ಗೋಕಾಕ್ ತಾಲೂಕಿನ ಬಡಿಗವಾಡದಲ್ಲಿ ವೃದ್ಧ ದಂಪತಿಯ ಮೇಲೆ ಅವರ ದತ್ತು ಪುತ್ರ ಸಂಜು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಒಂದು ಎಕರೆ ಜಮೀನಿನ ವಿವಾದದಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ. ಕುಡಗೋಲು ಮತ್ತು ಬಂದೂಕನ್ನು ಬಳಸಿ ಹಲ್ಲೆಗೆ ಯತ್ನಿಸಿದ್ದಾನೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕಸನಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಜನರು ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದಾರೆ. ಬೋರ್ವೆಲ್ನಿಂದ ನಲ್ಲಿಗೆ ನೀರು ಸರಬರಾಜು ಮಾಡುವ ಪೈಪ್ ಒಡೆದು ಕೊಳಚೆ ನೀರು ಮಿಶ್ರಣವಾಗಿದೆ ಎನ್ನಲಾಗಿದೆ. ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಉಳಿದವರಿಗೆ ಗ್ರಾಮದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ಕರ್ನಾಟಕದಾದ್ಯಂತ ಒಂದೇ ದಿನ ಹತ್ತು ಜನರು ನೀರುಪಾಲಾಗಿ ಮೃತಪಟ್ಟಿದ್ದಾರೆ. ಬೆಳಗಾವಿ, ವಿಜಯಪುರ, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಈ ದುರ್ಘಟನೆಗಳು ನಡೆದಿವೆ. ಮಕ್ಕಳು ಮತ್ತು ವಯಸ್ಕರ ಸಾವುಗಳು ವರದಿಯಾಗಿವೆ, ಕೆಲವು ಘಟನೆಗಳು ಅಪಘಾತಗಳಾಗಿದ್ದರೆ, ಇತರವು ಆತ್ಮಹತ್ಯೆಗಳಾಗಿವೆ.
ಕರ್ನಾಟಕ ರಾಜಕಾರಣದಲ್ಲಿ ಮತ್ತೆ ಆಪರೇಷನ್ ಕಮಲದ ಸದ್ದು ಜೋರಾಗಿದೆ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ರೂ. ಆಫರ್ ನೀಡಿತ್ತು ಎಂದು ಸಿಎಂ ಸಿದ್ದರಾಮಯ್ಯ ಕೆಲವು ದಿನಗಳ ಹಿಂದೆ ಆರೋಪಿಸಿದ್ದರು. ಇದೀಗ 50 ಅಲ್ಲ 100 ಕೋಟಿ ರೂಪಾಯಿ ಆಫರ್ ಬಂದಿದೆ ಎಂದು ಮಂಡ್ಯದಲ್ಲಿ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಆರೋಪಿಸಿದ್ದಾರೆ. ಆದರೆ, ಕಾಂಗ್ರೆಸ್ ಶಾಸಕರೇ ರವಿಕುಮಾರ್ ಗಣಿಗ ಆರೋಪವನ್ನು ಅಲ್ಲಗಳೆದಿದ್ದಾರೆ!
ಬೆಳಗಾವಿಯ ಎಸ್ಡಿಎ ರುದ್ರೇಶ್ (ರುದ್ರಣ್ಣ ಯಡವಣ್ಣವರ) ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ದೊರೆತಿದೆ. ಆತ್ಮಹತ್ಯೆಯಲ್ಲ ಕೊಲೆ ಎಂದು ಪ್ರತಿಪಾದಿಸಿ ಅನಾಮಧೇಯ ಪತ್ರವೊಂದು ರಾಜ್ಯಪಾಲರು ಸೇರಿದಂತೆ ಪ್ರಮುಖರಿಗೆ ಬಂದಿದ್ದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಅನಾಮಧೇಯ ಪತ್ರದಲ್ಲೇನಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.
ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ನೀಚ ಕೃತ್ಯಕ್ಕೆ ವರ್ಷವಾಗುವ ಮುನ್ನವೇ ಮಹಿಳೆಯೊಬ್ಬರನ್ನು ಹಲ್ಲೆ ಮಾಡಿ, ಸಾರ್ವಜನಿಕವಾಗಿ ಆಕೆಯ ಬಟ್ಟೆಯನ್ನು ಹರಿದುಹಾಕಿದ ಘಟನೆ ವಡ್ಡರವಾಡಿಯಲ್ಲಿ ನಡೆದಿದೆ. ಆರೋಪಿಗಳ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಗಳನ್ನು ಸೃಷ್ಟಿಸಿ ವಂಚಿಸುತ್ತಿದ್ದ ರಾಜಸ್ಥಾನ ಮೂಲದ ಅರ್ಬಾಜ್ ಖಾನ್ನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ರೀತಿಯ ವಂಚನೆಗಳು ಮಂಗಳೂರಿನಲ್ಲೂ ನಡೆದಿವೆ. ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಂತ ಮುಖ್ಯವಾಗಿದೆ.
ಬೆಳಗಾವಿಯ ತಹಶೀಲ್ದಾರ್ ರುದ್ರೇಶ್ ಆತ್ಮಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಬೆಳಗಾವಿ 10ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪಿಎ ಸೋಮು, ಬಸವರಾಜ ನಾಗರಾಳ ಮತ್ತು ಅಶೋಕ್ ಕಬ್ಬಲಿಗೇರ್ ಅವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ನೀಡಲಾಗಿದೆ. ಬೆಳಗಾವಿ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ಡಾ. ಬಿಆರ್ ಅಂಬೇಡ್ಕರ್ ಅವರು ಇಸ್ಲಾಂ ಧರ್ಮಕ್ಕೆ ಸೇರಲು ಸಿದ್ಧತೆ ಮಾಡಿಕೊಂಡಿದ್ದರೂ ಎಂಬ ಕಾಂಗ್ರೆಸ್ ಮುಖಂಡ ಅಜ್ಜಂಪಿರ್ ಖಾದ್ರಿ ಹೇಳಿಕೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲೇ ಸಂಚಲನಕ್ಕೆ ಕಾರಣವಾಗಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಆಯ್ಕೆಯಾಗಿದೆ. ಜಾರಕಿಹೊಳಿ ಬ್ರದರ್ಸ್ ಒಂದುಗೂಡಿ ಒಬ್ಬರನ್ನು ಆಯ್ಕೆ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಬೆಂಬಲಿತ ನಿರ್ದೇಶಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರ ಸೂಚಿಸಿದ ವ್ಯಕ್ತಿಯನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ಅಚ್ಚರಿ ಮೂಡಿಸಿದೆ.
ಬೆಳಗಾವಿಯ ಸೋನಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಪ್ರಕಾಶ್ ದೇವಣ್ಣವರ್ ಅವರು ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಿಸುವ ನಿಟ್ಟಿನಲ್ಲಿ ವಿಮಾನ ಪ್ರವಾಸವನ್ನು ಏರ್ಪಡಿಸಿದ್ದಾರೆ. 17 ವಿದ್ಯಾರ್ಥಿಗಳು ಆಯ್ಕೆ ಆಗಿದ್ದು, ಎರಡೂವರೆ ಲಕ್ಷ ರೂಪಾಯಿ ವೆಚ್ಚದ ಈ ಪ್ರವಾಸದಿಂದ ಶಾಲಾ ಹಾಜರಾತಿಯಲ್ಲಿ ಗಮನಾರ್ಹ ಏರಿಕೆಯಾಗಿದೆ ಎಂದು ಶಿಕ್ಷಕರು ತಿಳಿಸಿದ್ದಾರೆ.
ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡಣ್ಣನವರ್ ಆತ್ಮಹತ್ಯೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದು ರಾಜಕೀಯವಾಗಿ ತಿರುಗುವ ಎಲ್ಲಾ ಸಾಧ್ಯತೆಗಳಿವೆ. ಯಾಕಂದ್ರೆ, ಸಾವಿಗೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆಪ್ತ ಸಹಾಯಕನ ಹೆಸರು ಉಲ್ಲೇಖ ಮಾಡಲಾಗಿದೆ. ಹೀಗಾಗಿ ಈ ಪ್ರಕರಣ ಗಂಭೀರವಾಗಿದೆ. ಹಾಗಾದ್ರೆ, ಸಾವಿಗೂ ಮುನ್ನ ರುದ್ರಣ್ಣ ಮೆಸೇಜ್ನಲ್ಲಿ ಯಾರೆಲ್ಲಾ ಹೆಸರು ಉಲ್ಲೇಖಿಸಿದ್ದಾರೆ ಎನ್ನುವ ವಿವರ ಇಲ್ಲಿದೆ.