ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ…
ಬಿಸಿಲು ನಾಡು ಬೀದರ್‌ನಲ್ಲಿ ಗೋಡಂಬಿ ಬಳೆದ ರೈತ: ಅಪಾರ ಆದಾಯ
ಮಲೆನಾಡಿನಿಂದ ಬಂದ ಗೋಡಂಬಿ ಬೆಳೆ ಬೀದರ್ ರೈತರ ಜೀವನವನ್ನು ಬದಲಾಯಿಸಿದೆ. ಅತೀವೃಷ್ಠಿ ಮತ್ತು ಅನಾವೃಷ್ಠಿಯಿಂದ ಬಳಲುತ್ತಿದ್ದ ಈ ಪ್ರದೇಶದಲ್ಲಿ, ಗೋಡಂಬಿ ಬೆಳೆ ಲಕ್ಷಾಂತರ ರೂಪಾಯಿ ಆದಾಯವನ್ನು ನೀಡುತ್ತಿದೆ. ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದ ಈ ಬೆಳೆ, 400 ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ ಬೆಳೆಯುತ್ತಿದ್ದು, ರೈತರ ಮುಖದಲ್ಲಿ ಸಂತೋಷ ತಂದಿದೆ. ತೋಟಗಾರಿಕೆ ಇಲಾಖೆಯ ಮಾರ್ಗದರ್ಶನ ಈ ಯಶಸ್ಸಿಗೆ ಕಾರಣವಾಗಿದೆ.
- Suresh Naik
- Updated on: Apr 21, 2025
- 9:05 pm
ಬೀದರ್‌ನಲ್ಲಿ ನಾಯಿಕೊಡೆಯಂತೆ ತಲೆ ಎತ್ತುತ್ತಿವೆ ಅಕ್ರಮ ಮೊಬೈಲ್ ಟವರ್‌ಗಳು: ತೆರಿಗೆ ಕಟ್ಟದೆ ಸರ್ಕಾರಕ್ಕೂ ವಂಚನೆ
ಬೀದರ್ ನಗರದಲ್ಲಿ 110ಕ್ಕೂ ಹೆಚ್ಚು ಮೊಬೈಲ್ ಟವರ್‌ಗಳು ಅನುಮತಿಯಿಲ್ಲದೆ ತಲೆ ಎತ್ತಿವೆ. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಜೊತೆಗೆ ಲಕ್ಷಾಂತರ ರೂ ತೆರಿಗೆ ವಂಚನೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅನಧಿಕೃತ ಟವರ್ ನಿರ್ಮಾಣವಾಗುತ್ತಿದ್ದರೂ ನಗರಸಭೆ ಅಧಿಕಾರಿಗಳು ಮಾತ್ರ ಕಂಡುಕಾಣದಂತೆ ಕುಳಿತಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ.
- Suresh Naik
- Updated on: Apr 18, 2025
- 2:58 pm
Bidar Bangalore Flight: ಬೀದರ್ ಬೆಂಗಳೂರು ವಿಮಾನ ಹಾರಾಟ ಇಂದಿನಿಂದ ಶುರು: ಇಲ್ಲಿದೆ ವೇಳಾಪಟ್ಟಿ
ಬೆಂಗಳೂರು ಬೀದರ್ ವಿಮಾನ ಸಂಚಾರ: ಬೀದರ್ನಿಂದ ರಾಜ್ಯದ ರಾಜ್ಯಧಾನಿ ಬೆಂಗಳೂರಿಗೆ ವಿಮಾನ ಹಾರಾಟ ಮತ್ತೆ ಆರಂಭವಾಗಬೇಕೆಂಬ ಕನಸು ನನಸಾಗುತ್ತಿದೆ. ಕಳೆದ ಒಂದೂವರೆ ವರ್ಷದಿಂದ ಬೀದರ್ ವಿಮಾನ ನಿಲ್ದಾಣದಿಂದ ಸ್ಥಗಿತಗೊಂಡಿದ್ದ ಸಂಚಾರ, ಜನರ ಹೋರಾಟದ ಫಲವಾಗಿ ಇದೀಗ ಮತ್ತೆ ಆರಂಭವಾಗುತ್ತಿದೆ. ವಿಮಾನ ಸಂಚಾರಕ್ಕೆ ಇಂದು ಮರು ಚಾಲನೆ ದೊರೆಯುತ್ತಿದೆ.
