AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರಜ್​, ಮಹಾವೀರ್​ ಉತ್ತರೆ

ಸೂರಜ್​, ಮಹಾವೀರ್​ ಉತ್ತರೆ

Author - TV9 Kannada

surajmahaveer.utture@tv9.com

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಹೊನ್ನಾವರ: ಅಝಾನ್ ಮೊಳಗಿಸುತ್ತಿದ್ದ ಪವಿತ್ರ ಕ್ಷಣದಲ್ಲೇ ಇಹಲೋಕ ತ್ಯಜಿಸಿದ ಮೌಲ್ವಿ

ಹೊನ್ನಾವರ: ಅಝಾನ್ ಮೊಳಗಿಸುತ್ತಿದ್ದ ಪವಿತ್ರ ಕ್ಷಣದಲ್ಲೇ ಇಹಲೋಕ ತ್ಯಜಿಸಿದ ಮೌಲ್ವಿ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಾಸರಕೋಡ ಮಸೀದಿಯಲ್ಲಿ ಅಸರ್ ನಮಾಜ್‌ಗಾಗಿ ಅಝಾನ್ ಕೂಗುತ್ತಿದ್ದ ಮಂಗಳೂರು ಮೂಲದ ಮೌಲ್ವಿ ಅಬ್ದುಲ್ ಲತೀಫ್ ಮದನಿ ಅವರು ತೀವ್ರ ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರು 6 ತಿಂಗಳ ಹಿಂದೆ ಮಂಗಳೂರಿನಿಂದ ಹೊನ್ನಾವರಕ್ಕೆ ಮದರಸಾದಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲು ಆಗಮಿಸಿದ್ದರು.

ಉತ್ತರ ಕನ್ನಡದ 439 ಪ್ರದೇಶಗಳಲ್ಲಿ ಗುಡ್ಡ ಕುಸಿತದ ಭೀತಿ: 100 ಕೋಟಿ ರೂ. ಬಿಡುಗಡೆಯಾದ್ರೂ ಕಾಮಗಾರಿ ನಡೆಸಲಾಗದೆ ಸಂಕಷ್ಟ!

ಉತ್ತರ ಕನ್ನಡದ 439 ಪ್ರದೇಶಗಳಲ್ಲಿ ಗುಡ್ಡ ಕುಸಿತದ ಭೀತಿ: 100 ಕೋಟಿ ರೂ. ಬಿಡುಗಡೆಯಾದ್ರೂ ಕಾಮಗಾರಿ ನಡೆಸಲಾಗದೆ ಸಂಕಷ್ಟ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತ ತಡೆಗೆ ರಾಜ್ಯ ಸರ್ಕಾರ ಕೊನೇ ಕ್ಷಣದಲ್ಲಿ 100 ಕೋಟಿ ರೂ. ಬಿಡುಗಡೆ ಮಾಡಿದೆ. ಆದರೆ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ ಕಾಮಗಾರಿಗಳನ್ನು ನಡೆಸಲು ಸಾಧ್ಯವಾಗದೆ ಜಿಲ್ಲಾಡಳಿತ ಕೇವಲ 40 ಕೋಟಿ ರೂ.ಗಳ ತುರ್ತು ಕೆಲಸಗಳಿಗಷ್ಟೇ ಈಗ ಹಮ್ಮಿಕೊಂಡಿದೆ. ಸರ್ಕಾರದ ವಿಳಂಬ ಧೋರಣೆಯಿಂದ ಕಾಮಗಾರಿ ಸಾಧ್ಯವಾಗದೇ ಜನ ಆತಂಕದಲ್ಲೇ ದಿನದೂಡುವಂತಾಗಿದೆ.

ಜೇನುಗೂಡಿಗೆ ಕಲ್ಲು ಎಸೆದ ಪರಿಣಾಮ ಹೆಜ್ಜೇನು ದಾಳಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊರಾರ್ಜಿ  ಶಾಲೆಯ 21ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಜೇನುಗೂಡಿಗೆ ಕಲ್ಲು ಎಸೆದ ಪರಿಣಾಮ ಹೆಜ್ಜೇನು ದಾಳಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊರಾರ್ಜಿ ಶಾಲೆಯ 21ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಉತ್ತರ ಕನ್ನಡದ ಮುಂಡಗೋಡ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹೆಜ್ಜೇನು ದಾಳಿ ನಡೆದು 21ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಆಟವಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಜೇನುಗೂಡಿಗೆ ಕಲ್ಲು ಎಸೆದಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಕೂಡಲೇ ವಿದ್ಯಾರ್ಥಿಗಳನ್ನು ಮುಂಡಗೋಡ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು

ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು

ಗೋಕರ್ಣದ ಪ್ರಸಿದ್ಧ ಮಹಾಬಲೇಶ್ವರ ದೇಗುಲವು ಮಳೆಯಿಂದಾಗಿ ಕೊಳಚೆ ನೀರಿನಿಂದ ಆವೃತವಾಗಿದೆ. ಆತ್ಮಲಿಂಗವೂ ಸಹ ಕೊಳಚೆ ನೀರಿನಲ್ಲಿ ಮುಳುಗಿದ್ದು, ಇದು ಕಳೆದ ಎರಡು ವರ್ಷಗಳಿಂದ ಪುನರಾವರ್ತನೆಯಾಗುತ್ತಿರುವ ಸಮಸ್ಯೆಯಾಗಿದೆ. ದೇಗುಲದ ಸುತ್ತಲಿನ ಒತ್ತುವರಿ ಹಾಗೂ ಶೌಚಾಲಯದ ನೀರನ್ನು ಸಮುದ್ರಕ್ಕೆ ಬಿಡುತ್ತಿರುವುದೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದ್ದು, ಆಡಳಿತ ಮಂಡಳಿಯ ನಿರ್ಲಕ್ಷ್ಯವೂ ಎದ್ದು ಕಾಣುತ್ತಿದೆ.

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಿರೋಧ, 1 ಪೀಠಕ್ಕೆ ಮೂರು ಜಿಲ್ಲೆ ನಡುವೆ ಹಗ್ಗ ಜಗ್ಗಾಟ

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಿರೋಧ, 1 ಪೀಠಕ್ಕೆ ಮೂರು ಜಿಲ್ಲೆ ನಡುವೆ ಹಗ್ಗ ಜಗ್ಗಾಟ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಅನಕೂಲ ಆಗುವ ದೃಷ್ಟಿಯಿಂದ ಮಂಗಳೂರಿನಲ್ಲಿ ಹೈಕೋರ್ಟ್​​ ಪೀಠ ಸ್ಥಾಪನೆಗೆ ನಿರ್ಧರಿಸಲಾಗಿದೆ. ಆದ್ರೆ ಮಂಗಳೂರಿನಲ್ಲಿ ಸ್ಥಾಪನೆಗೆ ವಿರೋಧಗಳು ವ್ಯಕ್ತವಾಗಿವೆ. ಮಂಗಳೂರು ಬಿಟ್ಟು ಉತ್ತರ ಕನ್ನಡ ಜಿಲ್ಲೆಯಲ್ಲಿ ಹೊಸ ಪಿಠ ಮಾಡಿ ಇಲ್ಲವಾದಲ್ಲಿ ನಮಗೆ ಈಗ ಇದ್ದಂತೆ ಧಾರವಾಡದಲ್ಲೆ ಮುಂದುವರೆಯಲಿ ಎಂದು ಆಗ್ರಹಿಸಿದ್ದಾರೆ. ಇನ್ನೊಂದೆಡೆ ಶಿವಮೊಗ್ಗದಲ್ಲೇ ಆಗಬೇಕೆಂದು ಜನಾಂದೋಲನ ನಡೆದಿದೆ.

ಸಮುದ್ರದ ಮಧ್ಯೆ ಮುಳುಗಿದ ಬೋಟ್: ಮೃತ್ಯುವಿನ ದವಡೆಯಿಂದ ಪಾರಾದ 7 ಮೀನುಗಾರರು!

ಸಮುದ್ರದ ಮಧ್ಯೆ ಮುಳುಗಿದ ಬೋಟ್: ಮೃತ್ಯುವಿನ ದವಡೆಯಿಂದ ಪಾರಾದ 7 ಮೀನುಗಾರರು!

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೆಬಾಗಿಲು ಬಳಿ ಮೀನುಗಾರಿಕೆ ಬೋಟ್ ಸಮುದ್ರದಲ್ಲಿ ಮುಳುಗಡೆಗೊಂಡಿದೆ. ಬೋಟ್‌ನ ಹೊರಭಾಗಕ್ಕೆ ಹಾನಿಯಾಗಿದ್ದರಿಂದ ಈ ಘಟನೆ ಸಂಭವಿಸಿದೆ. ಬೋಟ್‌ನಲ್ಲಿದ್ದ 7 ಮಂದಿ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಈ ಕುರಿತು ಹೊನ್ನಾವರ ಸಿ.ಎಸ್.ಪಿ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂಕೋಲಾ-ಯಲ್ಲಾಪುರ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೀಬರ್ಡ್ ಬಸ್ ಪಲ್ಟಿ: ಓರ್ವ ಸಾವು, 21 ಪ್ರಯಾಣಿಕರಿಗೆ ಗಾಯ

