ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ
ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಟೋಲ್ ತಪ್ಪಿಸಿಕೊಳ್ಳುತ್ತಿದ್ದ ವಾಹನ ಸವಾರರಿಗೆ ಶಾಕ್..!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Expressway) ಟೋಲ್ ಕಟ್ಟದೇ ತಪ್ಪಿಸಿಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶಾಕ್ ಕೊಟ್ಟಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳು ಹೆದ್ದಾರಿಯಿಂದ ಸರ್ವೀಸ್ ರಸ್ತೆ ಸಂಪರ್ಕ ಕಡಿತಗೊಳಿಸಲಾಗಿದೆ. ಇದರಿಂದ ಇನ್ಮುಂದೆ ಸರ್ವೀಸ್ ರಸ್ತೆ ಇಲ್ಲದೇ ವಾಹನ ಸವಾರರು ಟೋಲ್ ಕಟ್ಟಲೇಬೇಕಿದೆ.
- Syed Nizamuddin
- Updated on: Feb 7, 2025
- 11:13 am
ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾದ ನರ್ಸಿಂಗ್ ವಿದ್ಯಾರ್ಥಿನಿ: ಆಡಳಿತ ಮಂಡಳಿ ವಿರುದ್ಧ ಕಿರುಕುಳ ಆರೋಪ
ರಾಮನಗರದ ದಯಾನಂದ್ ಸಾಗರ್ ಮೆಡಿಕಲ್ ಕಾಲೇಜಿನಲ್ಲಿ 19 ವರ್ಷದ ಕೇರಳ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜು ಆಡಳಿತ ಮಂಡಳಿಯ ಕಿರುಕುಳ ಮತ್ತು ಕೇರಳದ ವಿದ್ಯಾರ್ಥಿಗಳನ್ನು ಕೀಳಾಗಿ ಕಾಣುವ ಮನೋಭಾವದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿಸಲಾಗಿದೆ. ಸದ್ಯ ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪ್ರತಿಭಟಿಸಿದ್ದು, ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ.
- Syed Nizamuddin
- Updated on: Feb 5, 2025
- 9:54 pm
ಗಾಗಲ್ ಹಾಕಿ ಡಿಸಿಎಂ ಡಿಕೆ ಶಿವಕುಮಾರ್ ಜಾಲಿ ಬೋಟ್ ರೈಡ್!
ಡಿಸಿಎಂ ಡಿಕೆ ಶಿವಕುಮಾರ್ ರವರು ರಾಮನಗರದ ಕಣ್ವ ಜಲಾಶಯಕ್ಕೆ ಭೇಟಿ ನೀಡಿ, ದೋಣಿ ಸವಾರಿ ಮಾಡಿದರು. ಶಾಸಕ ಸಿ.ಪಿ.ಯೋಗೇಶ್ವರ್ ಮತ್ತು ಮಾಜಿ ಸಂಸದ ಡಿಕೆ ಸುರೇಶ್ ಅವರೊಂದಿಗೆ ಅವರು ಆನಂದಿಸಿದರು. ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆಗಳನ್ನು ಪರಿಶೀಲಿಸುವ ಉದ್ದೇಶದಿಂದ ಈ ಭೇಟಿ ನಡೆದಿದೆ ಎಂದು ತಿಳಿದುಬಂದಿದೆ.
- Syed Nizamuddin
- Updated on: Feb 2, 2025
- 7:51 pm
ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಲು ಸಿದ್ಧರಾಗಿರುವ ಡಿಕೆ ಶಿವಕುಮಾರ್: ಪರೋಕ್ಷವಾಗಿ ಮುಂದಿನ ಸಿಎಂ ಎಂದ ಬಾಲಕೃಷ್ಣ
ಒಂದ್ಕಡೆ ಕಾಂಗ್ರೆಸ್ನಲ್ಲಿ ಸಿಎಂ ಸಲಹೆಗಾರ ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟಿದ್ದಾರೆ. ಇನ್ನೊಂದ್ಕಡೆ ಎಸ್ಸಿ, ಎಸ್ಟಿ ಸಚಿವರು ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿಗೆ ಮುಂದಾಗಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಮನೆಯಲ್ಲಿ ಮುಂದಿನ ಸಿಎಂ ಕೂಗು ಮುಂದುವರೆದಿದೆ. ಈ ಬಗ್ಗೆ ಹೈಕಮಾಂಡ್ ವಾರ್ನ್ ಮಾಡಿದರೂ ನಿಲ್ಲುತ್ತಿಲ್ಲ. ಸದ್ಯ ಚನ್ನಪಟ್ಟಣದಲ್ಲಿ ನಡೆದ ಕೃತಜ್ಞತಾ ಸಮಾವೇಶದಲ್ಲಿ ಪರೋಕ್ಷವಾಗಿ ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂದು ಶಾಸಕ ಬಾಲಕೃಷ್ಣ ಹೇಳಿದ್ದಾರೆ.
