AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sahadev Mane

Sahadev Mane

Author - TV9 Kannada

sahadev.mane@tv9.com
ಇಡೀ ಊರೇ ಮುಳುಗಿದ್ರೂ ಬಾರದ ಜನಪ್ರತಿನಿಧಿ: ‘ನಮ್ಮ ಶಾಸಕರು ನಾಪತ್ತೆಯಾಗಿದ್ದಾರೆ ಹುಡುಕಿಕೊಡಿ’ ಎಂದು ಜನಾಕ್ರೋಶ!

ಇಡೀ ಊರೇ ಮುಳುಗಿದ್ರೂ ಬಾರದ ಜನಪ್ರತಿನಿಧಿ: ‘ನಮ್ಮ ಶಾಸಕರು ನಾಪತ್ತೆಯಾಗಿದ್ದಾರೆ ಹುಡುಕಿಕೊಡಿ’ ಎಂದು ಜನಾಕ್ರೋಶ!

ಬೈಲಹೊಂಗಲದಲ್ಲಿ ಸುರಿದ ಭಾರಿ ಮಳೆಯಿಂದ ಹತ್ತರಿಂದ ಹದಿನೈದು ಕೋಟಿಗೂ ಹೆಚ್ಚು ನಷ್ಟವಾಗಿದೆ. ಅಂಗಡಿಗಳು, ಗೋದಾಮುಗಳು ಜಲಾವೃತಗೊಂಡು ವ್ಯಾಪಾರಸ್ಥರಿಗೆ ಅಪಾರ ಹಾನಿಯಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಶಾಸಕರು ನಾಪತ್ತೆಯಾಗಿದ್ದಾರೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರಸಭೆ ನಿರ್ಲಕ್ಷ್ಯವನ್ನೂ ಖಂಡಿಸಿ, ಸೂಕ್ತ ಪರಿಹಾರ ಮತ್ತು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಬೆಳಗಾವಿ ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ

ಬೆಳಗಾವಿ ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ

ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಎಪಿಎಂಸಿ ರಸ್ತೆಯಲ್ಲಿರುವ ಐದಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ. ಮಳೆಯಾಗಿ ಒಂದು ದಿನ ಕಳೆದರೂ ನೀರು ಇಳಿಮುಖವಾಗಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಚರಂಡಿ ವ್ಯವಸ್ಥೆಗೆ ಆಗ್ರಹಿಸಿದ್ದಾರೆ.

ಬೆಳಗಾವಿಯ ಶಿವಾನಂದ ನೀಲಣ್ಣವರನ ಸಾವಿರಾರು ಕೋಟಿ ರೂ. ರಹಸ್ಯ ಬಯಲು: ಎಳೆ ಎಳೆಯಾಗಿ ಬಿಚ್ಚಿಟ್ಟ ಸಿಐಡಿ

ಬೆಳಗಾವಿಯ ಶಿವಾನಂದ ನೀಲಣ್ಣವರನ ಸಾವಿರಾರು ಕೋಟಿ ರೂ. ರಹಸ್ಯ ಬಯಲು: ಎಳೆ ಎಳೆಯಾಗಿ ಬಿಚ್ಚಿಟ್ಟ ಸಿಐಡಿ

ಬೆಳಗಾವಿಯ ಶಿವಂ ಅಸೋಸಿಯೇಟ್ ಕಂಪನಿಯು ಸಾವಿರಾರು ಕೋಟಿ ರೂಪಾಯಿ ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಮಹತ್ವದ ಮಾಹಿತಿ ಬಹಿರಂಗಪಡಿಸಿದೆ. ಹೆಚ್ಚಿನ ಲಾಭದ ಆಮಿಷವೊಡ್ಡಿ 2,400 ಕೋಟಿ ಸಂಗ್ರಹಿಸಿ, ಹೊಸಬರ ಹಣವನ್ನು ಹಳಬರಿಗೆ ಬಡ್ಡಿಯಾಗಿ ನೀಡುತ್ತಿದ್ದ ವಂಚನೆಯ ರಹಸ್ಯವನ್ನು ಸಿಐಡಿ ಡಿಐಜಿಪಿ ಭೀಮಾಶಂಕರ್ ಗುಳೇದ್ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಬೆಳಗಾವಿಯಲ್ಲಿ ಬಹುಕೋಟಿ ವಂಚನೆ ಕೇಸ್: 6 ಜನರ ವಿರುದ್ಧ FIR; ಸಿಐಡಿಗೆ ಹಸ್ತಾಂತರಿಸಲು ಮುಂದಾದ ಪೊಲೀಸರು

