AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ

Author - TV9 Kannada

sanjayya.chikkamath@tv9.com

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಧಾರವಾಡ ಜಿಲ್ಲೆಯಲ್ಲಿ ಹಳ್ಳ ಹಿಡಿದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ?: ಇಂದಿರಾ ಕ್ಯಾಂಟೀನ್​​ ಆಹಾರ ಗುಣಮಟ್ಟದ ಬಗ್ಗೆ ಆಕ್ರೋಶ

ಧಾರವಾಡ ಜಿಲ್ಲೆಯಲ್ಲಿ ಹಳ್ಳ ಹಿಡಿದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ?: ಇಂದಿರಾ ಕ್ಯಾಂಟೀನ್​​ ಆಹಾರ ಗುಣಮಟ್ಟದ ಬಗ್ಗೆ ಆಕ್ರೋಶ

ಹುಬ್ಬಳ್ಳಿ-ಧಾರವಾಡದಲ್ಲಿ ಇಂದಿರಾ ಕ್ಯಾಂಟೀನ್ ಆಹಾರದ ಗುಣಮಟ್ಟ ಹದಗೆಟ್ಟಿದ್ದು, ಕಳಪೆ ಊಟ ಮತ್ತು ಸಿಬ್ಬಂದಿ ಧೋರಣೆಯ ವಿರುದ್ಧ ಸಾರ್ವಜನಿಕರು ಹಾಗೂ ಬಡ ಕಾರ್ಮಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ನೀರಿನಂತಿರುವ ಸಾರು, ಸರಿಯಾಗಿ ಬೆಂದಿರದ ಅನ್ನವನ್ನು ಇಂದಿರಾ ಕ್ಯಾಂಟೀನ್​​ಗಳಲ್ಲಿ ನೀಡಲಾಗ್ತಿದೆ. ಚಪಾತಿ ಮತ್ತು ರೊಟ್ಟಿ ಕೂಡ ತಿನ್ನಲು ಯೋಗ್ಯವಾಗಿರಲ್ಲ. ಹೀಗಾಗಿ ಸಂಬಂಧಪಟ್ಟವರು ಇತ್ತಕಡೆ ಗಮನಹರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

ವಾಯುವ್ಯ ಸಾರಿಗೆಗೆ ಡೀಸೆಲ್ ಬೆನ್ನಲ್ಲೇ ಬಿಡಿಭಾಗಗಳ ದರ ಏರಿಕೆ ಶಾಕ್; ಸ್ಪೇರ್ ಪಾರ್ಟ್ಸ್ ಸಿಗದೆ ಸಂಕಷ್ಟ

ವಾಯುವ್ಯ ಸಾರಿಗೆಗೆ ಡೀಸೆಲ್ ಬೆನ್ನಲ್ಲೇ ಬಿಡಿಭಾಗಗಳ ದರ ಏರಿಕೆ ಶಾಕ್; ಸ್ಪೇರ್ ಪಾರ್ಟ್ಸ್ ಸಿಗದೆ ಸಂಕಷ್ಟ

ಡೀಸೆಲ್ ದರ ಏರಿಕೆಯ ಬೆನ್ನಲ್ಲೇ ವಾಯುವ್ಯ ಸಾರಿಗೆ ನಿಗಮಕ್ಕೆ ಬಿಡಿಭಾಗಗಳ ಬೆಲೆ ಏರಿಕೆ ಹಾಗೂ ಪೂರೈಕೆ ಕೊರತೆಯ ದೊಡ್ಡ ಹೊಡೆತ ಬಿದ್ದಿದೆ. ಹಳೆಯ ದರಕ್ಕೆ ಟೈರ್ ಮತ್ತು ಸ್ಪೇರ್ ಪಾರ್ಟ್ಸ್ ನೀಡಲು ಟೆಂಡರ್‌ದಾರರು ನಿರಾಕರಿಸುತ್ತಿರುವುದರಿಂದ ಬಸ್‌ಗಳ ತಾಂತ್ರಿಕ ನಿರ್ವಹಣೆ ಸಂಪೂರ್ಣ ಸ್ಥಗಿತಗೊಳ್ಳುವ ಹಂತಕ್ಕೆ ತಲುಪಿದೆ.