- Syed Nizamuddin
- Updated on: Feb 2, 2025
- 3:51 pm
ಬಿಡದಿಯಲ್ಲಿ ಯುವತಿ ಮೇಲೆ ಅತ್ಯಾಚಾರ: ಸಂತ್ರಸ್ತೆ ಪರಿಸ್ಥಿತಿ ಕಂಡು ಪೊಲೀಸರೇ ಶಾಕ್
ಬಿಡದಿಯಲ್ಲಿ 20 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆದಿದ್ದು, ಪಕ್ಕದ ಮನೆಯ ಅಸ್ಸಾಂ ಮೂಲದ ಯುವಕನಿಂದ ಕೃತ್ಯವೆಸಗಲಾಗಿದೆ. ಸ್ನಾನ ಮಾಡಲು ಬಾತ್ ರೂಮ್ಗೆ ಹೋಗಿದ್ದ ಯುವತಿಯನ್ನು ಆತ ತನ್ನ ಕೋಣೆಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Syed Nizamuddin
- Updated on: Jan 29, 2025
- 6:00 pm
KSRTC ಬಸ್‌ನಲ್ಲಿ ಟಿಕೆಟ್ ಮಷಿನ್ ಖಾಸಗಿ ವ್ಯಕ್ತಿಗೆ ಕೊಟ್ಟು ಕೆಲಸ ಕಳೆದುಕೊಂಡ ಕಂಡಕ್ಟರ್
KSRTC ಬಸ್ ಕಂಡಕ್ಟರ್ ಖಾಸಗಿ ವ್ಯಕ್ತಿಯೋರ್ವನಿಗೆ ಮಷಿನ್ ನೀಡಿ ಟಿಕೆಟ್ ನೀಡುವಂತೆ ಹೇಳಿ ಕೆಲಸ ಕಳೆದುಕೊಂಡಿದ್ದಾನೆ. ಇನ್ನು ಖಾಸಗಿ ವ್ಯಕ್ತಿ ತಾನು ಟಿಕೆಟ್ ಕೊಡುವ ಅನುಭವ ಪಡೆಯುತ್ತಿದ್ದೇನೆಂದು ರಾಜಾರೋಷವಾಗಿ ಪ್ರಯಾಣಿಕರಿಂದ ಹಣ ಸ್ವೀಕರಿಸಿದ್ದ. ಅಲ್ಲದೇ ಹಣ ಪಡೆದುಕೊಂಡು ಟಿಕೆಟ್ ನೀಡುತ್ತಿರಲಿಲ್ಲ. ಟಿಕೆಟ್ ಅಂತ ಪ್ರಯಾಣಿಕರು ಕೇಳಿದ್ರೆ ನಾನು ನೋಡಿಕೊಳ್ಳುತ್ತೇನೆ, ನಮ್ಮನ್ನು ಚೆಕ್ ಮಾಡಲು ಯಾರು ಬರಲ್ಲ ಎಂದು ಹೇಳಿಕೊಂಡಿದ್ದಾನೆ. ಇದೀಗ ಕಂಡಕ್ಟರ್ ಕೆಲಸ ಕಳೆದುಕೊಳ್ಳುವಂತಾಗಿದೆ.
