ADAS Cars in India: 2023ರಲ್ಲಿ ಬಿಡುಗಡೆಯಾದ ಹೊಸ ಎಡಿಎಎಸ್ ಫೀಚರ್ಸ್ ಕಾರುಗಳಿವು!

|

Updated on: Dec 29, 2023 | 8:16 PM

ಭಾರತದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಕಾರುಗಳು ಗರಿಷ್ಠ ಸುರಕ್ಷತೆಯೊಂದಿಗೆ ಪ್ರಯಾಣಿಕರ ಆಯ್ಕೆಯಲ್ಲಿ ಗಮನಸೆಳೆಯುತ್ತಿದ್ದು, 2023ರ ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟಿರುವ ಹೊಸ ಎಡಿಎಎಸ್ ಕಾರುಗಳ ಮಾಹಿತಿ ಇಲ್ಲಿದೆ.

ADAS Cars in India: 2023ರಲ್ಲಿ ಬಿಡುಗಡೆಯಾದ ಹೊಸ ಎಡಿಎಎಸ್ ಫೀಚರ್ಸ್ ಕಾರುಗಳಿವು!
ಎಡಿಎಎಸ್ ಫೀಚರ್ಸ್ ಕಾರುಗಳು
Follow us on

ಅಪಘಾತಗಳಲ್ಲಿ ಪ್ರಾಣಹಾನಿ ತಗ್ಗಿಸುವ ಉದ್ದೇಶದಿಂದ ಹೊಸ ಕಾರುಗಳಲ್ಲಿನ (News Cars) ಸುರಕ್ಷಾ ಸೌಲಭ್ಯಗಳನ್ನು ಹೆಚ್ಚಿಸಲಾಗುತ್ತಿದ್ದು, ಕೇವಲ ಐಷಾರಾಮಿ ಕಾರುಗಳಲ್ಲಿ ಮಾತ್ರವಲ್ಲದೆ ಮಧ್ಯಮ ಕ್ರಮಾಂಕದ ಕಾರುಗಳ ಸುರಕ್ಷತೆಯಲ್ಲೂ ಕೂಡಾ ಸಾಕಷ್ಟು ಸುಧಾರಿಸಿದೆ. ಹೊಸ ಸುರಕ್ಷಾ ಸೌಲಭ್ಯಗಳಲ್ಲಿ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ(ADAS) ಸೌಲಭ್ಯಕ್ಕೆ ಭಾರೀ ಬೇಡಿಕೆ ಹರಿದುಬರುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಕಾರು ಉತ್ಪಾದನಾ ಕಂಪನಿಗಳು ಬಜೆಟ್ ಬೆಲೆಯ ಕಾರುಗಳಿಗೂ ಈ ಹೊಸ ಸುರಕ್ಷಾ ವೈಶಿಷ್ಟ್ಯತೆಯನ್ನು ಪರಿಚಯಿಸುತ್ತಿವೆ. ಹಾಗಾದ್ರೆ ಭಾರತದಲ್ಲಿ ಈ ವರ್ಷ ಬಿಡುಗಡೆಯಾದ ಎಡಿಎಎಸ್ ಫೀಚರ್ಸ್ ಕಾರುಗಳು ಯಾವುವು? ಅವುಗಳ ವಿಶೇಷತೆಗಳೇನು? ಈ ಎಲ್ಲಾ ಮಾಹಿತಿ ಇಲ್ಲಿದೆ.

ಎಡಿಎಎಸ್ ಸೌಲಭ್ಯವು ರಡಾರ್ ಸೆನ್ಸಾರ್ ಮೂಲಕ ಕಾರ್ಯನಿರ್ವಹಣೆ ಮಾಡಲಿದ್ದು, ಇದು ಅಪಘಾತಗಳ ಸಂಖ್ಯೆ ತಗ್ಗಿಸಲು ಮಹತ್ವದ ಪಾತ್ರವಹಿಸುತ್ತಿದೆ. ಇದರಿಂದ ಗ್ರಾಹಕರು ಈ ಹೊಸ ಫೀಚರ್ಸ್ ಹೊಂದಿರುವ ಕಾರುಗಳ ಖರೀದಿಗೆ ಮುಗಿಬಿದ್ದಿದ್ದು, ಇವು ಲೆವಲ್ 1, ಲೆವಲ್ 2, ಲೆವಲ್ 3, ಲೆವಲ್ 4 ಮತ್ತು ಲೆವಲ್ 5 ಹಂತಗಳಲ್ಲಿ ಜೋಡಣೆ ಹೊಂದಿವೆ. ಸದ್ಯಕ್ಕೆ ಭಾರತದಲ್ಲಿ ವಿವಿಧ ಕಾರುಗಳಿಗೆ ಅನುಗುಣವಾಗಿ ಲೆವಲ್ 1 ಮತ್ತು ಲೆವಲ್ 2 ಎಡಿಎಎಸ್ ಫೀಚರ್ಸ್ ಗಳನ್ನು ಜೋಡಿಸಲಾಗುತ್ತಿದೆ.