ಕಾಂಗ್ರೆಸ್ ಹೈಕಮಾಂಡ್‌ಗೆ ಮುಸ್ಲಿಂ ಸಮುದಾಯದ ಖಡಕ್ ಎಚ್ಚರಿಕೆ: 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿ ಏನೂ ಎಂಬುದನ್ನ ತೋರಿಸುತ್ತೇವೆ

ಕಾಂಗ್ರೆಸ್ ಹೈಕಮಾಂಡ್‌ಗೆ ಮುಸ್ಲಿಂ ಸಮುದಾಯದ ಖಡಕ್ ಎಚ್ಚರಿಕೆ: 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿ ಏನೂ ಎಂಬುದನ್ನ ತೋರಿಸುತ್ತೇವೆ

ಹೊಸ ಕರ್ನಾಟಕ ಸರ್ಕಾರ ರಚನೆಯಾದ ಬೆನ್ನಲ್ಲೇ, ಮುಸ್ಲಿಂ ಸಮುದಾಯ ಸಚಿವ ಸಂಪುಟದಲ್ಲಿ ಯು.ಟಿ. ಖಾದರ್ ಹೊರತುಪಡಿಸಿ ಇನ್ನೂ 4 ಸ್ಥಾನಗಳಿಗೆ ತೀವ್ರ ಬೇಡಿಕೆ ಇಟ್ಟಿದೆ. ಈಡೇರದಿದ್ದರೆ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್​ಗೆ ಮತದಾನವಿಲ್ಲ ಎಂದು ಹುಬ್ಬಳ್ಳಿಯ ಮುಖಂಡರು ಎಚ್ಚರಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್​ಗೆ ಮುಸ್ಲಿಂ ಸಮುದಾಯ ಇಕ್ಕಟ್ಟು ಸೃಷ್ಟಿಸಿದ್ದು, ಸಂಪುಟ ವಿಸ್ತರಣೆ ಸವಾಲಾಗಿದೆ.

ಹಿಜಾಬ್ Vs ಕೇಸರಿ ಸಂಘರ್ಷ: ಹಿಂದೂಪರ ಸಂಘಟನೆಗಳಿಂದ ಹುಬ್ಬಳ್ಳಿಯ ಅನೇಕ ಕಡೆ ಕೇಸರಿ ಶಾಲು ವಿತರಣೆ

ಹಿಜಾಬ್ Vs ಕೇಸರಿ ಸಂಘರ್ಷ: ಹಿಂದೂಪರ ಸಂಘಟನೆಗಳಿಂದ ಹುಬ್ಬಳ್ಳಿಯ ಅನೇಕ ಕಡೆ ಕೇಸರಿ ಶಾಲು ವಿತರಣೆ

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಇತ್ತೀಚಿನ ಆದೇಶವನ್ನು ವಿರೋಧಿಸಿ ಹುಬ್ಬಳ್ಳಿಯ ಕನಕದಾಸ ಕಾಲೇಜು ಸೇರಿದಂತೆ ಹಲವೆಡೆ ಹಿಂದೂಪರ ಸಂಘಟನೆಗಳು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಿ ಪ್ರತಿಭಟಿಸಿದವು. ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಆವರಣಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಮೊದಲು ರಸ್ತೆ, ಆಮೇಲೆ ಚರಂಡಿ: ಹುಬ್ಬಳ್ಳಿಯಲ್ಲಿ ಉಲ್ಟಾ ಪ್ಲ್ಯಾನ್​​​ಗೆ ಕೋಟ್ಯಂತರ ರೂ ಹಣ ನೀರಿನಲ್ಲಿ ಹೋಮ

ಮೊದಲು ರಸ್ತೆ, ಆಮೇಲೆ ಚರಂಡಿ: ಹುಬ್ಬಳ್ಳಿಯಲ್ಲಿ ಉಲ್ಟಾ ಪ್ಲ್ಯಾನ್​​​ಗೆ ಕೋಟ್ಯಂತರ ರೂ ಹಣ ನೀರಿನಲ್ಲಿ ಹೋಮ

ಹುಬ್ಬಳ್ಳಿ-ಧಾರವಾಡದಲ್ಲಿ ರಸ್ತೆ ನಿರ್ಮಾಣಕ್ಕೆ ಕೋಟಿಗಟ್ಟಲೆ ಹಣ ಖರ್ಚು ಮಾಡಿದ ನಂತರ, ಒಳಚರಂಡಿಗಾಗಿ ಹೊಸ ರಸ್ತೆಗಳನ್ನು ಮತ್ತೆ ಅಗೆಯಲಾಗುತ್ತಿದೆ. ಅಧಿಕಾರಿಗಳ ಸಮನ್ವಯ ಕೊರತೆಯಿಂದ ಸಾರ್ವಜನಿಕರ ಕೋಟ್ಯಂತರ ರೂ ತೆರಿಗೆ ಹಣ ಪೋಲು ಮಾಡಲಾಗುತ್ತಿದೆ. ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ದುಂದು ವೆಚ್ಚಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಪ್ರತ್ಯಕ ಪಾಲಿಕೆ ಹೋರಾಟಕ್ಕೆ ತೆರೆ: ಹುಬ್ಬಳ್ಳಿ-ಧಾರವಾಡ ಬೃಹತ್ ಮಹಾನಗರ ಪಾಲಿಕೆ ಠರಾವು ರದ್ದು

