ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ
ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ
ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ
ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್
ಆಡೊ ಹವ್ಯಾಸ ಇದೆ.
ಸ್ವಕ್ಷೇತ್ರ ಕನಕಪುರಕ್ಕೆ ಡಿಕೆ ಶಿವಕುಮಾರ್ ಭೇಟಿ: ನಿಮ್ಮೊಂದಿಗೆ ಸದಾ ಇರ್ತೆನೆ ಎಂಬ ಸಂದೇಶ ರವಾನಿಸಿದ ಸಿಎಂ
ಡಿಕೆ ಶಿವಕುಮಾರ್ ಸಿಎಂ ಆದ ನಂತರ ತಮ್ಮ ಸ್ವಕ್ಷೇತ್ರ ಕನಕಪುರಕ್ಕೆ ಮೊದಲ ಬಾರಿಗೆ ಭೇಟಿ ನೀಡಿದರು. ಕ್ಷೇತ್ರದ ಜನ ನನ್ನನ್ನ ಇಲ್ಲಿಯವರೆಗೆ ಕರೆತಂದಿದ್ದಾರೆ. ಮೊದಲು ಅವರಿಗೆ ಕೃತಜ್ಞತೆ ಸಲ್ಲಿಸುವುದು ಕರ್ತವ್ಯ. ಅದಕ್ಕೆ ಮೊದಲ ಭೇಟಿ ನನ್ನ ಕ್ಷೇತ್ರ, ನನ್ನ ಜನತೆಗೆ ಎಂದು ಹೇಳಿದ್ದಾರೆ.
- Prashantha B
- Updated on: Jun 7, 2026
- 1:27 pm
CM DK Shivakumar Profile: ವಿದ್ಯಾರ್ಥಿ ನಾಯಕನಿಂದ ಸಿಎಂ ಗದ್ದುಗೆಯವರೆಗೆ: ಕನಕಪುರ ಬಂಡೆ ಡಿಕೆ ಶಿವಕುಮಾರ್ ರಾಜಕೀಯ ಪಯಣದ ಹಿನ್ನೋಟ
ಡಿಕೆ ಶಿವಕುಮಾರ್ ಪ್ರೊಫೈಲ್: ಜೆಡಿಎಸ್ ಘಟಾನುಘಟಿಗಳ ವಿರುದ್ಧವೇ ರಾಜಕೀಯ ಅಖಾಡಕ್ಕಿಳಿದು 'ಜೈಂಟ್ ಕಿಲ್ಲರ್' ಎನಿಸಿಕೊಂಡ ಕನಕಪುರದ ಬಂಡೆ ಡಿ.ಕೆ. ಶಿವಕುಮಾರ್ ಅವರ ರೋಮಾಂಚನಕಾರಿ ವ್ಯಕ್ತಿಚಿತ್ರ ಇಲ್ಲಿದೆ. ಟಿಕೆಟ್ ಕೈತಪ್ಪಿದಾಗ ಪಕ್ಷೇತರನಾಗಿ ಗೆದ್ದು, ಕಾಂಗ್ರೆಸ್‌ನ ಟ್ರಬಲ್ ಶೂಟರ್ ಆಗಿ ದೆಹಲಿ ಮಟ್ಟದಲ್ಲಿ ಬೆಳೆದ ಕರ್ನಾಟಕದ ಮುಖ್ಯಮಂತ್ರಿಯಾಗಿ ಇತಿಹಾಸ ಬರೆದ ಅವರ ರಾಜಕೀಯ ಯಶೋಗಾಥೆಯ ಹಿನ್ನೋಟ ಇಲ್ಲಿದೆ.
- Prashantha B
- Updated on: Jun 3, 2026
- 12:29 pm
ಕೊನೆಗೂ ತಂದೆಯ ಆ ಒಂದು ಆಸೆ ಈಡೇರಿಸಿದ ಡಿಕೆಶಿ: ಅಷ್ಟಕ್ಕೂ ಕೆಂಪೇಗೌಡರ ಬಯಕೆ ಏನಾಗಿತ್ತು?
