ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ…
ಕಾನೂನು ಸಚಿವರ ಕ್ಷೇತ್ರದಲ್ಲೇ ಕಾನೂನಿಗಿಲ್ಲ ಕಿಮ್ಮತ್ತು! ಕಿರಾಣಿ ಅಂಗಡಿ, ಹೋಟೆಲ್, ಮನೆಗಳಲ್ಲೂ ಮದ್ಯ ಮಾರಾಟ
ಕಾನೂನು ಸಚಿವರ ತವರು ಕ್ಷೇತ್ರದಲ್ಲೇ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ಕಿರಾಣಿ, ಹೋಟೆಲ್, ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದು, ಮಹಿಳೆಯರು ರೊಚ್ಚಿಗೆದ್ದಿದ್ದಾರೆ. ಈ ಅಕ್ರಮದಿಂದ ಅನೇಕ ಕುಟುಂಬಗಳು ಬೀದಿಗೆ ಬಂದಿವೆ. ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ನಾವೇ ಅಂಗಡಿಗಳಿಗೆ ನುಗ್ಗಿ ಹೊಡೆಯುತ್ತೇವೆ ಎಂದು ಅಬಕಾರಿ ಇಲಾಖೆಗೆ ಎಚ್ಚರಿಕೆಯನ್ನೂ ನೀಡಿದ್ದಾರೆ.
- Sanjeev Pandre
- Updated on: Jul 2, 2025
- 7:53 am
ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್ ಚಕ್ರ: ಮುಂದೇನಾಯ್ತು?
ಗದಗ ಜಿಲ್ಲೆಯ ಶಿರಹಟ್ಟಿಯ ಬಳಿ ಬೆಳ್ಳಟ್ಟಿಯಿಂದ ಶಿರಹಟ್ಟಿಗೆ ತೆರಳುತ್ತಿದ್ದ ಬಸ್ನ ಮುಂಭಾಗದ ಚಕ್ರ ಚಲಿಸುದ್ದ ವೇಳೆಯೇ ಕಳಚಿಕೊಂಡಿರುವಂತಹ ಘಟನೆ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಅದೃಷ್ಟವಶಾತ್ ಭಾರಿ ಅಪಘಾತ ತಪ್ಪಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ವಿಡಿಯೋ ಸೆರೆ ಹಿಡಿದಿದ್ದಾರೆ.
- Sanjeev Pandre
- Updated on: Jun 27, 2025
- 2:40 pm
ಕೂಡ್ಲಿ ಮಠದ ಕೋಟ್ಯಂತರ ರೂ ಆಸ್ತಿ ಅಕ್ರಮ ಮಾರಾಟಕ್ಕೆ ಪ್ಲ್ಯಾನ್: ಕಾಂಗ್ರೆಸ್ ನಾಯಕಿ ಹೆಸರಿಗೆ ಹಕ್ಕು ಬದಲಾವಣೆ
ಗದಗ ಜಿಲ್ಲೆಯಲ್ಲಿ ಕೂಡ್ಲಿ ಶ್ರೀಂಗೇರಿ ಮಠದ ಕೋಟ್ಯಂತರ ರೂ ಮೌಲ್ಯದ ಆಸ್ತಿಯನ್ನು ಕಾನೂನುಬಾಹಿರವಾಗಿ ಮಾರಾಟ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕಾಂಗ್ರೆಸ್ ನಾಯಕಿ ಹಾಗೂ ತಹಶೀಲ್ದಾರ್, ಸಬ್-ರಿಜಿಸ್ಟರ್ ಲಂಚ ಪಡೆದಿದ್ದು, ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಪೋಕಳಾ ಹಕ್ಕುದಾರರು ಸೇರಿದಂತೆ ಗ್ರಾಮಸ್ಥರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Sanjeev Pandre
- Updated on: Jun 27, 2025
- 10:16 am
ಗದಗ ಜಿಲ್ಲೆಯಲ್ಲೂ ವಸತಿ ಹಂಚಿಕೆಯಲ್ಲಿ ಭಾರೀ ಅಕ್ರಮ: ಬಿಜೆಪಿ ಶಾಸಕ ಚಂದ್ರು ಲಮಾಣಿ ಗಂಭೀರ ಆರೋಪ
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನಲ್ಲಿ 150 ವಸತಿ ಯೋಜನೆಯ ಮನೆಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಆರೋಪಿಸಿದ್ದಾರೆ. ಶಾಸಕರ ಶಿಫಾರಸು ಇಲ್ಲದೆ ಹಣ ಪಡೆದು ಉನ್ನತ ಅಧಿಕಾರಿಗಳು ಈ ಅಕ್ರಮ ಎಸಗಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಗರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕೆಂದು ಅವರು ಆಗ್ರಹಿಸಿದ್ದಾರೆ.