ಬೆಳಗಾವಿಯಲ್ಲಿ ಬಹುಕೋಟಿ ವಂಚನೆ ಕೇಸ್: 6 ಜನರ ವಿರುದ್ಧ FIR; ಸಿಐಡಿಗೆ ಹಸ್ತಾಂತರಿಸಲು ಮುಂದಾದ ಪೊಲೀಸರು

ಬೆಳಗಾವಿಯ ಆದಿತ್ಯರಾಜ್ ಕ್ಯಾಪಿಟಲ್ ಪ್ರೈ.ಲಿ. 6,500ಕ್ಕೂ ಹೆಚ್ಚು ಜನರಿಂದ ಸಾವಿರಾರು ಕೋಟಿ ರೂಪಾಯಿ ಹೂಡಿಕೆ ಸಂಗ್ರಹಿಸಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂಸ್ಥೆ ಸೇರಿದಂತೆ ಒಟ್ಟು 6 ಜನರ ಮೇಲೆ ಎಫ್​ಐಆರ್​ ದಾಖಲಾಗಿದೆ. ಇನ್ನು ಕಂಪನಿಯ ಸಿಇಒ ಪತ್ತೆಗೆ ವಿಶೇಷ ತಂಡ ಹುಡುಕಾಟ ನಡೆಸಿದೆ.

ಬರ್ತ್ ಡೇ ಪಾರ್ಟಿ ಆಚರಿಸುತ್ತಿದ್ದಾಗಲೇ ಕುಸಿದು ಬಿದ್ದ ಕಟ್ಟಡ: ಕೂದಲೆಳೆ ಅಂತರದಲ್ಲಿ ಪಾರಾದ 15 ಯುವಕರು

ಬರ್ತ್ ಡೇ ಪಾರ್ಟಿ ಆಚರಿಸುತ್ತಿದ್ದಾಗಲೇ ಕುಸಿದು ಬಿದ್ದ ಕಟ್ಟಡ: ಕೂದಲೆಳೆ ಅಂತರದಲ್ಲಿ ಪಾರಾದ 15 ಯುವಕರು

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಮಳೆಗೆ ಹಳೇ ಕಟ್ಟಡವೊಂದು ದಿಢೀರ್ ಕುಸಿದು ಬಿದ್ದಿದ್ದು, ಕಟ್ಟಡದೊಳಗೆ ಸ್ನೇಹಿತನ ಹುಟ್ಟುಹಬ್ಬ ಆಚರಿಸುತ್ತಿದ್ದ 15 ಯುವಕರು ಶಬ್ದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಬರ್ತ್ ಡೇ ಸೆಲೆಬ್ರೇಶನ್ ವೇಳೆ ಅವರಿಗೆ ವಿಚಿತ್ರ ಶಬ್ದ ಕೇಳಿಸಿದ್ದು, ಹೊರಗೆ ಓಡಿ ಬಂದಿದ್ದರಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ: ದಾಳಿ ವೇಳೆ ಕಂಪನಿಯ ಸರ್ವರ್​​ ಡೌನ್​​ ಮಾಡಿ ಕಳ್ಳಾಟ?

ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ: ದಾಳಿ ವೇಳೆ ಕಂಪನಿಯ ಸರ್ವರ್​​ ಡೌನ್​​ ಮಾಡಿ ಕಳ್ಳಾಟ?

ಬೆಳಗಾವಿಯ ಆದಿತ್ಯರಾಜ ಕ್ಯಾಪಿಟಲ್ ಕಂಪನಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೇ ಕಂಪನಿಯ ಸರ್ವರ್ ಡೌನ್ ಆಗಿದೆ. ನೂರಾರು ಕೋಟಿ ರೂ. ವಂಚನೆ ಶಂಕೆ ವ್ಯಕ್ತವಾಗಿದ್ದು, ತನಿಖೆ ಚುರುಕುಗೊಂಡಿದೆ. ಶಿವಂ ಅಸೋಸಿಯೇಟ್ಸ್ ಸಂಸ್ಥೆಯಿಂದ ಸುಮಾರು 4,500 ಕೋಟಿ ರೂ. ವಂಚನೆ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿರುವ ನಡುವೆಯೇ ಅದೇ ಮಾದರಿಯ ಮತ್ತೊಂದು ಕೇಸ್​ ವರದಿಯಾಗಿರೋದು ಪೊಲೀಸರಿಗೂ ತಲೆನೋವಾಗಿ ಮಾರ್ಪಟ್ಟಿದೆ.

ಬೆಳಗಾವಿ: DySP, ಪಿಎಸ್​ಐ ಹೆಸರು ಬರೆದಿಟ್ಟು ವ್ಯಕ್ತಿ ಸಾವು, ಕಾರಣವೇನು?