ಅಂಕೋಲಾ-ಯಲ್ಲಾಪುರ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೀಬರ್ಡ್ ಬಸ್ ಪಲ್ಟಿ: ಓರ್ವ ಸಾವು, 21 ಪ್ರಯಾಣಿಕರಿಗೆ ಗಾಯ

ಬಳ್ಳಾರಿಯಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಸೀಬರ್ಡ್ ಬಸ್ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ-ಯಲ್ಲಾಪುರ ಹೆದ್ದಾರಿಯ ಕಂಚಿನಬಾಗಿಲು ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟು, 21 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ 9 ಜನರ ಸ್ಥಿತಿ ಗಂಭೀರವಾಗಿದೆ ಎಂಬುದು ತಿಳಿದುಬಂದಿದೆ.

ಡಿ.ಕೆ. ಶಿವಕುಮಾರ್​​ ಕೈ ಬಿಡದ ಆಂದ್ಲೆ ಶ್ರೀ ಜಗದೀಶ್ವರಿ: ಸತ್ಯವಾಯ್ತು ದೇವಿ ನೀಡಿದ್ದ ಶುಭ ಸೂಚನೆ!

ಡಿ.ಕೆ. ಶಿವಕುಮಾರ್​​ ಕೈ ಬಿಡದ ಆಂದ್ಲೆ ಶ್ರೀ ಜಗದೀಶ್ವರಿ: ಸತ್ಯವಾಯ್ತು ದೇವಿ ನೀಡಿದ್ದ ಶುಭ ಸೂಚನೆ!

ಉತ್ತರ ಕನ್ನಡದ ಅಂಕೋಲಾದ ಆಂದ್ಲೆ ಜಗದೀಶ್ವರಿ ದೇವಾಲಯದಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದರು. ದೇವಿಯು ಅವರ ಇಷ್ಟಾರ್ಥವನ್ನು ಈಡೇರಿಸುವ ಶುಭ ಸೂಚನೆ ನೀಡಿದ್ದು, ಅದರಂತೆ ಅರ್ಚಕರು ಪ್ರತಿದಿನ ಪೂಜೆ ಮುಂದುವರಿಸಿದ್ದರು. ಈ ಕುರಿತು ದೇವಸ್ಥಾನದ ಅರ್ಚಕ ಗಣೇಶ್ ನಾಯ್ಕ್ ಮಾಹಿತಿ ನೀಡಿದ್ದು, ದೇವಿಯ ಅನುಗ್ರಹದಿಂದ ಡಿ.ಕೆ. ಶಿವಕುಮಾರ್‌ಗೆ ಯಶಸ್ಸು ಖಚಿತ ಎಂದು ಅವರು ತಿಳಿಸಿದ್ದಾರೆ.

ಮೂರಿನ್ ಕಟ್ಟೆ ವಿವಾದ: ಬಕ್ರಿದ್ ಹಬ್ಬದ ದಿನ ಮದ್ಯ ಮಾರಾಟ ನಿಷೇಧ; ಸಂಘರ್ಷಕ್ಕೆ ಕಾರಣವಾದ ವಿಡಿಯೋ ವೈರಲ್​

ಮೂರಿನ್ ಕಟ್ಟೆ ವಿವಾದ: ಬಕ್ರಿದ್ ಹಬ್ಬದ ದಿನ ಮದ್ಯ ಮಾರಾಟ ನಿಷೇಧ; ಸಂಘರ್ಷಕ್ಕೆ ಕಾರಣವಾದ ವಿಡಿಯೋ ವೈರಲ್​