- Sanjeev Pandre
- Updated on: Jun 24, 2025
- 12:56 pm
ವಕ್ಫ್ ಆಯ್ತು, ರೈತರ ಪಹಣಿಯಲ್ಲಿ ಸರ್ಕಾರ ಅಂತ ನಮೂದು: ಆತಂಕದಲ್ಲಿ ನರಗುಂದ ಅನ್ನದಾತರು
ಅದು 80ರ ದಶಕ, ಅಂದು ನೀರಾವರಿ ಕರ ವಿಚಾರವಾಗಿ ನರಗುಂದದಲ್ಲಿ ದೊಡ್ಡ ಬಂಡಾಯವೇ ನಡೆದಿತ್ತು. ಈಗ ಮತ್ತೆ ನೀರಾವರಿ ಕರ ವಿಚಾರವಾಗಿ ರೈತರು ರೊಚ್ಚಿಗೆದ್ದು, ಸರ್ಕಾರ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದಾರೆ. 1995ರಲ್ಲಿ ರೈತರು ನೀರಾವರಿ ಕರ ತುಂಬಿಲ್ಲ ಅಂತ ಅಂದಿನ ತಹಶೀಲ್ದಾರ ರೈತರ ಜಮೀನು ಪಹಣಿಯಲ್ಲಿ ಸರ್ಕಾರ ಅಂತ ನಮೂದು ಮಾಡಿದ್ದಾರೆ. ಎಲ್ಲ ರೀತಿಯ ಕರ ಪಾವತಿ ಮಾಡಿದರೂ, ಇಂದಿಗೂ ಸರ್ಕಾರ ಅಂತ ತೆಗೆದು ಹಾಕಿಲ್ಲ. ಇದರಿಂದ ಸರ್ಕಾರದ ಯಾವುದೇ ಸೌಲಭ್ಯ ಸಿಗದೆ ರೈತರು ರೊಚ್ಚಿಗೆದ್ದಿದ್ದಾರೆ.
- Sanjeev Pandre
- Updated on: Jun 22, 2025
- 5:18 pm
ಪ್ರೀತಿ ಕೊಂದ ಕೊಲೆಗಾರ 6 ತಿಂಗಳ ಬಳಿಕ ಸಿಕ್ಕಿಬಿದ್ದ: ಹಂತಕನ ಹೆಡೆಮುರಿ ಕಟ್ಟಿದ್ದೇ ರೋಚಕ
ಅದೊಂದು ಮಣ್ಣಲ್ಲಿ ಮಣ್ಣಾಗುತ್ತಿದ್ದ ಕೊಲೆ ಪ್ರಕರಣ. ಪೊಲೀಸರ ಜಾಣಾಕ್ಷತನ ತನಿಖೆಯಿಂದ ಆರು ತಿಂಗಳ ನಂತರ ಕೊಲೆ ರಹಸ್ಯ ಬಯಲಾಗಿದೆ. ಒಂದೇ ಒಂದು ಮೆಸೇಜ್ ಇಡೀ ಪ್ರಕರಣ ಟ್ವಿಸ್ಟ್ ನೀಡಿದೆ. ಇದೇ ಮೇಸೆಜ್ ಹಿಡ್ಕೊಂಡು ಹಂತಕನ ಹೆಡೆಮುರಿ ಕಟ್ಟಿದ್ದಾರೆ. ಹೌದು.. ದೃಶ್ಯ ಸಿನಿಮಾ ಮಾದರಿಯಲ್ಲಿ ಸಾಕ್ಷಿ ನಾಶ ಮಾಡುತ್ತಿದ್ದ ಕಿಲಾಡಿ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. ಈ ನಿಗೂಢ ಕೊಲೆಯ ಹಂತಕನ ಹೆಡೆಮುರಿ ಕಟ್ಟಿದ್ದೇ ರೋಚಕವಾಗಿದೆ.
