ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 7 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರ ಕ್ರೀಡೆ.
RCB: ಐಪಿಎಲ್ ಮೆಗಾ ಹರಾಜು ಸಮೀಪಿಸುತ್ತಿದ್ದಂತೆ, ಆರ್ಸಿಬಿ ತಂಡದ ನಾಯಕತ್ವದ ಬಗ್ಗೆ ಚರ್ಚೆಗಳು ತೀವ್ರಗೊಂಡಿವೆ. ಈ ನಡುವೆ ಟೀಂ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ, ರಜತ್ ಪಾಟೀದಾರ್ ಅವರನ್ನು ಆರ್ಸಿಬಿ ನಾಯಕನನ್ನಾಗಿ ನೇಮಿಸುವಂತೆ ಸಲಹೆ ನೀಡಿದ್ದಾರೆ.
Perth Match: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಪಂದ್ಯಕ್ಕೂ ಮುನ್ನ ಪರ್ತ್ನಲ್ಲಿ ಅಂಪೈರ್ ಟೋನಿ ಡಿ ನೊಬ್ರೆಗಾ ಅವರಿಗೆ ಚೆಂಡು ಬಡಿದು ಗಂಭೀರ ಗಾಯವಾಗಿದೆ. ಮೂರನೇ ದರ್ಜೆ ಪಂದ್ಯದ ವೇಳೆ ಈ ಘಟನೆ ನಡೆದಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್ ಮೂಳೆ ಮುರಿತವಿಲ್ಲ ಎಂದು ವರದಿಯಾಗಿದೆ.
ಐಪಿಎಲ್ನ ಕಳೆದ 16 ಸೀಸನ್ಗಳಲ್ಲಿ ಯಾವ ತಂಡ ಹೆಚ್ಚು ಸಿಕ್ಸರ್ಗಳನ್ನು ಹೊಡೆದಿದೆ ಎಂದು ನಿಮಗೆ ತಿಳಿದಿದೆಯೇ?
Women's Asian Champions Trophy hockey final: ಬಿಹಾರದ ರಾಜಗೀರ್ನಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಫೈನಲ್ನಲ್ಲಿ ಭಾರತ ತಂಡ, ಚೀನಾವನ್ನು 1-0 ಅಂತರದಿಂದ ಸೋಲಿಸಿ ಮೂರನೇ ಬಾರಿ ಪ್ರಶಸ್ತಿ ಗೆದ್ದುಕೊಂಡಿದೆ. ದೀಪಿಕಾ ಅವರ ಏಕೈಕ ಗೋಲು ಭಾರತಕ್ಕೆ ಗೆಲುವು ತಂದುಕೊಟ್ಟಿತು. ಈ ಗೆಲುವಿನೊಂದಿಗೆ ಭಾರತ ತಂಡ 2016ರ ಗೆಲುವಿನ ಇತಿಹಾಸವನ್ನು ಪುನರಾವರ್ತಿಸಿದೆ. ಲೀಗ್ ಹಂತದಲ್ಲೂ ಚೀನಾವನ್ನು ಸೋಲಿಸಿದ ಭಾರತ, ಸೆಮಿಫೈನಲ್ನಲ್ಲಿ ಜಪಾನ್ ಅನ್ನು ಮಣಿಸಿತ್ತು.
Argentina football team: ಕೇರಳ ಕ್ರೀಡಾ ಸಚಿವರಾದ ವಿ. ಅಬ್ದುರಹಿಮಾನ್ ಅವರು ಅರ್ಜೆಂಟೀನಾ ಫುಟ್ಬಾಲ್ ತಂಡವು ಮುಂದಿನ ವರ್ಷ ಕೇರಳದಲ್ಲಿ ಅಂತರರಾಷ್ಟ್ರೀಯ ಪಂದ್ಯವನ್ನು ಆಡಲಿದೆ ಎಂದು ಘೋಷಿಸಿದ್ದಾರೆ. ಲಿಯೋನೆಲ್ ಮೆಸ್ಸಿ ಅವರನ್ನೊಳಗೊಂಡ ಈ ತಂಡದ ಪಂದ್ಯಕ್ಕೆ ರಾಜ್ಯ ಸರ್ಕಾರ ಪೂರ್ಣ ಬೆಂಬಲ ನೀಡುತ್ತಿದೆ. ಉದ್ಯಮಿಗಳು ಆರ್ಥಿಕ ನೆರವು ನೀಡಲಿದ್ದಾರೆ. ಕೊಚ್ಚಿಯಲ್ಲಿ ಪಂದ್ಯ ನಡೆಯುವ ಸಾಧ್ಯತೆಯಿದೆ.
IND vs AUS: ಭಾರತದ ವೇಗದ ಬೌಲರ್ ಖಲೀಲ್ ಅಹ್ಮದ್ ಗಾಯಗೊಂಡಿದ್ದರಿಂದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಯುವ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಆಯ್ಕೆ ಮಾಡಲಾಗಿದೆ.
