ಕ್ರಿಸ್ಮಸ್ ಹಬ್ಬ ಹಿನ್ನೆಲೆ ಬೆಂಗಳೂರಿನಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿದೆ. ಮಹಾಲಕ್ಷ್ಮೀ ಲೇಔಟ್, ಸ್ಯಾಂಡಲ್ ಸೋಪ್ ಫ್ಯಾಕ್ಟರಿ, ರಾಜಕುಮಾರ್ ರಸ್ತೆ ಮತ್ತು ಓರಿಯನ್ ಮಾಲ್ ಬಳಿ ದಟ್ಟಣೆ ಹೆಚ್ಚಾಗಿದೆ. ವಾಹನ ಸವಾರರು ತೀವ್ರ ಪರದಾಟ ಎದುರಿಸಿದ್ದಾರೆ. ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಮಂತ್ರಿ ಮಾಲ್ ಜಂಕ್ಷನ್ ಮುಂತಾದ ಪ್ರದೇಶಗಳಲ್ಲಿ ವಾಹನ ಸಂಚಾರ ನಿಧಾನವಾಗಿದೆ.