ಟಾಟಾ ಹ್ಯಾರಿಯರ್ ಮತ್ತು ಸಫಾರಿ

ಟಾಟಾ ನಿರ್ಮಾಣದ ಹ್ಯಾರಿಯರ್ ಮತ್ತು ಸಫಾರಿ ಫೇಸ್ ಲಿಫ್ಟ್ ಕಾರುಗಳಲ್ಲಿ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯವನ್ನು ನೀಡಲಾಗಿದ್ದು, ಇದು ಸಂಭಾವ್ಯ ಅಪಘಾತಗಳನ್ನು ತಪ್ಪಿಸಲು ಸಾಕಷ್ಟು ಸಹಕಾರಿಯಾಗಿದೆ. ಜೊತೆಗೆ ಟಾಟಾ ಕಂಪನಿಯು ಹೊಸ ಕಾರುಗಳಲ್ಲಿ ಗರಿಷ್ಠ ಸುರಕ್ಷತೆಗಾಗಿ ಎಡಿಎಎಸ್ ಸೇರಿದಂತೆ 7 ಏರ್ ಬ್ಯಾಗ್ ಗಳು, ಎಬಿಎಸ್, ಇಬಿಡಿ, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ಹಿಲ್ ಹೋಲ್ಡ್ ಅಸಿಸ್ಟ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, 360 ಡಿಗ್ರಿ ವ್ಯೂ ಕ್ಯಾಮೆರಾ ಫೀಚರ್ಸ್ ಗಳನ್ನು ನೀಡಲಾಗಿದೆ.

ಇದನ್ನೂ ಓದಿ: 2023ರಲ್ಲಿ ಬಿಡುಗಡೆಯಾದ ಬೆಸ್ಟ್ ಮೈಲೇಜ್ ಸಿಎನ್​ಜಿ ಕಾರುಗಳಿವು!

ಹ್ಯುಂಡೈ ವೆನ್ಯೂ

ಭಾರತದಲ್ಲಿ ಸದ್ಯ ಎಡಿಎಎಸ್ ಫೀಚರ್ಸ್ ಹೊಂದಿರುವ ಅತಿ ಕಡಿಮೆ ಬೆಲೆಯ ಕಾರು ಮಾದರಿಯಾಗಿ 2023ರ ಹ್ಯುಂಡೈ ವೆನ್ಯೂ ಗುರುತಿಸಿಕೊಂಡಿದ್ದು, ವೆನ್ಯೂ ಕಾರಿನ ಎಸ್ಎಕ್ಸ್ ಆಪ್ಷನ್ 1.0 ಲೀಟರ್ ಟರ್ಬೊ ಪೆಟ್ರೋಲ್, 1.5 ಲೀಟರ್ ಡೀಸೆಲ್ ಮತ್ತು ಎನ್ ಲೈನ್ ಎನ್8 ವೆರಿಯೆಂಟ್ ಗಳಲ್ಲಿ ಲೆವಲ್ 1 ಎಡಿಎಎಸ್ ಫೀಚರ್ಸ್ ನೀಡಲಾಗಿದೆ. ಇದರಲ್ಲಿರುವ ಎಡಿಎಎಸ್ ನಲ್ಲಿ ಫಾರ್ವಡ್ ಕೂಲಿಷನ್ ಅವಾಯ್ಡ್ ಅಸಿಸ್ಟ್, ಲೇನ್ ಕೀಪಿಂಗ್ ಅಸಿಸ್ಟ್, ಲೇನ್ ಡಿಪಾರ್ಚರ್ ವಾರ್ನಿಂಗ್, ಡ್ರೈವರ್ ಅಟ್ಷೆಷನ್ ವಾರ್ನಿಂಗ್, ಲೇನ್ ಫಾಲೋವಿಂಗ್ ಅಸಿಸ್ಟ್ ಮತ್ತು ಹೈ ಭೀಮ್ ಅಸಿಸ್ಟ್ ಸೌಲಭ್ಯಗಳಿವೆ.

