ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.
ಚಾಮರಾಜನಗರ: ಸಿದ್ಧವಾಗಿ ವರ್ಷ ಕಳೆದ್ರು ವೀಕ್ಷಣೆಗೆ ಲಭ್ಯವಾಗದ ಆನೆ ಕ್ಯಾಂಪ್, ಪ್ರವಾಸಿಗರು ಅಸಮಾಧಾನ
ಚಾಮರಾಜಗರದಲ್ಲಿ ತೆಪ್ಪಕಾಡು ಮಾದರಿಯಲ್ಲಿ ಆನೆ ಕ್ಯಾಂಪ್ನ್ನು ಈಗಾಗಲೇ ಅರಣ್ಯ ಇಲಾಖೆ ಆರಂಭಿಸಿದೆ. ಆದರೆ ಪ್ರವಾಸಿಗರ ವೀಕ್ಷಣೆಗೆ ಇನ್ನು ಕಾಲ ಕೂಡಿ ಬಂದಿಲ್ಲ. ಇದೀಗ ಆನೆ ಶಿಬಿರದ ವಿಳಂಬ ಹಿನ್ನಲೆ ಸಿಬ್ಬಂದಿಗಳ ವಿರುದ್ಧ ಪ್ರವಾಸಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸಚಿವರ ಅನುಮತಿ ಸಿಕ್ಕಿಲ್ಲವೆಂಬ ಆರೋಪ ಕೇಳಿಬಂದಿದೆ.
- Suraj Prasad SN
- Updated on: Jul 14, 2025
- 9:20 am
ಚಾಮರಾಜನಗರದಲ್ಲಿ 5 ಹುಲಿಗಳ ಸಾವು ಕೇಸ್: ಕ್ರಿಮಿನಾಶಕ ಬಳಸಿರುವುದು ವರದಿಯಲ್ಲಿ ದೃಢ
ಚಾಮರಾಜನಗರದ ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳ ಹತ್ಯೆ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿತ್ತು. ಇದೀಗ ಹುಲಿಗಳ ಹತ್ಯೆಗೆ ಕಾರ್ಬೋಫ್ಯುರಾನ್ ಕೀಟನಾಶಕ ಬಳಸಿರುವುದು ಫೋರೆನ್ಸಿಕ್ ಸೈನ್ಸ್ ಲ್ಯಾಬ್ ವರದಿಯಲ್ಲಿ ದೃಢವಾಗಿದೆ. ಟಿವಿ9ಗೆ ಅರಣ್ಯ ಇಲಾಖೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
- Suraj Prasad SN
- Updated on: Jul 14, 2025
- 8:30 am
ಹುಲಿ, ಮಂಗ ಆಯ್ತು ಈಗ ಚಿರತೆ ಸರದಿ: ಚಾಮರಾಜನಗರ ಕೊತ್ತಲವಾಡಿ ಬಳಿ ಚಿರತೆ ಶವ ಪತ್ತೆ
ಚಾಮರಾಜನಗರ ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳ ಸಾವಿನ ಸರಣಿ ಮುಂದುವರಿದಿದೆ. ಹುಲಿಗಳ ಹತ್ಯಾಕಾಂಡ, ಮಂಗಗಳ ಸಾವಿನ ಬೆನ್ನಲ್ಲೇ ಇದೀಗ ಚಿರತೆಯೊಂದರ ಶವ ಅರ್ಧ ಕೊಳೆತ ಸ್ಥಿತಿಯಲ್ಲಿ ಕೊತ್ತಲವಾಡಿ ಬಳಿ ಪತ್ತೆಯಾಗಿದೆ. ಜತೆಗೆ ನಾಯಿ, ಹಾಗೂ ಕರುವಿನ ಶವಗಳೂ ಅರ್ಧ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದ್ದು, ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
- Suraj Prasad SN
- Updated on: Jul 11, 2025
- 2:49 pm
ಪಾಠ ಕೇಳುವಾಗಲೇ ಹೃದಯಾಘಾತದಿಂದ ಮೃತಪಟ್ಟ 4ನೇ ತರಗತಿ ವಿದ್ಯಾರ್ಥಿ
ಕರ್ನಾಟಕದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಹಲವಾರು ಮಂದಿ ಮೃತಪಟ್ಟಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯುವಕ, ಯುವತಿಯರು ಹೃದಯಾಘಾತದಿಂದ ಬಲಿಯಾಗುತ್ತಿದ್ದಾರೆ. ಚಾಮರಾಜನಗರದಲ್ಲಿ 10 ವರ್ಷ ಬಾಲಕ ಶಾಲೆಯಲ್ಲಿ ಪಾಠ ಕೇಳುವಾಗಲೇ ಹೃದಯಘಾತದಿಂದ ಮೃತಪಟ್ಟಿದ್ದಾನೆ. ಗುಂಡ್ಲುಪೇಟೆ ತಾಲೂಕಿನ ಕುರಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.
