ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ…
ಶಾಲಾ ಕಟ್ಟಡದಿಂದ ಬಿದ್ದು ಬೀದರ್ನಲ್ಲಿ 15 ವರ್ಷದ ಬಾಲಕ ಸಾವು: ಕಾರಣ ನಿಗೂಢ
ಬೀದರ್‌ನ ಜನಸೇವಾ ಖಾಸಗಿ ಶಾಲೆಯಲ್ಲಿ 15 ವರ್ಷದ ಸಮೀರ್ ಎಂಬ ಬಾಲಕ ಶಾಲಾ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾನೆ. ಶಾಲಾ ಸಿಬ್ಬಂದಿ ಕಿರುಕುಳ ನೀಡಿದ್ದರಿಂದಲೇ ಆತ ಈ ಕೃತ್ಯ ಎಸಗಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಆದರೆ ಶಾಲಾ ಆಡಳಿತ ಮಂಡಳಿ ಈ ಆರೋಪವನ್ನು ತಳ್ಳಿ ಹಾಕಿದ್ದು, ಬಾಲಕನ ಸಾವಿಗೆ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Suresh Naik
- Updated on: Jun 10, 2026
- 12:50 pm
ಮೃತ ಮಹಿಳೆಯ ಕುಟುಂಬದವರಿಗೆ ಪರಿಹಾರ ನೀಡದ್ದಕ್ಕೆ ಕೆಕೆಆರ್ಟಿಸಿ ಬಸ್ಸನ್ನೇ ಜಪ್ತಿ ಮಾಡಿದ್ರು!
ಅಪಘಾತದಲ್ಲಿ ಮೃತಪಟ್ಟಿದ್ದ ರೇಖಾ ಸುನೀಲ್ ಅವರ ಕುಟುಂಬಕ್ಕೆ 22.50 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶಿಸಿದ್ದರೂ 7 ತಿಂಗಳಿನಿಂದ ವಿಳಂಬ ಮಾಡಿದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸನ್ನು ಬೀದರ್ ಕೋರ್ಟ್ ಆದೇಶದ ಮೇರೆಗೆ ಜಪ್ತಿ ಮಾಡಲಾಗಿದೆ. ಸದ್ಯ ಬಸ್ಸನ್ನು ಕೋರ್ಟ್ ಆವರಣದಲ್ಲಿ ತಂದು ಇರಿಸಲಾಗಿದೆ.
- Suresh Naik
- Updated on: Jun 6, 2026
- 12:43 pm
ಹಾಸ್ಟೆಲ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ: ಕೊಳೆತ ತರಕಾರಿ ಸಮೇತ ಶಾಸಕರ ಮನೆಗೆ ಬಂದು ವಿದ್ಯಾರ್ಥಿಗಳಿಂದ ದೂರು
ಬೀದರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಳಪೆ ಆಹಾರ ನೀಡುತ್ತಿರುವುದನ್ನು ಪ್ರತಿಭಟಿಸಿ ವಿದ್ಯಾರ್ಥಿಗಳು ಕೊಳೆತ ತರಕಾರಿಗಳೊಂದಿಗೆ ಶಾಸಕರ ಮನೆಗೆ ಧಾವಿಸಿದ್ದಾರೆ. ಆ ಬೆನ್ನಲ್ಲೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ವಿದ್ಯಾರ್ಥಿಗಳಿಗೆ ತಮ್ಮ ಮನೆಯಲ್ಲೇ ಊಟ ಹಾಕಿಸಿದ್ದಾರೆ. ಬಳಿಕ ಇನ್ನುಮುಂದೆ ಈ ರೀತಿ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ.
- Suresh Naik
- Updated on: Jun 4, 2026
- 11:16 am
ಜಿಲ್ಲಾ ಕೇಂದ್ರದ ಲೈಬ್ರರಿಗಳಿಗೂ ಟಕ್ಕರ್ ನೀಡುವಂತಿದೆ ಪುಟ್ಟ ಹಳ್ಳಿಯ ಹೈಟೆಕ್ ಗ್ರಂಥಾಲಯ: ಏನೇನಿದೆ ಗೊತ್ತಾ?
