ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇತರೆ ಏಳು ಆರೋಪಿಗಳಿಗೆ ಹೈಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ. ಹೀಗಾಗಿ 5 ತಿಂಗಳ ಜೈಲುವಾಸದ ಬಳಿಕ ರೇಣುಕಾಸ್ವಾಮಿ ಕೊಲೆ ಆರೋಪಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಡಿಬಾಸ್ಗೆ ಜಾಮೀನು ಸಿಕ್ಕಿರುವುದು ಅವರ ಕುಟುಂಬ, ಸ್ನೇಹಿತರು ಹಾಗೂ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ಫ್ಯಾನ್ಸ್ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಆದ್ರೆ, ದರ್ಶನ್ಗೆ ಮಾತ್ರ ಎರಡೆರಡು ಟೆನ್ಷನ್ ಶುರುವಾಗಿದೆ.