ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.
ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ಅವಘಡ: ತೇರಿನ ಮೇಲ್ಭಾಗ ಏಕಾಏಕಿ ಕುಸಿತ
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ತೇರು ಮುರಿದು ಅವಘಡ ಸಂಭವಿಸಿದೆ. ಮಧ್ಯರಾತ್ರಿ ರಥದ ಮೇಲ್ಭಾಗ ಏಕಾಏಕಿ ಕುಸಿದಿದ್ದು, ಅರ್ಚಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸದಿರುವುದು ಸಂತೋಷದ ಸಂಗತಿ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
- Pruthviraj
- Updated on: Apr 19, 2025
- 11:06 am
ವಕ್ಫ್ ವಿರುದ್ಧ ಮುಸ್ಲಿಂ ಸಂಘಟನೆಗಳ ಹೋರಾಟ: ಹೈಕೋರ್ಟ್ ಖಡಕ್ ಸೂಚನೆ
ಮಂಗಳೂರಿನಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ ಏಪ್ರಿಲ್ 18ರಂದು ನಡೆಯಲಿದೆ. ಆದರೆ, ಹೈಕೋರ್ಟ್ ರಸ್ತೆ ಸಂಚಾರ ನಿರ್ಬಂಧಿಸದಂತೆ ಸೂಚನೆ ನೀಡಿದೆ. ಸುಪ್ರೀಂ ಕೋರ್ಟ್ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಸರಿಯಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಕರ್ನಾಟಕ ಉಲಮಾ ಸಮನ್ವಯ ಸಮಿತಿ ಈ ಪ್ರತಿಭಟನೆಗೆ ಕರೆ ನೀಡಿದ್ದು, ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಪ್ರತಿಭಟನೆಯು ಶಾಂತಿಯುತವಾಗಿರಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.
- Pruthviraj
- Updated on: Apr 17, 2025
- 8:31 pm
Mangaluru Traffic Advisory: ಮಂಗಳೂರು ಬೆಂಗಳೂರು ಸಂಚಾರ ಮಾರ್ಗದಲ್ಲಿ ಮಹತ್ವದ ಬದಲಾವಣೆ, ಪರ್ಯಾಯ ರಸ್ತೆಗಳ ವಿವರ ಇಲ್ಲಿದೆ
ಮಂಗಳೂರು ಬೆಂಗಳೂರು ರಸ್ತೆ ಸಂಚಾರ ಬದಲಾವಣೆ: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿರುವುದರಿಂದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 73 ಸೇರಿದಂತೆ ಮಂಗಳೂರು ಸುತ್ತಮುತ್ತ ಸಂಚಾರ ಬದಲಾವಣೆ ಮಾಡಲಾಗಿದೆ. ಪ್ರತಿಭಟನೆಯಿಂದ ಸಂಚಾರ ದಟ್ಟಣೆ ತಪ್ಪಿಸಲು ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗಗಳ ಬಗ್ಗೆ ಇಲ್ಲಿದೆ ವಿವರ.
- Pruthviraj
- Updated on: Apr 17, 2025
- 9:32 am
ಕುಕ್ಕೆ ಸುಬ್ರಹ್ಮಣ್ಯ ಆದಾಯದಲ್ಲಿ ಭಾರಿ ಏರಿಕೆ: ವಾರ್ಷಿಕ ಆದಾಯ 155.95 ಕೋಟಿ ರೂ
Kukke Subrahmanya Temple income: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ 2024-25ನೇ ಸಾಲಿನ ಆದಾಯ 155.95 ಕೋಟಿ ರೂ ಏರಿಕೆಯಾಗಿದೆ. ಅಂದರೆ ಕಳೆದ ವರ್ಷಕ್ಕಿಂತ 9.94 ಕೋಟಿ ರೂ ಹೆಚ್ಚಳವಾಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ ದೇವಸ್ಥಾನವೆಂದು ಸಾಬೀತಾಗಿದೆ.
- Pruthviraj
- Updated on: Apr 17, 2025
- 9:34 am
ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ: ಡಿಕೆ ಶಿವಕುಮಾರ್ ಘೋಷಣೆ
ಮುಂದಿನ ವರ್ಷದಿಂದಲೇ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆಯನ್ನು ಸೇರ್ಪಡೆಗೊಳಿಸುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಮಂಗಳೂರಿನ ಗುರುಪುರ ಕಂಬಳದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಮತ್ತು ಮೈಸೂರು ಜಿಲ್ಲಾ ಸಚಿವರೊಂದಿಗೆ ಮಾತುಕತೆ ನಡೆಸಿ, 3 ಎಕರೆ ಜಾಗದಲ್ಲಿ ಶಾಶ್ವತ ಕಂಬಳ ಕೆರೆಯನ್ನು ನಿರ್ಮಿಸುವ ಯೋಜನೆಯನ್ನು ರೂಪಿಸುವುದಾಗಿ ತಿಳಿಸಿದ್ದಾರೆ.