- Suresh Naik
- Updated on: Apr 16, 2025
- 10:21 am
ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಬೀದರ್‌ನಲ್ಲಿ ಸೋಮವಾರ ನಡೆದ ಡಾ. ಬಿಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲೇ ಸಚಿವ ಈಶ್ವರ್ ಖಂಡ್ರೆ ಹಾಗೂ ಬಿಜೆಪಿ ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ ನಡೆಸಿದ್ದಾರೆ. ಖಂಡ್ರೆ ಚುನಾವಣಾ ಭಾಷಣ ಮಾಡಿದ್ದಾರೆ ಎಂದು ಬೆಲ್ದಾಳೆ ಆರೋಪಿಸಿದರೆ, ನಂತರ ಮಾತನಾಡಿದ ಖಂಡ್ರೆ, ಇನ್ನೂ ಕೆಲವು ವಿಷಯ ಹೇಳಿದರೆ ಇವರು ವೇದಿಕೆಯಿಂದಲೇ ನಿರ್ಗಮಿಸಬೇಕಾಗುತ್ತದೆ ಎಂದರು.
- Suresh Naik
- Updated on: Apr 15, 2025
- 12:54 pm
ಬೀದರ್ ಜಿಲ್ಲೆಯಲ್ಲಿ ಜಾನುವಾರು ಸಂತತಿ ಗಣನೀಯ ಇಳಿಕೆ!
ಬೀದರ್ ಜಿಲ್ಲೆಯಲ್ಲಿ ಜಾನುವಾರುಗಳ ಸಂಖ್ಯೆ ಗಣನೀಯವಾಗಿ ಕುಸಿದಿದೆ. ಎತ್ತುಗಳ ಸಂಖ್ಯೆಯಲ್ಲಿನ ತೀವ್ರ ಇಳಿಕೆ ಗೋಪ್ರಿಯರಲ್ಲಿ ಆತಂಕ ಹೆಚ್ಚಿಸಿದೆ. ಕೃಷಿಯಲ್ಲಿ ಯಂತ್ರೀಕರಣ ಹೆಚ್ಚಳ ಮತ್ತು ಗೋಹತ್ಯೆ ನಿಷೇಧ ಕಾಯ್ದೆಯ ಹೊರತಾಗಿಯೂ ಸಂಖ್ಯೆ ಕಡಿಮೆಯಾಗುತ್ತಿದೆ. ಭೂಮಿಯ ಫಲವತ್ತತೆ ಕಡಿಮೆಯಾಗುವುದು ಮತ್ತು ಜನರ ಆರೋಗ್ಯದ ಮೇಲೆ ಇದರ ಪರಿಣಾಮ ಚರ್ಚೆಗೆ ಕಾರಣವಾಗಿದೆ.
- Suresh Naik
- Updated on: Apr 11, 2025
- 8:49 pm
ಆರಂಭವಾಗಿದೆ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಬೀದರ್‌ನ ಅಷ್ಟೂರು ಜಾತ್ರೆ: ಹೇಗಿದೆ ನೋಡಿ ಸಂಭ್ರಮ
ಬೀದರ್ ತಾಲೂಕಿನ ಅಷ್ಟೂರು ಗ್ರಾಮದಲ್ಲಿ ನಡೆಯುವ ಅಷ್ಟೂರು ಜಾತ್ರೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವಿನ ಅಪರೂಪದ ಭಾವೈಕ್ಯತೆಯನ್ನು ಪ್ರತಿಬಿಂಬಿಸುತ್ತದೆ. ಶತಮಾನಗಳಿಂದ ಆಚರಿಸಲ್ಪಡುವ ಈ ಜಾತ್ರೆಯಲ್ಲಿ ಅಲ್ಲಮಪ್ರಭು ಮತ್ತು ಅಹ್ಮದ್ ಶಾ ವಲಿ ಇಬ್ಬರನ್ನೂ ಭಕ್ತಿಯಿಂದ ಪೂಜಿಸಲಾಗುತ್ತದೆ. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಈ ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಅದರ ಫೋಟೋಸ್ ಇಲ್ಲಿವೆ.