- Suraj Prasad SN
- Updated on: Jul 9, 2025
- 4:38 pm
ನೀರಿಗಾಗಿ ತಂದೆ-ತಾಯಿ ಪಡುತ್ತಿರುವ ಕಷ್ಟ ನೋಡಲಾಗದೇ ಸಿಎಂಗೆ ಪತ್ರ ಬರೆದ 5ನೇ ಕ್ಲಾಸ್ ವಿದ್ಯಾರ್ಥಿನಿ
ಸಿಎಂ ಸರ್ ನಮ್ಮ ಭಾಗದಲ್ಲಿ ಕುಡಿಯುವ ನೀರಿಗೂ ತುಂಬಾ ಸಮಸ್ಯೆಯಿದೆ.ತಂದೆ ತಾಯಿಗಳು ಕೃಷಿಯಲ್ಲಿ ಅನುಭವಿಸ್ತಿರುವ ನೋವನ್ನು ತಡೆಯಲಾಗುತ್ತಿಲ್ಲ.ಬೇಸಾಯ ಬಿಟ್ಟು ಉದ್ಯೋಗಕ್ಕಾಗಿ ಬೇರೆಡೆ ವಲಸೆ ಹೋಗಬೇಕಿದೆ.ಈ ಭಾಗಕ್ಕೆ ನದಿ ಮೂಲಗಳಿಂದ ಶಾಶ್ವತ ನೀರು ಒದಗಿಸಿ ಎಂದು ಮಕ್ಕಳು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ನಿಮ್ಮ ಟಿವಿ9 ಸುದ್ದಿ ಪ್ರಸಾರ ಮಾಡುತ್ತಿದ್ದಂತೆಯೇ ಅಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿದ್ದಾರೆ.
- Suraj Prasad SN
- Updated on: Jul 8, 2025
- 10:35 pm
ಕರ್ನಾಟಕದಲ್ಲಿ ಮುಂದುವರೆದ ಹೃದಯಾಘಾತ: ಇಂದು ಒಂದೇ ದಿನ 8 ಜನ ಸಾವು
ಕರ್ನಾಟಕ ರಾಜ್ಯದಲ್ಲಿ ಹೃದಯಾಘಾತದಿಂದ ಸಾವಿನ ಪ್ರಮಾಣ ಹೆಚ್ಚುತ್ತಿದೆ. ರವಿವಾರ (ಜು.06) ಒಂದೇ ದಿನ ಎಂಟು ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಾಸನ, ಚಿಕ್ಕಮಗಳೂರು, ಯಾದಗಿರಿ, ಹುಬ್ಬಳ್ಳಿ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೃದಯದ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ.
- Suraj Prasad SN
- Updated on: Jul 6, 2025
- 7:14 pm
ಚಾಮರಾಜನಗರ: ಕೊಡಸೋಗೆ ರಸ್ತೆಯಲ್ಲಿ18 ಕೋತಿಗಳ ಶವ ಪತ್ತೆ, ವಿಷಪ್ರಾಶನ ಶಂಕೆ
ವ್ಯಾಘ್ರಗಳ ಹತ್ಯಾಕಾಂಡದ ಕಹಿ ನೆನಪು ಇನ್ನೂ ಮಾಸಿಲ್ಲ. ಅಷ್ಟರಲ್ಲಾಗಲೇ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ಬಳಿ 18 ಕೋತಿಗಳ ಮೃತದೇಹ ಪತ್ತೆಯಾಗಿದೆ. ವಿಷವಿಕ್ಕಿ ಮಂಗಗಳನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹುಲಿಗಳಿಗೆ ವಿಷವಿಕ್ಕಿ ಹತ್ಯೆ ಮಾಡಿದ್ದು ದೃಢಪಟ್ಟಿದೆ. ಮಂಗಗಳಿಗೆ ಏನಾಯಿತು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
- Suraj Prasad SN
- Updated on: Jul 2, 2025
- 12:59 pm
ಚಾಮರಾಜನಗರ ಹುಲಿ ಹತ್ಯೆ ಪ್ರಕರಣ: ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ರಾಜ್ಯ ಸರ್ಕಾರ
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂದ ಪಟ್ಟಂತೆ ಅರಣ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರ ತಕ್ಕ ಮಟ್ಟಿಗೆ ಬಿಸಿ ಮುಟ್ಟಿದೆ. ‘ಟಿವಿ9’ ವರದಿ ಬೆನ್ನಲ್ಲೇ ಡಿಸಿಎಫ್, ಎಸಿಎಫ್ ಹಾಗೂ ಆರ್ಫ್ಒಗೆ ಕಡ್ಡಾಯ ರಜೆಯಲ್ಲಿ ತೆರಳುವಂತೆ ಪಿಸಿಸಿಎಫ್ ಆದೇಶ ಹೊರಡಿಸಿದ್ದಾರೆ.