ಬೆಳಗಾವಿ: DySP, ಪಿಎಸ್​ಐ ಹೆಸರು ಬರೆದಿಟ್ಟು ವ್ಯಕ್ತಿ ಸಾವು, ಕಾರಣವೇನು?

ಕೊಟ್ಟ ಸಾಲ ವಾಪಸ್ ಕೊಡಲಿಲ್ಲ ಎಂದು ಮನನೊಂದು ಬೆಳಗಾವಿಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದ್ರೆ, ಆತ್ಮಹತ್ಯೆಗೂ ಮುನ್ನ ಡೆತ್​​ ನೋಟ್ ಬರೆದಿಟ್ಟಿದ್ದು, ಹಲವ ಹೆಸರಗಳನ್ನು ಉಲ್ಲೇಖಿಸಿದ್ದಾನೆ. ಅದರಲ್ಲೂ ಮುಖ್ಯವಾಗಿ ಡೆತ್​ ನೋಟ್​​ನಲ್ಲಿ DySP, ಪಿಎಸ್​ಐ ಹೆಸರುಗಳನ್ನ ಉಲ್ಲೇಖಿಸಿ ಗಂಭೀರ ಆರೋಪ ಮಾಡಿದ್ದಾನೆ. ಈ ಬಗ್ಗೆ ಮೂಡಲಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

ಸತೀಶ್ ಜಾರಕಿಹೊಳಿ ವಿರುದ್ಧ ಫೇಸ್‌ಬುಕ್‌ನಲ್ಲಿ ಸುಳ್ಳು ಪೋಸ್ಟ್; ಇಬ್ಬರು ಅಡ್ಮಿನ್‌ಗಳ ವಿರುದ್ಧ ಎಫ್‌ಐಆರ್ ದಾಖಲು

ಸತೀಶ್ ಜಾರಕಿಹೊಳಿ ವಿರುದ್ಧ ಫೇಸ್‌ಬುಕ್‌ನಲ್ಲಿ ಸುಳ್ಳು ಪೋಸ್ಟ್; ಇಬ್ಬರು ಅಡ್ಮಿನ್‌ಗಳ ವಿರುದ್ಧ ಎಫ್‌ಐಆರ್ ದಾಖಲು

ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ವಿರುದ್ಧ ಫೇಸ್‌ಬುಕ್‌ನಲ್ಲಿ ಸುಳ್ಳು ಪೋಸ್ಟ್ ಹಾಕಿದ ಇಬ್ಬರು ಅಡ್ಮಿನ್‌ಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಿದ್ದರಾಮಯ್ಯಗೆ ದ್ರೋಹ ಬಗೆದಿದ್ದಾರೆ ಎಂದು ಆರೋಪಿಸಿ, ಕುರುಬ-ವಾಲ್ಮೀಕಿ ಸಮುದಾಯಗಳ ನಡುವೆ ಭಿನ್ನಾಭಿಪ್ರಾಯ ಮೂಡಿಸುವ ದುರುದ್ದೇಶದಿಂದ ಈ ಪೋಸ್ಟ್ ಹಾಕಲಾಗಿದೆ ಎಂದು ಸತೀಶ್ ಬೆಂಬಲಿಗರು ದೂರು ಬೆನ್ನ ಬೆಳಗಾವಿ ಸಿಇಎನ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಅಗ್ನಿ ಅವಘಡದಲ್ಲಿ ಸುಟ್ಟು ಭಸ್ಮವಾದ ಫರ್ನಿಚರ್ ಅಂಗಡಿ: ಕೋಟ್ಯಾಂತರ ರೂ. ಮೌಲ್ಯದ ಪೀಠೋಪಕರಣಗಳು ಅಗ್ನಿಗಾಹುತಿ

ಅಗ್ನಿ ಅವಘಡದಲ್ಲಿ ಸುಟ್ಟು ಭಸ್ಮವಾದ ಫರ್ನಿಚರ್ ಅಂಗಡಿ: ಕೋಟ್ಯಾಂತರ ರೂ. ಮೌಲ್ಯದ ಪೀಠೋಪಕರಣಗಳು ಅಗ್ನಿಗಾಹುತಿ

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸಂಗನಕೆರೆ ಕ್ರಾಸ್ ಬಳಿ ಇರುವ ಎಸ್‌ಎಂಕೆ ಫರ್ನಿಚರ್ ಅಂಗಡಿಗೆ ಮಧ್ಯರಾತ್ರಿ ಭಾರಿ ಬೆಂಕಿ ಬಿದ್ದು ಕೋಟ್ಯಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಅಥವಾ ಗ್ಯಾಸ್ ಬ್ಲಾಸ್ಟ್ ಕಾರಣವಾಗಿರಬಹುದು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

SDRF ಸಿಪಿಐ ನಿಗೂಢ ಸಾವು: ಅಧಿಕಾರಿ ಬಲಿ ಪಡೆಯಿತಾ ಆನ್​​ಲೈನ್​​ ಗೇಮ್​​ ಗೀಳು?