- Suresh Naik
- Updated on: Mar 26, 2025
- 8:58 am
ಬೀದರ್‌ನಲ್ಲಿ ನೀರಿಗಾಗಿ ಹಾಹಾಕಾರ: ಪ್ರಾಣಿ-ಪಕ್ಷಿಗಳ ದಾಹ ಇಂಗಿಸುತ್ತಿರುವ ಯುವಕರು
ಬೀದರ್‌ನಲ್ಲಿ ಭೀಕರ ಬಿಸಿಲಿನಿಂದ ಪ್ರಾಣಿ-ಪಕ್ಷಿಗಳು ನಲುಗುತ್ತಿವೆ. ನೀರಿನ ಕೊರತೆಯಿಂದಾಗಿ ಅವುಗಳಿಗೆ ತೊಂದರೆಯಾಗುತ್ತಿದೆ. ಆದರೆ, ಸ್ವಾಭಿಮಾನಿ ಗೆಳೆಯರ ಬಳಗದ ಯುವಕರು ಅರಣ್ಯ ಪ್ರದೇಶಗಳಲ್ಲಿ ನೀರಿನ ತೊಟ್ಟಿಗಳನ್ನು ನಿರ್ಮಿಸಿ, ಪ್ರಾಣಿ-ಪಕ್ಷಿಗಳಿಗೆ ನೀರು ಒದಗಿಸುತ್ತಿದ್ದಾರೆ. ಇದು ಅವರ ಅದ್ಭುತ ಸೇವೆಯಾಗಿದ್ದು, ಬಿಸಿಲಿನ ತಾಪದಿಂದ ಬಳಲುತ್ತಿರುವ ಜೀವಿಗಳಿಗೆ ನೆರವಾಗುತ್ತಿದೆ.
- Suresh Naik
- Updated on: Mar 24, 2025
- 11:17 am
ಬೀದರ್: ಬರಗಾಲದಲ್ಲಿಯೂ ಬತ್ತದ, ಶತಮಾನಗಳಷ್ಟು ಹಳೆಯದಾದ ಐತಿಹಾಸಿಕ ಬಾವಿಗಳ ನಿರ್ಲಕ್ಷ್ಯ, ಜನರ ಆಕ್ರೋಶ
ಶತಮಾನಗಳಷ್ಟು ಪುರಾತನವಾದ ಭಾವಿಗಳು ಬೀದರ್‌ನಲ್ಲಿ ಸಾಕಷ್ಟಿವೆ. ಎಂತಹ ಭೀಕರ ಬರಗಾದಲ್ಲಿಯೂ ಆ ಬಾವಿಯಲ್ಲಿ ನೀರು ಖಾಲಿಯಾಗೋದೆ ಇಲ್ಲ. ಅಪರೂಪದಲ್ಲಿ ಅಪರೂಪದಂತಿರುವ ಇಂತಹ ಐತಿಹಾಸಿಕ ಬಾವಿಗಳ ಸುತ್ತಮುತ್ತಲೂ ಗಿಡಗಂಟೆಗಳು ಬೆಳೆದು ಹಾಳಾಗುತ್ತಿವೆ. ಈ ರೀತಿಯ ಬಾವಿಗಳ ನೀರನ್ನು ಜಿಲ್ಲಾಡಳಿತ ಬಳಕೆ ಮಾಡದೆ ನಿರ್ಲಕ್ಷ್ಯ ಮಾಡುತ್ತಿದೆ.
- Suresh Naik
- Updated on: Mar 14, 2025
- 11:40 am
ಬೀದರ್ – ಬೆಂಗಳೂರು ನಡುವೆ ಮತ್ತೆ ವಿಮಾನ ಹಾರಾಟಕ್ಕೆ ದಿನಗಣನೆ: ಇಲ್ಲಿದೆ ವೇಳಾಪಟ್ಟಿ
ಬೀದರ್ನಿಂದ ಕರ್ನಾಟಕ ರಾಜಧಾನಿ ಬೆಂಗಳೂರಿಗೆ ವಿಮಾನ ಹಾರಾಡಬೆಕೆಂಬುದು ಜಿಲ್ಲೆಯ ಜನರ ಕನಸಾಗಿತ್ತು. ನಾಗರಿಕರ ಕನಸಿನಂತೆ ಗಡಿ ಜಿಲ್ಲೆ ಬೀದರ್ನಿಂದ ಬೆಂಗಳೂರಿಗೆ ವಿಮಾನ ಹಾರಾಟ ಕೂಡಾ ಆರಂಭವಾಗಿತ್ತು. ಆದರೆ ಕಳೆದೊಂದು ವರ್ಷದಿಂದ ವಿಮಾನ ಹಾರಾಟ ಸ್ಥಗಿತಗೊಂಡಿತ್ತು. ಜನರ ಹೋರಾಟದ ಫಲವಾಗಿ ಮತ್ತೆ ವಿಮಾನ ಹಾರಾಟ ಶುರುವಾಗುತ್ತಿದೆ.