- Suraj Prasad SN
- Updated on: Jul 1, 2025
- 11:45 am
ಚಾಮರಾಜನಗರ: ಹುಲಿ ಹಂತಕರು 3 ದಿನ ಅರಣ್ಯಾಧಿಕಾರಿಗಳ ಕಸ್ಟಡಿಗೆ
ಮಲೆ ಮಹದೇಶ್ವರ ವನ್ಯಧಾಮದಲ್ಲಿ ಒಂದಲ್ಲ ಎರಡಲ್ಲ ಐದು ಹುಲಿಗಳಿಗೆ ವಿಷವಿಕ್ಕಿ ಕೊಂದಿರುವುದು ಈಗಾಗಲೇ ಬಯಲಾಗಿದೆ. 4 ಮರಿಗಳ ಜತೆ ಒಂದು ತಾಯಿ ಹುಲಿಗೆ ವಿಷವಿಕ್ಕಿದ್ದ ಘಟನೆ ರಾಜ್ಯಾದ್ಯಂತ ಆಘಾತ ಮೂಡಿಸಿತ್ತು. ವ್ಯಾಘ್ರಗಳಿಗೆ ವಿಷವಿಕ್ಕಿ ಕೊಂದಿದ್ದ ಮೂವರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇದೀಗ ಮೂವರನ್ನು 3 ದಿನ ಅರಣ್ಯಾಧಿಕಾರಿಗಳ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ.
- Suraj Prasad SN
- Updated on: Jun 29, 2025
- 7:42 am
ಚಾಮರಾಜನಗರದಲ್ಲಿ ವ್ಯಾಘ್ರಗಳ ಸಾವು ಕೇಸ್: ಮೂವರ ಬಂಧನ, ಹುಲಿಗಳು ಸತ್ತಿದ್ದರಿಂದ ಸಂತಸ ಪಟ್ಟಿದ್ದ ಆರೋಪಿಗಳು
ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಮೂವರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಹಸುವನ್ನು ಹುಲಿ ಕೊಂದಿದ್ದಕ್ಕೆ ಪ್ರತೀಕಾರವಾಗಿ ವಿಷ ಹಾಕಿದ್ದಾಗಿ ವಿಚಾರಣೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಸದ್ಯ ಪೊಲೀಸರು ಆರೋಪಿಗಳನ್ನು ದೃಢಪಡಿಸಿದ್ದು, ವಿಚಾರಣೆ ನಡೆಸಿದ್ದಾರೆ. ಈ ಪ್ರಕರಣ ಸಾಕಷ್ಟು ಸಂಚಲನ ಮೂಡಿಸಿತ್ತು.
- Suraj Prasad SN
- Updated on: Jun 28, 2025
- 11:50 am
ಚಾಮರಾಜನಗರ: ಐದು ಹುಲಿಗಳ ನಿಗೂಢ ಸಾವು ಬೆನ್ನಲ್ಲೇ ಮತ್ತೊಂದು ಹುಲಿ ಸಾವು
ಚಾಮರಾಜನಗರದ ಮೀಣ್ಯಂ ಅರಣ್ಯದಲ್ಲಿ ಮೃತಪಟ್ಟಿರೋ 5 ಹುಲಿಗಳ ಸಾವಿಗೆ ಕಾರಣ ವಿಷ ಪ್ರಾಶನ ಕಾರಣ ಅನ್ನೋದು ಈಗಾಗಲೇ ಬಯಲಾಗಿದೆ. ಈ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊಂದು ಹೆಣ್ಣು ಹುಲಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬಂಡೀಪುರದ ಗುಂಡ್ರೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ನಡೆದಿದೆ.
- Suraj Prasad SN
- Updated on: Jun 28, 2025
- 8:59 am
5 ಹುಲಿಗಳ ಅಂತ್ಯಕ್ರಿಯೆ: ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಚಾಮರಾಜನಗರದ ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳ ಅನುಮಾನಾಸ್ಪದ ಸಾವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಒಂದೇ ದಿನದಲ್ಲಿ ಐದು ಹುಲಿ ಸಾವನ್ನಪ್ಪಿರುವುದು ದೇಶದಲ್ಲೇ ಮೊದಲು. ಹೀಗಾಗಿ ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಚುರುಕುಗೊಳಿಸಿದೆ. ಇನ್ನು ಸಾವನ್ನಪ್ಪಿರುವ ಐದು ಹುಲಿಗಳ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲಾಗಿದೆ.
- Suraj Prasad SN
- Updated on: Jun 27, 2025
- 7:41 pm