ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್ ಮಾಧ್ಯಮದಿಂದ. ಒನ್ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.
ಬೆಂಗಳೂರು ಕಸದಲ್ಲಿ 36 ಸಾವಿರ ಕೋಟಿ ರೂ. ಲೂಟಿ ಆರೋಪ: ಬಿಜೆಪಿಗೆ ಡಿಕೆಶಿ ಓಪನ್ ಚಾಲೆಂಜ್
ಇಡೀ ಬೆಂಗಳೂರೇ ಬೆಚ್ಚಿಬೀಳೋ ದೊಡ್ಡ ಹಗರಣದ ದಾಖಲೆಯನ್ನ ವಿಪಕ್ಷ ನಾಯಕ ಆರ್.ಅಶೋಕ್ ರಿಲೀಸ್ ಮಾಡಿದ್ದಾರೆ. ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ರೂ. ಲೂಟಿ ಮಾಡಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿದ್ದು, ಈ ಸಂಬಂಧ ಬಿಜೆಪಿ, ಸಿಬಿಐ ತನಿಖೆ ಆಗಬೇಕೆಂದು ರಾಜ್ಯಪಾಲ ಹಾಗೂ ಲೋಕಾಯುಕ್ತಕ್ಕೂ ದೂರು ನೀಡಿದೆ. ಇನ್ನು ಈ ಆರೋಪಕ್ಕೆ ಸ್ವತಃ ಸಿಎಂ ಡಿಕೆ ಶಿವಕುಮಾರ್ ಖಡಕ್ ಸ್ಪಷ್ಟನೆ ನೀಡಿದ್ದಾರೆ.
- Ramesh B Jawalagera
- Updated on: Jun 10, 2026
- 10:09 pm
ಗೃಹಲಕ್ಷ್ಮಿ ಯೋಜನೆಗೆ ಮೇಜರ್ ಸರ್ಜರಿ: ಮಹತ್ವದ ಅಪ್ಡೇಟ್ ನೀಡಿದ ಸಿಎಂ ಡಿಕೆ ಶಿವಕುಮಾರ್
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈಗ ಮೇಜರ್ ಸರ್ಜರಿಗೆ ಮುಂದಾಗಿದೆ ಈ ಸಂಬಂಧ ದೆಹಲಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ಕೆಲವರು ಸಾವನ್ನಪ್ಪಿದ್ದು, ಆದರೂ ಗೃಹಲಕ್ಷ್ಮಿ ಹಣ ಯಾರಿಗೋ ಹೋಗುತ್ತಿದ್ದು, ಇದು ನಮ್ಮ ಗಮನಕ್ಕೆ ಬಂದಿದೆ. ಹೀಗಾಗಿ ಹೊಸದಾಗಿ ಐಡೆಂಟಿ ಆಗಬೇಕಿದೆ. ಮರುಪರಿಶೀಲನೆ ಮಾಡ್ತಾವಿದಿವಿ ಅಷ್ಟೇ. ಯಾರಿಗೆ ಸಿಗಬೇಕು ಅದು ಸಿಗಲಿ ಎಂದು ಸ್ಪಷ್ಟಪಡಿಸಿದರು.
- Ramesh B Jawalagera
- Updated on: Jun 10, 2026
- 8:36 pm
ಪೊಲೀಸರಿಗೂ ಎಚ್ಚರಿಕೆ ಕೊಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವರಾಗುತ್ತಿದ್ದಂತೆಯೇ ಕೆಲ ದಿಟ್ಟ ಕ್ರಮಕ್ಕೆ ಮುಂದಾಗಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿರುವ ಪ್ರಿಯಾಂಕ್ ಖರ್ಗೆ, ಡ್ರಗ್ಸ್ ಹಾಗೂ ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸರಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಎಫ್ಐಆರ್ ಹಾಗೂ ಚಾರ್ಚ್ ಶೀಟ್ ಸಲ್ಲಿಸಲು ವಿಳಂಬದ ಬಗ್ಗೆ ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ. ಇಲಾಖೆಗೆ ಅಗೌರವ ತರುವಂತ ಕೆಲಸ ಯಾವ ಸಿಬ್ಬಂದಿಯಿಂದ ಆಗಬಾರದು. ನಾನು ಹೇಳಿದ ಸಲಹೆ ಸೂಚನೆಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಹೇಳಿದ್ದಾರೆ.
