ADAS Cars: ಎಡಿಎಎಸ್ ಸೌಲಭ್ಯ ಹೊಂದಿರುವ ಭಾರತದ ಬಜೆಟ್ ಕಾರುಗಳಿವು!

ಭಾರತದಲ್ಲಿ ಹೊಸದಾಗಿ ಬಿಡುಗಡೆಯಾಗುತ್ತಿರುವ ಹೊಸ ಕಾರುಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಮಧ್ಯಮ ಕ್ರಮಾಂಕದ ಕಾರುಗಳಲ್ಲೂ ಇದೀಗ ಗರಿಷ್ಠ ಸುರಕ್ಷತೆಗಾಗಿ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯವನ್ನು ನೀಡಲಾಗುತ್ತಿದೆ.

ADAS Cars: ಎಡಿಎಎಸ್ ಸೌಲಭ್ಯ ಹೊಂದಿರುವ ಭಾರತದ ಬಜೆಟ್ ಕಾರುಗಳಿವು!
ಎಡಿಎಎಸ್ ಸೌಲಭ್ಯ ಹೊಂದಿರುವ ಭಾರತದ ಬಜೆಟ್ ಕಾರುಗಳಿವು!
Follow us
Praveen Sannamani
|

Updated on:May 01, 2024 | 9:13 PM

ಹೊಸ ಕಾರುಗಳಲ್ಲಿ(New Cars) ಇದೀಗ ಗ್ರಾಹಕರು ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಅದರಲ್ಲೂ ಮಧ್ಯಮ ಕ್ರಮಾಂಕದ ಕಾರುಗಳ ಸುರಕ್ಷತೆ ಸಾಕಷ್ಟು ಸುಧಾರಿಸಿದೆ. ಹೊಸ ತಲೆಮಾರಿನ ಸುರಕ್ಷಾ ಫೀಚರ್ಸ್ ಗಳಾದ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ (ADAS) ಸೌಲಭ್ಯವು ಇದೀಗ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಭಾರತದಲ್ಲಿ ಮಾರಾಟವಾಗುತ್ತಿರುವ ಹಲವು ಕಾರು ಮಾದರಿಗಳಲ್ಲಿ ಈ ಫೀಚರ್ಸ್ ನೋಡಬಹುದಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಪ್ರಮುಖ ಮಧ್ಯಮ ಕ್ರಮಾಂಕದ ಹಲವು ಕಾರುಗಳಲ್ಲಿ ಎಡಿಎಎಸ್ ಫೀಚರ್ಸ್ ಗಮನಸೆಳೆಯುತ್ತಿದ್ದು, ಎಡಿಎಎಸ್ ಸೌಲಭ್ಯ ಹೊಂದಿರುವ ಮಧ್ಯಮ ಕ್ರಮಾಂಕದ ಪ್ರಮುಖ ಕಾರುಗಳ ಮಾಹಿತಿ ಇಲ್ಲಿದೆ.

ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ಪರಿಣಾಮಕಾರಿಯಾಗಿ ತಗ್ಗಿಸಲು ಹೊಸ ಅಡ್ವಾನ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸಾಕಷ್ಟು ನೆರವಾಗುತ್ತಿದ್ದು, ಎಡಿಎಎಸ್ ಸೌಲಭ್ಯವು ಸಂಪೂರ್ಣವಾಗಿ ರಡಾರ್ ಆಧರಿಸಿ ಕಾರ್ಯನಿರ್ವಹಿಸುತ್ತದೆ. ಇದು ಭವಿಷ್ಯದ ಆಟೊನೊಮಸ್ ಕಾರುಗಳಲ್ಲೂ ನಿರ್ಣಾಯಕ ಪಾತ್ರವಹಿಸಲಿದ್ದು, ಭಾರತದಲ್ಲಿ ಸದ್ಯಕ್ಕೆ ಲೆವಲ್ 1 ಮತ್ತು ಲೆವಲ್ 2 ಎಡಿಎಎಸ್ ಬಳಕೆ ಮಾಡಲಾಗುತ್ತಿದೆ. ಎಡಿಎಎಸ್ ನಲ್ಲಿ ಲೆವಲ್ 1 ರಿಂದ 5ರ ತನಕ ಬಳಕೆಯಿದ್ದು, ಕಾರು ಮಾದರಿಗಳಿಗೆ ಅನುಗುಣವಾಗಿ ವಿವಿಧ ಹಂತಗಳನ್ನು ಜೋಡಣೆ ಮಾಡಲಾಗುತ್ತದೆ.