ಡಿ.ಕೆ. ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ ಆಗುತ್ತಿರುವುದಕ್ಕೆ ಅವರ ಹುಟ್ಟೂರು ಬೆಂಗಳೂರು ದಕ್ಷಿಣದ ದೊಡ್ಡ ಆಲಹಳ್ಳಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ತಮ್ಮ ಮಗ ಸಿಎಂ ಆಗಬೇಕೆಂಬ ತಂದೆ ಕೆಂಪೇಗೌಡರ ಕನಸನ್ನು ಡಿಕೆಶಿ ನನಸು ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ಆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
- Prashantha B
- Updated on: Jun 2, 2026
- 6:50 pm
ಹೇಗಿದೆ ನೋಡಿ ಡಿ.ಕೆ. ಶಿವಕುಮಾರ್ ಅವರ ಕನಕಪುರದ ಭವ್ಯ ಬಂಗಲೆ!
ಡಿಕೆ ಶಿವಕುಮಾರ್ ಅವರು ಸಿಎಂ ಆಗಿ ಪದಗ್ರಹಣ ಮಾಡಲಿರುವ ಹಿನ್ನೆಲೆಯಲ್ಲಿ ಸ್ವಕ್ಷೇತ್ರ ಕನಕಪುರದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಅವರ ಭವ್ಯ ನಿವಾಸವು ಕ್ಷೇತ್ರದ ಚಟುವಟಿಕೆಗಳ ಕೇಂದ್ರವಾಗಿದೆ. ಕನಕಪುರಕ್ಕೆ ಭೇಟಿ ನೀಡಿದಾಗಲೆಲ್ಲಾ ಡಿಕೆಶಿ ಈ ಮನೆಯಲ್ಲಿ ತಂಗಿ, ಕಾರ್ಯಕರ್ತರು ಮತ್ತು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುತ್ತಾರೆ. ಈ ನಿವಾಸವು ಕ್ಷೇತ್ರದ ಜನರಿಗೆ ಅವರೊಂದಿಗೆ ಸಂಪರ್ಕ ಸಾಧಿಸಲು ಪ್ರಮುಖ ತಾಣವಾಗಿದೆ.
- Prashantha B
- Updated on: May 31, 2026
- 2:26 pm
ಡಿಕೆ ಶಿವಕುಮಾರ್ ಸಿಎಂ ಆಗಲೆಂದು 3 ವರ್ಷದಿಂದ ಗಡ್ಡ-ಕೂದಲು ಬಿಟ್ಟು ಹರಕೆ ಹೊತ್ತಿದ್ದ ಅಪ್ಪಟ ಅಭಿಮಾನಿ!
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಕಳೆದ 3 ವರ್ಷಗಳಿಂದ ಕಟ್ಟಿಂಗ್ ಹಾಗೂ ಶೇವಿಂಗ್ ಮಾಡಿಸದೆ ಹರಕೆ ಹೊತ್ತಿದ್ದ ಹಾರೋಹಳ್ಳಿಯ ಈಶ್ವರಪ್ಪ ಎಂಬ ಅಭಿಮಾನಿಯ ಪ್ರಾರ್ಥನೆ ಕೊನೆಗೂ ಫಲಿಸಿದ್ದು, ಡಿಕೆಶಿ ಪ್ರಮಾಣವಚನ ಮುಗಿದ ಬೆನ್ನಲ್ಲೇ ಮಂತ್ರಾಲಯಕ್ಕೆ ತೆರಳಿ ಮುಡಿ ಕೊಡಲು ಸಜ್ಜಾಗಿದ್ದಾರೆ. ಇವರು ಡಿಕೆಶಿ ಸಿಎಂ ಆಗಲೆಂದು ಕುಮಭಮೇಳದಲ್ಲೂ ಪ್ರಾರ್ಥನೆ ಮಾಡಿದ್ದರು.
