Year Ender 2023: 2023ರಲ್ಲಿ ಬಿಡುಗಡೆಯಾದ ಟಾಪ್ 5 ಅತ್ಯುತ್ತಮ ಎಲೆಕ್ಟ್ರಿಕ್ ಕಾರುಗಳಿವು!

2023ರಲ್ಲಿ ಹಲವಾರು ಹೊಸ ಎಲೆಕ್ಟ್ರಿಕ್ ಕಾರುಗಳು ಭಾರತದಲ್ಲಿ ಬಿಡುಗಡೆಯಾಗಿದ್ದು, ಅತ್ಯುತ್ತಮ ಫೀಚರ್ಸ್ ಮತ್ತು ಹೆಚ್ಚಿನ ಮೈಲೇಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳ ಮಾಹಿತಿ ಇಲ್ಲಿದೆ.

Year Ender 2023: 2023ರಲ್ಲಿ ಬಿಡುಗಡೆಯಾದ ಟಾಪ್ 5 ಅತ್ಯುತ್ತಮ ಎಲೆಕ್ಟ್ರಿಕ್ ಕಾರುಗಳಿವು!
ಅತ್ಯುತ್ತಮ ಎಲೆಕ್ಟ್ರಿಕ್ ಕಾರುಗಳು
Follow us
Praveen Sannamani
|

Updated on: Dec 20, 2023 | 7:51 PM

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ (Electric Vehicles) ಬೇಡಿಕೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಸಾಂಪ್ರದಾಯಿಕ ಇಂಧನ ಪ್ರೇರಿತ ವಾಹನಗಳಿಂತ ಪರಿಸರ ಸ್ನೇಹಿ ವಾಹನಗಳ ಬಳಕೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳಲ್ಲಿ ಸದ್ಯ ಇವಿ ದ್ವಿಚಕ್ರ ವಾಹನಗಳ ನಂತರ ಇವಿ ಕಾರುಗಳಿಗೆ ಹೆಚ್ಚಿನ ಬೇಡಿಕೆಯಿದ್ದು, 2023ರಲ್ಲೂ ಹಲವಾರು ಇವಿ ಕಾರುಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ. ಹಾಗಾದ್ರೆ ಈ ವರ್ಷದ ಆರಂಭದಿಂದ ಇದುವರೆಗೆ ಬಿಡುಗಡೆಯಾದ ಅತ್ಯುತ್ತಮವಾಗಿರುವ ಇವಿ ಕಾರುಗಳು ಯಾವುವು? ಅವುಗಳ ವಿಶೇಷತೆಗಳೇನು? ಈ ಎಲ್ಲಾ ಮಾಹಿತಿ ಇಲ್ಲಿದೆ.

2023ರ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ನೆಕ್ಸಾನ್ ಇವಿ ಕಾರು ಕಳೆದ ಸೆಪ್ಟೆಂಬರ್ ನಲ್ಲಿ ನವೀಕೃತ ಆವೃತ್ತಿಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಹೊಸ ಕಾರು ದೆಹಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14.74 ಲಕ್ಷದಿಂದ ಟಾಪ್ ಎಂಡ್ ವೆರಿಯೆಂಟ್ ರೂ. 19.94 ಲಕ್ಷ ಬೆಲೆ ಹೊಂದಿದ್ದು, ಇದರಲ್ಲಿ ಲಾಂಗ್ ರೇಂಜ್ ಮತ್ತು ಮಿಡ್ ರೇಂಜ್ ವೆರಿಯೆಂಟ್ ನೀಡಲಾಗಿದೆ. 40.5 ಕೆವಿಹೆಚ್ ಬ್ಯಾಟರಿ ಪ್ಯಾಕ್‌ ಜೋಡಣೆ ಹೊಂದಿರುವ ಲಾಂಗ್ ರೇಂಜ್ ವೆರಿಯೆಂಟ್ ಗಳು ಪ್ರತಿ ಚಾರ್ಜ್ ಗೆ 465 ಕಿ.ಮೀ ಮೈಲೇಜ್ ನೀಡಿದ್ದಲ್ಲಿ 30 ಕೆವಿಹೆಚ್ ಬ್ಯಾಟರಿ ಪ್ಯಾಕ್‌ ಜೋಡಣೆ ಹೊಂದಿರುವ ಮಿಡ್ ರೇಂಜ್ ವೆರಿಯೆಂಟ್ ಗಳು ಪ್ರತಿ ಚಾರ್ಜ್ ಗೆ 325 ಕಿ.ಮೀ ಮೈಲೇಜ್ ನೊಂದಿಗೆ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿದೆ.

