ್ತೆಯಾಗಿದೆ. ಎಂ.ಕೆ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ಗ್ರಾಮದಲ್ಲಿ ಆತಂಕ ಸೃಷ್ಟಿಸಿದೆ.
- Prashantha B
- Updated on: Jun 24, 2025
- 3:07 pm
ಡಿಕೆಶಿ ತವರು ಜಿಲ್ಲೆಯಲ್ಲಿ ಫಾರಿನ್ ಮಾದರಿಯ ಪಾರ್ಕ್: ಏನೇನು ವಿಶೇಷತೆ? ಎಷ್ಟು ಖರ್ಚು? ಇಲ್ಲಿದೆ ವಿವರ
ಇತ್ತೀಚಿಗಷ್ಟೇ ರಾಜ್ಯ ಸರ್ಕಾರ ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿತ್ತು. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಮನಗರ ಜನರಿಗೆ ಸಿಹಿ ಸುದ್ದಿ ನೀಡಿದ್ದಾರೆ. ತವರು ಜಿಲ್ಲೆ ರಾಮನಗರ ಅಭಿವೃದ್ಧಿ ಟೊಂಕ ಕಟ್ಟಿ ನಿಂತಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಜಿಲ್ಲೆಯ ಜನರಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಇಲ್ಲಿದೆ ವಿವರ
- Prashantha B
- Updated on: Jun 23, 2025
- 8:40 pm