- Prashantha B
- Updated on: May 30, 2026
- 10:36 am
ಡಿಕೆ ಶಿವಕುಮಾರ್ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ರಾಮನಗರದಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಪಟ್ಟದ ನಿರೀಕ್ಷೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಅಧಿಕೃತ ಘೋಷಣೆಯಾಗಿಲ್ಲದಿದ್ದರೂ, ಸಿಹಿ ಹಂಚಿ ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ನಾಯಕತ್ವ ಬದಲಾವಣೆಗೆ ಸಮ್ಮತಿಸಿದ್ದು, ಡಿಕೆಶಿ ಸಿಎಂ ಆಗುತ್ತಾರೆ ಎಂಬ ನಂಬಿಕೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಈ ಸಂಭ್ರಮಾಚರಣೆ ನಡೆಯುತ್ತಿದೆ.
- Prashantha B
- Updated on: May 27, 2026
- 2:15 pm
ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್: 6 ಮಂದಿ ಪೊಲೀಸರ ತಲೆದಂಡ
ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಸಾಗುವ ಮಾರ್ಗದ ಬಳಿ ಸ್ಫೋಟಕ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಒಬ್ಬ ಪಿಎಸ್‌ಐ ಸೇರಿದಂತೆ ಆರು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಲಾಗಿದೆ. ಬೆಂಗಳೂರು ದಕ್ಷಿಣ ಎಸ್ಪಿ ಶ್ರೀನಿವಾಸ್ ಗೌಡ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮೇ 10ರಂದು ಪ್ರಧಾನಿ ಬೆಂಗಳೂರು ಭೇಟಿ ವೇಳೆ ಸ್ಫೋಟಕ ತುಂಬಿದ ಬಾಕ್ಸ್ ಅವರು ಸಾಗಬೇಕಿದ್ದ ಮಾರ್ಗದ ಸಮೀಪವೇ ಪತ್ತೆಯಾಗಿತ್ತು.
- Prashantha B
- Updated on: May 24, 2026
- 11:56 am
ಕಾಂಗ್ರೆಸ್ ಹಿರಿಯ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ನಿಧನ: ಅಂತಿಮ ದರ್ಶನ ಪಡೆದ ಡಿ.ಕೆ. ಶಿವಕುಮಾರ್
ಕಾಂಗ್ರೆಸ್ ಹಿರಿಯ ನಾಯಕ ಹಾಜಿ ಸೈಯದ್ ಜಿಯಾವುಲ್ಲಾ ನಿಧನರಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ತೋಪ್‌ಖಾನ್ ಮೊಹಲ್ಲಾದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಡಿ.ಕೆ.ಶಿವಕುಮಾರ್ ಜೊತೆ ಸಾಕಷ್ಟು ನಿಕಟ ಸಂಬಂಧ ಹೊಂದಿದ್ದ ಜಿಯಾವುಲ್ಲಾ, ಹೃದಯಾಘಾತದಿಂದ ನಿಧನರಾಗಿದ್ದಾರೆ.
- Prashantha B
- Updated on: May 19, 2026
- 7:26 pm
ಬಾಲಕಿಯರ ವಿಡಿಯೋ ಚಿತ್ರೀಕರಿಸಿ ಆನ್‌ಲೈನ್‌ಗೆ ಅಪ್ಲೋಡ್: ಹುಡುಕಿ ಇಬ್ಬರನ್ನ ಬಂಧಿಸಿದ ರಾಮನಗರ ಪೊಲೀಸ್ರು
ಪರಿಚಿತರ ಅಪ್ರಾಪ್ತರ ಮಕ್ಕಳನ್ನು ಲೈಂಗಿಕವಾಗಿ ಶೋಷಿಸಿ ಬಳಿಕ ಆ ಕೃತ್ಯದ ವಿಡಿಯೋವನ್ನು ಚಿತ್ರೀಕರಿಸಿ ಆನ್‌ಲೈನ್‌ಗೆ ಅಪ್‌ಲೋಡ್ ಮಾಡಿದ್ದ ಇಬ್ಬರು ಪೊಲೀಸರು ಪತ್ತೆ ಮಾಡಿದ್ದಾರೆ. ಪರಿಚಿತರ ಮಕ್ಕಳ ಮೇಲೆ ಲೈಂಗಿಕ ಶೋಷಣೆ ಎಸಗಿದ್ದ ಕುರಿಗಾಹಿ ಹಾಗೂ ರೆಸಾರ್ಟ್‌ನ ಕ್ಲೀನರ್ ನನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಅಷ್ಟಕ್ಕೂ ಈ ಪ್ರಕರಣ ಬೆಳಕಿಗೆ ಬಂದಿದ್ಹೇಗೆ? ವಿಡಿಯೋಗಳು ಹೇಗೆ ಆನ್ಲೈನ್ನಲ್ಲಿ ಅಪ್ಲೋಡ್ ಆಗಿದ್ದವು ಎನ್ನುವ ಡಿಟೇಲ್ಸ್ ಇಲ್ಲಿದೆ.