ಬೀದರ್‌ನ ಶ್ರೀಮಂಡಲ ಗ್ರಾಮದಲ್ಲಿ ಹೈಟೆಕ್ ಡಿಜಿಟಲ್ ಲೈಬ್ರರಿ ಒಂದು ತಲೆ ಎತ್ತಿದೆ. ಆ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿಯಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಜೊತೆಗೆ ಕಂಪ್ಯೂಟರ್ ಶಿಕ್ಷಣ ಹಾಗೂ ಆಧುನಿಕ ಸಂಪನ್ಮೂಲಗಳನ್ನು ಒದಗಿಸಲಾಗುತ್ತಿದೆ. ಸದ್ಯ ಈ ಹೈಟೆಕ್ ಡಿಜಿಟಲ್ ಲೈಬ್ರರಿ ಎಲ್ಲರ ಗಮನ ಸೆಳೆಯುತ್ತಿದೆ.
- Suresh Naik
- Updated on: Jun 1, 2026
- 7:47 pm
ಹರಿದ ಬಟ್ಟೆಯ ಗುಡಿಸಲೇ ಇವರ ಅರಮನೆ; ಕತ್ತಲ ಕೂಪದಲ್ಲಿ ಹಕ್ಕಿಪಿಕ್ಕಿ ಸಮುದಾಯ
ಬೀದರ್‌ನ ಹಕ್ಕಿ-ಪಿಕ್ಕಿ ಜನಾಂಗ ದಶಕಗಳಿಂದ ಗುಡಿಸಲಿನಲ್ಲಿಯೇ ಅತಂತ್ರ ಬದುಕು ಸಾಗಿಸುತ್ತಿವೆ. ಅವರಿಗೆ ಸೂರಿಲ್ಲ, ವಿದ್ಯುತ್, ನೀರು ಸೇರಿದಂತೆ ಮೂಲಭೂತ ಸೌಕರ್ಯಗಳೂ ಮರೀಚಿಕೆಯಾಗಿವೆ. ರಾಜಕಾರಣಿಗಳು ಮತಕ್ಕಾಗಿ ಬಳಸಿಕೊಂಡು ನಂತರ ನಿರ್ಲಕ್ಷಿಸಿದ್ದಾರೆ. ಸಾವಿರಾರು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಪ್ರಾಣಿಗಳಿಗಿಂತ ಕಡೆಯಾಗಿ ಈ ಸಮುದಾಯದವರು ಜೀವಿಸುತ್ತಿದ್ದಾರೆ.
- Suresh Naik
- Updated on: May 30, 2026
- 5:26 pm
ಬೀದರ್: ಗಾಳಿ ಸಹಿತ ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಬೀದರ್ ಜಿಲ್ಲೆಯ ಹುಲಸೂರು ಗ್ರಾಮದಲ್ಲಿ ಭಾರೀ ಮಳೆಯಿಂದ ದುರಂತ ಸಂಭವಿಸಿದೆ. ಮನೆ ಮೇಲ್ಚಾವಣಿಯಿಂದ ಕಲ್ಲು ಬಿದ್ದು ಆರು ವರ್ಷದ ಮಗು ಮೃತಪಟ್ಟಿದೆ. ಈ ಘಟನೆ ತೀವ್ರ ನೋವುಂಟು ಮಾಡಿದ್ದು, ಮಳೆಯ ಆರ್ಭಟಕ್ಕೆ ಮನೆಗಳ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸಿದೆ. ಹುಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Suresh Naik
- Updated on: May 26, 2026
- 10:56 pm
ಆಪರೇಷನ್ ಮಾಡದೆ ಸುಳ್ಳು ಹೇಳಿ ಹಣ ಪೀಕಿದ ವೈದ್ಯ?: ಸ್ಕ್ಯಾನಿಂಗ್ ವರದಿ ಕಂಡು ರೋಗಿಗೆ ಶಾಕ್!