ಉತ್ತರ ಕನ್ನಡದ ಭಟ್ಕಳದಲ್ಲಿ ಮೂರಿನ್ ಕಟ್ಟೆ ಧ್ವಂಸ ಪ್ರಕರಣ ಸದ್ಯ ಬೂದಿಮುಚ್ಚಿದ ಕೆಂಡವಾಗಿದೆ. ಈ ಮಧ್ಯೆ ಅದೊಂದು ವಿಡಿಯೋ ವೈರಲ್​ ಆಗಿದ್ದು, ಹಿಂದೂ ಮತ್ತು ಮುಸ್ಲಿಂ ಗಲಾಟೆಗೆ ಪ್ರಚೋದನೆ ನೀಡಲಾಗಿದೆ ಎನ್ನಲಾಗುತ್ತಿದೆ. ಈ ವಿವಾದದಕ್ಕೆ ವಿಡಿಯೋ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಬಕ್ರೀದ್ ಹಬ್ಬ ಹಿನ್ನೆಲೆ ಭಟ್ಕಳದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಭಟ್ಕಳದ ಮೂರಿನ್ ಕಟ್ಟೆಯ ಇತಿಹಾಸವೇನು? ಹಿಂದೂ-ಮುಸ್ಲಿಮರ ಸಂಘರ್ಷಕ್ಕೆ ಕಾರಣ ಏನು?

ಭಟ್ಕಳದ ಮೂರಿನ್ ಕಟ್ಟೆಯ ಇತಿಹಾಸವೇನು? ಹಿಂದೂ-ಮುಸ್ಲಿಮರ ಸಂಘರ್ಷಕ್ಕೆ ಕಾರಣ ಏನು?

ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66 ಬಳಿ ಇರುವ ಮೂರಿನ್​ ಕಟ್ಟೆ ವಿವಾದ ಉದ್ವಿಗ್ನಗೊಂಡಿದೆ. ಸದ್ಯ ತೀವ್ರ ವಿವಾದಕ್ಕೆ ಕಾರಣವಾಗಿರುವ ಉತ್ತರ ಕನ್ನಡದ ಭಟ್ಕಳದ ಮೂರಿನ್ ಕಟ್ಟೆಗೆ ನೂರಾರು ವರ್ಷಗಳ ಇತಿಹಾಸವಿದೆ. ಶಿರಸಿ ಮತ್ತು ಸಾಗರದ ಮಾರಿಕಾಂಬೆಯ ಸಂಬಂಧ ಹೊಂದಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಕಪ್ಪೆಚಿಪ್ಪು ಸಂಗ್ರಹದ ವೇಳೆ ಭಟ್ಕಳದಲ್ಲಿ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು

ಕಪ್ಪೆಚಿಪ್ಪು ಸಂಗ್ರಹದ ವೇಳೆ ಭಟ್ಕಳದಲ್ಲಿ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು

ಉತ್ತರ ಕನ್ನಡದ ಭಟ್ಕಳ ತಾಲೂಕಿನ ಬೆಂಗರೆಯಲ್ಲಿ ಕಪ್ಪೆಚಿಪ್ಪು ಸಂಗ್ರಹಕ್ಕೆ ತೆರಳಿದ್ದ 11 ಮಂದಿ ದುರಂತ ಅಂತ್ಯ ಕಂಡಿದ್ದಾರೆ. ಇವರಲ್ಲಿ ಎಂಟು ಮಂದಿ ಒಂದೇ ಕುಟುಂಬದವರಾಗಿದ್ದು, ಇಂದು ಸಾಮೂಹಿಕ ಅಂತ್ಯಸಂಸ್ಕಾರ ನೆರವೇರಿತು. ತಂದೆ-ತಾಯಿ, ಮಗ ಸೇರಿ ಹಲವಾರು ಕುಟುಂಬಗಳು ಈ ದುರಂತದಲ್ಲಿ ಅನಾಥವಾಗಿವೆ. ಮಕ್ಕಳ ರೋಧನೆ ಮನಕಲಕುವಂತಿದೆ.

ಭಟ್ಕಳ ದುರಂತ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ

ಭಟ್ಕಳ ದುರಂತ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ

ಭಟ್ಕಳದ ಅಳ್ವೆಕೋಡಿಯಲ್ಲಿ ಕಪ್ಪೆಚಿಪ್ಪು ಹೆಕ್ಕಲು ಹೋಗಿ ನಾಪತ್ತೆಯಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಮೃತಪಟ್ಟವರ ಒಟ್ಟು ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಎನ್‌ಡಿಆರ್‌ಎಫ್ ಹಾಗೂ ಈಶ್ವರ ಮಲ್ಪೆ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿವೆ. ಇನ್ನು ಮೃತರ ಪೈಕಿ ಒಂದೊಂದು ಕುಟುಂಬಗಳ ಕಥೆಯೂ ಮನಕಲಕುವಂತಿದೆ. ಎರಡು ಕುಟುಂಬಗಳ ಮಕ್ಕಳು ಹೆತ್ತವರನ್ನು ಕಳೆದುಕೊಂಡು ಅನಾಥರಾಗಿದ್ದಾರೆ.