- Sanjeev Pandre
- Updated on: Jun 15, 2025
- 4:40 pm
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಮಠದ ಖರ್ಚಿಗೆ ಹೊರೆ: ಅನುದಾನಕ್ಕೆ ಆಗ್ರಹಿಸಿದ ದಿಂಗಾಲೇಶ್ವರ ಸ್ವಾಮೀಜಿ
ಉಚಿತ ಯೋಜನೆಗಳು ಮಠದ ಖರ್ಚಿಗೆ ಹೊರೆಯಾಗಿವೆ ಎಂದು ಗದಗ ವಿರೇಶ್ವರ ಪುಣ್ಯಾಶ್ರಮದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ. ಪುಟ್ಟರಾಜ ಗವಾಯಿ, ಪಂಚಾಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಜಾತ್ರೆ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಗ್ಯಾರಂಟಿಯಿಂದ ಜನ ಬಂದು ಆಶ್ರಮದಲ್ಲಿ ಊಟ ಮಾಡುತ್ತಿದ್ದಾರೆ. ಮಠದಲ್ಲಿ ಊಟ ಮಾಡುವವರ ಸಂಖ್ಯೆ ನೂರು ಪಟ್ಟು ಹೆಚ್ಚಾಗಿದೆ. ಉಚಿತ ಯೋಜನೆಗಳು ಮಠದ ಖರ್ಚಿಗೆ ಹೊರೆಯಾಗಿವೆ. ಹೀಗಾಗಿ ಪುಣ್ಯಶ್ರಮಕ್ಕೆ ಸರ್ಕಾರ ಅನಾದಾನ ನೀಡಬೇಕೆಂದು ಆಗ್ರಹಿಸಿದ್ದಾರೆ.
- Sanjeev Pandre
- Updated on: Jun 15, 2025
- 2:21 pm
ಅಪ್ರಾಪ್ತ ಹುಡುಗಿಗೆ ಅಶ್ಲೀಲ ಮೆಸೇಜ್ ಆರೋಪ: 60 ಸವರ್ಣೀಯರಿಂದ ಮೂವರು ದಲಿತ ಯುವಕರ ಮೇಲೆ ಹಲ್ಲೆ
ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನಲ್ಲಿ ಅಪ್ರಾಪ್ತ ದಲಿತ ಯುವಕರ ಮೇಲೆ ಭೀಕರವಾಗಿ ಹಲ್ಲೆ ಮಾಡಿರುವಂತಹ ಘಟನೆ ಬೆಳಕಿಗೆ ಬಂದಿದೆ. ಸವರ್ಣೀಯರಿಂದ ಮೂವರು ಅಪ್ರಾಪ್ತ ಬಾಲಕರನ್ನು ಧ್ವಜದ ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ್ದಾರೆ. ಈ ಘಟನೆಯಿಂದ ಅವಮಾನ ತಾಳದೆ ಓರ್ವ ಬಾಲಕ ವಿಷ ಸೇವಿಸಿ ಆತ್ಮಹತ್ಯೆಗೂ ಯತ್ನಿಸಿದ್ದಾನೆ.
