ADAS ಸೇಫ್ಟಿ ಫೀಚರ್ಸ್ ನೊಂದಿಗೆ ಬಿಡುಗಡೆಯಾಗಲಿದೆ ಹೊಸ ಸುಜುಕಿ ಸ್ವಿಫ್ಟ್

|

Updated on: Nov 17, 2023 | 4:07 PM

ಸುಜುಕಿ ಮೋಟಾರ್ ಕಾರ್ಪೊರೇಷನ್ ತನ್ನ ಹೊಸ ತಲೆಮಾರಿನ ಸುಜುಕಿ ಸ್ವಿಫ್ಟ್ ಹ್ಯಾಚ್ ಬ್ಯಾಕ್ ಕಾರು ಮಾದರಿಯನ್ನು ಅನಾವರಣಗೊಳಿಸಿ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರು ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಸುರಕ್ಷಾ ಸೌಲಭ್ಯಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡುವ ಸುಳಿವು ನೀಡಿದೆ.

ADAS ಸೇಫ್ಟಿ ಫೀಚರ್ಸ್ ನೊಂದಿಗೆ ಬಿಡುಗಡೆಯಾಗಲಿದೆ ಹೊಸ ಸುಜುಕಿ ಸ್ವಿಫ್ಟ್
ADAS ಸೇಫ್ಟಿ ಫೀಚರ್ಸ್ ನೊಂದಿಗೆ ಬಿಡುಗಡೆಯಾಗಲಿದೆ ಹೊಸ ಸುಜುಕಿ ಸ್ವಿಫ್ಟ್
Follow us on

ದೇಶದ ಅತಿದೊಡ್ಡ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ(Maruti Suzuki) ತನ್ನ ಬಹುನೀರಿಕ್ಷಿತ ಹೊಸ ತಲೆಮಾರಿನ ಸ್ವಿಫ್ಟ್(Swift) ಹ್ಯಾಚ್ ಬ್ಯಾಕ್ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಗೂ ಮುನ್ನ ಹೊಸ ಸ್ವಿಫ್ಟ್ ಜಪಾನ್ ನಲ್ಲಿ ಬಿಡುಗಡೆಯಾಗಲಿದೆ. ಹೊಸ ಸ್ವಿಫ್ಟ್ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾದರಿಗಿಂತಲೂ ಹೆಚ್ಚು ಆಧುನಿಕ ಫೀಚರ್ಸ್ ಮತ್ತು ಸ್ಪೋರ್ಟಿ ವಿನ್ಯಾಸದಲ್ಲಿ ಬಿಡುಗಡೆಯಾಗುತ್ತಿದ್ದು, ಇದು ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಹೊಸ ಸಂಚಲನ ಮೂಡಿಸುವ ನೀರಿಕ್ಷೆಯಲ್ಲಿದೆ.

ಹೊಸ ಸ್ವಿಫ್ಟ್ ಕಾರು ಮಾದರಿಯನ್ನು ಸುಜುಕಿ ಕಂಪನಿಯು ಇತ್ತೀಚೆಗೆ ಟೋಕಿಯೊ ಮೋಟಾರ್ ಶೋನಲ್ಲಿ ಪ್ರದರ್ಶನಗೊಳಿಸಿದ ನಂತರ ಉತ್ಪಾದನಾ ಆವೃತ್ತಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಆರಂಭಿಸಿದ್ದು, ರೋಡ್ ಟೆಸ್ಟಿಂಗ್ ವೇಳೆ ಹೊಸ ಕಾರಿನಲ್ಲಿ ಹಲವಾರು ಸುರಕ್ಷಾ ಫೀಚರ್ಸ್ ಜೋಡಣೆ ಮಾಡಿರುವುದು ಬಹಿರಂಗವಾಗಿದೆ.

