ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಪ್ 5 ಕಾರುಗಳಿವು!

ಅಗಸ್ಟ್ ತಿಂಗಳಿನಲ್ಲಿ ವಿವಿಧ ಕಾರು ಕಂಪನಿಗಳು ತಮ್ಮ ಬಹುನೀರಿಕ್ಷಿತ ಕಾರು ಮಾದರಿಗಳನ್ನು ಬಿಡುಗಡೆ ಮಾಡಿದ್ದು, ಹೊಸ ಕಾರುಗಳ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಪ್ 5 ಕಾರುಗಳಿವು!
ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾದ ಕಾರುಗಳು
Follow us
Praveen Sannamani
|

Updated on: Aug 30, 2024 | 10:00 PM

ವಾಹನ ಮಾರುಕಟ್ಟೆಯಲ್ಲಿ ಹೊಸ ತಲೆಮಾರಿನ ಕಾರು ಮಾದರಿಗಳಿಗೆ ಭರ್ಜರಿ ಬೇಡಿಕೆ ದಾಖಲಾಗುತ್ತಿದ್ದು, ಅಗಸ್ಟ್ ತಿಂಗಳಿನಲ್ಲಿ ವಿವಿಧ ಕಾರು ಕಂಪನಿಗಳು ತಮ್ಮ ಬಹುನೀರಿಕ್ಷಿತ ಕಾರು ಮಾದರಿಗಳನ್ನು ಬಿಡುಗಡೆ ಮಾಡಿವೆ. ಹೊಸ ಕಾರುಗಳಲ್ಲಿ ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ಜೊತೆಗೆ ಎಲೆಕ್ಟ್ರಿಕ್ ಕಾರು ಮಾದರಿಗಳು ಸಹ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಹೊಸ ಕಾರುಗಳ ಬೆಲೆ, ಎಂಜಿನ್ ಆಯ್ಕೆ ಮತ್ತು ಬ್ಯಾಟರಿ ಪ್ಯಾಕ್ ಸಾಮರ್ಥ್ಯದ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಸಿಟ್ರನ್ ಬಸಾಲ್ಟ್

ಸಿಟ್ರನ್ ಕಂಪನಿಯು ತನ್ನ ನಾಲ್ಕನೇ ಕಾರು ಮಾದರಿಯಾಗಿ ಬಸಾಲ್ಟ್ ಕೂಪೆ ಎಸ್ ಯುವಿ ಬಿಡುಗಡೆ ಮಾಡಿದೆ. ಹೊಸ ಕಾರು ಮಾದರಿಯು ಎಕ್ಸ್ ಶೋರೂಂ ಪ್ರಕಾರ ರೂ. 7.99 ಲಕ್ಷದಿಂದ ರೂ. 13.62 ಲಕ್ಷ ಬೆಲೆ ಹೊಂದಿದ್ದು, ಇದು ಪ್ರತಿಸ್ಪರ್ಧಿ ಮಾದರಿಗಿಂತಲೂ ರೂ. 1 ಲಕ್ಷದಷ್ಟು ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಹೊಸ ಕಾರಿನಲ್ಲಿ ಸಿಟ್ರನ್ ಕಂಪನಿಯು 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಇದರಲ್ಲಿ ಗ್ರಾಹಕರು ಎನ್ಎ ವರ್ಷನ್ ಅಥವಾ ಪರ್ಫಾಮೆನ್ಸ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದೆ. ಎನ್ಎ ಪೆಟ್ರೋಲ್ ಮಾದರಿಯು 82 ಹಾರ್ಸ್ ಪವರ್ ಉತ್ಪಾದಿಸಿದರೆ ಪರ್ಫಾಮೆನ್ಸ್ ಮಾದರಿಯು 110 ಹಾರ್ಸ್ ಪವರ್ ಉತ್ಪಾದನೆಯೊಂದಿಗೆ ಭರ್ಜರಿ ಪ್ರೀಮಿಯಂ ಫೀಚರ್ಸ್ ಮತ್ತು ಸುರಕ್ಷಾ ಸೌಲಭ್ಯಗಳನ್ನು ಪಡೆದುಕೊಂಡಿದೆ.