Shubman Gill Injury Update: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಶುಭ್ಮನ್ ಗಿಲ್ ಅವರ ಗಾಯದ ಬಗ್ಗೆ ಬಿಗ್ ಅಪ್ಡೇಟ್ ಹೊರಬಿದ್ದಿದೆ. ಅಭ್ಯಾಸದ ವೇಳೆ ಗಾಯಗೊಂಡಿದ್ದ ಗಿಲ್ ಅವರ ಆಟದ ಬಗ್ಗೆ ಅನಿಶ್ಚಿತತೆ ಇತ್ತು. ಆದರೆ ಬೌಲಿಂಗ್ ಕೋಚ್ ಮೋರ್ನೆ ಮೊರ್ಕೆಲ್ ಅವರು ಗಿಲ್ ಮೊದಲ ಟೆಸ್ಟ್ನಲ್ಲಿ ಆಡುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Virat Kohli: ವಿರಾಟ್ ಕೊಹ್ಲಿ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಅಭಿಮಾನಿಗಳಲ್ಲಿ ಕ್ರಿಕೆಟ್ ನಿವೃತ್ತಿಯ ಊಹಾಪೋಹಗಳನ್ನು ಹುಟ್ಟುಹಾಕಿದೆ. ವಾಸ್ತವವಾಗಿ ಕೊಹ್ಲಿ, ಈ ಹಿಂದೆ ತಮ್ಮ ಟೆಸ್ಟ್ ನಾಯಕತ್ವಕ್ಕೆ ವಿದಾಯ ಹೇಳುವ ಸಮಯದಲ್ಲಿ ಇದೇ ರಿತಿಯ ವೈಟ್ ಬ್ಯಾಕ್ ಗ್ರೌಂಡ್ ಇರುವ ಪೋಸ್ಟ್ವೊಂದನ್ನು ಹಂಚಿಕೊಳ್ಳುವ ಮೂಲಕ ತಾನು ನಾಯಕತ್ವದಿಂದ ಕೆಳಗಿಳಿಯುತ್ತಿರುವುದಾಗಿ ಘೋಷಿಸಿದ್ದರು. ಕೊಹ್ಲಿಯ ಈ ತತ್ಕ್ಷಣದ ನಿರ್ಧಾರದ ಪೋಸ್ಟ್ ಅಭಿಮಾನಿಗಳನ್ನು ಆಘಾತಕ್ಕೆ ತಳ್ಳಿತ್ತು.
Sanju Samson: ಟೀಂ ಇಂಡಿಯಾದಲ್ಲಿ ಸ್ಥಿರ ಸ್ಥಾನ ಪಡೆಯಲು ಹೆಣಗಾಡುತ್ತಿದ್ದ ಸಂಜು ಸ್ಯಾಮ್ಸನ್, ಇತ್ತೀಚಿನ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಐದು ಇನ್ನಿಂಗ್ಸ್ಗಳಲ್ಲಿ ಮೂರು ಶತಕಗಳನ್ನು ಬಾರಿಸಿದ ಅವರು ಈಗ ಟೀಂ ಇಂಡಿಯಾದಲ್ಲಿ ಖಾಯಂ ಆರಂಭಿಕ ಆಟಗಾರರಾಗಿದ್ದಾರೆ. ಇದಲ್ಲದೆ, ಅವರು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಕೇರಳ ತಂಡಕ್ಕೆ ನಾಯಕತ್ವ ವಹಿಸಲಿದ್ದಾರೆ.
ICC Rankings: ಐಸಿಸಿ ತನ್ನ ಇತ್ತೀಚಿನ ಟಿ20 ಆಲ್ರೌಂಡರ್ ಶ್ರೇಯಾಂಕವನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ ಅಗ್ರಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.ಇನ್ನು ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಯುವ ಬ್ಯಾಟರ್ ತಿಲಕ್ ವರ್ಮಾ ಬರೋಬ್ಬರಿ 69 ಸ್ಥಾನ ಮೇಲಕ್ಕೆ ಜಿಗಿದು, ಇದೀಗ ಟಾಪ್ 10ರಲ್ಲಿ ಸ್ಥಾನ ಪಡೆದಿದ್ದಾರೆ. ಸೂರ್ಯಕುಮಾರ್ ಯಾದವ್ ಅವರ ಶ್ರೇಯಾಂಕ ಕುಸಿದಿದೆ.
Special Olympics Bharat: ವಿಶೇಷ ಒಲಿಂಪಿಕ್ಸ್ ಭಾರತ್, ಬುದ್ಧಿಮಾಂದ್ಯ ಮಕ್ಕಳ ಸಾಮರ್ಥ್ಯದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಅವರ ಸಾಮರ್ಥ್ಯವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವುದು ಹೇಗೆ ಎಂಬುದರ ಕುರಿತು ಅರಿವು ಮೂಡಿಸಲು "ವಿಶೇಷ ಸಾಮರಸ್ಯ" ಕಾರ್ಯಕ್ರಮವನ್ನು ಆಯೋಜಿಸಿತು. ಖ್ಯಾತ ಗಾಯಕ ಅಮಿತ್ ಕುಮಾರ್ ಸೇರಿದಂತೆ ಹಲವು ಕಲಾವಿದರು ಇದರಲ್ಲಿ ಭಾಗವಹಿಸಿದ್ದರು.
Jasprit Bumrah: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ತಂಡದ ನಾಯಕತ್ವ ವಹಿಸಲಿದ್ದಾರೆ. ಇದರ ಜೊತೆಗೆ, ಆಸ್ಟ್ರೇಲಿಯಾದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ಗಳ ಪೈಕಿ ಕಪಿಲ್ ದೇವ್ ಅವರ ದಾಖಲೆಯನ್ನು ಮುರಿಯುವ ಅವಕಾಶ ಬುಮ್ರಾಗೆ ಇದೆ.