SDRF ಸಿಪಿಐ ನಿಗೂಢ ಸಾವು: ಅಧಿಕಾರಿ ಬಲಿ ಪಡೆಯಿತಾ ಆನ್​​ಲೈನ್​​ ಗೇಮ್​​ ಗೀಳು?

ಬೆಳಗಾವಿಯಲ್ಲಿ ಎಸ್‌ಡಿಆರ್‌ಎಫ್ ಸಿಪಿಐ ಓರ್ವರು ಮನೆಯಲ್ಲೇ ನಿಗೂಢವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾವಿಗೆ ಕಾರಣ ಏನು ಎಂಬುದು ಇನ್ನೂ ನಿಗೂಢವಾಗಿಯೇ ಉಳಿದಿದ್ದು, ಈ ಸಂಬಂಧ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇನ್ನು 2-3 ತಿಂಗಳಲ್ಲಿಯೇ ಡಿವೈಎಸ್ಪಿ ಆಗಿ ಭಡ್ತಿ ಹೊಂದಬೇಕಿದ್ದ ಅಧಿಕಾರಿಯ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ.

ಬೆಳಗಾವಿ: ರಾಯಬಾಗದಲ್ಲಿ ಭೀಕರ ರಸ್ತೆ ಅಪಘಾತ, ಗೂಡ್ಸ್ ಆಟೋ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ದುರ್ಮರಣ

ಬೆಳಗಾವಿ: ರಾಯಬಾಗದಲ್ಲಿ ಭೀಕರ ರಸ್ತೆ ಅಪಘಾತ, ಗೂಡ್ಸ್ ಆಟೋ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ದುರ್ಮರಣ

ಬೆಳಗಾವಿ ಜಿಲ್ಲೆಯ ರಾಯಬಾಗದ ಹೊರವಲಯದಲ್ಲಿ ರಾಂಗ್ ಸೈಡ್‌ನಿಂದ ಬಂದ ಗೂಡ್ಸ್ ಆಟೋ ಡಿಕ್ಕಿಯಾಗಿ ಬೊಮ್ಮನಾಳ ಗ್ರಾಮದ ಮಹಾಂತೇಶ್, ಅವರ ಪತ್ನಿ ಸಾಕ್ಷಿ ಹಾಗೂ 9 ತಿಂಗಳ ಮಗು ಸಮರ್ಥ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಂದು ಮಗು ತೀವ್ರ ಗಾಯಗೊಂಡಿದೆ. ಸದ್ಯ ಆಟೋ ಚಾಲಕ ಪರಾರಿಯಾಗಿದ್ದು, ರಾಯಬಾಗ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಬೆಳಗಾವಿಯಲ್ಲಿ 4,500 ಕೋಟಿ ರೂ. ವಂಚನೆ ಪ್ರಕರಣ: ಹೂಡಿಕೆಗಿಂತ ಹೆಚ್ಚಿನ ಲಾಭ ಪಡೆದವರಿಗೂ ಶುರುವಾಯ್ತು ನಡುಕ

ಬೆಳಗಾವಿಯಲ್ಲಿ 4,500 ಕೋಟಿ ರೂ. ವಂಚನೆ ಪ್ರಕರಣ: ಹೂಡಿಕೆಗಿಂತ ಹೆಚ್ಚಿನ ಲಾಭ ಪಡೆದವರಿಗೂ ಶುರುವಾಯ್ತು ನಡುಕ

ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣವರ್ ನಡೆಸಿದ ₹4,500 ಕೋಟಿ ಪೊಂಜಿ ವಂಚನೆ ಪ್ರಕರಣದಲ್ಲಿ 35,000 ಹೂಡಿಕೆದಾರರು ಸಂಕಷ್ಟದಲ್ಲಿದ್ದಾರೆ. ಆರಂಭಿಕ ಹೂಡಿಕೆದಾರರು ತಮ್ಮ ಹೂಡಿಕೆಗಿಂತ ಹೆಚ್ಚಿನ ಲಾಭ ಪಡೆದಿದ್ದು, ಸಿಐಡಿ ಈಗ ಅಂತಹವರ ಹಣವನ್ನು ವಾಪಸ್ ಪಡೆಯಲು ಮುಂದಾಗಿದೆ. ಎಲ್ಲ ಹೂಡಿಕೆದಾರರಿಗೆ ನ್ಯಾಯ ಒದಗಿಸುವುದು ಸಿಐಡಿ ಗುರಿಯಾಗಿದೆ.