- Ramesh B Jawalagera
- Updated on: Jun 10, 2026
- 7:32 pm
36 ಸಾವಿರ ಕೋಟಿ ರೂ. ಲೂಟಿ ಆರೋಪ: ರಾಜ್ಯಪಾಲರಾಯ್ತು ಈಗ ಲೋಕಾಯುಕ್ತಕ್ಕೂ ಬಿಜೆಪಿ ದೂರು
ಬೆಂಗಳೂರಿನ ಕಸದ ಟೆಂಡರ್ನಲ್ಲಿ ಅಕ್ರಮವೆಸಗಲಾಗಿದೆ ಎಂದು ಆರೋಪಿಸಿ ಕರ್ನಾಟಕ ಬಿಜೆಪಿ ಆರೋಪ ಮಾಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಈಗಾಗಲೇ ರಾಜ್ಯಪಾಲರಿಗೆ ದೂರು ನೀಡಿದ್ದು, ಸಿಬಿಐ ತನಿಗೆ ಮನವಿ ಮಾಡಿದೆ. ಇದರ ಬೆನ್ನಲ್ಲೇ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಲೋಕಾಯುಕ್ತಕ್ಕೂ ದೂರು ನೀಡಿದೆ.
- Ramesh B Jawalagera
- Updated on: Jun 10, 2026
- 5:42 pm
Karnataka Weather forecast: ಮುಂದಿನ 5 ದಿನ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಅರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಗಾದ್ರೆ, ಯಾವಾಗ, ಯಾವ್ಯಾವ ಕಡೆ ಮಳೆಯಾಗಲಿದೆ ಎನ್ನುವ ಡಿಟೇಲ್ಸ್ ಈ ಕೆಳಗಿನಂತಿದೆ ನೋಡಿ.
- Ramesh B Jawalagera
- Updated on: Jun 10, 2026
- 5:12 pm
ಪಾದಚಾರಿ ಅಲ್ಲ,ಸಾವಿನ ಮಾರ್ಗ: ಬೆಂಗಳೂರಿನಲ್ಲಿ ವರ್ಷದಿಂದ ವರ್ಷಕ್ಕೆ ಏರುತ್ತಿದೆ ಪಾದಚಾರಿಗಳ ಸಾವಿನ ಸಂಖ್ಯೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪಾದಚಾರಿಗಳ ಜೀವ ಅಪಾಯದಲ್ಲಿದೆ. ಪಾದಚಾರಿಗಳು ಸುಗಮವಾಗಿ ಓಡಾಡಲು ನಗರದ ಬಹುತೇಕ ಕಡೆಗಳಲ್ಲಿ ಸರಿಯಾದ ಮಾರ್ಗಗಳೇ ಇಲ್ಲ. ಏಕೆಂದರೆ, ಪಾದಚಾರಿ ಮಾರ್ಗಗಳು ಅಂಗಡಿಗಳು, ಮನೆಗಳವರಿಂದ ಒತ್ತುವರಿಯಾಗಿದೆ. ಕೆಲವೆಡೆ ಹಾಳಾಗಿವೆ. ಹೀಗಾಗಿ ವರ್ಷದಿಂದ ವರ್ಷಕ್ಕೆ ಪಾದಚಾರಿಗಳ ಸಾವಿನ ಸಂಖ್ಯೆ ಏರುತ್ತಲೇ ಇದ್ದು, ಪಾದಚಾರಿಗಳು ರಸ್ತೆ ಮೇಲೆ ಓಡಾಡುವಾಗ ತಮ್ಮ ಜೀವವನ್ನು ಕೈಯಲ್ಲಿ ಹಿಡಿದಿಟ್ಟುಕೊಳ್ಳುವಂತಾಗಿದೆ.
- Ramesh B Jawalagera
- Updated on: Jun 9, 2026
- 9:53 pm
ಬೆಂಗಳೂರಿನಲ್ಲಿ ಮಿತಿಮೀರಿದ ಕಸದ ಬಿಕ್ಕಟ್ಟು: 5,445ಕ್ಕೆ ಏರಿಕೆಯಾದ ‘ಬ್ಲ್ಯಾಕ್ ಸ್ಪಾಟ್’ಗಳ ಸಂಖ್ಯೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಕಸದ ಕಂಟಕ ಶುರುವಾಗಿದೆ. ರಸ್ತೆ ಬದಿ, ಫುಟ್‌ಪಾತ್, ಚರಂಡಿ ಅಂತಾ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದ್ದು, ಕಸ ವಿಲೇವಾರಿ ಮಾಡದ ಗ್ರೇಟರ್ ಬೆಂಗಳೂರು( GBA) ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಅದರಲ್ಲೂ ಮುಂಗಾರು ಮಳೆ ಆರಂಭವಾಗಿರೋದ್ರಿಂದ, ಈ ಕಸ ಕೊಳೆತು ನಾರುತ್ತಿದ್ದು ರೋಗರುಜಿನಗಳ ಭೀತಿ ಆತಂಕ ಶುರುವಾಗಿದೆ.