- Pruthviraj
- Updated on: Apr 13, 2025
- 12:38 pm
ಮಂಗಳೂರು ಪುತ್ತೂರು ಪ್ಯಾಸೆಂಜರ್ ರೈಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ವಿಸ್ತರಣೆ: ವೇಳಾಪಟ್ಟಿ ಇಲ್ಲಿದೆ
ಮಂಗಳೂರು ಕುಕ್ಕೆ ಸುಬ್ರಹ್ಮಣ್ಯ ರೈಲು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಿಂದ ಕಬಕ ಪುತ್ತೂರಿನ ವರೆಗೆ ಸಂಚರಿಸುತ್ತಿದ್ದ ರೈಲನ್ನು ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ವರೆಗೆ ವಿಸ್ತರಣೆ ಮಾಡಲಾಗಿದೆ. ರೈಲಿಗೆ ಚಾಲನೆ ನೀಡಲಾಗಿದ್ದು, ವೇಳಾಪಟ್ಟಿ ಹಾಗೂ ಇತರ ವಿವರಗಳು ಇಲ್ಲಿವೆ.
- Pruthviraj
- Updated on: Apr 12, 2025
- 6:39 pm
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ರಾಜ್ಯಕ್ಕೆ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು? ಮುಂದಿನ ಗುರಿ ಬಿಚ್ಚಿಟ್ಟ ಟಾಪರ್
2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕ್ಸ್ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ 600ಕ್ಕೆ 599 ಅಂಕ ಪಡೆಯುವ ಮೂಲಕ ಅಮೂಲ್ಯ ಕಾಮತ್ ಕರ್ನಾಟಕಕ್ಕೆ ಟಾಪರ್ ಆಗಿದ್ದಾರೆ. ಇನ್ನು ಪರೀಕ್ಷೆಯ ತಯಾರಿ ಹೇಗಿತ್ತು? ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
- Pruthviraj
- Updated on: Apr 8, 2025
- 3:20 pm
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಕೊಲೆ ಆರೋಪಿಗೆ ಮುತ್ತಿಕ್ಕಿದ ಯುವಕ
ಪೊಲೀಸ್ ಭದ್ರತೆ ನಡೆವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದರು. ಆ ವೇಳೆ ಕೋರ್ಟ್ ಆವರಣದಲ್ಲಿ ಪೊಲೀಸರ ಭದ್ರತೆ ನಡುವೆ ಯುವಕನೋರ್ವ ಬಂದು ಆರೋಪಿ ಶಾಫಿ ಬೆಳ್ಳಾರೆ ಹಣೆಗೆ ಮುತ್ತು ಕೊಟ್ಟಿದ್ದಾನೆ.
- Pruthviraj
- Updated on: Apr 7, 2025
- 3:57 pm
ಮಂಗಳೂರು: ನಗ್ನ ವಿಡಿಯೋ ಕರೆ ಮಾಡುವಂತೆ ಒತ್ತಾಯ, ಅನ್ಯ ಕೋಮಿನ ಯುವಕನಿಗೆ ಬಿತ್ತು ಗೂಸಾ
ಬೆಂಗಳೂರಿನ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆ ಯುವಕ ರಂಜಾನ್ಗೆಂದು ಊರಿಗೆ ಹೋಗಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಎಂಬಲ್ಲಿನ ಕಚೇರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ರೂಪಕ್ಕೆ ಮಾರುಹೋಗಿದ್ದ. ಗೂಗಲ್ ಪೇ ನೆಪದಲ್ಲಿ ಫೋನ್ ನಂಬರ್ ಪಡೆಯಲು ಯತ್ನಿಸಿದ್ದ. ಯುವತಿ ನಂಬರನ್ನೇನೋ ನೀಡಿದ್ದಳು, ಆದರೆ ಅದು ಆಕೆಯದ್ದಾಗಿರಲಿಲ್ಲ. ನಂಬರ್ ಸಿಕ್ಕ ಖುಷಿಯಲ್ಲಿ ಆತ ಅಶ್ಲೀಲ ಚಾಟ್ ಮಾಡಲಾರಂಭಿಸಿದ್ದ. ಅಷ್ಟು ಸಾಲದೆಂಬಂತೆ, ನಗ್ನ ಕರೆ ಮಾಡುವಂತೆ ಒತ್ತಾಯಿಸಿದ್ದಾನೆ. ಆ ಬಳಿಕ ಯುವತಿಯನ್ನು ಭೇಟಿಯಾಗಲು ಹೋದವನಿಗೆ ಗೂಸಾ ಬಿದ್ದಿದೆ. ಹಾಗಾದರೆ, ನಡೆದಿದ್ದೇನು? ಪೂರ್ಣ ವಿವರ ಇಲ್ಲಿದೆ.