ಹೋಂಡಾ ಸಿಟಿ ಸೆಡಾನ್

ಎಡಿಎಎಸ್ ಫೀಚರ್ಸ್ ಹೊಂದಿರುವ ಹೊಸ ಕಾರುಗಳ ಪಟ್ಟಿಯಲ್ಲಿ 5ನೇ ತಲೆಮಾರಿನ ಹೋಂಡಾ ಸಿಟಿ ಸೆಡಾನ್ ಕೂಡಾ ಒಂದಾಗಿದೆ. ಸಿಟಿ ಸೆಡಾನ್ ಕಾರಿನ ಹೈ ಎಂಡ್ ಮಾದರಿಯಲ್ಲಿ ಲೆವಲ್ 2 ಎಡಿಎಎಸ್ ಜೋಡಿಸಲಾಗಿದ್ದು, ಇದು ಎಡಿಎಎಸ್ ಫೀಚರ್ಸ್ ಹೊಂದಿರುವ ಅತ್ಯತ್ತಮ ಸೆಡಾನ್ ಮಾದರಿಯಾಗಿದೆ.

ಹ್ಯುಂಡೈ ವೆರ್ನಾ

ಎಡಿಎಎಸ್ ಫೀಚರ್ಸ್ ಹೊಂದಿರುವ ಬಜೆಟ್ ಬೆಲೆಯ ಕಾರುಗಳಲ್ಲಿ ಹೊಸ ತಲೆಮಾರಿನ ಹ್ಯುಂಡೈ ವೆರ್ನಾ ಸೆಡಾನ್ ಕೂಡಾ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ವೆರ್ನಾ ಕಾರಿನ ಎಸ್ಎಕ್ಸ್ ಆಪ್ಷನ್ ವೆರಿಯೆಂಟ್ ನಲ್ಲಿ ಎಡಿಎಎಸ್ ಫೀಚರ್ಸ್ ನೀಡಲಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಅತ್ಯುತ್ತಮ ರೀಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಹೋಂಡಾ ಎಲಿವೇಟ್

ಹೋಂಡಾ ಹೊಸ ಎಲೆವೇಟ್ ಕಂಪ್ಯಾಕ್ಟ್ ಎಸ್ ಯುವಿ ಕೂಡಾ ಲೆವಲ್ 1 ಎಡಿಎಎಸ್ ಫೀಚರ್ಸ್ ಹೊಂದಿದ್ದು, ಎಲಿವೇಟ್ ಕಾರಿನ ಜೆಡ್ಎಕ್ಸ್ ಟಾಪ್ ಎಂಡ್ ಮಾದರಿಯಲ್ಲಿ ಹೊಸ ಸುರಕ್ಷಾ ಸೌಲಭ್ಯವನ್ನು ಜೋಡಣೆ ಮಾಡಲಾಗಿದೆ. ಇದರಲ್ಲಿರುವ ಎಡಿಎಎಸ್ ನಲ್ಲಿ ಕೂಲಿಷನ್ ಬ್ರೇಕಿಂಗ್ ಸಿಸ್ಟಂ, ಲೇನ್ ಡಿಫಾರ್ಚರ್ ವಾರ್ನಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಲೇನ್ ಕೀಪ್ ಅಸಿಸ್ಟ್ ರೋಡ್ ಡಿಪಾರ್ಚರ್ ವಾರ್ನಿಂಗ್ ಮತ್ತು ಆಟೋಮ್ಯಾಟಿಕ್ ಹೈ ಭೀಮ್ ಅಸಿಸ್ಟ್ ಸೌಲಭ್ಯಗಳಿವೆ.

ಎಂಜಿ ಆಸ್ಟರ್

ಎಡಿಎಎಸ್ ಫೀಚರ್ಸ್ ಹೊಂದಿರುವ ಬಜೆಟ್ ಕಾರುಗಳಲ್ಲಿ ಎಂಜಿ ಆಸ್ಟರ್ ಕೂಡಾ ಪ್ರಮುಖವಾಗಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಮಾತ್ರ ಈ ಫೀಚರ್ಸ್ ನೀಡಲಾಗಿದೆ. ಶೀಘ್ರದಲ್ಲಿಯೇ ಇದು ಮತ್ತಷ್ಟು ವೆರಿಯೆಂಟ್ ಗಳಲ್ಲಿ ಎಡಿಎಎಸ್ ಫೀಚರ್ಸ್ ಪಡೆದುಕೊಳ್ಳಬಹುದಾಗಿದೆ.