- Ramesh B Jawalagera
- Updated on: Jun 9, 2026
- 9:13 pm
ಬೆಳಗಾವಿಯಲ್ಲಿ ವರುಣನ ಅಬ್ಬರಕ್ಕೆ ನೆಲಕ್ಕುರುಳಿದ 8 ಮನೆಗಳು, ಉಟ್ಟ ಬಟ್ಟೆ ಬಿಟ್ಟು ಎಲ್ಲಾ ನೀರುಪಾಲು
ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರ ಜಪರಾಗಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ಬೆಳಗಾವಿಯಲ್ಲಂತೂ ವ್ಯಾಪರಸ್ಥರು ವರುಣಾರ್ಭಟಕ್ಕೆ ಹೈರಾಣಾಗಿ ಹೋಗಿದ್ದಾರೆ. ಇನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಕಲ್ಮಠ ಎಂಬ ಓಣಿಯಲ್ಲಿ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ವರುಣಾರ್ಭಟಕ್ಕೆ ಒಂದೇ ಕಡೆ ಬರೋಬ್ಬರಿ 8 ಮನೆಗಳು ಧರೆಗುರುಳಿದ್ದು, ಅದೃಷ್ಟವಶಾತ್ 8 ಮನೆಗಳಲ್ಲಿದ್ದ ಜನ ಪವಾಡ ರೀತಿ ಪಾರಾಗಿದ್ದಾರೆ. ಇಲ್ಲಿ ಬಾಡಿಗೆಗೆ ಇದ್ದ ಜನರೆಲ್ಲರೂ ಕೂಲಿಕಾರ್ಮಿಕರು. ಬಟ್ಟೆ, ದವಸ ಧಾನ್ಯ, ದಾಖಲೆಗಳು, ಹಣ ಎಲ್ಲವೂ ಈಗ ಮಣ್ಣುಪಾಲಾಗಿದೆ. ಉಟ್ಟ ಬಟ್ಟೆ ಬಿಟ್ಟು ಎಲ್ಲವನ್ನೂ ಕಳೆದಕೊಂಡ ಜನ ಬೀದಿಗೆ ಬಿದ್ದಿದ್ದು, ಟಿವಿ9 ಬಳಿ ತಮ್ಮ ಅಳಲು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ
- Ramesh B Jawalagera
- Updated on: Jun 9, 2026
- 7:19 pm
ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲೂ ಜೋರಾದ ಶಾಸಕರ ಲಾಬಿ, ಸಂಚಲನ ಮೂಡಿಸಿದ ಕೃಷ್ಣಭೈರೇಗೌಡ ನಡೆ
ಡಿಕೆ ಶಿವಕುಮಾರ್ (DK Shivakumar) ಮೊದಲ ಹಂತದ ಸಂಪುಟದ ಸಚಿವರ ಖಾತೆ ಕ್ಯಾತೆ ಇನ್ನೂ ಮುಗಿದಿಲ್ಲ. ಖಾತೆ ಸಂಬಂಧ ರಾಮಲಿಂಗಾರೆಡ್ಡಿ, ಕೆಎಚ್ ಮುನಿಯಪ್ಪ ಹಾಗೂ ಕೃಷ್ಣಭೈರೇಗೌಡ ಅಸಮಾಧಾನಗೊಂಡಿದ್ದಾರೆ. ಇದರ ನಡುವೆ ಇದೀಗ ಎರಡನೇ ಹಂತದ ಸಚಿವ ಸಂಪುಟ ಪುನಾರಚನೆ ಕಸರತ್ತು ನಡೆದಿದ್ದು, ನವದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ ಜೋರಾಗಿದೆ. ಶ್ರೀನಿವಾಸ್ ಮಾನೆ, ಅಜಯ್ ಸಿಂಗ್, ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಶಾಸಕರು ದಿಲ್ಲಿಗೆ ಹಾರಿದ್ದು, ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ.