ಪ್ರತ್ಯಕ ಪಾಲಿಕೆ ಹೋರಾಟಕ್ಕೆ ತೆರೆ: ಹುಬ್ಬಳ್ಳಿ-ಧಾರವಾಡ ಬೃಹತ್ ಮಹಾನಗರ ಪಾಲಿಕೆ ಠರಾವು ರದ್ದು

ಹುಬ್ಬಳ್ಳಿ-ಧಾರವಾಡ ಪ್ರತ್ಯಕ ಪಾಲಿಕೆ ಕಡಿತಕ್ಕೆ ರಾಜ್ಯಪಾಲರು ಸಹಿ ಬೆನ್ನಲ್ಲೇ ಇದೀಗ ಈ ಹಿಂದಿನ ಹುಬ್ಬಳ್ಳಿ-ಧಾರವಾಡ ಬೃಹತ್ ಮಹಾನಗರ ಪಾಲಿಕೆ ಠರಾವು ರದ್ದಾಗಿದೆ. ಆ ಮೂಲಕ ಕೆಲ ದಿನಗಳಿಂದ ನಡೆದಿದ್ದ ಹೋರಾಟ, ಪ್ರತಿಭಟನೆಗಳಿಗೆ ತೆರೆ ಬಿದ್ದಿದೆ. ಈ ಬಗ್ಗೆ ಪಾಲಿಕೆ ಮೇಯರ್ ಜೋತಿ ಪಾಟೀಲ್​ ಸ್ಪಷ್ಟನೆ ನೀಡಿದ್ದಾರೆ.

ಕೆಪಿಎಸ್ ಶಾಲೆಯಿಂದ ಸರ್ಕಾರಿ ಶಾಲೆಗಳು ಕ್ಲೋಸ್ ಆಗುತ್ತಿವೆಯಾ? ಕಳವಳ ವ್ಯಕ್ತಪಡಿಸಿದ ಹೊರಟ್ಟಿ

ಕೆಪಿಎಸ್ ಶಾಲೆಯಿಂದ ಸರ್ಕಾರಿ ಶಾಲೆಗಳು ಕ್ಲೋಸ್ ಆಗುತ್ತಿವೆಯಾ? ಕಳವಳ ವ್ಯಕ್ತಪಡಿಸಿದ ಹೊರಟ್ಟಿ

ರಾಜ್ಯದಲ್ಲಿ ಕೆಪಿಎಸ್ ಶಾಲೆಗಳ ವಿಸ್ತರಣೆ ಉತ್ತಮ ನಿರ್ಧಾರವಾದರೂ, ಸುತ್ತಮುತ್ತಲಿನ ಕನ್ನಡ ಶಾಲೆಗಳನ್ನು ವಿಲೀನಗೊಳಿಸಿ ಅಥವಾ ಬಂದ್ ಮಾಡಿ ಕೆಪಿಎಸ್ ಆರಂಭಿಸುವ ಸರ್ಕಾರದ ನಡೆಯು ಆತಂಕಕ್ಕೆ ಕಾರಣವಾಗಿದೆ. ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದು, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕನ್ನಡ ಶಾಲೆಗಳನ್ನು ಉಳಿಸಬೇಕೆಂದು ಆಗ್ರಹಿಸಿದ್ದಾರೆ.

ಮನೆಗೆ ಬಂದು ಬಾಲಕನಿಗೆ ಇಂಜೆಕ್ಷನ್​​ ಚುಚ್ಚಿ ಹೋದ ಮುಸುಕುಧಾರಿಗಳು: ಗ್ರಾಮದಲ್ಲಿ ಆತಂಕ

ಮನೆಗೆ ಬಂದು ಬಾಲಕನಿಗೆ ಇಂಜೆಕ್ಷನ್​​ ಚುಚ್ಚಿ ಹೋದ ಮುಸುಕುಧಾರಿಗಳು: ಗ್ರಾಮದಲ್ಲಿ ಆತಂಕ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ನೆಲಗುಡ್ಡ ಗ್ರಾಮದಲ್ಲಿ 11 ವರ್ಷದ ಬಾಲಕನಿಗೆ ಮುಸುಕುಧಾರಿಗಳು ಇಂಜೆಕ್ಷನ್ ಚುಚ್ಚಿ ಪರಾರಿಯಾಗಿದ್ದಾರೆಂಬ ಆರೋಪ ಕೇಳಿಬಂದಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಆತಂಕ ಮನೆಮಾಡಿದ್ದು, ಬಾಲಕನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಸತ್ಯಾಸತ್ಯತೆ ಕುರಿತು ಕುಂದಗೋಳ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬಸ್ಸಿನಲ್ಲಿಯೇ ಮರೆತು ಹೋಗಿದ್ದ ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಡ್ರೈವರ್