Best electric Cars (2)

ಹೊಸ ನೆಕ್ಸಾನ್ ಇವಿ ಕಾರಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಮೊದಲ ಬಾರಿಗೆ V2V ಮತ್ತು V2L ಚಾರ್ಜಿಂಗ್ ತಂತ್ರಜ್ಞಾನ ಬಳಕೆ ಮಾಡಲಾಗಿದ್ದು, ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹೊಸ ಆವೃತ್ತಿಯಲ್ಲಿ ಈ ಬಾರಿ ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಸ್ಟ್ಯಾಂಡರ್ಡ್ ಆಗಿ ಆರು ಏರ್ ಬ್ಯಾಗ್ ಗಳು, ಎಬಿಎಸ್ ಜೊತೆ ಇಎಸ್ ಸಿ, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ಬ್ಲೈಂಡ್ ವ್ಯೂ ಮಾನಿಟರ್, ಎಲ್ಲಾ ಆಸನಗಳಲ್ಲೂ ತ್ರಿ ಪಾಯಿಂಟ್ ಸೀಟ್ ಬೆಲ್ಟ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಡಿಸೆಂಟ್, ಪ್ಯಾನಿಕ್ ಬ್ರೇಕ್ ಮತ್ತು ಬ್ರೇಕ್ ಡೌನ್ ಸಮಸ್ಯೆಗಾಗಿ ಎಮರ್ಜೆನ್ಸಿ ಅಸಿಸ್ಟ್ ಸೌಲಭ್ಯವನ್ನು ನೀಡಲಾಗಿದೆ.

ಹ್ಯುಂಡೈ ಐಯಾನಿಕ್ 5 ಇವಿ

ಹೊಸ ಹ್ಯುಂಡೈ ಐಯಾನಿಕ್ 5 ಐಷಾರಾಮಿ ಎಲೆಕ್ಟ್ರಿಕ್ ಕಾರು ಮಾದರಿಯು ಭಾರತದಲ್ಲಿ ಬಿಡುಗಡೆಯೊಂದಿಗೆ ಹೊಸ ಮಾರಾಟ ಮೈಲಿಗಲ್ಲು ಸಾಧಿಸಿದ್ದು, ಇದು ಬಿಡುಗಡೆಯಾದ ಕೆಲವೇ ತಿಂಗಳಿನಲ್ಲಿ 1 ಸಾವಿರ ಯುನಿಟ್ ಮಾರಾಟಗೊಂಡಿದೆ. ಎಕ್ಸ್ ಶೋರೂಂ ಪ್ರಕಾರ ರೂ. 45.95 ಲಕ್ಷ ಬೆಲೆ ಹೊಂದಿರುವ ಐಯಾನಿಕ್ 5 ಕಾರು 72.6 ಕಿಲೋ ವ್ಯಾಟ್ ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿದ್ದು, ಇದು ಪ್ರತಿ ಚಾರ್ಜ್ ಗೆ ಬರೋಬ್ಬರಿ 631 ಕಿ.ಮೀ ಮೈಲೇಜ್ ನೊಂದಿಗೆ ಪರ್ಫಾಮೆನ್ಸ್ ನಲ್ಲೂ ಗಮನಸೆಳೆಯುತ್ತಿದೆ. ಜೊತೆಗೆ ಹೊಸ ಕಾರಿನಲ್ಲಿ ಲೆವೆಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯವನ್ನು ನೀಡಲಾಗಿದ್ದು, ಇದರಲ್ಲಿ ಪ್ರತಿ ಸ್ಪರ್ಧಿ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಐಷಾರಾಮಿ ಫೀಚರ್ಸ್ ಗಳನ್ನು ನೀಡಿರುವುದು ಹೆಚ್ಚಿನ ಬೇಡಿಕೆ ಗಿಟ್ಟಿಸಿಕೊಳ್ಳುತ್ತಿದೆ.