- Prashantha B
- Updated on: May 15, 2026
- 8:23 pm
ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಪ್ರಕರಣ: ತನಿಖೆಗೆ ಇಳಿದ ಎನ್ಐಎ, ರಾ ಮತ್ತು ಎನ್‌ಎಸ್‌ಜಿ!
ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಪತ್ತೆಯಾದ ಪ್ರಕರಣದ ತನಿಖೆಯನ್ನು ಎನ್ಐಎ (NIA) ಚುರುಕುಗೊಳಿಸಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಎನ್‌ಎಸ್‌ಜಿ ಮತ್ತು ರಾಜ್ಯ ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ಬಾಕ್ಸ್ ಅನ್ನು ಉದ್ದೇಶಪೂರ್ವಕವಾಗಿ ಇರಿಸಲಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.
- Prashantha B
- Updated on: May 11, 2026
- 11:46 am
ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲೇ ಜಿಲೆಟಿನ್ ಪತ್ತೆ: ಸ್ಫೋಟಕ ತುಂಬಿದ ಬಾಕ್ಸ್ಗೆ ಟೇಪ್ ಸುತ್ತಿ ಬಿಸಾಡಿದ್ದ ಆರೋಪಿ!
ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಸ್ಫೋಟಕಗಳಿದ್ದ ಬಾಕ್ಸ್ ಪತ್ತೆಯಾಗಿತ್ತು. ಕಗ್ಗಲೀಪುರದ ತಾತಗುಣಿ ಬಳಿ ಜಿಲೆಟಿನ್ ಕಡ್ಡಿಗಳು ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ವಿಶೇಷ ತಂಡಗಳು ತನಿಖೆ ನಡೆಸುತ್ತಿದ್ದು, ಈ ಘಟನೆಗೆ ಸಂಬಂಧಿಸಿದ ಎಕ್ಸ್‌ಕ್ಲೂಸಿವ್ ಫೋಟೋ ಟಿವಿ9 ಗೆ ಲಭ್ಯವಾಗಿದೆ.
- Prashantha B
- Updated on: May 11, 2026
- 9:16 am
ಬೆಂಗಳೂರು-ಚನ್ನಪಟ್ಟಣ ನಡುವೆ BMTC ಎಸಿ ಬಸ್: ಎಲ್ಲೆಲ್ಲಿ ಸ್ಟಾಪ್? ಟಿಕೆಟ್ ದರ ಎಷ್ಟು ಗೊತ್ತಾ?
ಬೆಂಗಳೂರು ಮತ್ತು ಚನ್ನಪಟ್ಟಣ ನಡುವೆ 8 ಬಿಎಂಟಿಸಿ ಎಸಿ ಬಸ್‌ಗಳ ಸಂಚಾರ ಆರಂಭವಾಗಿದೆ. ಶಾಸಕ ಸಿ.ಪಿ. ಯೋಗೇಶ್ವರ್, ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಇಂದು (ಮೇ 08) ಚಾಲನೆ ನೀಡಿದರು. ಇದರೊಂದಿಗೆ ಈ ಭಾಗದ ಸಾರ್ವಜನಿಕರ ಬಹುದಿನದ ಕನಸು ನನಸಾಗಿದೆ. ಇನ್ನು ಈ ಬಸ್ ಎಲ್ಲೆಲ್ಲಿ ಸ್ಟಾಪ್ ಕೊಡಲಿದೆ? ಟಿಕೆಟ್ ದರ ಎಷ್ಟು ಎನ್ನುವ ಡಿಟೇಲ್ಸ್ ಇಲ್ಲಿದೆ.
- Prashantha B
- Updated on: May 8, 2026
- 10:05 pm