ಬೀದರ್‌ನ ಮನ್ನಾಖೇಳಿ ಆಸ್ಪತ್ರೆ ವೈದ್ಯರೊಬ್ಬರು ಅಪಘಾತಕ್ಕೀಡಾಗಿದ್ದ ರೋಗಿಗೆ ಆಪರೇಷನ್ ಮಾಡದೆಯೇ ರಾಡ್ ಹಾಕಲಾಗಿದೆ ಎಂದು ಸುಳ್ಳು ಹೇಳಿ, 37 ಸಾವಿರ ರೂಪಾಯಿ ಪಡೆದು ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಆಪರೇಷನ್ ಆದಮೇಲೂ ಬುಜ ನೋವಾಗುತ್ತಿದ್ದ ಹಿನ್ನೆಲೆ ಸ್ಕ್ಯಾನಿಂಗ್ ಮಾಡಿಸಿದಾಗ ಆಪರೇಷನ್ ಮಾಡದೆ ವೈದ್ಯರು ಸುಳ್ಳು ಹೆಳಿರುವುದು ಗೊತ್ತಾಗಿದೆ ಎನ್ನಲಾಗಿದೆ.
- Suresh Naik
- Updated on: May 26, 2026
- 2:18 pm
ತೈಲ ಬೆಲೆ ಏರಿಕೆ ಬಿಸಿ: ಸಾಂಪ್ರದಾಯಿಕ ಕೃಷಿ ಪದ್ಧತಿಗೆ ಮರಳಿದ ರೈತರು; ಟ್ರ್ಯಾಕ್ಟರ್ ಬದಲಾಗಿ ಎತ್ತುಗಳಿಂದ ಉಳುಮೆ
ತೈಲ ಬೆಲೆ ಏರಿಕೆ ಕೃಷಿ ಕ್ಷೇತ್ರದ ಮೇಲೂ ಪರಿಣಾಮ ಬೀರಿದೆ. ಡೀಸೆಲ್ ದರ ಏರಿಕೆಯಿಂದ ಟ್ರ್ಯಾಕ್ಟರ್ ಬಾಡಿಗೆ ದುಬಾರಿಯಾಗಿದ್ದು, ರೈತರು ಕೃಷಿ ವೆಚ್ಚ ತಗ್ಗಿಸಲು ಮತ್ತೆ ಎತ್ತುಗಳ ಉಳುಮೆಯತ್ತ ಮುಖ ಮಾಡುತ್ತಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಈ ಬದಲಾವಣೆ ಸ್ಪಷ್ಟವಾಗಿದ್ದು, ಉಳುಮೆ ಎತ್ತುಗಳ ಖರೀದಿ ಜೋರಾಗಿದೆ.
- Suresh Naik
- Updated on: May 25, 2026
- 4:34 pm
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ಜಪಾನ್ ಮೂಲದ ಮಿಯಾಜಾಕಿ ಮಾವಿನಹಣ್ಣು ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣಿನ ತಳಿಗಳಲ್ಲಿ ಒಂದಾಗಿದೆ. ಇದರ ಬೆಲೆ ಪ್ರತಿ ಕೆಜಿಗೆ 2.5 ಲಕ್ಷ ರೂಪಾಯಿಗಳವರೆಗೆ ತಲುಪುತ್ತದೆ. ಇಂತಹ ದುಬಾರಿ ದರದ ಮಾವು ತಳಿಯನ್ನು ಬೀದರ್ ನ ರೈತ ಬೆಳೆದು ಗಮನಸೆಳೆದಿದ್ದಾರೆ. ಹೌದು...ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಲ್ಬರ್ಗಾ ಗ್ರಾಮದ ರೈತ ಹಣಮಂತರಾವ್ ಶ್ರೀಮಾಳೆ ಅವರು ವಿಶ್ವದ ದುಬಾರಿ ಬೆಲೆಯ ಮಾವನ್ನ ಬೀದರ್ ನ ರೈತ ಬೆಳೆಸಿ ಸೈ ಎಣಿಸಿಕೊಂಡಿದ್ದಾರೆ. ವಿದೇಶಿ ತಳಿ ನಮ್ಮ ನೆಲದಲ್ಲಿ ಬೆಳೆಯುತ್ತಾ ಎಂದು ಹಣಮಂತರಾವ್ ಶ್ರೀಮಾಳೆ ಅವರಯ ತೋಟದಲ್ಲಿ ಪ್ರಾಯೋಗಿಕವಾಗಿ ಮಿಯಾಜಾಕಿ ಮಾವು ಬೆಳೆದಿದ್ದು, ಅದು ಇದೀಗ ಉತ್ತಮ ಫಲ ಕೊಟ್ಟಿದೆ.