- Ramesh B Jawalagera
- Updated on: Jun 9, 2026
- 6:06 pm
ಚುನಾವಣೆ ಇಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ, ಯಾರ್ಯಾರು?
ಕರ್ನಾಟಕ ವಿಧಾನಸಭೆಯಿಂದ 4 ಸ್ಥಾನಗಳ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಈಗಾಗಲೇ ಕಾಂಗ್ರೆಸ್ನಿಂದ ಮೂವರು ಹಾಗೂ ಬಿಜೆಪಿಯಿಂದ ಒಬ್ಬರು ನಾಮಪತ್ರ ಸಲ್ಲಿಸಿದ್ದು, ಎಲ್ಲರ ನಾಮಪತ್ರಗಳು ಕ್ರಮಬದ್ಧವಾಗಿವೆ. ಆದ್ರೆ, ಭೋಜಣ್ಣ ಸೋಮಣ್ಣ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತವಾಗಿದೆ. ಹೀಗಾಗಿ ಚುನಾವಣೆ ಇಲ್ಲದೇ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತವೊಂದೇ ಘೋಷಣೆಯೊಂದೆ ಬಾಕಿ ಇದೆ.
- Ramesh B Jawalagera
- Updated on: Jun 9, 2026
- 4:15 pm
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ದಕ್ಷಿಣ ಫಿಲಿಪೈನ್ಸ್ ನಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭೂಕಂಪದ ಪರಿಣಾಮ ಹಲವು ಕಟ್ಟಡಗಳು ಹಾಗೂ ಪ್ರಮುಖ ಸೇತುವೆಗೆ ಹಾನಿಯಾಗಿದ್ದು, ಕರಾವಳಿ ಪ್ರದೇಶಗಳಲ್ಲಿ ಸುಮಾರು 1 ಮೀಟರ್ ಎತ್ತರದ ಸುನಾಮಿ ಅಲೆಗಳು ಕಾಣಿಸಿಕೊಂಡಿವೆ. ಇನ್ನು ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಭೂಕಂಪದ ಕೇಂದ್ರಬಿಂದು ಬುರಿಯಾಸ್ನಿಂದ 24.7 ಕಿ.ಮೀ ದೂರದಲ್ಲಿದ್ದು, ಪತ್ತೆ ಹಚ್ಚಿ ತಕ್ಷಣ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ಮತ್ತು ಜಪಾನ್ ಹವಾಮಾನ ಇಲಾಖೆ ಜಂಟಿಯಾಗಿ ಫಿಲಿಪೈನ್ಸ್, ಇಂಡೋನೇಷ್ಯಾ, ತೈವಾನ್ ಮತ್ತು ಜಪಾನ್ ಕರಾವಳಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಘೋಷಿಸಿವೆ.
- Ramesh B Jawalagera
- Updated on: Jun 8, 2026
- 10:52 pm
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?
ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಡಿಕೆ ಶಿವಕುಮಾರ್ ಅವರು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಹೌದು...ಡಿಕೆ ಶಿವಕುಮಾರ್ ಅವರು ಯಾವುದೇ ಪಕ್ಷ ಎನ್ನುವುದನ್ನು ನೋಡದೇ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆ. ಸಿಎಂ ಆಗಿ ಪ್ರಮಾಣವಚನಕ್ಕೂ ಮುನ್ನವೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಎಚ್ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಸಲಹೆಗಳನ್ನು ಪಡೆದುಕೊಂಡಿದ್ದರು. ಇದನ್ನು ಡಿಕೆ ಶಿವಕುಮಾರ್ ಮುಂದುವರೆಸಿದ್ದು, ಇಂದು (ಜೂನ್ 08) ಮಾಜಿ ಸಿಎಂಗಳಾದ ವೀರಪ್ಪ ಮೊಯ್ಲಿ, ಡಿವಿ ಸದಾನಂದಗೌಡ ಹಾಗೂ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸದಾನಂದಗೌಡ ಅವರ ಕುಟುಂಬ ಡಿಕೆ ಶಿವಕುಮಾರ್ ಅವರನ್ನು ಆರತಿ ಬೆಳಗಿ ಮನೆಗೆ ಸ್ವಾಗತಿಸಿರುವುದು ವಿಶೇಷ
- Ramesh B Jawalagera
- Updated on: Jun 8, 2026
- 10:31 pm