ಮಹೀಂದ್ರಾ ಥಾರ್ ರಾಕ್ಸ್

ಬಹುನೀರಿಕ್ಷಿತ ಮಹೀಂದ್ರಾ ಥಾರ್ ರಾಕ್ಸ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಆವೃತ್ತಿಯು ಪ್ರಮುಖ ಐದು ವೆರಿಯೆಂಟ್ ಗಳೊಂದಿಗೆ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 12.99 ಲಕ್ಷದಿಂದ ರೂ. 20.49 ಲಕ್ಷ ಬೆಲೆ ಹೊಂದಿದೆ. ಕುಟುಂಬ ಸಮೇತರಾಗಿ ಪ್ರಯಾಣಿಸಲು ಅನುಕೂಲಕರವಾಗುವಂತೆ ಮಹೀಂದ್ರಾ ಕಂಪನಿಯು ಸಾಮಾನ್ಯ ಥಾರ್ ಜೊತೆ ಹೊಸದಾಗಿ ಥಾರ್ ರಾಕ್ಸ್ ಮಾದರಿಯನ್ನು ಸಹ ಮಾರಾಟ ಮಾಡುತ್ತಿದೆ. ಹೊಸ ಕಾರಿನಲ್ಲಿ ಥಾರ್ ಮಾದರಿಯಲ್ಲಿ ಇಲ್ಲದೆ ಇರುವಂತಹ 5 ಡೋರ್ ಸೌಲಭ್ಯದೊಂದಿಗೆ ಎಡಿಎಎಸ್ ಸೇಫ್ಟಿ ಸಿಸ್ಟಂ, ದೊಡ್ಡದಾದ ಇನ್ಪೋಟೈನ್ ಮೆಂಟ್ ಸಿಸ್ಟಂ, ಡಿಜಿಟಲ್ ಇನ್ಸ್ಟುಮೆಂಟ್ ಕ್ಲಸ್ಟರ್, ಸನ್ ರೂಫ್, ಎಲೆಕ್ಟ್ರಾನಿಕ್ ಬ್ರೇಕಿಂಗ್ ಸಿಸ್ಟಂ, ಪ್ರೀಮಿಯಂ ಆಡಿಯೋ ಸಿಸ್ಟಂ ಮತ್ತು ಕೀ ಲೆಸ್ ಸ್ಟಾರ್ಟ್/ಸ್ಟಾಪ್ ಸೌಲಭ್ಯಗಳಿವೆ.

ಇದನ್ನೂ ಓದಿ: ಸನ್‌ರೂಫ್‌ ಹೊಂದಿರುವ ಕಾರುಗಳಲ್ಲಿ ಎಷ್ಟೆಲ್ಲಾ ನ್ಯೂನತೆಗಳಿವೆ ನೋಡಿ!

ಟಾಟಾ ಕರ್ವ್ ಎಲೆಕ್ಟ್ರಿಕ್

ಟಾಟಾ ಮೋಟಾರ್ಸ್ ತನ್ನ ಬಹುನೀರಿಕ್ಷಿತ ಕರ್ವ್ ಎಲೆಕ್ಟ್ರಿಕ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಪ್ರಮುಖ ಐದು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದೆ. ಕರ್ವ್ ಇವಿ ಕಾರಿನ ಆರಂಭಿಕ ಮಾದರಿಯು ಎಕ್ಸ್ ಶೋರೂಂ ಪ್ರಕಾರ ರೂ. 17.49 ಲಕ್ಷ ಬೆಲೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಯು ರೂ. 21.99 ಲಕ್ಷ ಬೆಲೆ ಹೊಂದಿದೆ. ಗ್ರಾಹಕರು ಇದರಲ್ಲಿ 45ಕೆವಿಹೆಚ್ ಮತ್ತು 55ಕೆವಿಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆ ಮಾಡಬಹುದಾಗಿದ್ದು, ಆರಂಭಿಕ ಮಾದರಿಯು ಗರಿಷ್ಠ 502 ಕಿ.ಮೀ ಮೈಲೇಜ್ ನೀಡಿದರೆ ಟಾಪ್ ಎಂಡ್ ಮಾದರಿಯು ಪ್ರತಿ ಚಾರ್ಜ್ ಗೆ ಗರಿಷ್ಠ 585 ಕಿ.ಮೀ ಮೈಲೇಜ್ ನೀಡುತ್ತದೆ. ಹಾಗೆಯೇ ಹೊಸ ಕಾರಿನಲ್ಲಿ ಐಷಾರಾಮಿ ಅನುಭವ ನೀಡುವ ಹಲವು ಪ್ರೀಮಿಯಂ ಫೀಚರ್ಸ್ ಗಳಿದ್ದು, ಸುರಕ್ಷತೆಗಾಗಿ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯ ಸಹ ಹೊಂದಿದೆ.