ಸ್ವಿಫ್ಟ್ ಹೊಸ ಆವೃತ್ತಿಯಲ್ಲಿ ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ ಜೋಡಣೆ ಮಾಡಿರುವುದು ಬಹುತೇಕ ಖಚಿತವಾಗಿದ್ದು, ಇದು ರಡಾರ್ ಮತ್ತು ಸೆನ್ಸಾರ್ ಸೌಲಭ್ಯದೊಂದಿಗೆ ಸಂಭಾವ್ಯ ಅಪಘಾತಗಳನ್ನು ತಡೆಯಲು ಸಾಕಷ್ಟು ಸಹಕಾರಿಯಾಗಲಿದೆ. ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟಂ ಸಿಸ್ಟಂ ಪ್ಯಾಕೇಜ್ ನಲ್ಲಿ ಬ್ಲೈಂಡ್ ಸ್ಪಾಟ್ ಮಾನಿಟರಿಂಗ್, ರಿಯರ್ ಕ್ರಾಸ್ ಟ್ರಾಫಿಕ್ ಅಲರ್ಟ್, ಸ್ಟಾರ್ಟ್ ನೊಟಿಫಿಕೇಶನ್ ಸೌಂಡ್, 360 ಡಿಗ್ರಿ ಕ್ಯಾಮೆರಾ ಸೌಲಭ್ಯಗಳನ್ನು ಒಳಗೊಂಡಿದೆ.

ಇದನ್ನೂ ಓದಿ: ಪ್ರತಿ ಚಾರ್ಜ್ ಗೆ ಬರೋಬ್ಬರಿ 738 ಕಿಮೀ ಮೈಲೇಜ್ ನೀಡುತ್ತೆ ಈ ಇವಿ ಎಂಪಿವಿ ಕಾರು..

ಇದಲ್ಲದೆ ಅಪಘಾತಗಳನ್ನು ತಡೆಯಲು ಕ್ವಿಕ್ ಅಲರ್ಟ್ ಹೊಂದಿರುವ ಡ್ಯುಯಲ್ ಸೆನ್ಸಾರ್ ಒಳಗೊಂಡಿರುವ ಬ್ರೇಕ್ ಸರ್ಪೊಟ್, ತುರ್ತು ಸಂದರ್ಭಗಳಲ್ಲಿ ವೇಗವನ್ನು ಹತೋಟಿ ತರಬಲ್ಲ ಅಡ್ವಾಪ್ಟಿವ್ ಕ್ರೂಸ್ ಕಂಟ್ರೋಲ್, ಚಾಲಕನ ಗಮನಕ್ಕೆ ಬಾರದೆ ಆಗಬಹುದಾದ ಅಪಘಾತದ ಸಂದರ್ಭಗಳನ್ನು ಎಚ್ಚರಿಸಲು ಡ್ರೈವರ್ ಮಾನಿಟರಿಂಗ್ ಸಿಸ್ಟಂ ಹಾಗೂ ರಿಯಲ್ ಟೈಮ್ ಅಲರ್ಟ್ ಮತ್ತು ಪ್ರಕಾಶಮಾನವಾಗಿರುವ ಹೈಭಿಮ್ ಹೆಡ್ ಲೈಟ್ ಬೆಳಕನ್ನು ನಿರ್ವಹಿಸುವ ಹೆಡ್ ಲೈಟ್ ಕಂಟ್ರೋಲ್ ಸೌಲಭ್ಯಗಳಿರಲಿವೆ. ಆದರೆ ಈ ಎಲ್ಲಾ ಸೇಫ್ಟಿ ಫೀಚರ್ಸ್ ಗಳನ್ನು ಭಾರತದಲ್ಲಿ ಬಿಡುಗಡೆಯಾಗಲಿರುವ ಸ್ವಿಫ್ಟ್ ಮಾದರಿಯಲ್ಲಿ ಜೋಡಣೆ ಮಾಡಬಹುದೆ ಎನ್ನುವ ಪ್ರಶ್ನೆಗೆ ಶೀಘ್ರದಲ್ಲಿಯೇ ಉತ್ತರ ಸಿಗಲಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಉತ್ಪಾದನಾ ಆವೃತ್ತಿ ಭಾರತದಲ್ಲೂ ಅನಾವರಣದಗೊಳ್ಳಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ತಲೆಮಾರಿನ ಸ್ವಿಫ್ಟ್ ಮಾದರಿಯು ಸಾಂಪ್ರದಾಯಿಕ ಪೆಟ್ರೋಲ್ ಎಂಜಿನ್‌ ಆಯ್ಕೆ ಪಡೆದುಕೊಳ್ಳಲಿದ್ದು, ಇದು ಬಿಎಸ್6 2ನೇ ಹಂತದ ಮಾಲಿನ್ಯ ಹೊರಸೂಸುವಿಕೆ ಮಾನದಂಡಗಳು ಮತ್ತು ಕಾರ್ಪೊರೇಟ್ ಸರಾಸರಿ ಇಂಧನ ದಕ್ಷತೆಯ ಮಾನದಂಡಗಳನ್ನು ಪೂರೈಸಿದೆ. ಹೊಸ ಕಾರಿನಲ್ಲಿ ಮತ್ತೊಂದು ಗಮನಾರ್ಹ ಬದಲಾವಣೆ ಒಳಗೊಂಡ ಜೆಡ್ ಸೀರಿಸ್ ತ್ರಿ ಸಿಲಿಂಡರ್ 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದ್ದು, ಇದು ಹೆಚ್ಚಿನ ಇಂಧನ ದಕ್ಷತೆಯೊಂದಿಗೆ ಪರ್ಫಾಮೆನ್ಸ್ ನಲ್ಲೂ ಗ್ರಾಹಕರನ್ನು ಸೆಳೆಯಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮೂರನೇ ತಲೆಮಾರಿನ ಸ್ವಿಫ್ಟ್ ಕಾರಿನಲ್ಲಿ ಮಾರುತಿ ಸುಜುಕಿ ಕಂಪನಿ ಕಂಪನಿ ಕೆ ಸೀರಿಸ್ ಫೋರ್ ಸಿಲಿಂಡರ್ 1.2 ಲೀಟರ್ ಪೆಟ್ರೋಲ್ ಎಂಜಿನ್ ಬಳಕೆ ಮಾಡುತ್ತಿದ್ದು, ಹೊಸ ಎಂಜಿನ್ ಮಾದರಿಯು ಕೆ ಸೀರಿಸ್ ಗಿಂತಲೂ ಸಾಕಷ್ಟು ಹಗುರವಾಗಿರುವುದಲ್ಲದೇ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಪಡೆದುಕೊಳ್ಳಲಿದೆ. ಈ ಮೂಲಕ ಹೊಸ ಸ್ವಿಫ್ಟ್ ಮಾದರಿಯು ಪ್ರತಿ ಲೀಟರ್ ಪೆಟ್ರೋಲ್ ಗೆ ಗರಿಷ್ಟ 40 ಕಿ.ಮೀ ಮೈಲೇಜ್ ಹಿಂದಿರುಗಿಸುವ ನೀರಿಕ್ಷೆಯಲ್ಲಿದ್ದು, ಇದು ಕೇವಲ ಇಂಧನ ದಕ್ಷತೆಯಲ್ಲಿ ಮಾತ್ರವಲ್ಲದೆ ವಿನ್ಯಾಸ ಮತ್ತು ವೈಶಿಷ್ಟ್ಯತೆಗಳಲ್ಲೂ ಸಾಕಷ್ಟು ಬದಲಾವಣೆ ಪಡೆದುಕೊಳ್ಳಲಿದೆ.