ಇದನ್ನೂ ಓದಿ: ಬಜೆಟ್ ಬೆಲೆಗೆ ಖರೀದಿಸಬಹುದಾದ ಅತ್ಯುತ್ತಮ 7 ಸೀಟರ್ ಕಾರುಗಳಿವು!

Best electric Cars (2)

ಎಂಜಿ ಕಾಮೆಟ್ ಇವಿ

ಎಂಜಿ ಮೋಟಾರ್ ಕಂಪನಿಯು ಭಾರತದಲ್ಲಿ ಏಪ್ರಿಲ್ 26ರಂದು ತನ್ನ ಎರಡನೇ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಕಾಮೆಟ್ ಇವಿ ಬಿಡುಗಡೆ ಮಾಡಿತು. ಇದು ಸದ್ಯ ಭಾರತದಲ್ಲಿ ಮಾರಾಟವಾಗುತ್ತಿರುವ ಅಗ್ಗದ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ವಿವಿಧ ವೆರಿಯೆಂಟ್ ಗಳೊಂದಿಗೆ ಎಕ್ಸ್ ಶೋರೂಂ ಪ್ರಕಾರ ರೂ. 7.98 ಲಕ್ಷದಿಂದ ರೂ.10.63 ಲಕ್ಷ ಬೆಲೆ ಹೊಂದಿದೆ. 17.3ಕೆವಿಹೆಚ್ ಬ್ಯಾಟರಿ ಪ್ಯಾಕ್ ಹೊಂದಿರುವ ಕಾಮೆಟ್ ಇವಿ ಕಾರು ಪ್ರತಿ ಚಾರ್ಜ್ ಗೆ ಗರಿಷ್ಠ 230 ಕಿ.ಮೀ ಮೈಲೇಜ್ ನೀಡಲಿದ್ದು, ಅತ್ಯುತ್ತಮ ಚಾಲನಾ ತಂತ್ರಜ್ಞಾನದೊಂದಿಗೆ ನಗರ ಪ್ರದೇಶಗಳಲ್ಲಿ ದಿನನಿತ್ಯದ ಸಂಚಾರಕ್ಕೆ ಉತ್ತಮ ಆಯ್ಕೆಯಾಗಿದೆ.

Best electric Cars (2)