- Syed Nizamuddin
- Updated on: Jan 15, 2025
- 9:24 pm
27 ವರ್ಷದ ಯುವ ವೈದ್ಯ, 36ರ ಮಹಿಳೆ ನಡುವೆ ಕುಚ್ಕುಚ್: ಪೊಲೀಸರಿಗೆ ತಲೆನೋವಾದ ಪ್ರಕರಣ
ಡ್ರಾಪ್ ಕೇಳಿದ 36 ವರ್ಷದ ಮಹಿಳೆಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪ 27 ವರ್ಷದ ಯುವ ವೈದನ ಮೇಲೆ ಕೇಳಿಬಂದಿದೆ. ಇನ್ನು ಇದಕ್ಕೆ ಪ್ರತಿಯಾಗಿ ಯುವ ವೈದ್ಯ ಸಹ ಮಹಿಳೆ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಅವಳೇ ಹಿಂಬದಿಯಿಂದ ನನ್ನ ಮರ್ಮಾಂಗಕ್ಕೆ ಕೈ ಹಾಕಿದ್ದಾಳೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಪ್ರತಿದೂರು ನೀಡಲು ಸಹ ಮುಂದಾಗಿದ್ದು, ಈ ಪ್ರಕರಣ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಣಮಿಸಿದೆ. ಹಾಗಾದ್ರೆ, ಏನಿದು ಘಟನೆ? ಮಹಿಳೆ ನೀಡಿದ ದೂರಿನಲ್ಲೇನಿದೆ? ಇದಕ್ಕೆ ಯುವ ಡಾಕ್ಟರ್ ಹೇಳಿದ್ದೇನು ಎನ್ನುವುದು ಇಲ್ಲಿದೆ.
- Syed Nizamuddin
- Updated on: Jan 15, 2025
- 6:45 pm
ಎಲ್ ಅಂಡ್ ಟಿ ಮುಖ್ಯಸ್ಥರ 90 ಗಂಟೆ ಕೆಲಸದ ಹೇಳಿಕೆ; ವಾಟಾಳ್ ನಾಗರಾಜ್ ಪ್ರತಿಭಟನೆ
Vatal Nagaraj protest at Ramanagara: ಎಲ್ ಅಂಡ್ ಟಿ ಛೇರ್ಮನ್ ಎಸ್.ಎನ್. ಸುಬ್ರಹ್ಮಣ್ಯನ್ ಅವರು ಕೆಲಸದ ಅವಧಿ ಕುರಿತಾಗಿ ನೀಡಿದ ಹೇಳಿಕೆಯನ್ನು ವಾಟಾಳ್ ನಾಗರಾಜ್ ವಿರೋಧಿಸಿದ್ದಾರೆ. ವಾರಕ್ಕೆ 90 ಗಂಟೆ ಕೆಲಸ ಮಾಡಬೇಕೆಂದು ತಾಕೀತು ಮಾಡಿದ ಸುಬ್ರಹ್ಮಣ್ಯನ್ ವಿರುದ್ಧ ವಾಟಾಳ್ ರಾಮನಗರದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಮನೆಯಲ್ಲಿ ಹೆಂಡತಿಯ ಮುಖ ಎಷ್ಟು ಹೊತ್ತು ನೋಡಿಕೊಂಡು ಇರುತ್ತೀರಿ. ಬಂದು ಕೆಲಸ ಮಾಡಿ ಎಂದು ಸುಬ್ರಮಣಿಯನ್ ಉದ್ಯೋಗಿಗಳಿಗೆ ಹೇಳಿದ್ದರು.
- Syed Nizamuddin
- Updated on: Jan 13, 2025
- 12:17 pm
ಕೆಲವೇ ದಿನಗಳಲ್ಲಿ ಬ್ರೋಕರ್ಗಳು ನಿಮ್ಮ ಮನೆಗೆ ಬರ್ತಾರೆ, ಆಸ್ತಿ ಮಾರಿಕೊಳ್ಳಬೇಡಿ: ಡಿಕೆ ಶಿವಕುಮಾರ್
ಈ ಹಿಂದೆ ಚನ್ನಪಟ್ಟಣ ಉಪಚುನಾವಣೆ ಸಂದರ್ಭದಲ್ಲಿ ತಮ್ಮ ಆಸ್ತಿಯನ್ನು ಮಾರಾಟ ಮಾಡದಂತೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಇದೀಗ ಮತ್ತೊಮ್ಮೆ ಕನಕಪುರದಲ್ಲಿ ಅವರು ಜನರಿಗೆ ತಮ್ಮ ಆಸ್ತಿಯನ್ನು ಮಾರಾಟ ಮಾಡದಂತೆ ಮನವಿ ಮಾಡಿದ್ದಾರೆ. ಭವಿಷ್ಯದಲ್ಲಿ ಭೂಮಿಯ ಬೆಲೆಗಳು ಏರಿಕೆಯಾಗಲಿವೆ ಎಂದು ಹೇಳಿದ್ದಾರೆ.