ಇದನ್ನೂ ಓದಿ: ರೂ. 10 ಲಕ್ಷಕ್ಕೆ ಭರ್ಜರಿ ಮೈಲೇಜ್ ನೀಡುವ ಅತ್ಯುತ್ತಮ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳಿವು!

ಇನ್ನು ಹೊಸ ಸ್ವಿಫ್ಟ್ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆ ಆಧರಿಸಿ ವಿನ್ಯಾಸ ಮತ್ತು ವೈಶಿಷ್ಟ್ಯತೆಗಳಲ್ಲಿ ಭಾರೀ ಬದಲಾವಣೆಗಳನ್ನು ಪಡೆದುಕೊಂಡಿದ್ದು, ಮರುವಿನ್ಯಾಸಗೊಳಿಸಲಾದ ಬಾನೆಟ್, ಮತ್ತಷ್ಟು ಸ್ಪೋರ್ಟಿಯಾಗಿರುವ ಹನಿಕೊಬ್ ಬಂಪರ್, ಹೊಸ ವಿನ್ಯಾಸದ ಎಲ್ಇಡಿ ಹೆಡ್ ಲ್ಯಾಂಪ್ಸ್, ಹೊಸ ಫಾಗ್ ಲ್ಯಾಂಪ್ಸ್ ಮತ್ತು ಆಕರ್ಷಕವಾದ ಸೈಡ್ ಪ್ರೊಫೈಲ್ ಪಡೆದುಕೊಂಡಿದೆ. ಭಾರತದಲ್ಲಿ ಇದು 2024ರ ಮಾರ್ಚ್ ಹೊತ್ತಿಗೆ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 6.50 ಲಕ್ಷ ಆರಂಭಿಕ ಬೆಲೆ ಪಡೆದುಕೊಳ್ಳಬಹುದಾಗಿದೆ.