- Sanjeev Pandre
- Updated on: Jun 6, 2025
- 10:38 am
ಗದಗ: ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿ, ತಪ್ಪಿದ ದುರಂತ
ಶಾಲೆ ಆರಂಭದ ದಿನವೇ ಗದಗದ R.K. ನಗರದ ಬಳಿ ಶ್ರೀಪಾರ್ಶ್ವನಾಥ ಆಂಗ್ಲ ಮಾಧ್ಯಮ ಶಾಲೆಯ ಬಸ್ ಪಲ್ಟಿಯಾಗಿದೆ. ಮಿನಿ ಕ್ಯಾಂಟರ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗದಗ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Sanjeev Pandre
- Updated on: May 29, 2025
- 10:47 am
ಗದಗ: ಸರ್ವ ಧರ್ಮಿಯರು ಪೂಜಿಸುವ ದರ್ಗಾ ಪಕ್ಕದಲ್ಲಿ ಮಸೀದಿ ನಿರ್ಮಾಣಕ್ಕೆ ಹಿಂದೂ ಸಂಘಟನೆಗಳ ವಿರೋಧ
ಗದಗ ನಗರದ ಖಾನತೋಟ ಬಡಾವಣೆಯಲ್ಲಿರುವ ಖಾನ್ ಸಾವಲಿ ದರ್ಗಾಕ್ಕೆ ಸರ್ವ ಧರ್ಮದ ಜನರು ಆಗಮಿಸುತ್ತಾರೆ. ಸುಮಾರು ವರ್ಷಗಳಿಂದ ಜನರು ಶ್ರದ್ಧಾ ಭಕ್ತಿಯಿಂದ ದರ್ಗಾಕ್ಕೆ ಹೋಗುತ್ತಿದ್ದಾರೆ. ಆದರೆ, ಈಗ ದರ್ಗಾ ಪಕ್ಕದಲ್ಲಿ ಮಸೀದಿ ನಿರ್ಮಾಣ ಮಾಡಲಾಗುತ್ತಿದೆ. ಇದು ಹಿಂದೂ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಯಾವುದೇ ಕಾರಣಕ್ಕೂ ಮಸೀದಿ ನಿರ್ಮಾಣ ಮಾಡಬಾರದು ಹಿಂದೂ ಪರ ಸಂಘಟನೆಗಳು ಪಟ್ಟು ಹಿಡಿದಿವೆ.
- Sanjeev Pandre
- Updated on: May 25, 2025
- 5:12 pm
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ: ಹೊಸ ಬಾಂಬ್ ಸಿಡಿಸಿದ ಜೋಶಿ
ಗೃಹ ಸಚಿವ ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳಲ್ಲಿ ಇಡಿ ಅಧಿಕಾರಿಗಳು ಶೋಧ ಮುಂದುವರೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಮಾಡಿರೋ ಆರೋಪದ ಹಿನ್ನೆಲೆಯಲ್ಲಿ ಎರಡನೇ ದಿನವೂ ಪರಿಶೀಲನೆ ನಡೆದಿದೆ. ಬೆಳಗ್ಗೆ 6 ಗಂಟೆಯಿಂದಲೇ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದು, ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಇದರ ನಡುವೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೊಸ ಬಾಂಬ್ ಸಿಡಿಸಿದ್ದಾರೆ.
- Sanjeev Pandre
- Updated on: May 22, 2025
- 4:25 pm
ಗದಗ: ಯುವಕನ ಮೇಲೆ ಹಲ್ಲೆ ಮಾಡಿದ್ದ ಉಪ ತಹಶೀಲ್ದಾರ್ ಅಮಾನತು
ಗದಗದ ಉಪ ತಹಶೀಲ್ದಾರ್ ದೇವಾನಂದ ವಾಲ್ಮೀಕಿ ಅವರನ್ನು ಅಮಾನತು ಮಾಡಲಾಗಿದೆ. ಸರ್ಕಾರಿ ಕಚೇರಿಯಲ್ಲೇ ಉಪ ತಹಶೀಲ್ದಾರ್ ಯುವಕನ ಮೇಲೆ ಹಲ್ಲೆ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯಿಂದಾಗಿ ಜನರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಮಾಜಿ ಸಚಿವ ಸಿಸಿ ಪಾಟೀಲ್ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ. ಹಲ್ಲೆಯಲ್ಲಿ ಭಾಗಿಯಾದ ಕಾಂಗ್ರೆಸ್ ಮುಖಂಡನ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆ ಕೇಳಿಬಂದಿದೆ.
- Sanjeev Pandre
- Updated on: May 19, 2025
- 9:40 am