- Suresh Naik
- Updated on: Mar 12, 2025
- 12:13 pm
ಅಮರೇಶ್ವರ ಜಾತ್ರೆಯಲ್ಲಿ ಪಶು ಲೋಕ ಅನಾವರಣ: ದೇವಣಿ ಸೇರಿ ನಾನಾ ಜಾತಿಯ ಪಶುಗಳನ್ನ ನೋಡಲು ಮುಗಿಬಿದ್ದ ಜನ
ಬೀದರ್‌ನ ಅಮರೇಶ್ವರ ಜಾತ್ರೆಯಲ್ಲಿ ನಡೆದ ಬೃಹತ್ ಪಶುಪ್ರದರ್ಶನವು ವಿವಿಧ ತಳಿಯ ಜಾನುವಾರುಗಳನ್ನು ಪ್ರದರ್ಶಿಸಲಾಯಿತು. ದೇವಣಿ ತಳಿಯ ಜಾನುವಾರುಗಳು, ಜರ್ಸಿ, ಎಚ್.ಎಫ್., ಖಿಲಾರೆ ಎಮ್ಮೆಗಳು, ಕುದುರೆಗಳು ಮುಂತಾದವುಗಳನ್ನು ಪ್ರದರ್ಶಿಸಲಾಯಿತು. ಮಹಾರಾಷ್ಟ್ರ ಮತ್ತು ತೆಲಂಗಾಣದಿಂದಲೂ ಜಾನುವಾರುಗಳು ಭಾಗವಹಿಸಿದವು. ಉತ್ತಮ ತಳಿಯ ಜಾನುವಾರುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.
- Suresh Naik
- Updated on: Mar 3, 2025
- 8:54 pm
ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್‌ನ ಐವರು ರಸ್ತೆ ಅಪಘಾತದಲ್ಲಿ ಸಾವು
ಬೀದರ್ ಮೂಲದ ಒಂದು ಕುಟುಂಬದ 12 ಜನರು ಪ್ರಯಾಗರಾಜ್ ನಲ್ಲಿ ನಡೆಯುತ್ತಿದ್ದ ಕುಂಭಮೇಳಕ್ಕೆ ತೆರಳುತ್ತಿದ್ದರು. ಉತ್ತರಪ್ರದೇಶದಲ್ಲಿ ರಸ್ತೆ ಅಪಘಾತ ಸಂಭವಿಸಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಆರು ಜನ ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ. ಮೃತರು ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳು.
- Suresh Naik
- Updated on: Feb 21, 2025
- 12:45 pm
ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಹೆಚ್ಚಳ; ಬೀದರ್ ಜಿಲ್ಲೆಯ ಗಡಿಭಾಗದಲ್ಲಿ ಹೈಅಲರ್ಟ್
ಈಗಾಗಲೇ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಇದರಿಂದ ಕರ್ನಾಟಕದ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಗಡಿಭಾಗದಲ್ಲಿ ಚೆಕ್ಪೋಸ್ಟ್ ನಿರ್ಮಿಸಲಾಗಿದ್ದು, ತಪಾಸಣೆ ನಡೆಸಲಾಗುತ್ತಿದೆ. ಮಹಾರಾಷ್ಟ್ರದ ಗಡಿ ಭಾಗದಲ್ಲಿರುವ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕು, ಕಮಲನಗರ ತಾಲೂಕು, ಬಸವಕಲ್ಯಾಣ ತಾಲೂಕು, ಔರಾದ್ ತಾಲೂಕು ಗಡಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ.
- Suresh Naik
- Updated on: Feb 18, 2025
- 9:35 pm