- Suresh Naik
- Updated on: May 22, 2026
- 3:02 pm
ಬೀದರ್ನಲ್ಲಿ ಬಿರುಗಾಳಿ ಸಹಿತ ಮಳೆ ಆರ್ಭಟ: ಬರೋಬ್ಬರಿ ಒಂದು ಎಕರೆಯಲ್ಲಿದ್ದ ಪಪ್ಪಾಯಿ ಬೆಳೆ ಸಂಪೂರ್ಣ ನಾಶ
ಬೀದರ್ ಜಿಲ್ಲೆಯಲ್ಲಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯಿಂದ ಒಂದು ಎಕರೆಯಲ್ಲಿದ್ದ ಪಪ್ಪಾಯಿ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ರೈತ ಬಾಬ್ ಶೆಟ್ಟಿ ಒಂದೂವರೆ ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದು, ನಾಲ್ಕೈದು ಲಕ್ಷ ರೂಪಾಯಿ ಆದಾಯ ನಿರೀಕ್ಷಿಸಿದ್ದರು. ಅಕಾಲಿಕ ಮಳೆಯಿಂದ ಬೆಳೆ ನಾಶವಾಗಿ ರೈತರು ನಷ್ಟ ಅನುಭವಿಸಿದ್ದಾರೆ.
- Suresh Naik
- Updated on: May 20, 2026
- 2:06 pm
ದೇಶಕ್ಕೆ ಅನ್ನ ನೀಡುವ ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ
ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಕಚ್ಚಾ ತೈಲ ಬೆಲೆ ಏರಿಕೆ, ವಿದೇಶಿ ವಿನಿಮಮ ಕೊರತೆ ಸೇರಿದಂತೆ ಹಲವು ಆರ್ಥಿಕ ಸಂಕಷ್ಟಗಳು ಎದುರಾಗಿದೆ. ಪರಿಣಾಮ ಭಾರತದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಅಗತ್ಯ ವಸ್ತಗಳು ಬೆಲೆ ಹೆಚ್ಚಳವಾಗುತ್ತಿದೆ. ಹೌದು...ಈಗಾಗಲೇ ಖಾಸಗಿ ಬಸ್, ಸ್ಕೂಲ್ ಬಸ್, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ದರ ಏರಿಯಾಗುತ್ತಿದ್ದು, ಇದೀಗ ತೈಲ ಬೆಲೆ ಏರಿಕೆ ಬಿಸಿ ಅನ್ನದಾತರಿಗೂ ತಟ್ಟಿದೆ.
- Suresh Naik
- Updated on: May 18, 2026
- 2:48 pm
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಡ್ಯಾನ್ಸ್ ಮಾಡಿದ ಶಾಸಕ ಶರಣು ಸಲಗರ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಸಾವಿತ್ರಿ ಸಲಗರ ಜೊತೆ ಬಸವಕಲ್ಯಾಣ ಶಾಸಕ ಶರಣು ಸಲಗರ ಹಿಂದಿ ಹಾಡಿಗೆ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಅಭಿಮಾನಿಗಳು, ನೆರೆದವರು ದಂಪತಿ ನೃತ್ಯ ಕಂಡು ಖುಷಿಪಟ್ಟಿದ್ದಲ್ಲದೆ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಸವಕಲ್ಯಾಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆದಿತ್ತು ಎನ್ನಲಾಗಿದೆ.
- Suresh Naik
- Updated on: May 8, 2026
- 3:12 pm