ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ, ವಿಡಿಯೋ ನೋಡಿ
ಬಂಟ್ವಾಳದ ರಹಿಮಾನ್ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಮುಖಂಡರು ಶಾದಿ ಮಹಲ್ ಸಭಾಂಗಣದಲ್ಲಿ ಸಭೆ ನಡೆಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಾಮೂಹಿಕ ರಾಜೀನಾಮೆ ನೀಡುವ ಬಗ್ಗೆ ಚರ್ಚೆ ನಡೆಯಿತು. ಇದೇ ವೇಳೆ ಭಾರೀ ಗದ್ದಲ, ಗಲಾಟೆಯಾಗಿದೆ. ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ಒಂದು ವಾರ ಮುಂದೂಡುವುದಾಗಿ ಹೇಳಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ನೆರೆದಿದ್ದ ಮುಸ್ಲಿಮರು ಆಕ್ರೋಶಗೊಂಡಿದ್ದಾರೆ.ರಾಜೀನಾಮೆ ಕೊಡಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದ ಕಾಂಗ್ರೆಸ್ ಮುಸ್ಲಿಮರು ಸಭೆ ರಣಾಂಗಣವಾಗಿ ಮಾರ್ಪಟ್ಟಿದೆ.
- Praveen Sahu
- Updated on: May 29, 2025
- 4:39 pm
ಸೈಬರ್ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ
ಬೆಂಗಳೂರಿನಲ್ಲಿ ಸೈಬರ್ ಕಳ್ಳರ ಹಾವಳಿ ಹೆಚ್ಚಾಗಿದೆ. ಅನೇಕ ವಿಧವಾದ ಸೈಬರ್ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತಿವೆ. ಸೈಬರ್ ಕಳ್ಳರ ಹಾವಳಿ ಪೊಲೀಸರ ನಿದ್ದೆಗೆಡೆಸಿದೆ. ಸೈಬರ್ ಕ್ರೈಂ ಬಗ್ಗೆ ಪೊಲೀಸರು ಅದೆಷ್ಟು ಜಾಗೃತಿ ಮೂಡಿಸುತ್ತಿದ್ದರೂ, ಜನರು ಮಾತ್ರ ವಂಚನೆಗೆ ಒಳಗಾಗುತ್ತಿದ್ದಾರೆ. ಇದೀಗ ಉದ್ಯಮಿಯೊಬ್ಬರು ಸೈಬರ್ ಜಾಲದಲ್ಲಿ ಸಿಲುಕಿ 5.17 ಕೋಟಿ ರೂ ಕಳೆದುಕೊಂಡಿದ್ದಾರೆ.
- Praveen Sahu
- Updated on: May 6, 2024
- 12:06 pm