- Syed Nizamuddin
- Updated on: Jan 12, 2025
- 5:22 pm
ಸಾಲ ಕೊಡಿಸುವುದಾಗಿ ಮಹಿಳೆಯನ್ನ ಲಾಡ್ಜ್ಗೆ ಕರೆದೊಯ್ದ, ಬಿಜೆಪಿ ಮುಖಂಡ ಅರೆಸ್ಟ್
ಸಾಲ ಕೊಡಿಸುವುದಾಗಿ ಮಹಿಳೆಯನ್ನು ಲಾಡ್ಜ್ಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಿ ಅತ್ಯಾಚಾರ ಎಸಗಿರುವ ಆರೋಪ ಬಿಜೆಪಿ ಮುಖಂಡನ ವಿರುದ್ಧ ಕೇಳಿಬಂದಿದ್ದು, ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು, ಬಿಜೆಪಿ ಮುಖಂಡನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ನಾಪತ್ತೆಯಾಗಿರುವ ಮತ್ತೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹಾಗಾದ್ರೆ, ಮಹಿಳೆ ನೀಡಿದ ದೂರಿನಲ್ಲೇನಿದೆ ಎನ್ನುವ ವಿವರ ಇಲ್ಲಿದೆ .
- Syed Nizamuddin
- Updated on: Dec 27, 2024
- 7:26 pm
ಎಚ್ಚರ..ಎಚ್ಚರ: ವರ್ಕ್ ಫ್ರಾಮ್ ಹೋಂ ಕೆಲಸದ ಹೆಸರಿನಲ್ಲಿ ನಡೆಯುತ್ತಿದೆ ವಂಚನೆ
ಕೊವಿಡ್ ಸಂದರ್ಭದಲ್ಲಿ ವರ್ಕ್ ಫ್ರಾಮ್ ಹೋಂ ಎಂಬ ಪರಿಕಲ್ಪನೆಯೊಂದು ಹುಟ್ಟಿಕೊಂಡಿತು. ಇದರಿಂದ ಐಟಿಬಿಟಿ ಕಂಪನಿಗಳು ಸೇರಿದಂತೆ ಎಲ್ಲರೂ ತಮ್ಮ ತಮ್ಮ ಸಿಬ್ಬಂದಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ಕಲ್ಪಿಸಿದವು. ದಿನಕಳೆದಂತೆ ವರ್ಕ್ ಫ್ರಾಮ್ ಹೋಂ ಬೇಡಿಕೆ ಹೆಚ್ಚಾಗತೊಡಗಿತು. ಆದರೆ ಸದ್ಯದ ದಿನಗಳಲ್ಲಿ ಇದನ್ನೇ ಬಂಡವಾಳ ಮಾಡಿಕೊಂಡಿರುವ ವಂಚಕರು ವರ್ಕ್ ಫ್ರಾಮ್ ಹೋಂ ಹೆಸರಲ್ಲಿ ವಂಚಿಸುತ್ತಿದ್ದಾರೆ. ಸದ್ಯ ಇಂತಹದ್ದೇ ಒಂದು ಘಟನೆ ರಾಮನಗರದಲ್ಲಿ ನಡೆದಿದ್ದು, ಮಹಿಳೆಯರು ಮೋಸಹೋಗಿದ್ದಾರೆ.
- Syed Nizamuddin
- Updated on: Dec 27, 2024
- 7:02 pm
ಶಬರಿಮಲೆ: ಮೇಲ್ಸೇತುವೆ ಮೇಲಿಂದ ಜಿಗಿದು ಕರ್ನಾಟಕದ ಅಯ್ಯಪ್ಪ ಮಾಲಾಧಾರಿ ಸಾವು
ಕನಕಪುರದ ಕುಮಾರಸ್ವಾಮಿ (40) ಎಂಬುವವರು ಶಬರಿಮಲೆಗೆ ತೆರಳಿದ್ದ ಸಂದರ್ಭದಲ್ಲಿ ಮಲ್ಲಿಕ್ ಪುರಂ ಮೇಲ್ಸೇತುವೆ ಮೇಲಿಂದ ಜಿಗಿದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ ಮತ್ತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಮಾರಸ್ವಾಮಿಯ ಪತ್ನಿ ಮನೆಯಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ ಎಂದು ಹೇಳಿದ್ದಾರೆ. ಸ್ಥಳೀಯ ಪೊಲೀಸರ ಪ್ರಕಾರ ಕುಮಾರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
- Syed Nizamuddin
- Updated on: Dec 17, 2024
- 12:18 pm