ಬಸ್ಸಿನಲ್ಲಿಯೇ ಮರೆತು ಹೋಗಿದ್ದ ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಡ್ರೈವರ್

ಎನ್‌ಡಬ್ಲ್ಯೂಕೆಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಮರೆತು ಹೋಗಿದ್ದ ಲ್ಯಾಪ್‌ಟಾಪ್ ಮತ್ತು ಕಂಪನಿ ದಾಖಲೆಗಳಿದ್ದ ಬ್ಯಾಗ್‌ನ್ನು ಬಸ್ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕವಾಗಿ ಹಿಂದಿರುಗಿಸಿದ್ದಾರೆ. ಬ್ಯಾಲೆಸ್ ಫಾರ್ಮಸ್ಯೂಟಿಕಲ್ಸ್ ಕಂಪನಿಯ ಏರಿಯಾ ಮ್ಯಾನೇಜರ್ ರಮೇಶ್ ಕುಲಕರ್ಣಿ ಅವರು ಮೇ 19ರಂದು ಶಿಗ್ಗಾಂವ್‌ದಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದಾಗ ಬಸ್ಸಿನಲ್ಲಿ ತಮ್ಮ ಲ್ಯಾಪ್‌ಟಾಪ್ ಬ್ಯಾಗ್‌ನ್ನು ಮರೆತಿದ್ದಾರೆ.

ನಾಲ್ಕು ದಿನಗಳಿಂದ ವಿದ್ಯುತ್ ಕಡಿತ: ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು

ನಾಲ್ಕು ದಿನಗಳಿಂದ ವಿದ್ಯುತ್ ಕಡಿತ: ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು

ಹುಬ್ಬಳ್ಳಿ ಗಾಂಧಿನಗರದಲ್ಲಿ ಕಳೆದ ನಾಲ್ಕು ದಿನಗಳಿಂದ ವಿದ್ಯುತ್ ಕಡಿತದಿಂದ ಜನರು ಪರದಾಡುತ್ತಿದ್ದಾರೆ. ಬಿರುಗಾಳಿಗೆ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿದರೂ, ಹೆಸ್ಕಾಂ ಮತ್ತು ಪಾಲಿಕೆ ಅಧಿಕಾರಿಗಳು, ಜನಪ್ರತಿನಿಧಿಗಳು ಸಮಸ್ಯೆಯನ್ನು ಬಗೆಹರಿಸಿಲ್ಲ. ಕುಡಿಯುವ ನೀರು ಮತ್ತು ಶೌಚಾಲಯಕ್ಕೂ ನೀರಿಲ್ಲದೆ ಸಾವಿರಾರು ಜನ ತೀವ್ರ ತೊಂದರೆ ಅನುಭವಿಸುತ್ತಿದ್ದು, ಆಕ್ರೋಶಗೊಂಡ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ.

3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಪ್ರತಿಭಟನೆ

3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಪ್ರತಿಭಟನೆ

ಹುಬ್ಬಳ್ಳಿಯ ಗಾಂಧಿನಗರ ಲೇಔಟ್‌ನಲ್ಲಿ ಮೂರು ದಿನಗಳಿಂದ ವಿದ್ಯುತ್ ಕಡಿತದಿಂದ ರೋಸಿಹೋದ ಜನ ಗೋಕುಲ ರಸ್ತೆ ತಡೆದು ಹೆಸ್ಕಾಂ ವಿರುದ್ಧ ಪ್ರತಿಭಟಿಸಿದ್ದಾರೆ. ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೂ, ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆರೋಪಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಮತ್ತು ಪ್ರತಿಭಟನಾ ನಿರತರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ.

ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ

ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ

ಪಂಚಮಸಾಲಿ ಪೀಠಗಳ ವಿವಾದ ಸಂಬಂಧ ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಹರಿಹರ ಪೀಠದ ಲೆಕ್ಕಪತ್ರದ ಗೊಂದಲಗಳನ್ನು ಪರಿಹರಿಸಲು ನಿರ್ಧರಿಸಲಾಗಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿದ್ದಾರೆ. ಮುಖಂಡರು ಪಾರದರ್ಶಕವಾಗಿ ಸಮಸ್ಯೆಯನ್ನು ಬಗೆಹರಿಸಲು ಒಪ್ಪಿಕೊಂಡಿದ್ದು, ಸಮಾಜಕ್ಕೆ ಒಳಿತು ಮಾಡುವ ಉದ್ದೇಶದಿಂದ ಎರಡೂ ಬಣದವರು ಸಮ್ಮತಿಸಿದ್ದಾರೆ. ಭವಿಷ್ಯದಲ್ಲಿ ಮತ್ತಷ್ಟು ಸಭೆಗಳು ನಡೆಯಲಿವೆ.