ನಿಸ್ಸಾನ್ ಎಕ್ಸ್-ಟ್ರಯಲ್

ನಿಸ್ಸಾನ್ ಕಂಪನಿಯು ತನ್ನ ಹೊಸ ಎಕ್ಸ್-ಟ್ರಯಲ್ ಎಸ್ ಯುವಿ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ಎಕ್ಸ್ ಶೋರೂಂ ಪ್ರಕಾರ ರೂ. 49.92 ಲಕ್ಷ ಬೆಲೆ ಹೊಂದಿದೆ. ಹೊಸ ಎಕ್ಸ್-ಟ್ರಯಲ್ ಕಾರು ಮಾದರಿಯು ಒಂದೇ ವೆರಿಯೆಂಟ್ ನಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಆರಂಭಿಕ ಐಷಾರಾಮಿ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದೆ. ಹೊಸ ಕಾರಿನಲ್ಲಿರುವ 1.5 ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 12ವಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಪ್ಯಾಡಲ್ ಶಿಫ್ಟರ್ ಜೊತೆಗೆ ಶಿಫ್ಟ್ ಬೈ ವೈರ್ ಪ್ರೇರಿತ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಗಳ ಆಯ್ಕೆ ಹೊಂದಿದೆ. ಇದು 7 ಸೀಟರ್ ಆಯ್ಕೆಗಳೊಂದಿಗೆ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದ್ದು, ಹೊಸ ಕಾರಿನ ಒಳ ಮತ್ತು ಹೊರ ವಿನ್ಯಾಸಗಳು ಎಸ್ ಯುವಿ ಪ್ರಿಯರ ಗಮನಸೆಳೆಯುತ್ತಿವೆ.

ಇದನ್ನೂ ಓದಿ: ಭಾರತದಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಕಾರುಗಳಿವು!

ಬಿವೈಡಿ ಅಟ್ಟೊ 3 ಇವಿ

ಪ್ರೀಮಿಯಂ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಬಿವೈಡಿ ಇಂಡಿಯಾ ತನ್ನ ಜನಪ್ರಿಯ ಅಟ್ಟೊ 3 ಎಲೆಕ್ಟ್ರಿಕ್ ಎಸ್ ಯುವಿ ಮಾದರಿಯಲ್ಲಿ ಹೊಸದಾಗಿ ಡೈನಾಮಿಕ್ ವೆರಿಯೆಂಟ್ ಪರಿಚಯಿಸಿದೆ. ಹೊಸ ವೆರಿಯೆಂಟ್ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 24.99 ಲಕ್ಷ ಬೆಲೆ ಹೊಂದಿದ್ದು, ಇದು ಟಾಪ್ ಎಂಡ್ ಮಾದರಿಗಿಂತಲೂ ರೂ. 9 ಲಕ್ಷ ಕಡಿಮೆ ಬೆಲೆಗೆ ಲಭ್ಯವಿದೆ. ಡೈನಾಮಿಕ್ ವೆರಿಯೆಂಟ್ 49.92kWh ಬ್ಯಾಟರಿ ಆಯ್ಕೆ ಹೊಂದಿದ್ದು, ಇದು ಪ್ರತಿ ಚಾರ್ಜ್ ಗೆ ಗರಿಷ್ಠ 468 ಕಿ.ಮೀ ಮೈಲೇಜ್ ನೀಡುತ್ತದೆ.

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!