ಸಿಟ್ರನ್ ಇಸಿ3 ಎಲೆಕ್ಟ್ರಿಕ್

ಭಾರತದಲ್ಲಿ ಹೊಸ ಕಾರು ಮಾದರಿಗಳೊಂದಿಗೆ ಗ್ರಾಹಕರಿಂದ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಫ್ರೆಂಚ್ ಕಾರು ಉತ್ಪಾದನಾ ಕಂಪನಿ ಸಿಟ್ರನ್ ತನ್ನ ಮೊದಲ ಇವಿ ಕಾರು ಮಾದರಿಯಾದ ಇಸಿ3 ಇವಿ ಕಾರನ್ನು ಕಳೆದ ಫೆಬ್ರವರಿಯಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿತ್ತು. ಟಾಟಾ ಟಿಯಾಗೋ ಇವಿ ಕಾರಿಗೆ ಉತ್ತಮ ಪೈಪೋಟಿಯಾಗಿರುವ ಹೊಸ ಇಸಿ3 ಇವಿ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 11.61 ಲಕ್ಷದಿಂದ ರೂ. 12.79 ಲಕ್ಷ ಬೆಲೆ ಪಡೆದುಕೊಂಡಿದೆ. ಇಸಿ3 ಇವಿ ಕಾರಿನಲ್ಲಿ 29.2 ಕೆವಿಹೆಚ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಪ್ರತಿ ಚಾರ್ಜ್ ಗೆ ಗರಿಷ್ಠ 320 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಹಾಗೆಯೇ ಸುರಕ್ಷತೆಗಾಗಿ ಡ್ಯುಯಲ್ ಏರ್ ಬ್ಯಾಗ್, ಎಬಿಎಸ್, ಇಬಿಡಿ ಸೇರಿದಂತೆ ಹಲವು ಸೌಲಭ್ಯಗಳನ್ನ ನೀಡಲಾಗಿದೆ.

Best electric Cars (2)

ಲೋಟಸ್ ಎಲೆಟ್ರೆ

ಬ್ರಿಟಿಷ್ ಐಷಾರಾಮಿ ಕಾರು ಉತ್ಪಾದನಾ ಕಂಪನಿಯಾದ ಲೋಟಸ್ ಎಲೆಟ್ರೆ ಎಲೆಕ್ಟ್ರಿಕ್ ಸೂಪರ್ ಎಸ್‍ಯುವಿ ಬಿಡುಗಡೆಯೊಂದಿಗೆ ಭಾರತಕ್ಕೆ ಅಧಿಕೃತವಾಗಿ ಪ್ರವೇಶಿಸಿದ್ದು, ಹೊಸ ಇವಿ ಕಾರು ವಿವಿಧ ವೆರಿಯೆಂಟ್ ಗಳೊಂದಿಗೆ ಎಕ್ಸ್ ಶೋರೂಂ ಪ್ರಕಾರ ರೂ. 2.55 ಕೋಟಿಯಿಂದ ರೂ. 2.99 ಕೋಟಿ ಬೆಲೆ ಪಡೆದುಕೊಂಡಿದೆ. ಹೊಸ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ 112 ಕೆವಿಹೆಚ್ ಬ್ಯಾಟರಿ ಪ್ಯಾಕ್‌ ಜೋಡಣೆ ಮಾಡಲಾಗಿದ್ದು, ಇದು ಪ್ರತಿ ಚಾರ್ಜ್ ಗೆ 490 ರಿಂದ 600 ಕಿ.ಮೀ ಮೈಲೇಜ್ ನೀಡುತ್ತದೆ.

ಇದನ್ನೂ ಓದಿ: ದುಬಾರಿ ಬೆಲೆಯ ಬಿಎಂಡಬ್ಲ್ಯು ಎಕ್ಸ್ಎಂ ಕಾರು ಖರೀದಿಸಿದ ಎಂಟಿಬಿ ನಾಗರಾಜ್

Best electric Cars (2)

ಡ್ಯುಯಲ್ ಎಲೆಕ್ಟ್ರಿಕ್ ಮೋಟಾರ್ ಸೆಟಪ್ ಮೂಲಕ 905 ಹಾರ್ಸ್ ಪವರ್ ಮತ್ತು 985 ಎನ್ಎಂ ಟಾರ್ಕ್ ಉತ್ಪಾದಿಸುವ ಹೊಸ ಕಾರು ಪ್ರತಿ ಗಂಟೆಗೆ ಗರಿಷ್ಠ 265 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದ್ದು, ಇದು ಐಷಾರಾಮಿ ಎಸ್ ಯು ವಿ ಕಾರುಗಳಲ್ಲೇ ಹಲವಾರು ವಿಶೇಷತೆಗಳೊಂದಿಗೆ ಅತಿ ವೇಗದ ಕಾರು ಮಾದರಿಯಾಗಿದೆ.

ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