ಮಹೀಂದ್ರಾ ಎಕ್ಸ್ ಯುವಿ 3ಎಕ್ಸ್ಒ

ಹೊಸದಾಗಿ ಬಿಡುಗಡೆಯಾಗಿರುವ ಮಹೀಂದ್ರಾ ಎಕ್ಸ್ ಯುವಿ 3ಎಕ್ಸ್ಒ ಭಾರೀ ಬದಲಾವಣೆಯೊಂದಿಗೆ ಬಿಡುಗಡೆಯಾಗಿದ್ದು, ಇದು ಐಷಾರಾಮಿ ಫೀಚರ್ಸ್ ಗಳೊಂದಿಗೆ ಸುರಕ್ಷತೆಯಲ್ಲೂ ಗಮನಸೆಳೆಯುತ್ತಿದೆ. ಹೊಸ ಕಾರಿನಲ್ಲಿ ಮಹೀಂದ್ರಾ ಕಂಪನಿಯು ಎಕ್ಸ್ ಯುವಿ700 ಮಾದರಿಯಲ್ಲಿರುವಂತೆ ಲೆವಲ್ 2 ಎಡಿಎಎಸ್ ಸೌಲಭ್ಯವನ್ನು ಜೋಡಣೆ ಮಾಡಿದ್ದು, ಇದು ಸದ್ಯ ಭಾರತದಲ್ಲಿ ಖರೀದಿಗೆ ಲಭ್ಯವಾದ ಅತಿ ಕಡಿಮೆ ಬೆಲೆಯ ಎಡಿಎಎಸ್ ಕಾರು ಮಾದರಿಯಾಗಿದೆ. ಲೆವಲ್ 2 ಎಡಿಎಎಸ್ ನಲ್ಲಿ ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಆಟೋ ಹೋಲ್ಡ್, ಹಿಲ್ ಸ್ಟಾರ್ಟ್, ಹಿಲ್ ಡಿಸೆಂಟ್, 360 ಡಿಗ್ರಿ ಕ್ಯಾಮೆರಾ, ಬ್ಲೈಂಡ್ ಸ್ಪಾರ್ಟ್ ಮಾನಿಟರ್ ನೀಡಲಾಗಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 11.99 ಲಕ್ಷ ಬೆಲೆ ಹೊಂದಿದೆ.

ಇದನ್ನೂ ಓದಿ: 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಹೊಂದಿರುವ ಫೇಮಸ್ ಎಸ್‌ಯುವಿ ಕಾರುಗಳಿವು!

ಹ್ಯುಂಡೈ ವೆನ್ಯೂ

ಬಜೆಟ್ ಬೆಲೆಯಲ್ಲಿ ಎಡಿಎಎಸ್ ಸೌಲಭ್ಯ ಹೊಂದಿರುವ ಕಾರುಗಳಲ್ಲಿ ಹ್ಯುಂಡೈ ವೆನ್ಯೂ ಕೂಡಾ ಪ್ರಮುಖವಾಗಿದೆ. ವೆನ್ಯೂ ಕಾರು ಫೇಸ್ ಲಿಫ್ಟ್ ಆವೃತ್ತಿಯೊಂದಿಗೆ ಎಡಿಎಎಸ್ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಇದು ಲೆವಲ್ 1 ಎಡಿಎಎಸ್ ಸೌಲಭ್ಯವನ್ನು ಪಡೆದುಕೊಂಡಿದೆ. ಲೆವಲ್ 1 ಎಡಿಎಎಸ್ ನಲ್ಲಿ ಫಾರ್ವಡ್ ಕೂಲಿಷನ್ ಅವಾಯ್ಡ್ ಅಸಿಸ್ಟ್, ಲೇನ್ ಕೀಪಿಂಗ್ ಅಸಿಸ್ಟ್, ಲೇನ್ ಡಿಪಾರ್ಚರ್ ವಾರ್ನಿಂಗ್, ಡ್ರೈವರ್ ಅಟ್ಷೆಷನ್ ವಾರ್ನಿಂಗ್, ಲೇನ್ ಫಾಲೋವಿಂಗ್ ಅಸಿಸ್ಟ್ ಮತ್ತು ಹೈ ಭೀಮ್ ಅಸಿಸ್ಟ್ ಸೌಲಭ್ಯಗಳನ್ನು ನೀಡಲಾಗಿದೆ. ಇದು ಎಕ್ಸ್ ಶೋರೂಂ ಪ್ರಕಾರ ರೂ. 12.44 ಲಕ್ಷ ಬೆಲೆ ಹೊಂದಿದ್ದು, ಇದು ಟಾಪ್ ಎಂಡ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದೆ.