- Pruthviraj
- Updated on: Apr 7, 2025
- 7:40 am
ಮಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆ ಯತ್ನ: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ
ಮಂಗಳೂರು ಹೊರವಲಯದ ದೇರಳಕಟ್ಟೆ ಮುತ್ತೂಟ್ ಫೈನಾನ್ಸ್ ದರೋಡೆಗೆ ವಿಫಲ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ನಟೋರಿಯಸ್ ದರೋಡೆಕೋರರ ವಿಚಾರಣೆ ನಡೆದಿದ್ದು, ಮಂಗಳೂರು ಪೊಲೀಸರು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ. ಕೇರಳ ಮೂಲದ ದರೋಡೆಕೋರರ ತಂಡದಿಂದ ದರೋಡೆಗೆ ಯತ್ನಿಸಿರುವುದು ಪೊಲೀಸ್ ವಿಚಾರಣೆಯಲ್ಲಿ ತಿಳಿದುಬಂದಿದೆ.
- Pruthviraj
- Updated on: Apr 6, 2025
- 2:11 pm
ಕಾರಿನ ಟಾಪ್ ಮೇಲೆ ಕುಳಿತು ಹುಚ್ಚಾಟ: ಸ್ವಲ್ಪ ಹೆಚ್ಚು ಕಡಿಮೆ ಆದ್ರು ಯಮನಪಾದ
ದಕ್ಷಿಣ ಕನ್ನಡದಲ್ಲಿ ಕಾರಿನ ಟಾಪ್ ಮೇಲೆ ಕುಳಿತು ಯುವಕರು ಹುಚ್ಚಾಟ ಮೆರೆದಿದ್ದಾರೆ. ಸುಳ್ಯ ತಾಲೂಕಿ ಸಂಪಾಜಿ-ಸುಳ್ಯ ರಸ್ತೆಯಲ್ಲಿ, ಕಾರಿನಲ್ಲಿ 7 ಜನ ಪ್ರಯಾಣಿಸಿದ್ದಾರೆ. ಕಾರು ವೇಗವಾಗಿ ಚಲಿಸುತ್ತಿರುವಾಗಲೇ ಯುವಕರು ಸನ್ ರೂಫ್ ಮತ್ತು ಕಿಟಿಕಿಯಿಂದ ಹೊರಬಂದು ಡ್ಯಾನ್ಸ್ ಮಾಡುತ್ತಾ ರಸ್ತೆಯಲ್ಲೇ ಅಟ್ಟಹಾಸ ಮೆರೆದಿದ್ದಾರೆ.
- Pruthviraj
- Updated on: Apr 6, 2025
- 1:28 pm
ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರ ಪರವಾಗಿ ಹಾಲಿ ಕಾಂಗ್ರೆಸ್ ಅಧ್ಯಕ್ಷ ಪ್ರಾರ್ಥನೆ! ಏನಂದ್ರು ನೋಡಿ
ಕರ್ನಾಟಕ ಬಿಜೆಪಿ ಅಧ್ಯಕ್ಷರ ಬದಲಾವಣೆ ಒಂದು ಗುಂಪು ಪಟ್ಟು ಹಿಡಿದಿದೆ. ಇದರ ಮಧ್ಯ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಾರ್ಥಿಸಿದ್ದಾರೆ. ಕಾಸರಗೋಡಿನ ಮಧೂರು ದೇವಸ್ಥಾನದ ಧಾರ್ಮಿಕ ಸಭೆಯಲ್ಲಿ ನಳಿನ್ ಕುಮಾರ್ ಕಟೀಲ್ ಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಹಾರೈಸಿದರು.
- Pruthviraj
- Updated on: Apr 6, 2025
- 11:54 am