ಹೋಂಡಾ ಸಿಟಿ

ಎಡಿಎಎಸ್ ಸೌಲಭ್ಯ ಹೊಂದಿರುವ ಮಧ್ಯಮ ಕ್ರಮಾಂಕದ ಕಾರುಗಳಲ್ಲಿ ಹೋಂಡಾ ಸಿಟಿ ಸೆಡಾನ್ ಪ್ರಮುಖ ಆಯ್ಕೆಯಾಗಿದೆ. ಇದು ಕೂಡಾ ಲೆವಲ್ 2 ಎಡಿಎಎಸ್ ಫೀಚರ್ಸ್ ಹೊಂದಿದ್ದು, ಇದರಲ್ಲಿ 360 ಡಿಗ್ರಿ ಕ್ಯಾಮೆರಾ, ಬ್ಲೈಂಡ್ ಸ್ಪಾರ್ಟ್ ಮಾನಿಟರ್ ಸಿಸ್ಟಂ ಸೇರಿದಂತೆ ಹಲವು ಆಕ್ಟಿವ್ ಸೇಫ್ಟಿ ಫೀಚರ್ಸ್ ಹೊಂದಿದೆ. ಸಿಟಿ ಕಾರಿನ ವಿ ವೆರಿಯೆಂಟ್ ನಂತರದ ಮಾದರಿಗಳಲ್ಲಿ ಎಡಿಎಎಸ್ ಫೀಚರ್ಸ್ ಲಭ್ಯವಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 12.70 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ಕಿಯಾ ಸೊನೆಟ್

ಹೊಸ ಕಿಯಾ ಸೊನೆಟ್ ಕಾರು ಲೆವಲ್ 1 ಎಡಿಎಎಸ್ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಇದರಲ್ಲಿ ಫಾರ್ವಡ್ ಕೂಲಿಷನ್ ವಾರ್ನಿಂಗ್, ಲೇನ್ ಡಿಪಾರ್ಚರ್ ವಾರ್ನಿಂಗ್, ಫಾರ್ವಡ್ ಕೂಲಿಷನ್ ಅವಾಯ್ಡ್ ಅಸಿಸ್ಟ್, ಹೈ ಬೀಮ್ ಅಸಿಸ್ಟ್ ಮತ್ತು ಲೇನ್ ಕೀಪ್ ಅಸಿಸ್ಟ್ ಸೌಲಭ್ಯಗಳನ್ನು ನೀಡಲಾಗಿದೆ. ಜೊತೆಗೆ ಹಲವಾರು ಸುರಕ್ಷಾ ಫೀಚರ್ಸ್ ಹೊಂದಿರುವ ಹೊಸ ಸೊನೆಟ್ ಕಾರಿನಲ್ಲಿ ಎಡಿಎಎಸ್ ಫೀಚರ್ಸ್ ಹೊಂದಿರುವ ಮಾದರಿಗಳು ಎಕ್ಸ್ ಶೋರೂಂ ಪ್ರಕಾರ ರೂ. 14.55 ಲಕ್ಷ ಬೆಲೆ ಹೊಂದಿದೆ.

ಇದನ್ನೂ ಓದಿ: ಕೋಟಿ ಬೆಲೆಯ ಪವರ್ ಫುಲ್ ಐಷಾರಾಮಿ ಕಾರು ಖರೀದಿಸಿದ ‘ಸಿಂಹಪ್ರಿಯಾ’ ಜೋಡಿ

ಹೋಂಡಾ ಎಲಿವೇಟ್

ಹೊಸದಾಗಿ ಬಿಡುಗಡೆಯಾಗಿರುವ ಹೋಂಡಾ ಎಲಿವೇಟ್ ನಲ್ಲೂ ಕೂಡಾ ಲೆವಲ್ 2 ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ ನೀಡಲಾಗಿದ್ದು, ಇದರಲ್ಲಿ ಕೂಲಿಷನ್ ಬ್ರೇಕಿಂಗ್ ಸಿಸ್ಟಂ, ಲೇನ್ ಡಿಫಾರ್ಚರ್ ವಾರ್ನಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಲೇನ್ ಕೀಪ್ ಅಸಿಸ್ಟ್, ರೋಡ್ ಡಿಪಾರ್ಚರ್ ವಾರ್ನಿಂಗ್ ಮತ್ತು ಆಟೋಮ್ಯಾಟಿಕ್ ಹೈ ಭೀಮ್ ಅಸಿಸ್ಟ್ ಸೌಲಭ್ಯಗಳನ್ನು ನೀಡಲಾಗಿದೆ. ಎಡಿಎಎಸ್ ಫೀಚರ್ಸ್ ಹೊಂದಿರುವ ಎಲಿವೇಟ್ ಎಕ್ಸ್ ಶೋರೂಂ ಪ್ರಕಾರ ರೂ.15.21 ಲಕ್ಷ ಬೆಲೆ ಹೊಂದಿದೆ.

Published On - 9:00 pm, Wed, 1 May 24

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?